Homeಕರ್ನಾಟಕರಾಜ್ಯಸಭೆ ಚುನಾವಣೆ: ಕಾಂಗ್ರೆಸ್‌, ಜೆಡಿಎಸ್‌ ಕಿತ್ತಾಟದಲ್ಲಿ ಬಿಜೆಪಿಗೆ ಲಾಭ

ರಾಜ್ಯಸಭೆ ಚುನಾವಣೆ: ಕಾಂಗ್ರೆಸ್‌, ಜೆಡಿಎಸ್‌ ಕಿತ್ತಾಟದಲ್ಲಿ ಬಿಜೆಪಿಗೆ ಲಾಭ

ಬಿಜೆಪಿಯ ನಿಜವಾದ ‘ಬಿ ಟೀಮ್‌’ ಕಾಂಗ್ರೆಸ್‌ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

- Advertisement -
- Advertisement -

ಕಾಂಗ್ರೆಸ್ ಮತ್ತು ಜೆಡಿಎಸ್ ಕಿತ್ತಾಟದ ನಡುವೆ ಬಿಜೆಪಿ ಮೂರು ಸ್ಥಾನಗಳನ್ನು ರಾಜ್ಯಸಭೆ ಚುನಾವಣೆಯಲ್ಲಿ ಗೆದ್ದಿದೆ. ನಾಲ್ಕು ಸ್ಥಾನಗಳ ಪೈಕಿ ಮೂರು ಸ್ಥಾನ ಬಿಜೆಪಿಗೆ, ಒಂದು ಸ್ಥಾನ ಕಾಂಗ್ರೆಸ್‌ಗೆ ಸಿಕ್ಕಿದೆ. ಜೆಡಿಎಸ್‌ ಮುಖಭಂಗ ಅನುಭವಿಸಿದೆ.

ಬಿಜೆಪಿಯ ನಿರ್ಮಲಾ ಸೀತಾರಾಮ್‌ (46 ಮತ), ನಟ ಜಗ್ಗೇಶ್‌ (44 ಮತ), ಲಹರ್‌ ಸಿಂಗ್‌ (33 ಮತ) ಗೆದ್ದರೆ, ಕಾಂಗ್ರೆಸ್‌ನಿಂದ ಜೈರಾಂ ರಮೇಶ್‌ (46 ಮತ) ಆಯ್ಕೆಯಾಗಿದ್ದಾರೆ. ಜೆಡಿಎಸ್‌ನ ಕುಪೇಂದ್ರ ರೆಡ್ಡಿ 30 ಮತ, ಕಾಂಗ್ರೆಸ್‌ನ ಎರಡನೇ ಅಭ್ಯರ್ಥಿ ಮನ್ಸೂರ್‌ ಖಾನ್‌ 25 ಮತಗಳನ್ನು ಪಡೆದು ಸೋಲು ಕಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನಿರ್ಮಲಾ ಮತ್ತು ಜೈರಾಂ ರಮೇಶ್‌ ಮೊದಲ ಪ್ರಾಶಸ್ತ್ಯದ ತಲಾ 46 ಮತಗಳನ್ನು ಪಡೆದರು. ಜಗ್ಗೇಶ್‌ ಮೊದಲ ಪ್ರಾಶಸ್ತ್ಯದ 44 ಮತ ಗಳಿಸಿದರು. ಲಹರ್‌ ಸಿಂಗ್‌ ಮೊದಲ ಪ್ರಾಶಸ್ತ್ಯದಲ್ಲಿ (33) ಒಂದು ಹೆಚ್ಚುವರಿ ಮತ, ಎರಡನೇ ಪ್ರಾಶಸ್ತ್ಯದಲ್ಲಿ ಎರಡು ಹೆಚ್ಚುವರಿ ಮತಗಳನ್ನು ಪಡೆದರು. ಈ ಎರಡೂ ಮತಗಳು ಕಾಂಗ್ರೆಸ್ ಕಡೆಯಿಂದ ಬಂದಿವೆ ಎನ್ನಲಾಗಿದೆ.

ಜೆಡಿಎಸ್‌ನ ಕೋಲಾರ ಶಾಸಕ ಕೆ.ಶ್ರೀನಿವಾಸಗೌಡ ಕಾಂಗ್ರೆಸ್‌ಗೆ, ಗುಬ್ಬಿ ಶಾಸಕ ಎಸ್.ಆರ್‌.ಶ್ರೀನಿವಾಸ್‌ ಬಿಜೆಪಿ ಅಭ್ಯೃರ್ಥಿಗೆ ಅಡ್ಡ ಮತದಾನ ಮಾಡಿದರು. “ನಾನು ಕಾಂಗ್ರೆಸ್‌ನಲ್ಲಿದ್ದೆ. ಕಾಂಗ್ರೆಸ್ ಪ್ರೀತಿಸುತ್ತೇನೆ” ಎಂದು ಶ್ರೀನಿವಾಸಗೌಡ ಹೇಳಿಕೆ ನೀಡಿದರು.

ಬಿಜೆಪಿ ಬಿ ಟೀಮ್ ಯಾರೆಂಬುದು ಬಯಲಾಗಿದೆ: ಕುಮಾರಸ್ವಾಮಿ ವಾಗ್ದಾಳಿ

ರಾಜ್ಯಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದೆ. ಬಿಜೆಪಿ ಬಿ ಟೀಮ್ ಯಾವುದು? ಬಿಜೆಪಿಯ ಬಾಲಂಗೋಚಿ ಯಾರು ಎನ್ನುವುದು ಜಗಜ್ಜಾಹೀರು ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಕಾಂಗ್ರೆಸ್ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ರಾಷ್ಟ್ರೀಯ ಪಕ್ಷಗಳು ತಮ್ಮ ರಾಜಕೀಯ ಸ್ವಾರ್ಥ ಸಾಧನೆಗೆ ಪ್ರಾದೇಶಿಕ ಪಕ್ಷವನ್ನು ಹತ್ತಿಕ್ಕುವ ಕೆಲಸ ಮಾಡಿವೆ ಹಾಗೂ ಪ್ರಜಾಪ್ರಭುತ್ವದ ಬೆನ್ನಿಗಿರಿಯುವ ಹೀನ ಕೃತ್ಯ ಎಸಗಿವೆ. ಚುನಾವಣಾ ವ್ಯವಷ್ಟೆಯನ್ನೆ ಅಣಕ ಮಾಡುವೆ ಎಂದು ಅವರು ಕಿಡಿಕಾರಿದ್ದಾರೆ.

ಸಿದ್ದರಾಮಯ್ಯ ಅವರು ಬಿಜೆಪಿ ಜತೆ ಒಳಒಪ್ಪಂದ ಮಾಡಿಕೊಂಡು ತಮ್ಮ ಪಕ್ಷದ ಅಲ್ಪಸಂಖ್ಯಾತ ಅಭ್ಯರ್ಥಿ ಮನ್ಸೂರ್ ಖಾನ್ ಅವರ ಸೋಲಿಗೂ ಕಾರಣರಾಗಿದ್ದಾರೆ. ಜತೆಗೆ, ಮನಸಿನಲ್ಲಿ ನಂಜು ತುಂಬಿಕೊಂಡು ಜೆಡಿಎಸ್ ಅಭ್ಯರ್ಥಿ ಪರಾಜಯಕ್ಕೂ ಕಾರಣರಾಗಿದ್ದಾರೆ. ಜಾತ್ಯತೀತ ಶಕ್ತಿಗಳನ್ನು ಹತ್ತಿಕ್ಕಿ ಬಿಜೆಪಿಯ ಮೂರನೇ ಅಭ್ಯರ್ಥಿ ಗೆಲುವಿಗೆ ನೇರ ಕಾರಣ ಸಿದ್ದರಾಮಯ್ಯ. ಅವರ ಢೋಂಗಿ ಸೈದ್ದಾಂತಿಕ ಮುಖವಾಡ ಈ ಚುನಾವಣೆ ಮೂಲಕ ಕಳಚಿ ಬಿದ್ದಿದೆ ಎಂದಿದ್ದಾರೆ.

ಇಷ್ಟು ದಿನ ಬಿಜೆಪಿ ಬಿ ಟೀಂ ಎಂದು ಜೆಡಿಎಸ್ ಬಗ್ಗೆ ಸಿದ್ದರಾಮಯ್ಯ ಅಪಪ್ರಚಾರ ಮಾಡುತ್ತಿದ್ದರು. ಈಗ ಬಿಜೆಪಿಯ ಅಸಲಿ ಬಿ ಟೀಮ್ ಯಾವುದು ಮತ್ತು ಯಾರು ಎನ್ನುವುದು ದೇಶಕ್ಕೆ ಗೊತ್ತಾಗಿದೆ. ಇನ್ನು ಯಾವ ಮುಖ ಇಟ್ಟುಕೊಂಡು ಸಿದ್ದರಾಮಯ್ಯ ಅವರು ತಾವು ಜಾತ್ಯತೀತ ನಾಯಕ ಎಂದು ಹೇಳುತ್ತಾರೆ? ಎಂದು ಪ್ರಶ್ನಿಸಿದ್ದಾರೆ.

ಜೆಡಿಎಸ್‌ ನಮ್ಮ ಮನವಿಗೆ ಸ್ಪಂದಿಸಲಿಲ್ಲ: ಡಿ.ಕೆ.ಶಿವಕುಮಾರ್‌

ಇದು ಚುನಾವಣಾ ವರ್ಷವಾಗಿರುವ ಹಿನ್ನೆಲೆಯಲ್ಲಿ ನಾವು ಸಾಕಷ್ಟು ರಾಜಕೀಯ ಬೆಳವಣಿಗೆಗಳನ್ನು ಗಮನಿಸಬೇಕಾಗಿದೆ. ನಮಗೆ ನಮ್ಮ ಸ್ನೇಹಿತರು ಯಾರು ಎಂದು ಗೊತ್ತಿದೆ. ಪ್ರತಿಯೊಬ್ಬರಿಗೂ ಆತ್ಮಗೌರವ ಇದೆ. ಹೀಗಾಗಿ ನಾವು ಪಕ್ಷೇತರ ಅಭ್ಯರ್ಥಿ ನಿಲ್ಲಿಸುವಂತೆ ಜೆಡಿಎಸ್ ಪಕ್ಷಕ್ಕೆ ಮನವಿ ಮಾಡಿದ್ದೆವು. ನಾವು ಕೂಡ ಅಲ್ಪಸಂಖ್ಯಾತ ಅಭ್ಯರ್ಥಿ ಕಣಕ್ಕಿಳಿಸುವುದಾಗಿ ಮನವಿ ಮಾಡಿದ್ದೆವು. ಇಷ್ಟೇ ಅಲ್ಲದೆ ರೆಹಮಾನ್ ಖಾನ್ ಅವರನ್ನು ಕೂಡ ಜೆಡಿಎಸ್ ನಾಯಕರ ಮನೆಗೆ ಕಳುಹಿಸಿ ಬೆಂಬಲಿಸುವಂತೆ ಮನವಿ ಮಾಡಲಾಗಿತ್ತು. ಇಷ್ಟಾದರೂ ಅವರು ನಮ್ಮ ಮನವಿಗೆ ಸ್ಪಂದಿಸಲಿಲ್ಲ ಎಂದು ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಇದನ್ನೂ ಓದಿರಿ: ಪ್ರವಾದಿಯನ್ನು ನಿಂದಿಸಿದ ನೂಪುರ್ ಶರ್ಮಾ ಪರ ಸಂಸದೆ ಪ್ರಜ್ಞಾ ಠಾಕೂರ್‌ ಹೇಳಿಕೆ

ನಾವು ಈ ಹಿಂದೆ ಹಲವು ಬಾರಿ ಅವರ ಬೆಂಬಲಕ್ಕೆ ನಿಂತಿದ್ದೇವೆ. ಕಳೆದ ಬಾರಿ ರಾಜ್ಯಸಭೆ ಚುನಾವಣೆ ಸಂದರ್ಭದಲ್ಲೂ ನಾವು ಅವರ ಅಭ್ಯರ್ಥಿ ವಿರುದ್ಧ ಪ್ರತಿಸ್ಪರ್ಧಿ ಹಾಕಿರಲಿಲ್ಲ. ಆದರೆ ಕುಮಾರಸ್ವಾಮಿ ಅವರು, ಬಿಜೆಪಿ ಯಾವುದೇ ಅಭ್ಯರ್ಥಿ ಹಾಕಲಿಲ್ಲ ಎಂಬ ಕಾರಣಕ್ಕೆ ನಾವು ಹಾಕಲಿಲ್ಲ ಎಂದು ಹೇಳಿದ್ದಾರೆ. ಅವರು ನಮ್ಮ ಸಹಾಯ ಹಾಗೂ ಮೈತ್ರಿ ಸರ್ಕಾರ ರಚನೆ ವೇಳೆ ನಮ್ಮ ಬೇಷರತ್ ಬೆಂಬಲವನ್ನು ಸ್ಮರಿಸಲಿಲ್ಲ. ಅದು ಅವರ ಆಯ್ಕೆ ಎಂದಿದ್ದಾರೆ.

ಇನ್ನು ಮುಂದೆ ಕಾಂಗ್ರೆಸ್, ಬಿಜೆಪಿ ಜತೆ ಮೈತ್ರಿ ಅಸಾಧ್ಯ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ, ‘ಅವರಿಗೆ ನಮ್ಮ ಬೆಂಬಲದ ಅಗತ್ಯವಿದ್ದರೆ ನಮ್ಮ ಜತೆ ಚರ್ಚೆ ಮಾಡಬೇಕಿತ್ತು. ನಾವು ಮೊದಲು ನಮ್ಮ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದೇವೆ. ಆದರೂ ಅವರು ನಮ್ಮ ಜತೆ ಚರ್ಚೆ ಮಾಡಲಿಲ್ಲ. ಮೈಸೂರು ಪಾಲಿಕೆ ಚುನಾವಣೆ ಸೇರಿದಂತೆ ಈ ಹಿಂದೆ ಏನೆಲ್ಲಾ ನಡೆದಿವೆ ಎಂದು ಎಲ್ಲರೂ ನೋಡಿದ್ದಾರೆ. ವಿನಾಕಾರಣ ನಮ್ಮ ಶಾಸಕಾಂಗ ಪಕ್ಷದ ನಾಯಕರನ್ನು ಟೀಕಿಸುವುದರಿಂದ ಅವರಿಗೆ ಯಾವುದೇ ಪ್ರಯೋಜನವಿಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Kumaraswamy is a benefactor to BJP. Always his contribution is there in BJP’s success in Karnataka. His father and he will never gain anything and not allow Congress to get anything.

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...