Homeಮುಖಪುಟಅಯೋಧ್ಯೆ ರಾಮ ಜನ್ಮಭೂಮಿ ಭೂಮಿ ಖರೀದಿ ವಿವಾದ: ಕಾನೂನು ಸಮರಕ್ಕೆ ಸಜ್ಜಾದ ಟ್ರಸ್ಟ್‌

ಅಯೋಧ್ಯೆ ರಾಮ ಜನ್ಮಭೂಮಿ ಭೂಮಿ ಖರೀದಿ ವಿವಾದ: ಕಾನೂನು ಸಮರಕ್ಕೆ ಸಜ್ಜಾದ ಟ್ರಸ್ಟ್‌

- Advertisement -
- Advertisement -

ಅಯೋಧ್ಯೆ ರಾಮ ಮಂದಿರ ಭೂಮಿ ಖರೀದಿ ವಿವಾದ ಕಳೆದ ವಾರ ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿತ್ತು. ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ರಚಿಸಿರುವ ಟ್ರಸ್ಟ್‌ ಹೆಚ್ಚಿನ ದರಕ್ಕೆ ಭೂಮಿಯನ್ನು ಖರೀದಿಸಿದೆ ಎಂದು ವಿರೋಧ ಪಕ್ಷಗಳು ಆರೋಪಿಸುತ್ತಲೇ ಬಂದಿವೆ. ಅಯೋಧ್ಯಾ ರಾಮ ಮಂದಿರ ಟ್ರಸ್ಟ್‌ ಮಾತ್ರ ಎಲ್ಲ ಆರೋಪಗಳನ್ನು ಅಲ್ಲಗಳೆದಿದ್ದು ಆರೋಪ ಮಾಡಿದವರ ವಿರುದ್ಧ ಕಾನೂನು ಸಮರ ಸಾರುವುದಾಗಿ ಹೇಳಿದೆ.

ಸುಮಾರು 2 ಕೋಟಿ ಮೌಲ್ಯದ ಭೂಮಿಯನ್ನು 18 ಕೋಟಿ ಮೊತ್ತಕ್ಕೆ ಟ್ರಸ್ಟ್‌ ಖರೀದಿಸಿದೆ ಎಂದು ವಿರೋಧಪಕ್ಷಗಳು ಆರೋಪಿಸಿವೆ. ವಿರೋಧಪಕ್ಷಗಳ ಆರೋಪಕ್ಕೆ ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್‌ ನೇಮಕಮಾಡಿರುವ ರಾಮಜನ್ಮಭೂಮಿ ದೇವಸ್ಥಾನ ಟ್ರಸ್ಟ್‌ ಭೂ ಖರೀದಿ ಹಗರಣದ ಆರೋಪಗಳನ್ನು ಅಲ್ಲಗಳೆದಿದೆ. ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಕಾರ್ಯದರ್ಶಿ ಚರಪಂತ್ ರಾಯ್ ಅವರು ಭೂ ಖರೀದಿ ಪಾರದರ್ಶಕವಾಗಿ ನಡೆದಿದ್ದು, ಮಾರುಕಟ್ಟೆ ಬೆಲೆಗಿಂತ ಕಡಿಮೆ ಬೆಲೆಗೆ ಜಾಗವನ್ನು ಖರೀದಿಸಲಾಗಿದೆ ಎಂದು ಸಮರ್ಥಿಸಿಕೊಂಡಿದ್ದಾರೆ.

ವಿರೋಧ ಪಕ್ಷಗಳು ರಾಜಕೀಯ ಕಾರಣಕ್ಕೆ ವಿವಾದವನ್ನು ಹುಟ್ಟುಹಾಕುತ್ತಿವೆ. ಆರೋಪಗಳು ಸತ್ಯಕ್ಕೆ ದೂರವಾಗಿವೆ. ಭೂ ಖರೀದಿಯ ಎಲ್ಲಾ ದಾಖಲೆಗಳನ್ನು ಬಹಿರಂಗಗೊಳಿಸಲು ಟ್ರಸ್ಟ್‌ ಸಿದ್ಧವಿದ್ದೇವೆ ಎಂದು ಅವರು ತಿಳಿಸಿದ್ದಾರೆ.

ರಾಮ ಜನ್ಮಭೂಮಿ ಭೂ ಖರೀದಿಯಲ್ಲಿ ಹಗರಣ ನಡೆದಿದೆ ಎಂಬ ಅನುಮಾನವಿರುವವರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಲಿ. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ  ಟೆಂಪಲ್‌ ಟ್ರಸ್ಟ್‌ ಸುಪ್ರೀಂ ಕೋರ್ಟ್ ನೇಮಕ ಮಾಡಿರುವ ಟ್ರಸ್ಟ್‌ ಆಗಿದ್ದು ಕೋರ್ಟ್‌ಗೆ ಉತ್ತರಿಸಲಿದೆ. ಒಂದು ವೇಳೆ ಆರೋಪ ಮಾಡುವವರಲ್ಲಿ ಸಾಕ್ಷಿಯಿದ್ದರೆ ಕಾನೂನಿನ ಮೂಲಕ ಆರೋಪವನ್ನು ಸಾಬೀತುಪಡಿಸಲಿ ಎಂದು ಟ್ರಸ್ಟ್‌ ವಿರೋಧಪಕ್ಷಗಳಿಗೆ ಸವಾಲು ಹಾಕಿದೆ.

ಕಾಂಗ್ರೆಸ್‌, ಆಮ್ ಆದ್ಮಿ ಪಕ್ಷ , ಸಮಾಜವಾದಿ ಪಕ್ಷ ಸೇರಿದಂತೆ ಇನ್ನೂ ಅನೇಕರು ರಾಮ ಜನ್ಮ ಭೂಮಿ ಭೂ ಖರೀದಿಯಲ್ಲಿ ಹಗರಣ ನಡೆದಿದೆ ಎಂದು ಆರೋಪ ಮಾಡಿದ್ದರು. ಈಗ ರಾಮ ಜನ್ಮಭೂಮಿ ಟ್ರಸ್ಟ್‌ ಇವರೆಲ್ಲರ ವಿರುದ್ಧ ಕಾನೂನು ಸಮರಕ್ಕೆ ಮುಂದಾಗಿದೆ. ಕಾಂಗ್ರೆಸ್‌ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರೀಯಾಂಕಾ ಗಾಂಧಿ, ಆಮ್ ಆದ್ಮಿ ಸಂಸದ ಸಂಜಯ್ ಸಿಂಗ್ ಅವರ ಮೇಲೆ ಮಾನನಷ್ಟ ಮೊಕದ್ದಮೆಯನ್ನು ಹೂಡಲು ನಿರ್ಧರಿಸಿದೆ. ಧಾರ್ಮಿಕ ನಂಬಿಕೆಗಳನ್ನು ಕದಡುವ ಪ್ರಯತ್ನ, ಐಪಿಸಿ ಸೆಕ್ಷನ್ 153B (ಸಮುದಾಯಗಳ ನಡುವೆ ಧಾರ್ಮಿಕ ದ್ವೇಷವನ್ನು ಹರಡುವ ಕೃತ್ಯ), ಸುಳ್ಳು ದಾಖಲೆಗಳ ನೀಡಿಕೆ ಸೇರಿದಂತೆ ವಿವಿಧ ಆರೋಪಗಳಡಿಯಲ್ಲಿ ರಾಮ ಜನ್ಮಭೂಮಿ ಟ್ರಸ್ಟ್‌ ಪ್ರಕರಣಗಳನ್ನು ದಾಖಲಿಸಲು ಮುಂದಾಗಿದೆ.

ವಿಶ್ವ ಹಿಂದು ಪರಿಷತ್ ಕೂಡ ರಾಮ ಮಂದಿರ ಭೂ ಖರೀದಿ ವಿವಾದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಮೆಟ್ಟಿಲೇರುವುದಾಗಿ ಹೇಳಿದೆ. ಆರೋಪ ಮಾಡಿದವರು ನ್ಯಾಯಾಲಯದ ಮೆಟ್ಟಿಲೇರದ ಕಾರಣ ಟೆಂಪಲ್ ಟ್ರಸ್ಟ್‌ ಕಾನೂನು ಸಮರಕ್ಕೆ ಸಿದ್ಧವಾಗಿದೆ. ಶ್ರೀ ರಾಮ ಜನ್ಮ ಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ ಕುರಿತು ಅಪನಂಬಿಕೆಯನ್ನು ಸೃಷ್ಟಿಸುವ ಕೆಲಸ ನಡೆಯುತ್ತಿದೆ ಹಾಗಾಗಿ ಕಾನೂನು ಪ್ರಕ್ರಿಯೆಗಳನ್ನು ಕೈಗೊಳ್ಳುವುದಾಗಿ ಟ್ರಸ್ಟ್‌ನ ಮೂಲಗಳು ತಿಳಿಸಿವೆ.


ಇದನ್ನೂ ಓದಿ : ಎರಡು ಮೂರು ತಿಂಗಳಲ್ಲಿ ನಿತೀಶ್ ಕುಮಾರ್‌ ಸರ್ಕಾರ ಬೀಳಲಿದೆ: ತೇಜಶ್ವಿ ಯಾದವ್

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಅಧಿಕಾರಕ್ಕೆ ಬಂದರೆ ‘ಪಿತ್ರಾರ್ಜಿತ ಆಸ್ತಿ ತೆರಿಗೆ’ ಜಾರಿಗೊಳಿಸುವುದಾಗಿ ಕಾಂಗ್ರೆಸ್ ಹೇಳಿಲ್ಲ

0
ಕಳೆದ ಎರಡು ದಿನಗಳಿಂದ ದೇಶದಲ್ಲಿ 'ಪಿತ್ರಾರ್ಜಿತ ಆಸ್ತಿ ತೆರಿಗೆ' (Inheritance Tax) ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿವೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದಲ್ಲಿ 'ಪಿತ್ರಾರ್ಜಿತ ಆಸ್ತಿ ತೆರಿಗೆ' ಜಾರಿಗೆ ತರಲಿದೆ. ಈ...