Homeಮುಖಪುಟರಾಜ್ಯಸಭೆಯಿಂದ ಟಿಎಂಸಿ ಸಂಸದ ಡೆರೆಕ್ ಒಬ್ರಿಯನ್ ಎರಡನೇ ಬಾರಿಗೆ ಅಮಾನತು

ರಾಜ್ಯಸಭೆಯಿಂದ ಟಿಎಂಸಿ ಸಂಸದ ಡೆರೆಕ್ ಒಬ್ರಿಯನ್ ಎರಡನೇ ಬಾರಿಗೆ ಅಮಾನತು

- Advertisement -
- Advertisement -

ತೃಣಮೂಲ ಕಾಂಗ್ರೆಸ್‌ನ ರಾಜ್ಯಸಭಾ ಸಂಸದ ಡೆರೆಕ್ ಒಬ್ರಿಯನ್ ಅವರನ್ನು ಸಂಸತ್ ಅಧಿವೇಶನದ ಉಳಿದ ಅವಧಿಗೆ ಪಾಲ್ಗೊಳ್ಳದಂತೆ ಮಂಗಳವಾರ ಅಮಾನತುಗೊಳಿಸಲಾಗಿದೆ ಎಂದು ಎಎನ್‌ಐ ವರದಿ ಮಾಡಿದೆ.

ಚುನಾವಣಾ ಸುಧಾರಣೆಗಳ ಕುರಿತಾದ ಮಸೂದೆಯ ಮೇಲಿನ ಚರ್ಚೆಯ ಸಂದರ್ಭದಲ್ಲಿ ಒಬ್ರಿಯಾನ್ ಸಂಸತ್ತಿನ ನಿಯಮ ಪುಸ್ತಕದ ಪ್ರತಿಯನ್ನು ಅಧ್ಯಕ್ಷರ ಮೇಲೆ ಎಸೆದಿದ್ದಾರೆ ಎಂದು ಆರೋಪಿಸಲಾಗಿದೆ. ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ವಿ.ಮುರಳೀಧರನ್ ಅಮಾನತುಗೊಳಿಸುವಿಕೆಗೆ ಪ್ರಸ್ತಾವನೆಯನ್ನು ಮಂಡಿಸಿದ್ದರು.

ಸದನದಲ್ಲಿ ಪ್ರತಿಪಕ್ಷಗಳ ಸಂಸದರ ಅನುಪಸ್ಥಿತಿಯಲ್ಲಿಯೇ ಸಂಸದ ಡೆರೆಕ್ ಒಬ್ರಿಯನ್ ಅವರನ್ನು ಅಮಾನತುಗೊಳಿಸುವ ಪ್ರಸ್ತಾಪವನ್ನು ಅಂಗೀಕರಿಸಲಾಗಿದೆ ಎಂದು ದಿ ಹಿಂದೂ ವರದಿ ಮಾಡಿದೆ.

ಇದನ್ನೂ ಓದಿ: ಓಮಿಕ್ರಾನ್ ಆತಂಕ: ರಾಜ್ಯದಲ್ಲಿ ಹೊಸ ವರ್ಷದ ಸಂಭ್ರಮಾಚರಣೆಗೆ ಸರ್ಕಾರದಿಂದ ನಿರ್ಬಂಧ

ರಾಜ್ಯಸಭೆಯಲ್ಲಿ ಮಂಗಳವಾರದ ಕಲಾಪದ ವೇಳೆ, ಮತದಾರರ ಗುರುತಿನ ಚೀಟಿಗಳೊಂದಿಗೆ ಆಧಾರ್ ಕಾರ್ಡ್‌ ಲಿಂಕ್ ಮಾಡುವ ಚುನಾವಣಾ ಕಾನೂನುಗಳ (ತಿದ್ದುಪಡಿ) ಮಸೂದೆ, 2021 ರ ನಿಬಂಧನೆಯ ವಿರುದ್ಧ ವಿರೋಧ ಪಕ್ಷದ ಸಂಸದರು ಸದನದ ಬಾವಿಯಲ್ಲಿ ಇಳಿದು ಪ್ರತಿಭಟನೆ ನಡೆಸುತ್ತಿದ್ದರು.

ಈ ವೇಳೆ ಒಬ್ರಿಯನ್ ಸೇರಿದಂತೆ ವಿರೋಧ ಪಕ್ಷಗಳ ಸದಸ್ಯರು ಮಸೂದೆಯ ಮೇಲೆ ಮತಗಳ ವಿಭಜನೆಗೆ ಒತ್ತಾಯಿಸಿದ್ದರು. ಆದರೆ ರಾಜ್ಯಸಭೆಯ ಉಪ ಅಧ್ಯಕ್ಷ ಹರಿವಂಶ್ ಅವರು ಧ್ವನಿ ಮತದ ಮೂಲಕ ಮಸೂದೆ ಅಂಗೀಕರಿಸಿದ್ದರು. ಕಾಂಗ್ರೆಸ್, ಟಿಎಂಸಿ, ಎಎಪಿ, ಶಿವಸೇನೆ, ಎಡಪಕ್ಷಗಳು, ಆರ್‌ಜೆಡಿ, ಡಿಎಂಕೆ, ಸಮಾಜವಾದಿ ಪಕ್ಷ ಮತ್ತು ಬಿಎಸ್‌ಪಿ ಸೇರಿದಂತೆ ಪ್ರತಿಪಕ್ಷಗಳು ತಮಗೆ ಚರ್ಚೆಗೆ ಅವಕಾಶ ನೀಡಿಲ್ಲ ಎಂದು ಆರೋಪಿಸಿ ಸಭಾತ್ಯಾಗ ಮಾಡಿದ್ದವು.

ಈ ವೇಳೆ ಡೆರೆಕ್ ಒಬ್ರಿಯನ್ ಅವರು ಅಧ್ಯಕ್ಷರ ಕಡೆಗೆ ನಿಯಮ ಪುಸ್ತಕದ ಪ್ರತಿಯನ್ನು ಅಧ್ಯಕ್ಷರ ಮೇಲೆ ಎಸೆದಿದ್ದಾರೆ ಎಂದು ಆರೋಪಿಸಲಾಗಿದೆ. ಆದರೆ, ಆರೋಪ ನಿರಾಕರಿಸಿದ ಸಂಸದ “ ನಿಜವಾಗಿಯೂ ನಾನು ನಿಯಮ ಪುಸ್ತಕವನ್ನು ಎಸೆದಿದ್ದೇನೆ ಎಂದು ಯಾರು ಹೇಳಿದರು? ಆ ದೃಶ್ಯಗಳನ್ನು ನನಗೆ ತೋರಿಸಿ”ಎಂದು ಕೇಳಿದ್ದರು.

“ನೀವು ನನ್ನನ್ನು ಸದಸನದಿಂದ ಅಮಾನತುಗೊಳಿಸಬಹುದು, ನೀವು ನನ್ನನ್ನು ಮೌನಗೊಳಿಸಲು ಸಾಧ್ಯವಿಲ್ಲ” ಎಂದು ಡೆರೆಕ್ ಒಬ್ರಿಯನ್ ಹೇಳಿದ್ದಾರೆ. ಜೊತೆಗ ಕಳೆದ ಬಾರಿ ವಿವಾದಿತ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸಿದಕ್ಕಾಗಿ ಅಮಾನತು ಮಾಡಿದ್ದನ್ನು ನೆನಪಿಸಿಕೊಂಡಿದ್ದಾರೆ.

ಆಗಸ್ಟ್‌ನಲ್ಲಿ ನಡೆದ ಮುಂಗಾರು ಅಧಿವೇಶನದಲ್ಲಿ ಅಶಿಸ್ತಿನ ವರ್ತನೆ ಮತ್ತು ಹಿಂಸಾಚಾರದ ಆರೋಪದ ಮೇಲೆ 12 ಸಂಸದರನ್ನು ನವೆಂಬರ್ 29 ರಂದು ಅಮಾನತುಗೊಳಿಸಲಾಗಿತ್ತು. ಕಳೆದ ಎರಡು ವಾರಗಳಿಂದ ಹದಿನೈದು ಪ್ರತಿಪಕ್ಷಗಳು ಸಂಸದರ ಅಮಾನತು ವಿರೋಧಿಸಿ ಪ್ರತಿಭಟನೆ ನಡೆಸುತ್ತಿವೆ.


ಇದನ್ನೂ ಓದಿ: 2021 ಸಿನಿಮಾ ಲೋಕ: ಜಾತಿ ದೌರ್ಜನ್ಯವನ್ನು ಪ್ರಶ್ನಿಸಿದ, ಚಿಂತನೆಗೆ ಹಚ್ಚಿದ ಚಲನಚಿತ್ರಗಳ ಪಟ್ಟಿ ಇಲ್ಲಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...