Homeಮುಖಪುಟಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಲು ಸಂಜಯ್ ಸಿಂಗ್‌ಗೆ ಅನುಮತಿಸದ ರಾಜ್ಯಸಭಾ ಅಧ್ಯಕ್ಷ

ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಲು ಸಂಜಯ್ ಸಿಂಗ್‌ಗೆ ಅನುಮತಿಸದ ರಾಜ್ಯಸಭಾ ಅಧ್ಯಕ್ಷ

- Advertisement -
- Advertisement -

ಆಮ್ ಆದ್ಮಿ ಪಕ್ಷದ ನಾಯಕ ಸಂಜಯ್ ಸಿಂಗ್ ಸೋಮವಾರ ರಾಜ್ಯಸಭಾ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸುತ್ತಿಲ್ಲ. ಸಿಂಗ್ ಪ್ರಮಾಣ ವಚನ ಸ್ವೀಕರಿಸಲು ರಾಜ್ಯಸಭಾ ಅಧ್ಯಕ್ಷರು ನಿರಾಕರಿಸಿದ್ದಾರೆ ಎನ್ನಲಾಗಿದ್ದು, ಈ ವಿಷಯವು ಪ್ರಸ್ತುತ ವಿಶೇಷಾಧಿಕಾರಗಳ ಸಮಿತಿಯಲ್ಲಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ರಾಜ್ಯಸಭಾ ಅಧ್ಯಕ್ಷರ ನಿರ್ದೇಶನಗಳನ್ನು ಪಾಲಿಸದ ಕಾರಣ ಕಳೆದ ವರ್ಷ ಜುಲೈ 24 ರಂದು ಸಂಜಯ್ ಸಿಂಗ್ ಅವರನ್ನು ರಾಜ್ಯಸಭೆಯಿಂದ ಅಮಾನತುಗೊಳಿಸಲಾಗಿತ್ತು. ಜೈಲಿನಲ್ಲಿರುವ 51 ವರ್ಷದ ಎಎಪಿ ನಾಯಕನಿಗೆ ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯವು ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಲು ಶನಿವಾರ ಅನುಮತಿ ನೀಡಿದೆ. ಪ್ರಮಾಣ ವಚನಕ್ಕಾಗಿ ಮಧ್ಯಂತರ ಜಾಮೀನು ಮತ್ತು ಫೆಬ್ರವರಿ 5 ರಿಂದ 9 ರವರೆಗೆ ನಡೆಯುತ್ತಿರುವ ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ಪಾಲ್ಗೊಳ್ಳುವಂತೆ ಸಿಂಗ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ ಎರಡು ದಿನಗಳ ನಂತರ ನ್ಯಾಯಾಲಯದ ಆದೇಶವನ್ನು ಹೊರಡಿಸಲಾಗಿದೆ.

ಫೆಬ್ರವರಿ 7 ರಂದು ಅವರ ವಿರುದ್ಧ ದಾಖಲಾಗಿರುವ ಮತ್ತೊಂದು ಪ್ರಕರಣದ ವಿಚಾರಣೆಗಾಗಿ ಎಎಪಿ ನಾಯಕ ಸುಲ್ತಾನ್‌ಪುರಕ್ಕೆ ಹೋಗಬೇಕಾಗಿರುವುದರಿಂದ ಮಧ್ಯಂತರ ಜಾಮೀನಿನ ಮನವಿಯನ್ನು ಒತ್ತಾಯಿಸಲಾಗುವುದಿಲ್ಲ ಎಂದು ಸಿಂಗ್ ಅವರ ವಕೀಲರು ನ್ಯಾಯಾಲಯದಲ್ಲಿ ಸಲ್ಲಿಸಿದ್ದರು.

ಜಾರಿ ನಿರ್ದೇಶನಾಯವು ಸಿಂಗ್ ಅವರ ಮಾರ್ಪಡಿಸಿದ ಮನವಿಯನ್ನು ವಿರೋಧಿಸದ ಕಾರಣ, ನ್ಯಾಯಾಲಯವು ರಾಜಕಾರಣಿಯ ಮಧ್ಯಂತರ ಜಾಮೀನು ಅರ್ಜಿಯನ್ನು ವಜಾಗೊಳಿಸಿತು. ಸೋಮವಾರ ಪ್ರಮಾಣವಚನ ಸ್ವೀಕರಿಸಲು ಅವಕಾಶ ನೀಡಿತು.

ಇದೀಗ ರದ್ದಾದ ದೆಹಲಿ ಅಬಕಾರಿ ನೀತಿಯ ಇಡಿ ಅಕ್ರಮ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಸಂಜಯ್ ಸಿಂಗ್ ಅಕ್ಟೋಬರ್‌ನಿಂದ ಜೈಲಿನಲ್ಲಿದ್ದಾರೆ. ಜನವರಿ 4ರಂದು ರಾಜ್ಯಸಭಾ ಸದಸ್ಯತ್ವಕ್ಕೆ ನಾಮಪತ್ರ ಸಲ್ಲಿಸಲು ಹಾಗೂ ಜನವರಿ 10ರಂದು ಚುನಾವಣಾಧಿಕಾರಿ ಬಳಿ ತೆರಳಿ ಸದಸ್ಯತ್ವ ಪ್ರಮಾಣ ಪತ್ರ ಪಡೆಯಲು ಅನುಮತಿ ನೀಡಲಾಗಿತ್ತು.

ಕೇಂದ್ರೀಯ ತನಿಖಾ ಸಂಸ್ಥೆ ಈ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಕುರಿತು ತನಿಖೆ ನಡೆಸುತ್ತಿದೆ. ಈ ಪ್ರಕರಣವು ರಾಷ್ಟ್ರ ರಾಜಧಾನಿಯ ಪ್ರಮುಖ ಮದ್ಯದ ವ್ಯಾಪಾರವನ್ನು ಪುನಶ್ಚೇತನಗೊಳಿಸಲು ಅರವಿಂದ್ ಕೇಜ್ರಿವಾಲ್ ಸರ್ಕಾರದ 2021-22 ಅಬಕಾರಿ ನೀತಿಗೆ ಸಂಬಂಧಿಸಿದೆ.

ದೆಹಲಿ ಅಬಕಾರಿ ನೀತಿ ಪ್ರಕರಣವು ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರದ 2021-22ರ ಅಬಕಾರಿ ನೀತಿಯು ಕಾರ್ಟೆಲೈಸೇಶನ್ ಅನ್ನು ಅನುಮತಿಸಿದೆ ಮತ್ತು ಅದಕ್ಕಾಗಿ ಲಂಚವನ್ನು ಪಾವತಿಸಿದ ಕೆಲವು ಡೀಲರ್‌ಗಳಿಗೆ ಒಲವು ತೋರಿದೆ ಎಂಬ ಆರೋಪಗಳಿಗೆ ಸಂಬಂಧಿಸಿದೆ, ಇದನ್ನು ಎಎಪಿ ಬಲವಾಗಿ ನಿರಾಕರಿಸಿದೆ.

ಸಂಜಯ್ ಸಿಂಗ್ ಅವರ ಪಕ್ಷದ ಸಹೋದ್ಯೋಗಿ ಮತ್ತು ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಇದೇ ಪ್ರಕರಣದಲ್ಲಿ ಕಳೆದ ವರ್ಷ ಮಾರ್ಚ್‌ನಿಂದ ಜೈಲಿನಲ್ಲಿದ್ದಾರೆ.

ಇದನ್ನೂ ಓದಿ; ‘ಮೇ 10 ರೊಳಗೆ ಭಾರತೀಯ ಪಡೆಗಳು ನಿರ್ಗಮಿಸಬೇಕು..’; ಪಟ್ಟು ಸಡಿಲಿಸದ ಮಾಲ್ಡೀವ್ಸ್ ಅಧ್ಯಕ್ಷ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತ ಭೂದಾಳಿ ನಡೆಸಲು ಸಿದ್ಧವಾಗಿತ್ತು: ಆಪರೇಷನ್ ಸಿಂಧೂರ್ ಮುಂದುವರೆದಿದೆ ಎಂದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ 

ಮಂಗಳವಾರ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರು ಆಪರೇಷನ್ ಸಿಂಧೂರ್ ಮುಂದುವರೆದಿದೆ ಎಂದು ಹೇಳಿದ್ದು, ಯಾವುದೇ ದುಸ್ಸಾಹಸವನ್ನು ಪರಿಣಾಮಕಾರಿಯಾಗಿ ನಿಭಾಯಿಸಲಾಗುವುದು ಎಂದು ಹೇಳಿದ್ದಾರೆ.  ಜಮ್ಮು ಮತ್ತು ಕಾಶ್ಮೀರದ ನಿಯಂತ್ರಣ ರೇಖೆ (ಎಲ್‌ಒಸಿ) ಮತ್ತು...

ಕೊಪ್ಪಳ | ಸಂಪೂರ್ಣ ಮದ್ಯ ನಿಷೇಧಿಸಿ ತೀರ್ಮಾನ ತೆಗೆದುಕೊಂಡ ಗ್ರಾಮಸ್ಥರು : ಮದ್ಯದಂಗಡಿಗಳಿಗೆ ಶನಿವಾರದವರೆಗೆ ಗಡುವು

ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನ ಈಳಿಗನೂರು ಗ್ರಾಮದಲ್ಲಿ ಸಂಪೂರ್ಣ ಮದ್ಯ ನಿಷೇಧಿಸಿ ಜನರು ಸರ್ವಾನುಮತದ ತೀರ್ಮಾನ ತೆಗೆದುಕೊಂಡಿದ್ದು, ಮದ್ಯದ ಅಂಗಡಿಗಳಿಗೆ ಮಾರಾಟ ಸ್ಥಗಿತಗೊಳಿಸಲು ಶನಿವಾರದವರೆಗೆ ಗಡುವು ವಿಧಿಸಿದ್ದಾರೆ. ಗ್ರಾಮದಲ್ಲಿ ಶಾಂತಿ, ನೆಮ್ಮದಿ, ಸಾಮಾಜಿಕ...

ವಿಬಿ-ಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ಹೋರಾಟ : ಸಿಎಂ ಸಿದ್ದರಾಮಯ್ಯ

ನರೇಗಾ ಕಾಯ್ದೆ ಪುನ:ಸ್ಥಾಪನೆ ಆಗಿ ವಿಬಿ-ಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ನಮ್ಮ ಹೋರಾಟವನ್ನು ಮುಂದುವರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಕೆಪಿಸಿಸಿ ವತಿಯಿಂದ ಮಂಗಳವಾರ (ಜ.13) ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ...

ಪಶ್ಚಿಮ ಬಂಗಾಳ: ಸೋಮವಾರ ಪ್ರತ್ಯೇಕ ಸ್ಥಳಗಳಲ್ಲಿ ಎರಡು ಸಾವು: ಎಸ್‌ಐಆರ್ ಆತಂಕವೇ ಸಾವಿಗೆ ಕಾರಣ ಎಂದ ಕುಟುಂಬಗಳು 

ಪಶ್ಚಿಮ ಬಂಗಾಳದಲ್ಲಿ ಸೋಮವಾರ ಇಬ್ಬರು ಸಾವನ್ನಪ್ಪಿದ್ದು, ಉತ್ತರ ದಿನಾಜ್‌ಪುರದಲ್ಲಿ ಒಬ್ಬರು ಮತ್ತು ಉತ್ತರ 24 ಪರಗಣದಲ್ಲಿ ಮತ್ತೊಬ್ಬರು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಗೆ ಸಂಬಂಧಿಸಿದ ಆತಂಕವೇ ಅವರ ಸಾವಿಗೆ...

ಮರ್ಯಾದೆಗೇಡು ಹತ್ಯೆ : ಪ್ರೀತಿಸಿದ ಯುವಕನೊಂದಿಗೆ ತೆರಳಿದ್ದ ಬಾಲಕಿಯನ್ನು ಕೊಂದು ಮೃತದೇಹ ಸುಟ್ಟು ಹಾಕಿದ ಕುಟುಂಬಸ್ಥರು

ಪ್ರೀತಿಸಿದ ಯುವಕನೊಂದಿಗೆ ತೆರಳಿದ 16 ವರ್ಷದ ಬಾಲಕಿಯನ್ನು ಆಕೆಯ ಮನೆಯವರೇ ಕೊಂದು, ಮೃತದೇಹವನ್ನು ಸುಟ್ಟು ಹಾಕಿದ ಭೀಕರ ಘಟನೆ ಉತ್ತರ ಪ್ರದೇಶದ ಕಾಸ್ಗಂಜ್ ಜಿಲ್ಲೆಯಲ್ಲಿ ನಡೆದಿದೆ. ಬಾಲಕಿಯ ಕುಟುಂಬಸ್ಥರು ಪ್ರಸ್ತುತ ಪರಾರಿಯಾಗಿದ್ದಾರೆ. ಅವರ ಮನೆಗೆ...

ಚುನಾವಣಾ ಪ್ರಚಾರದ ವೇಳೆ ಬ್ಯಾಗ್ ಮೇಲೆ ಪ್ಯಾಲೆಸ್ಟೀನಿಯನ್ ಧ್ವಜ: ಆರ್‌ಡಬ್ಲ್ಯೂಪಿಐ ಅಭ್ಯರ್ಥಿಗೆ ನೋಟಿಸ್ ಜಾರಿ ಮಾಡಿದ ಮುಂಬೈ ಪೊಲೀಸರು

ಮುಂಬೈ: ಮುನ್ಸಿಪಲ್ ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಿದ್ದ ರೆವಲ್ಯೂಷನರಿ ವರ್ಕರ್ಸ್ ಪಾರ್ಟಿ ಆಫ್ ಇಂಡಿಯಾದ ಅಭ್ಯರ್ಥಿಯೊಬ್ಬರು ತಮ್ಮ ಪ್ರಚಾರ ಕಾರ್ಯಕರ್ತರ ಬಳಿ ಹೊತ್ತೊಯ್ದಿದ್ದ ಬ್ಯಾಗ್ ಮೇಲೆ ಪ್ಯಾಲೆಸ್ಟೀನಿಯನ್ ಧ್ವಜ ಕಾಣಿಸಿಕೊಂಡಿದ್ದು, ಇದು ಮಾನವ ಹಕ್ಕುಗಳ...

ಇರಾನ್‌ನೊಂದಿಗೆ ವ್ಯವಹಾರ ನಡೆಸುವ ರಾಷ್ಟ್ರಗಳ ಮೇಲೆ ಶೇ. 25 ಸುಂಕ ವಿಧಿಸಿದ ಟ್ರಂಪ್

ಇರಾನ್ ಜೊತೆ ವ್ಯಾಪಾರ ನಡೆಸುವ ಯಾವುದೇ ದೇಶದ ಮೇಲೆ ಶೇಕಡ 25ರಷ್ಟು ಸುಂಕ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೋಮವಾರ (ಜ.12) ಘೋಷಿಸಿದ್ದಾರೆ. "ತಕ್ಷಣದಿಂದಲೇ ಜಾರಿಗೆ ಬರುವಂತೆ, ಇರಾನ್ ಇಸ್ಲಾಮಿಕ್ ಗಣರಾಜ್ಯದೊಂದಿಗೆ ವ್ಯವಹಾರ...

ಮಂಗಳೂರು | ಬಾಂಗ್ಲಾದೇಶಿಯೆಂದು ಆರೋಪಿಸಿ ವಲಸೆ ಕಾರ್ಮಿಕನ ಮೇಲೆ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಬಾಂಗ್ಲಾದೇಶಿ ಎಂದು ಆರೋಪಿಸಿ ಜಾರ್ಖಂಡ್ ಮೂಲದ ವಲಸೆ ಕಾರ್ಮಿಕನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿ, ಕೊಲೆ ಯತ್ನ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಮಂಗಳೂರಿನ ಕಾವೂರು ಪೊಲೀಸರು ಸೋಮವಾರ (ಜ.12)...

ಬಿಜೆಪಿ ನಿಯೋಗದಿಂದ ಕರ್ನಾಟಕ ರಾಜ್ಯಪಾಲರ ಭೇಟಿ: ‘ದ್ವೇಷ ಭಾಷಣ ತಡೆ’ ಮಸೂದೆಗೆ ಒಪ್ಪಿಗೆ ನೀಡದಂತೆ ಮನವಿ

ಬೆಂಗಳೂರು: ದ್ವೇಷ ಭಾಷಣ ಮಸೂದೆಯನ್ನು"ವಾಕ್ ಸ್ವಾತಂತ್ರ್ಯದ ಮೇಲಿನ ನೇರ ದಾಳಿ" ಮತ್ತು "ರಾಜಕೀಯ ಸೇಡಿನ ಸಾಧನ" ಎಂದು ಕರೆದಿರುವ ಬಿಜೆಪಿ ನಾಯಕರ ನಿಯೋಗವು ಸೋಮವಾರ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ...

ಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣ : ಪಿಯು ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಬಡಾವಣೆಯಲ್ಲಿ 2026ರ ಜನವರಿ 3ರಂದು ರಾತ್ರಿ ನಡೆದ ಮಂಗಳೂರು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಶರ್ಮಿಳಾ ಕುಶಾಲಪ್ಪ (34) ಅವರ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಆರಂಭದಲ್ಲಿ, ಫ್ಲ್ಯಾಟ್‌ಗೆ ಬೆಂಕಿ...