Homeಮುಖಪುಟರಾಜ್ಯಸಭೆಯಲ್ಲಿ ಮಹಿಳಾ ಮೀಸಲಾತಿ ಕುರಿತ 2 ಮಸೂದೆಗಳು ಅಂಗೀಕಾರ

ರಾಜ್ಯಸಭೆಯಲ್ಲಿ ಮಹಿಳಾ ಮೀಸಲಾತಿ ಕುರಿತ 2 ಮಸೂದೆಗಳು ಅಂಗೀಕಾರ

- Advertisement -
- Advertisement -

ಸಂಸತ್ತಿನಲ್ಲಿ ಭದ್ರತಾ ಲೋಪಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷಗಳ ಗದ್ದಲ ನಡುವೆಯೇ ಪುದುಚೇರಿ ಮತ್ತು ಜಮ್ಮು – ಕಾಶ್ಮೀರದ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೀಸಲಾತಿಯನ್ನು ಪರಿಚಯಿಸುವ ಎರಡು ಮಸೂದೆಗಳನ್ನು ಸದನದಲ್ಲಿ ಧ್ವನಿ ಮತದ ಮೂಲಕ ಅಂಗೀಕರಿಸಲಾಗಿದೆ.

ಕೇಂದ್ರಾಡಳಿತ ಪ್ರದೇಶಗಳ ಸರ್ಕಾರ (ತಿದ್ದುಪಡಿ) ಮಸೂದೆ-2023 (Government of Union Territories (Amendment) Bill, 2023) ಮತ್ತು ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ (ಎರಡನೇ ತಿದ್ದುಪಡಿ) ಮಸೂದೆ-2023(Jammu and Kashmir Reorganisation (Second Amendment) Bill- 2023)ನ್ನು ಲೋಕಸಭೆಯಲ್ಲಿ ಕಳೆದ ವಾರ ಅಂಗೀಕರಿಸಲಾಗಿತ್ತು.

ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ (ಎರಡನೇ ತಿದ್ದುಪಡಿ) ಮಸೂದೆ-2023​ ತಿದ್ದುಪಡಿ ಮಸೂದೆಯು ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯಲ್ಲಿ ಲಿಂಗ ಪ್ರಾತಿನಿಧ್ಯವನ್ನು ಹೆಚ್ಚಿಸುವುದು, ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯಲ್ಲಿ ಎಲ್ಲಾ ಚುನಾಯಿತ ಸ್ಥಾನಗಳಲ್ಲಿ ಸರಿಸುಮಾರು ಮೂರನೇ ಒಂದು ಭಾಗವನ್ನು ಮಹಿಳೆಯರಿಗೆ ಮೀಸಲಿಡಲು ಪ್ರಸ್ತಾಪಿಸುತ್ತದೆ.

 

ಕೇಂದ್ರಾಡಳಿತ ಪ್ರದೇಶಗಳ ಸರ್ಕಾರ (ತಿದ್ದುಪಡಿ) ಮಸೂದೆ-2023  ಮೂಲ ಕಾಯಿದೆಯು ಶಾಸಕಾಂಗ ಸಭೆಗಳ ಸ್ಥಾಪನೆ ಮತ್ತು ನಿರ್ದಿಷ್ಟ ಕೇಂದ್ರಾಡಳಿತ ಪ್ರದೇಶಗಳಿಗೆ ಮಂತ್ರಿಗಳ ಮಂಡಲಗಳ ರಚನೆಗೆ ಸಂಬಂಧಿಸಿದೆ. ತಿದ್ದುಪಡಿ ಮಸೂದೆಯು ಎಲ್ಲಾ ಚುನಾಯಿತ ಸ್ಥಾನಗಳಲ್ಲಿ ಮೂರನೇ ಒಂದು ಭಾಗದಷ್ಟು ಮಹಿಳೆಯರಿಗೆ ಮೀಸಲಿಡುವ ಮೂಲಕ ಪುದುಚೇರಿ ಶಾಸನಸಭೆಯಲ್ಲಿ ಹೆಚ್ಚಿನ ಲಿಂಗ ಪ್ರಾತಿನಿಧ್ಯವನ್ನು ಉತ್ತೇಜಿಸುತ್ತದೆ.

 

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಿ.13 ರಂದು ಸಂಸತ್ತಿನಲ್ಲಿ ನಡೆದ ಭದ್ರತಾ ಲೋಪದ ಬಗ್ಗೆ ಹೇಳಿಕೆ ನೀಡಬೇಕು ಎಂದು  ವಿರೋಧ ಪಕ್ಷಗಳು ಪ್ರತಿಭಟನೆ, ನಿರಂತರ ಘೋಷಣೆಗಳನ್ನು ಕೂಗುತ್ತಿರುವಾಗಲೇ  ಮಸೂದೆಗಳನ್ನು ಮೇಲ್ಮನೆಯಲ್ಲಿ ಅಂಗೀಕರಿಸಲಾಗಿದೆ.

ಮಸೂದೆಗಳ ಅಂಗೀಕಾರದ ನಂತರ ಸ್ಪೀಕರ್‌ ಜಗದೀಪ್ ಧನಕರ್ ಅವರು ಭದ್ರತಾ ಉಲ್ಲಂಘನೆಯು ಸಾಮೂಹಿಕ ಕಾಳಜಿಯ ವಿಷಯವಾಗಿದೆ ಎಂದು ಹೇಳಿದರು. ಈ ಹಿಂದೆಯೂ ಇಂತಹ ಘಟನೆಗಳು ನಡೆದಿವೆ. ಕಲಾಪಗಳು ಸುರಕ್ಷಿತ ಮತ್ತು ಅತ್ಯಂತ ಅನುಕೂಲಕರ ವಾತಾವರಣದಲ್ಲಿ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳುವುದು ನಮ್ಮ ಸಾಮೂಹಿಕ ಜವಾಬ್ದಾರಿಯಾಗಿದೆ ಎಂದು ಹೇಳಿದ್ದಾರೆ.

ಘಟನೆಯ ಆಳವಾದ ತನಿಖೆಗಾಗಿ ಉನ್ನತ ಮಟ್ಟದ ತನಿಖಾ ಸಮಿತಿ ರಚಿಸಲಾಗಿದೆ ಮತ್ತು ಅಂತಹ ಘಟನೆಗಳು ಸಂಭವಿಸದಂತೆ ಖಚಿತಪಡಿಸಿಕೊಳ್ಳಲು ಕ್ರಮಕ್ಕೆ ಸ್ಪೀಕರ್ ಲೋಕಸಭೆ ಈಗಾಗಲೇ ಆದೇಶಿಸಿದ್ದಾರೆ. ಈ ಕುರಿತ ತನಿಖಾ ವರದಿಯನ್ನು ಸರಿಯಾದ ಸಮಯದಲ್ಲಿ ಸದನದೊಂದಿಗೆ ಹಂಚಿಕೊಳ್ಳಲಾಗುವುದು ಎಂದು ಜಗದೀಪ್ ಧನಕರ್ ಹೆಳಿದ್ದಾರೆ.

ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳು ಸಂಸತ್ತಿನ ಭದ್ರತಾ ಉಲ್ಲಂಘನೆಯ ವಿಷಯವನ್ನು ಪ್ರಸ್ತಾಪಿಸಿದ್ದರಿಂದ ರಾಜ್ಯಸಭೆ ಕಲಾಪವು ಬೆಳಿಗ್ಗೆ ಎರಡು ಬಾರಿ ಮುಂದೂಡಲ್ಪಟ್ಟಿತು ಮತ್ತು ಮಧ್ಯಾಹ್ನ 2 ಗಂಟೆಗೆ ಮತ್ತೆ ಸಭೆ ಸೇರಿತು.

ಕೇಂದ್ರಾಡಳಿತ ಪ್ರದೇಶಗಳ ಸರ್ಕಾರದ (ತಿದ್ದುಪಡಿ) ಮಸೂದೆ ಮತ್ತು ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ (ಎರಡನೇ ತಿದ್ದುಪಡಿ) ಮಸೂದೆಯನ್ನು ಗೃಹ ವ್ಯವಹಾರಗಳ ರಾಜ್ಯ ಸಚಿವ ನಿತ್ಯಾನಂದ ರೈ ಅವರು ಮಂಡಿಸಿದ ಸುಮಾರು 20 ನಿಮಿಷಗಳಲ್ಲಿ ಅಂಗೀಕರಿಸಲಾಯಿತು. ಮಹಿಳಾ ಹಕ್ಕುಗಳ ಪರವಾಗಿ ಮಸೂದೆಗಳನ್ನು ಬೆಂಬಲಿಸುವಂತೆ ಶ್ರೀ ರೈ ಎಲ್ಲಾ ಸದಸ್ಯರನ್ನು ವಿನಂತಿಸಿದ್ದರು.

ಇದನ್ನು ಓದಿ: ದೆಹಲಿ ಗಲಭೆ ಪ್ರಕರಣ: ಪೊಲೀಸರನ್ನು ಪ್ರತಿನಿಧಿಸುತ್ತಿದ್ದ ಪಬ್ಲಿಕ್ ಪ್ರಾಸಿಕ್ಯೂಟರ್ ರಾಜೀನಾಮೆ

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

2ಜಿ ತರಂಗಾಂತರ ತೀರ್ಪಿನ ಸ್ಪಷ್ಟನೆ ಕೋರಿದ್ದ ಕೇಂದ್ರದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ ರಿಜಿಸ್ಟ್ರಿ

0
2ಜಿ ತರಂಗಾಂತರ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ 2012ರಲ್ಲಿ ನೀಡಿರುವ ತೀರ್ಪಿನ ಸ್ಪಷ್ಟನೆ ಕೋರಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸ್ವೀಕರಿಸಲು ಸುಪ್ರೀಂ ಕೋರ್ಟ್‌ನ ರಿಜಿಸ್ಟ್ರಾರ್ ನಿರಾಕರಿಸಿದ್ದಾರೆ. ಕೆಲ ಸಂದರ್ಭಗಳಲ್ಲಿ ಸಾರ್ವಜನಿಕ ಹರಾಜು ಹೊರತುಪಡಿಸಿ...