Homeಮುಖಪುಟಹಳೆಯ ಪಿಂಚಣಿ ಯೋಜನೆಗೆ ಆಗ್ರಹಿಸಿ ರ್ಯಾಲಿ: ಭಾಗಿಯಾಗದಂತೆ ಸರ್ಕಾರಿ ನೌಕರರಿಗೆ ಕೇಂದ್ರದ ಎಚ್ಚರಿಕೆ

ಹಳೆಯ ಪಿಂಚಣಿ ಯೋಜನೆಗೆ ಆಗ್ರಹಿಸಿ ರ್ಯಾಲಿ: ಭಾಗಿಯಾಗದಂತೆ ಸರ್ಕಾರಿ ನೌಕರರಿಗೆ ಕೇಂದ್ರದ ಎಚ್ಚರಿಕೆ

- Advertisement -
- Advertisement -

ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೆ ಒತ್ತಾಯಿಸಿ ನವದೆಹಲಿಯಲ್ಲಿ ನಡೆಯುವ ರ್ಯಾಲಿಯಲ್ಲಿ ಭಾಗವಹಿಸದಂತೆ ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ ಎಂದು ದಿ ಹಿಂದೂ ವರದಿ ಮಾಡಿದೆ.

”ಪ್ರತಿಭಟನೆ ಸೇರಿದಂತೆ ಯಾವುದೇ ರೂಪದ ಮುಷ್ಕರದಲ್ಲಿ ಭಾಗಿಯಾದರೆ ಆ ನೌಕರರು ಮುಂದಿನ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ, ಇದು ವೇತನ ಕಡಿತದ ಜೊತೆಗೆ, ಸೂಕ್ತ ಶಿಸ್ತು ಕ್ರಮವನ್ನು ಒಳಗೊಂಡಿರುತ್ತದೆ” ಎಂದು ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಹೊರಡಿಸಿದ ಆದೇಶದಲ್ಲಿ ತಿಳಿಸಿದೆ.

ಹಳೆಯ ಪಿಂಚಣಿ ಯೋಜನೆ ಮರುಸ್ಥಾಪನೆಗಾಗಿ ಜಂಟಿ ವೇದಿಕೆ ಮತ್ತು ರಾಷ್ಟ್ರೀಯ ಜಾಯಿಂಟ್ ಕೌನ್ಸಿಲ್ ಆಫ್ ಆಕ್ಷನ್ ಬ್ಯಾನರ್ ಅಡಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಿ ಇಲಾಖೆಗಳ ನೌಕರರು ಗುರುವಾರ ದೆಹಲಿಯ ರಾಮಲೀಲಾ ಮೈದಾನದಲ್ಲಿ ರ್ಯಾಲಿಯನ್ನು ಆಯೋಜಿಸಿದ್ದಾರೆ.

ಹೊಸ ಪಿಂಚಣಿ ಯೋಜನೆಯು ಏಪ್ರಿಲ್ 1, 2003 ರಂದು ಜಾರಿಗೆ ಬಂದಿತು. ಜನವರಿ ವರೆಗೆ 23,65,693 ಕೇಂದ್ರ ಸರ್ಕಾರಿ ನೌಕರರು ಮತ್ತು 60,32,768 ರಾಜ್ಯ ಸರ್ಕಾರಿ ನೌಕರರು ಹೊಸ ಪಿಂಚಣಿ ಯೋಜನೆಯಡಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ.

”ಮುಷ್ಕರಕ್ಕೆ ಹೋಗಲು ನೌಕರರಿಗೆ ಅಧಿಕಾರ ನೀಡುವ ಯಾವುದೇ ಶಾಸನಬದ್ಧ ನಿಬಂಧನೆ ಇಲ್ಲ. ಮುಷ್ಕರ ನಡೆಸುವುದು ನೀತಿ ನಿಯಮಗಳ ಅಡಿಯಲ್ಲಿ ಗಂಭೀರ ದುಷ್ಕೃತ್ಯವಾಗಿದೆ ಮತ್ತು ಸರ್ಕಾರಿ ನೌಕರರ ದುಷ್ಕೃತ್ಯವನ್ನು ಕಾನೂನಿನ ಪ್ರಕಾರ ವ್ಯವಹರಿಸಬೇಕು ಎಂದು ಸುಪ್ರೀಂ ಕೋರ್ಟ್ ಹಲವಾರು ತೀರ್ಪುಗಳಲ್ಲಿ ಒಪ್ಪಿಕೊಂಡಿದೆ” ಎಂದು ಆದೇಶದಲ್ಲಿ ತಿಳಿಸಲಾಗಿದೆ.

ನೌಕರರ ಗೈರುಹಾಜರಿಗಾಗಿ ವೇತನ ಮತ್ತು ಭತ್ಯೆಗಳನ್ನು ಸ್ವೀಕರಿಸಲಾಗುವುದಿಲ್ಲ ಮತ್ತು ನೌಕರರನ್ನು ಮುಷ್ಕರಕ್ಕೆ ಹೋಗದಂತೆ ತಡೆಯಲು ಪ್ರತಿ ಸಚಿವಾಲಯದ ಕಾರ್ಯದರ್ಶಿಗಳಿಗೆ ತಿಳಿಸಲಾಗಿದೆ.

ಇದನ್ನೂ ಓದಿ: ಒಂದು ಶ್ರೇಣಿ ಒಂದು ಪಿಂಚಣಿ: ನ್ಯಾಯಾಂಗ ನಿಂದನೆ ನೋಟಿಸ್‌ ನೀಡುವುದಾಗಿ ಕೇಂದ್ರಕ್ಕೆ ಸುಪ್ರೀಂ ಎಚ್ಚರಿಕೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಸ್ವಾತಿ ಮಲಿವಾಲ್ ಮೇಲಿನ ಹಲ್ಲೆ ಪ್ರಕರಣ: ಕೇಜ್ರಿವಾಲ್ ಸಹಾಯಕ ಬಂಧನ

0
ಎಎಪಿ ಸಂಸದೆ ಸ್ವಾತಿ ಮಲಿವಾಲ್ ಅವರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಹಾಯಕ ಮತ್ತು ಮಾಜಿ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ಅವರನ್ನು ಶನಿವಾರ ದೆಹಲಿ...