Homeಮುಖಪುಟರಾಜ್ಯಸಭೆಯಲ್ಲಿ ಮುಖ್ಯ ಚುನಾವಣಾ ಆಯುಕ್ತರು, ಚುನಾವಣಾ ಆಯುಕ್ತರ ನೇಮಕ ನಿಯಂತ್ರಣ ಮಸೂದೆ ಅಂಗೀಕಾರ

ರಾಜ್ಯಸಭೆಯಲ್ಲಿ ಮುಖ್ಯ ಚುನಾವಣಾ ಆಯುಕ್ತರು, ಚುನಾವಣಾ ಆಯುಕ್ತರ ನೇಮಕ ನಿಯಂತ್ರಣ ಮಸೂದೆ ಅಂಗೀಕಾರ

- Advertisement -
- Advertisement -

ರಾಜ್ಯಸಭೆಯಲ್ಲಿ ಇಂದು (ಡಿಸೆಂಬರ್ 12) ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರ (ನೇಮಕಾತಿ, ಸೇವಾ ಷರತ್ತುಗಳು ಮತ್ತು ಅಧಿಕಾರದ ಅವಧಿ) ಮಸೂದೆ, 2023 ಅಂಗೀಕಾರಗೊಂಡಿದೆ.

ಮುಖ್ಯ ಚುನಾವಣಾ ಆಯುಕ್ತರು (CEC) ಮತ್ತು ಇತರ ಚುನಾವಣಾ ಆಯುಕ್ತರು (EC)ಗಳ ನೇಮಕಾತಿ, ಸೇವಾ ಷರತ್ತುಗಳು ಮತ್ತು ಅಧಿಕಾರದ ಅವಧಿಯನ್ನು ನಿಯಂತ್ರಿಸುವ ಗುರಿಯನ್ನು ಈ ಮಸೂದೆ ಹೊಂದಿದೆ. ಜೊತೆಗೆ ಚುನಾವಣಾ ಆಯೋಗದ ಕಾರ್ಯನಿರ್ವಹಣೆಯ ಕಾರ್ಯವಿಧಾನವನ್ನು ಇದು ವಿವರಿಸುತ್ತದೆ.

ಆಗಸ್ಟ್ 10 ರಂದು ಪರಿಚಯಿಸಿದ ಈ ಮಸೂದೆಯನ್ನು ಇಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಪರಿಗಣನೆಗೆ ಮತ್ತು ಅಂಗೀಕಾರಕ್ಕಾಗಿ ಮಂಡಿಸಿದರು. ಸಂಸತ್ತಿನ ಮೇಲ್ಮನೆಯಲ್ಲಿ ಸಂಪೂರ್ಣ ಚರ್ಚೆಯ ನಂತರ ಮಸೂದೆ ಅಂಗೀಕಾರಗೊಂಡಿತು.

ಮಸೂದೆಯ ಪ್ರಮುಖ ನಿಬಂಧನೆಗಳು ಚುನಾವಣಾ ಆಯೋಗದ (ಚುನಾವಣಾ ಆಯುಕ್ತರ ಸೇವಾ ನಿಯಮಗಳು ಮತ್ತು ವ್ಯವಹಾರದ ವಹಿವಾಟು) ಕಾಯಿದೆ, 1991ನ್ನು ಬದಲಿಸಲಿದೆ. ಹೊಸ ಮಸೂದೆ ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರ ನೇಮಕಾತಿ, ಸಂಬಳ ಮತ್ತು ವಜಾಗೊಳಿಸುವಿಕೆಯಂತಹ ಅಂಶಗಳನ್ನು ಒಳಗೊಂಡಿದೆ.

ಪ್ರಧಾನ ಮಂತ್ರಿ, ಕೇಂದ್ರ ಸಂಪುಟ ಸಚಿವರು, ವಿರೋಧ ಪಕ್ಷದ ನಾಯಕ ಅಥವಾ ಲೋಕಸಭೆಯ ಅತಿದೊಡ್ಡ ವಿರೋಧ ಪಕ್ಷದ ನಾಯಕರನ್ನು ಒಳಗೊಂಡಿರುವ ಆಯ್ಕೆ ಸಮಿತಿಯ ಶಿಫಾರಸಿನ ಆಧಾರದ ಮೇಲೆ ರಾಷ್ಟ್ರಪತಿಗಳು ಮುಖ್ಯ ಚುನಾವಣಾ ಆಯುಕ್ತರು ಮತ್ತು ಚುನಾವಣಾ ಆಯುಕ್ತರುಗಳನ್ನು ನೇಮಿಸಲಿದ್ದಾರೆ. ಪೂರ್ಣ ಸಮಿತಿಯ ಅನುಪಸ್ಥಿತಿಯಲ್ಲಿಯೂ ಈ ಸಮಿತಿಯ ಶಿಫಾರಸುಗಳು ಮಾನ್ಯವಾಗಿರುತ್ತವೆ. ಕಾನೂನು ಸಚಿವರ ನೇತೃತ್ವದ ಶೋಧನಾ ಸಮಿತಿಯು ಆಯ್ಕೆ ಸಮಿತಿಗೆ ಹೆಸರುಗಳನ್ನು ಪ್ರಸ್ತಾಪಿಸುತ್ತದೆ. ಅರ್ಹತಾ ಮಾನದಂಡಗಳೊಂದಿಗೆ ಅಭ್ಯರ್ಥಿಗಳು ಕೇಂದ್ರ ಸರ್ಕಾರದ ಕಾರ್ಯದರ್ಶಿಗೆ ಸಮಾನವಾದ ಸ್ಥಾನವನ್ನು ಹೊಂದಿರಬೇಕು. ಮುಖ್ಯ ಚುನಾವಣಾ ಆಯುಕ್ತರು ಮತ್ತು ಚುನಾವಣಾ ಆಯುಕ್ತರುಗಳಿಗೆ ವೇತನ ಮತ್ತು ಸೇವಾ ಷರತ್ತುಗಳನ್ನು ಸಂಪುಟ ಕಾರ್ಯದರ್ಶಿಗೆ ಸಮನಾಗಿ ಹೊಂದಿಸಲಾಗಿದೆ. ಇದು ಸುಪ್ರೀಂ ಕೋರ್ಟ್ ನ್ಯಾಯಾಧೀಶರ ವೇತನಕ್ಕೆ ಸಮಾನಾಗಿ ಇದ್ದ ನಿಯಮವನ್ನು ಬದಲಿಸಲಿದೆ.

ಪ್ರಸ್ತಾವಿತ ಬದಲಾವಣೆಗಳು ಚುನಾವಣಾ ಆಯೋಗದ ಸ್ಥಾನಮಾನವನ್ನು ಕೆಳಮಟ್ಟಕ್ಕಿಳಿಸಲಿದೆ ಎಂದು ಪ್ರತಿಪಾದಿಸಿದ ಮಾಜಿ ಮುಖ್ಯ ಚುನಾವಣಾ ಆಯುಕ್ತರಗಳು ವೇತನ ಅಸಮಾನತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ ನಂತರ, ಕೇಂದ್ರ ಸರ್ಕಾರವು ಮುಖ್ಯ ಚುನಾವಣಾ ಆಯುಕ್ತರು ಮತ್ತು ಚುನಾವಣಾ ಆಯುಕ್ತರುಗಳ ವೇತನ ಮತ್ತು ಸವಲತ್ತುಗಳನ್ನು ಸುಪ್ರೀಂ ಕೋರ್ಟ್‌ ನ್ಯಾಯಾಧೀಶರ ಮಟ್ಟದಲ್ಲಿ ಮುಂದುವರೆಸಲು ಮಸೂದೆಯಲ್ಲಿ ತಿದ್ದುಪಡಿ ಮಾಡಿದೆ.

ಆಯ್ಕೆ ಸಮಿತಿಯಿಂದ ಸಿಜೆಐ ಹೊರಕ್ಕೆ!

ಗಮನಾರ್ಹವಾಗಿ, ಹೊಸ ಮಸೂದೆಯು ಭಾರತದ ಮುಖ್ಯ ನ್ಯಾಯಮೂರ್ತಿಗಳನ್ನು ಚುನಾವಣಾ ಆಯುಕ್ತರ ಆಯ್ಕೆ ಸಮಿತಿಯಿಂದ ಹೊರಗಿಡಲಿದೆ. ಈ ವರ್ಷದ ಮಾರ್ಚ್‌ನಲ್ಲಿ, ಸುಪ್ರೀಂ ಕೋರ್ಟ್‌ನ ಸಾಂವಿಧಾನಿಕ ಪೀಠವು ಸಂಸತ್ತು ಕಾನೂನು ರೂಪಿಸುವವರೆಗೆ ಚುನಾವಣಾ ಆಯುಕ್ತರನ್ನು ಪ್ರಧಾನಿ, ವಿರೋಧ ಪಕ್ಷದ ನಾಯಕ ಮತ್ತು ಮುಖ್ಯ ನ್ಯಾಯಾಧೀಶರನ್ನು ಒಳಗೊಂಡ ಸಮಿತಿ ಆಯ್ಕೆ ಮಾಡುತ್ತದೆ ಎಂದು ತೀರ್ಪು ನೀಡಿತ್ತು. ನ್ಯಾಯಮೂರ್ತಿ ಕೆಎಂ ಜೋಸೆಫ್ ನೇತೃತ್ವದ ಪೀಠವು ಚುನಾವಣಾ ಆಯುಕ್ತರ ಸ್ವಾತಂತ್ರ್ಯವನ್ನು ಖಚಿತಪಡಿಸಿಕೊಳ್ಳಲು ನಿರ್ದೇಶನ ನೀಡಿತ್ತು. ಈ ಬೆನ್ನಲ್ಲೇ ಕೇಂದ್ರ ಸರ್ಕಾರ ಮಸೂದೆ ಮಂಡಿಸಿ ಕಾನೂನು ರೂಪಿಸಲು ಮುಂದಾಗಿದೆ.

ಇದನ್ನೂ ಓದಿ : ಕ್ರಿಮಿನಲ್ ವ್ಯಾಪ್ತಿಗೆ ಸಲಿಂಗಕಾಮ, ಸೆಕ್ಸ್‌ ವರ್ಕ್‌? ಸಂಸದೀಯ ಸಮಿತಿ ಸಲಹೆ ತಿರಸ್ಕರಿಸಿದ ಪಿಎಂ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read