Homeಮುಖಪುಟಎಎಪಿ ಸಂಸದ ರಾಘವ್ ಚಡ್ಡಾ ಅಮಾನತು ಹಿಂಪಡೆದ ರಾಜ್ಯಸಭೆ

ಎಎಪಿ ಸಂಸದ ರಾಘವ್ ಚಡ್ಡಾ ಅಮಾನತು ಹಿಂಪಡೆದ ರಾಜ್ಯಸಭೆ

- Advertisement -
- Advertisement -

ನಿಯಮ ಉಲ್ಲಂಘಿಸಿದ ಆರೋಪದ ಮೇಲೆ ಮೇಲ್ಮನೆಯಿಂದ (ರಾಜ್ಯಸಭೆ) ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಚಡ್ಡಾ ಅವರನ್ನು ಅಮಾನತ್ತು ಮಾಡಿ ಹೊರಡಿಸಿದ್ದ ಆದೇಶವನ್ನು ಸೋಮವಾರ ಹಿಂಪಡೆಯಲಾಗಿದೆ. ಈ ಮೂಲಕ 115 ದಿನಗ ಬಳಿಕ ಚಡ್ಡಾ ತಮ್ಮ ಸಂಸದ ಸ್ಥಾನವನ್ನು ವಾಪಸ್ ಪಡೆದುಕೊಂಡಿದ್ದಾರೆ.

ಪಂಜಾಬ್‌ನ ರಾಜ್ಯಸಭಾ ಸಂಸದರಾಗಿದ್ದ ಚಡ್ಡಾ ಅವರನ್ನು 2023 ಆಗಸ್ಟ್ 11 ರಂದು ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ವಿಶೇಷ ಹಕ್ಕು ಉಲ್ಲಂಘನೆಯ ಆರೋಪದ ಮೇಲೆ ಅಮಾನತುಗೊಳಿಸಲಾಗಿತ್ತು. ದೆಹಲಿಯ ರಾಷ್ಟ್ರೀಯ ರಾಜಧಾನಿ ಪ್ರದೇಶದ ಸರ್ಕಾರದ (ತಿದ್ದುಪಡಿ) ಮಸೂದೆ 2023ರ ಮಂಡನೆ ವೇಳೆ ಐವರು ರಾಜ್ಯಸಭಾ ಸಂಸದರ ನಕಲಿ ಸಹಿ ಮಾಡಿದ ಆರೋಪದ ಮೇಲೆ ಚಡ್ಡಾ ಅವರನ್ನು ಅಮಾನತು ಮಾಡಲಾಗಿತ್ತು.

ರಾಘವ್ ಚಡ್ಡಾಅವರ ಅಮಾನತ್ತಿನ ವೇಳೆ, ಅವರ ವಿರುದ್ಧದ ಪ್ರಕರಣದ ತನಿಖೆಯ ವಿಶೇಷಾಧಿಕಾರಗಳ ಸಮಿತಿಯು ತನ್ನ ವರದಿಯನ್ನು ಸಲ್ಲಿಸುವವರೆಗೆ ಅಮಾನತಿನಲ್ಲಿ ಇಡಲಾಗುವುದು ಎಂದು ರಾಜ್ಯಸಭೆ ಹೇಳಿತ್ತು. ರಾಘವ್ ಚಡ್ಡಾ ಅವರು ಮಾಡಿದ್ದು ಅಕ್ರಮ ಎಂದು ಪಿಯೂಷ್ ಗೋಯಲ್ ಅಮಾನತುಗೊಳಿಸುವ ಪ್ರಸ್ತಾಪ ಮಂಡಿಸಿದ್ದರು.

ಇದೀಗ ಚಳಿಗಾಲದ ಅಧಿವೇಶನದ ಮೊದಲ ದಿನವೇ ಬಿಜೆಪಿ ಸಂಸದ ಜಿವಿಎಲ್ ನರಸಿಂಹ ರಾವ್ ಅವರು ಮಂಡಿಸಿದ ಮನವಿಯ ಮೇರೆಗೆ ಅಮಾನತು ರದ್ದುಗೊಳಿಸಲಾಗಿದೆ. ಅಮಾನತು ವಿಷಯವನ್ನು ಚರ್ಚಿಸಲು ಇಂದು ಮಧ್ಯಾಹ್ನ ಸಂಸತ್ತಿನಲ್ಲಿ ರಾಜ್ಯಸಭೆಯ ವಿಶೇಷಾಧಿಕಾರ ಸಮಿತಿ ಸಭೆ ನಡೆಯಿತು.

ಅಮಾನತು ಆದೇಶ ಹಿಂಪಡೆದ ಬೆನ್ನಲ್ಲೇ ವಿಡಿಯೋ ಸಂದೇಶದ ಮೂಲಕ ಸುಪ್ರೀಂ ಕೋರ್ಟ್ ಮತ್ತು ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನ್ಕರ್ ಅವರಿಗೆ ಚಡ್ಡಾ ಧನ್ಯವಾದ ತಿಳಿಸಿದ್ದಾರೆ. ಆಗಸ್ಟ್ 11ರಂದು ನನ್ನನ್ನು ರಾಜ್ಯಸಭೆಯಿಂದ ಅಮಾನತುಗೊಳಿಸಲಾಗಿತ್ತು. ಅಮಾನತು ಹಿಂಪಡೆಯುವಂತೆ ನಾನು ಸುಪ್ರೀಂ ಕೋರ್ಟ್‌ಗೆ ಹೋಗಿದ್ದೆ. ಸುಪ್ರೀಂ ಕೋರ್ಟ್ ಇದನ್ನು ಅರಿತಿದೆ. ನನ್ನ ಅಮಾನತು ಆದೇಶವನ್ನು 115 ದಿನಗಳ ನಂತರ ಹಿಂಪಡೆಯಲಾಗಿದೆ. ಅಮಾನತು ರದ್ದುಗೊಂಡಿರುವುದಕ್ಕೆ ನಾನು ಬಹಳ ಸಂತೋಷಗೊಂಡಿದ್ದೇನೆ. ಸುಪ್ರೀಂ ಕೋರ್ಟ್ ಮತ್ತು ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನ್ಕರ್ ಅವರಿಗೆ ಧನ್ಯವಾದ ಹೇಳಲು ಬಯಸುತ್ತೇನೆ ಎಂದು ಚಡ್ಡಾ ಹೇಳಿದ್ದಾರೆ.

ಇದನ್ನೂ ಓದಿ : ಬಿಜೆಪಿಯವರು ನನ್ನ ಹೇಳಿಕೆ ತಿರುಚಿ ದೇಶವೇ ಮಾತನಾಡುವ ಹಾಗೆ ಮಾಡಿದರು: ಉದಯನಿಧಿ ಸ್ಟಾಲಿನ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಅಮೇಥಿ ಕಾಂಗ್ರೆಸ್ ಕಚೇರಿ ಮೇಲೆ ದಾಳಿ, ಕಾರ್ಯಕರ್ತನಿಗೆ ಹಲ್ಲೆ: ಬಿಜೆಪಿ ಮುಖಂಡರು ಸೇರಿ 10...

0
ಉತ್ತರ ಪ್ರದೇಶದ ಅಮೇಥಿಯಲ್ಲಿ ಕಾಂಗ್ರೆಸ್ ಪಕ್ಷದ ಕಚೇರಿ ಮೇಲೆ ಭಾನುವಾರ (ಮೇ 5) ಮಧ್ಯರಾತ್ರಿ ಅಪರಿಚಿತ ದುಷ್ಕರ್ಮಿಗಳ ಗುಂಪೊಂದು ದಾಳಿ ಮಾಡಿದೆ. ಪಕ್ಷದ ಕಚೇರಿಯ ಹೊರಗೆ ನಿಲ್ಲಿಸಿದ್ದ ಹಲವು ವಾಹನಗಳನ್ನು ಧ್ವಂಸಗೊಳಿಸಿದ ದುಷ್ಕರ್ಮಿಗಳು,...