Homeಮುಖಪುಟನನ್ನ ಮಗ ರಾಮ್ ಚರಣ್‌ಗೆ ಮತ್ತೊಂದು ಹೆಣ್ಣು ಮಗು ಜನಿಸುವ ಬಗ್ಗೆ ಭಯವಿದೆ - ಸ್ತ್ರೀ...

ನನ್ನ ಮಗ ರಾಮ್ ಚರಣ್‌ಗೆ ಮತ್ತೊಂದು ಹೆಣ್ಣು ಮಗು ಜನಿಸುವ ಬಗ್ಗೆ ಭಯವಿದೆ – ಸ್ತ್ರೀ ವಿರೋಧಿ ಹೇಳಿಕೆ ನೀಡಿದ ನಟ ಚಿರಂಜೀವಿ

- Advertisement -
- Advertisement -

ತೆಲುಗು ಚಿತ್ರರಂಗದ ಮೆಗಾಸ್ಟಾರ್, ನಟ ಚಿರಂಜೀವಿ, ತನ್ನ ಮಗ ರಾಮ್ ಚರಣ್‌ಗೆ ಹೆಣ್ಣು ಮಗು ಜನಿಸಬಹುದೆಂಬ ಬಗ್ಗೆ ಭಯವಿದೆ ಎಂದು ಹೇಳಿ ವಿವಾದ ಸೃಷ್ಟಿಸಿದ್ದಾರೆ. ಹೆಣ್ಣು ಮಕ್ಕಳ ಬಗ್ಗೆ ಅಸೂಕ್ಷ್ಮ ಹೇಳಿಕೆ ನೀಡಿರುವ ಅವರ ಈ ಹೇಳಿಕೆ “ಸ್ತ್ರೀ ವಿರೋಧಿ” ಹೇಳಿಕೆಯಾಗಿದೆ ಎಂದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ನನ್ನ ಮಗ ರಾಮ್ ಚರಣ್‌

ಸಿನಿಮಾವೊಂದರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅವರು, ತನ್ನ ಮಗ ರಾಮ್‌ಚರಣ್‌ಗೆ ಎರಡನೇ ಮಗುವಾದರೂ ಗಂಡು ಮಗು ಆಗಬೇಕು ಎಂದು ಹೇಳಿರುವ ಅವರು, ತಮ್ಮ ಪರಂಪರೆಯನ್ನು ಮುಂದುವರಿಸಲು ಮೊಮ್ಮಗ ಬೇಕು, ಹೆಣ್ಣು ಮಕ್ಕಳು ಮನೆಯಲ್ಲಿರುವಾಗ “ಮಹಿಳೆಯರ ಹಾಸ್ಟೆಲ್”ನಲ್ಲಿರುವಂತೆ ಭಾಸವಾಗುತ್ತದೆ ಎಂದು ಹೇಳಿದ್ದಾರೆ. ನನ್ನ ಮಗ ರಾಮ್ ಚರಣ್‌ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ನಾನು ಮನೆಯಲ್ಲಿ ಮೊಮ್ಮಕ್ಕಳ ಜೊತೆ ಇದ್ದಾಗ, ಲೇಡಿಸ್ ಹಾಸ್ಟೆಲ್‌ನ ವಾರ್ಡನ್ ಆಗಿದ್ದೀನೇನೋ ಎಂಬಂತೆ ಭಾಸವಾಗುತ್ತದೆ. ಸುತ್ತಲೂ ಹೆಣ್ಣುಮಕ್ಕಳೇ ಇರುತ್ತಾರೆ. ಚರಣ್ ಈ ಬಾರಿ ಒಂದು ಗಂಡು ಮಗು ಬೇಕು ಕಣೋ. ನಮ್ಮ ಲೆಗಸಿ ಮುಂದುವರೆಯಬೇಕು ಎಂಬುದು ನನ್ನ ಕೋರಿಕೆ. ಆದರೆ, ಚರಣ್‌ಗೆ ಮತ್ತೊಂದು ಹೆಣ್ಣು ಮಗು ಆಗುತ್ತದೆಯಾ ಎಂಬ ಭಯವಿದೆ” ಎಂದು ಅವರು ಹೇಳಿದ್ದಾರೆ.

ಅವರ ಹೇಳಿಕೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಒಬ್ಬ ಸ್ಟಾರ್‌ ನಟ ಹೆಣ್ಣು ಮಕ್ಕಳ ಬಗ್ಗೆ ಎಂಥಹ ಧೋರಣೆ ಹೊಂದಿದ್ದಾರೆ ಎಂದು ಆಕ್ರೋಶ ವ್ಯಕ್ತವಾಗಿದೆ. ಹೆಣ್ಣು ಮಕ್ಕಳಿದ್ದರೆ ಅವರ ಲೆಗಸಿ ಮುಂದುವರೆಯುವುದಿಲ್ಲವೇ. ಅವರ ವಂಶವನ್ನು ಮುಂದುವರೆಸಲು ಗಂಡೇ ಆಗಬೇಕೇ? ಎಂದು ಕೇಳಿದ್ದಾರೆ.

ಕೋಟ್ಯಂತರ ಅಭಿಮಾನಿಗಳನ್ನು ಹೊಂದಿರುವವರು, ತಮ್ಮನ್ನ ಫಾಲೋ ಮಾಡುವವರಿಗೆ ಮಾದರಿಯಾಗಿ ಇರಬೇಕಿರುವವರು ಗಂಡು-ಹೆಣ್ಣು ಎಂಬ ಭೇದ ಹೊಂದಿದ್ದರೆ, ಅವರು ಯಾವ ರೀತಿಯ ಮಾದರಿಯಾಗಬಲ್ಲರು. ಸಮಾಜಕ್ಕೆ ಎಂಥಹ ಸಂದೇಶ ನೀಡುವರು ಎಂದು ಟೀಕೆಗಳು ವ್ಯಕ್ತವಾಗಿವೆ.

ಹೆಣ್ಣು ಮಕ್ಕಳು ಎಲ್ಲ ಕ್ಷೇತ್ರಗಳಲ್ಲಿಯೂ ತೊಡಗಿಸಿಕೊಂಡಿದ್ದಾರೆ. ಸಾಧನೆ ಮಾಡುತ್ತಿದ್ದಾರೆ. ಎಲ್ಲ ಕ್ಷೇತ್ರಗಳಲ್ಲಿಯೂ ಗಂಡಿಗೆ ಸಮಾನಳಾಗಿ ಗುರುತಿಸಿಕೊಂಡಿದ್ದಾರೆ. ಆದರೂ, ಸ್ಟಾರ್ ನಟನೊಬ್ಬ ಗಂಡು ಅಹಮ್ಮಿಕೆಗೆ ಬಲಿಯಾಗಿರುವುದು ವಿಷಾಧನೀಯ ಎಂದು ಹಲವರು ಆಕ್ರೋಶ ವ್ಯಕ್ತಪಡಿದ್ದಾರೆ.

ಚಿರಂಜೀವಿ ಅವರ ಮಗ ರಾಮ್‌ಚರಣ್‌ ಮತ್ತು ಸೊಸೆ ಉಪಾಸನಾ ದಂಪತಿಗೆ ಹೆಣ್ಣು ಮಗುವಿದ್ದು, ಅವರಿಗೆ ಕ್ಲಿಂಕಾರ ಎಂದು ಹೆಸರಿಟ್ಟಿದ್ದಾರೆ.

ಇದನ್ನೂಓದಿ:  ಮೈಕ್ರೋ ಫೈನಾನ್ಸ್‌ ಕಿರುಕುಳ ವಿರೋಧಿ ಕಾನೂನು ಜಾರಿಗೆ – ಸಿದ್ದರಾಮಯ್ಯ ಘೊಷಣೆ

ಮೈಕ್ರೋ ಫೈನಾನ್ಸ್‌ ಕಿರುಕುಳ ವಿರೋಧಿ ಕಾನೂನು ಜಾರಿಗೆ – ಸಿದ್ದರಾಮಯ್ಯ ಘೊಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...