Homeಮುಖಪುಟರಾಮ ಮಂದಿರ ಟ್ರಸ್ಟ್: ಭೂ ಕಬಳಿಕೆ ಆರೋಪ ಮಾಡಿದ ಪತ್ರಕರ್ತನ ವಿರುದ್ಧ ಪ್ರಕರಣ ದಾಖಲು

ರಾಮ ಮಂದಿರ ಟ್ರಸ್ಟ್: ಭೂ ಕಬಳಿಕೆ ಆರೋಪ ಮಾಡಿದ ಪತ್ರಕರ್ತನ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ರಾಮ ಮಂದಿರ ಟ್ರಸ್ಟ್ ಮಾಡಲಾಗಿದೆ ಎನ್ನುವ ಭೂ ಕಬಳಿಕೆ ಪ್ರಕರಣವನ್ನು ವರದಿ ಮಾಡಿದ ಒಬ್ಬ ಪತ್ರಕರ್ತ ಇತರ ಇಬ್ಬರ ವಿರುದ್ಧ 18 ಆರೋಪಗಳನ್ನು ಹೊರಿಸಿರುವ ಉತ್ತರ ಪ್ರದೇಶದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಅಯೋಧ್ಯೆಯಲ್ಲಿನ ವಿವಾದಾತ್ಮಕ ಭೂ ವ್ಯವಹಾರಗಳ ಬಗ್ಗೆ ಪ್ರಶ್ನೆಗಳನ್ನು ಎದುರಿಸುತ್ತಿರುವ ವಿಶ್ವ ಹಿಂದೂ ಪರಿಷತ್ ನಾಯಕ ಮತ್ತು ರಾಮ ಮಂದಿರ ಟ್ರಸ್ಟ್‌ನ ಕಾರ್ಯದರ್ಶಿ ಚಂಪತ್ ರಾಯ್ ಅವರ ಸಹೋದರರ ದೂರಿನ ಮೇರೆಗೆ ಈ ಪ್ರಕರಣ ದಾಖಲಿಸಲಾಗಿದೆ ಎಂದು ಎನ್‍ಡಿಟಿವಿ ವರದಿ ಮಾಡಿದೆ.

ಭೂ  ವ್ಯವಹಾರ ಆರೋಪಗಳ ಕುರಿತಂತೆ ಪ್ರಾಥಮಿಕ ಸಾಕ್ಷ್ಯಗಳ ಆಧಾರದಲ್ಲಿ ಬಿಜ್ನೋರ್ ಪೊಲೀಸ್ ಮುಖ್ಯಸ್ಥರು ಈಗಾಗಲೇ ಚಂಪತ್ ರಾಯ್ ಮತ್ತು ಅವರ ಸಹೋದರರಿಗೆ “ಕ್ಲೀನ್ ಚಿಟ್” ನೀಡಿದ್ದಾರೆ. ತನಿಖೆ ಮುಂದುವರೆದಿದೆ ಎಂದು ಅವರು ಹೇಳಿದ್ದಾರೆ.

ಚಂಪತ್ ರಾಯ್ ಅವರ ಸಹೋದರ ಸಂಜಯ್ ಬನ್ಸಾಲ್ ನೀಡಿದ ದೂರಿನ ಆಧಾರದ ಮೇಲೆ ಪತ್ರಕರ್ತ ವಿನೀತ್ ನರೈನ್, ಅಲ್ಕಾ ಲಹೋಟಿ ಮತ್ತು ರಜನೀಶ್ ಅವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಈ ಮೂವರೂ ವಿಎಚ್‌ಪಿ ನಾಯಕನ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಲು ಸಂಚು ರೂಪಿಸಿದ್ದಾರೆ ಮತ್ತು ಈ ಮೂಲಕ ದೇಶಾದ್ಯಂತ ಕೋಟ್ಯಾಂತರ ಹಿಂದೂಗಳ ಭಾವನೆಗಳನ್ನು ಘಾಸಿಗೊಳಿಸಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ.

ಮೂರು ದಿನಗಳ ಹಿಂದೆ ಫೇಸ್‌ಬುಕ್ ಪೋಸ್ಟ್‌ನಲ್ಲಿ ವಿನೀತ್ ನರೈನ್ ಅವರು, ವಿಶ್ವ ಹಿಂದೂ ಪರಿಷತ್ ನಾಯಕ ಮತ್ತು ರಾಮ ಮಂದಿರ ಟ್ರಸ್ಟ್‌ನ ಕಾರ್ಯದರ್ಶಿ ಚಂಪತ್‍ರಾಯ್‍  ಅವರು ತಮ್ಮ ಸಹೋದರರು ಬಿಜ್ನೋರ್‌ನಲ್ಲಿ ಭೂ ಕಬಳಿಕೆ ಮಾಡಲು ಅನುಕೂಲ ಮಾಡಿಕೊಟ್ಟಿದ್ದಾರೆ ಎಂದು ಆರೋಪಿಸಿದ್ದರು.

ಎನ್‌ಆರ್‌ಐ ಅಲ್ಕಾ ಲಹೋಟಿ (ಎಫ್‌ಐಆರ್‌ನಲ್ಲಿ ಸಹ ಹೆಸರಿಸಲಾಗಿದೆ) ಒಡೆತನದ 20 ಸಾವಿರ ಚದರ ಮೀಟರ್ ಭೂಮಿಯನ್ನು ದೋಚಲು ಚಂಪತ್‍ರಾಯ್‍ ತಮ್ಮ ಸಹೋದರರಿಗೆ ಸಹಾಯ ಮಾಡಿದ್ದಾರೆ ಎಂದು ಪೋಸ್ಟ್‌ನಲ್ಲಿ ನರೈನ್ ಆರೋಪಿಸಿದ್ದಾರೆ.

ಅಲ್ಕಾ ಲಹೋಟಿ ಅವರು 2018ರಿಂದ ಅತಿಕ್ರಮಣದಾರರನ್ನು ಹೊರಹಾಕಲು ಪ್ರಯತ್ನಿಸುತ್ತಿದ್ದಾರೆ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡುತ್ತ ಬಂದಿದ್ದಾರೆ.

ತನ್ನ ದೂರಿನಲ್ಲಿ, ಸಂಜಯ್ ಬನ್ಸಾಲ್, ‘ ಪ್ರಕರಣದ ಸತ್ಯಸಂಗತಿಗಳನ್ನು ತಿಳಿಸುವಂತೆ ನರೈನ್‍ ಅವರಿಗೆ ಫೋನ್‍ ಮಾಡಿದ್ದೆ. ಆದರೆ, ರಜನೀಶ್ ಎಂದು ಕರೆದುಕೊಳ್ಳುವ ವ್ಯಕ್ತಿಯೊಬ್ಬರು ಫೋನ್ ಎತ್ತಿಕೊಂಡು, ನನ್ನೊಂದಿಗೆ ಕೆಟ್ಟದಾಗಿ ವರ್ತಿಸಿದರು ಮತ್ತು ನನ್ನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ”ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಎಫ್‌ಐಆರ್ ದಾಖಲಾದ ಒಂದು ದಿನದ ನಂತರ, ಬಿಜ್ನೋರ್ ಪೊಲೀಸ್ ಮುಖ್ಯಸ್ಥರು ಟ್ವಿಟರ್‌ನಲ್ಲಿ ವೀಡಿಯೊ ಹೇಳಿಕೆಯನ್ನು ಪೋಸ್ಟ್ ಮಾಡಿದ್ದಾರೆ. ಅದರಲ್ಲಿ ಅವರು ಚಂಪತ್‍ರಾಯ್‍ ಸಹೋದರ ಬನ್ಸಾಲ್ ಅವರ ಆವೃತ್ತಿಯನ್ನು ಬೆಂಬಲಿಸುತ್ತಿದ್ದಾರೆ ಎನಿಸುತ್ತದೆ. ಪೊಲೀಸ್ ತಂಡ ಇನ್ನೂ ಈ ಬಗ್ಗೆ ತನಿಖೆ ನಡೆಸುತ್ತಿದೆ ಎಂದು  ಅದೇ ಪೊಲೀಸ್‍ ಮುಖ್ಯಸ್ಥರು ಹೇಳಿದ್ದಾರೆ.

“ಸ್ಥಳೀಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಚಂಪತ್ ರಾಯ್ ವಿಎಚ್‌ಪಿಯ ಹಿರಿಯ ನಾಯಕ ಮತ್ತು ರಾಮ ಮಂದಿರ ಟ್ರಸ್ಟ್ ಸದಸ್ಯರಾಗಿದ್ದಾರೆ ಅವರ ವಿರುದ್ಧದ ಆರೋಪಗಳು ಆಧಾರರಹಿತವಾಗಿವೆ ಮತ್ತು ಅವರ ಸಂಬಂಧಿಕರ ವಿರುದ್ಧದ ಆರೋಪಗಳು ಆಧಾರರಹಿತವಾಗಿವೆ ಎಂಬುದು ಮೇಲ್ನೋಟಕ್ಕೆ ಅನಿಸುತ್ತದೆ. ನಾವು ಸತ್ಯವನ್ನು ತಿಳಿಯಲು ತನಿಖೆ ನಡೆಸುತ್ತಿದ್ದೇವೆ” ಎಂದು ಬಿಜ್ನೋರ್ ಪೊಲೀಸ್ ಮುಖ್ಯಸ್ಥ ಡಾ.ರಾಮ್‍ವೀರ್ ಸಿಂಗ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.


ಇದನ್ನೂ ಓದಿ: ರಾಮಜನ್ಮಭೂಮಿ ಹಗರಣ ಬಯಲಿಗೆಳೆದ ಸಂಜಯ್ ಸಿಂಗ್‌ ಮನೆ ಮೇಲೆ ದಾಳಿ, ಧ್ವಂಸ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...