Homeಮುಖಪುಟರಾಮ ಮಂದಿರಕ್ಕೆ ದೇಣಿಗೆ ಕೊಡದ ಶಿಕ್ಷಕಿ ಕೆಲಸದಿಂದ ಅಮಾನತು: ಶಾಲೆಗೆ ನೋಟಿಸ್ ನೀಡಿದ ದೆಹಲಿ ಹೈಕೋರ್ಟ್

ರಾಮ ಮಂದಿರಕ್ಕೆ ದೇಣಿಗೆ ಕೊಡದ ಶಿಕ್ಷಕಿ ಕೆಲಸದಿಂದ ಅಮಾನತು: ಶಾಲೆಗೆ ನೋಟಿಸ್ ನೀಡಿದ ದೆಹಲಿ ಹೈಕೋರ್ಟ್

- Advertisement -
- Advertisement -

ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರಕ್ಕೆ 70,000 ರೂಪಾಯಿ ದೇಣಿಗೆ ನೀಡಲು ನಿರಾಕರಿಸಿದ ಶಾಲಾ ಮುಖ್ಯೋಪಾಧ್ಯಾಯಿನಿಯನ್ನು ಅಮಾನತುಗೊಳಿಸಿ ಶಿಸ್ತು ಕ್ರಮ ಕೈಗೊಂಡಿರುವ ಶಾಲೆಯೊಂದಕ್ಕೆ ದೆಹಲಿ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಆರೆಸ್ಸೆಸ್‌ ಟ್ರಸ್ಟ್‌ನಿಂದ ನಡೆಯುವ ಸಮರ್ಥ ಶಿಕ್ಷಾ ಸಮಿತಿಯ ಶಾಲಾ ಅಧಿಕಾರಿಗಳು ಮತ್ತು ದೆಹಲಿ ಸರ್ಕಾರದ ಶಿಕ್ಷಣ ನಿರ್ದೇಶನಾಲಯಕ್ಕೆ ನ್ಯಾಯಮೂರ್ತಿ ಕಾಮೇಶ್ವರ್ ರಾವ್ ನೋಟಿಸ್ ಜಾರಿ ಮಾಡಿದ್ದಾರೆ.

ದೆಹಲಿ ಹೈಕೋರ್ಟ್‌ನಲ್ಲಿ ಸಲ್ಲಿಸಲಾಗಿರುವ ಅರ್ಜಿಯ ಪ್ರಕಾರ, ಮಂದಿರದ ನಿರ್ಮಾಣಕ್ಕಾಗಿ ಈ ವರ್ಷದ ಫೆಬ್ರವರಿಯಲ್ಲಿ ಸಮಿತಿ ನಡೆಸುತ್ತಿರುವ ಎಲ್ಲಾ ಶಾಲೆಗಳಿಗೆ 70,000 ರಿಂದ 1,00,000 ರೂಪಾಯಿ ಸಂಗ್ರಹಿಸಲು ಅಥವಾ ದೇಣಿಗೆ ಸಂಗ್ರಹಿಸುವ ಗುರಿಯನ್ನು ನೀಡಿತ್ತು.

ಇದನ್ನೂ ಓದಿ: ರಾಮ ಮಂದಿರ ಟ್ರಸ್ಟ್‌ ಭೂ ದಂಧೆ – ಅಧರ್ಮ, ಪಾಪ ಮತ್ತು ಭಕ್ತರ ನಂಬಿಕೆಗೆ ಅಪಮಾನ ಎಂದ ಪ್ರಿಯಾಂಕ

ವಿದ್ಯಾರ್ಥಿಗಳು ಅಥವಾ ಅವರ ಪೋಷಕರಿಗೆ ಕೊಡುಗೆ ನೀಡಲು ಮನವೊಲಿಸುವಂತೆ ಮತ್ತು ಅಂಗಡಿಗಳ ಮಾಲೀಕರು ಮತ್ತು ಸಾರ್ವಜನಿಕರಿಂದ ದೇಣಿಗೆ ಸಂಗ್ರಹಿಸಲು ಮಾರುಕಟ್ಟೆಗೆ ಭೇಟಿ ನೀಡುವಂತೆ ಸಿಬ್ಬಂದಿಗೆ ಹೇಳಲಾಗಿತ್ತು. ಇದಲ್ಲದೇ ಶಾಲೆಯು ಶಿಕ್ಷಣ ನಿಧಿ ಹೆಸರಿನಲ್ಲಿ ಶಿಕ್ಷಕರಿಂದ 15 ಸಾವಿರ ರೂಪಾಯಿ ವಸೂಲಿ ಮಾಡಲಾಗಿತ್ತು.

ರಿಟ್ ಅರ್ಜಿಯ ಪ್ರಕಾರ, ಶಾಲೆಯಿಂದ ಅಮಾನತಿಗೆ ಒಳಗಾಗಿರುವ ಮುಖ್ಯೋಪಾಧ್ಯಾಯಿನಿಯ ಪತಿ 2016 ರಲ್ಲಿ ಗಂಭೀರ ಅಪಘಾತಕ್ಕೆ ಒಳಗಾಗಿದ್ದು, ಅಂದಿನಿಂದ ಅವರು ತೀವ್ರ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದ್ದಾರೆ ಎನ್ನಲಾಗಿದೆ.

“ತೀವ್ರ ಆರ್ಥಿಕ ಬಿಕ್ಕಟ್ಟುಗಳ ನಡುವೆಯೂ, ಮಹಿಳೆ ರಾಮ ಮಂದಿರಕ್ಕಾಗಿ 2,100 ರೂಪಾಯಿ ದೇಣಿಗೆ ನೀಡಿದ್ದಾರೆ. ಹೀಗಾಗಿ 15,000 ರೂ ಪಾವತಿಸಲು ನಿರಾಕರಿಸಿದರು. ಅಂದಿನಿಂದ ಸಮಿತಿಯು ಆಕೆಯ ವಿರುದ್ಧ ಪ್ರತೀಕಾರ ತೀರಿಸಿಕೊಂಡಿದೆ. ಆಕೆಗೆ ಕಿರುಕುಳ ನೀಡಲಾಗಿತ್ತು. ಆಕೆಯೇ ಸ್ವತಃ ರಾಜೀನಾಮೆ ನೀಡಿ ಹೋಗಬೇಕು ಅಥವಾ ವಜಾಗೊಳಿಸುವ ಪಿತೂರಿಗಳನ್ನು ರೂಪಿಸುತ್ತಿತ್ತು” ಎಂದು ರಿಟ್ ಅರ್ಜಿಯಲ್ಲಿ ತಿಳಿಸಲಾಗಿದೆ.

ಕುಟುಂಬದ ಆರ್ಥಿಕ ಪರಿಸ್ಥಿತಿ ಮತ್ತು ಮಾನಸಿಕ ಹಿಂಸೆಯಿಂದ ಮುಖ್ಯಶಿಕ್ಷಕಿ ಶಿಕ್ಷಣ ನಿರ್ದೇಶನಾಲಯಕ್ಕೆ ದೂರು ಸಲ್ಲಿಸಿದ್ದಾರೆ. ಬಳಿಕ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಪತ್ರವನ್ನೂ ಬರೆದಿದ್ದಾರೆ. ಇದರಿಂದ ಶಾಲೆಗೆ ಶೋಕಾಸ್ ನೋಟಿಸ್ ನೀಡಲಾಗಿದೆ.

ಅಮಾನತು ಆದೇಶಗಳನ್ನು ವಜಾಗೊಳಿಸಿ, ಸಹಾನುಭೂತಿಯ ಆಧಾರದ ಮೇಲೆ ತನ್ನ ನಿವಾಸದ ಸಮೀಪವಿರುವ ಸೊಸೈಟಿ ನಡೆಸುತ್ತಿರುವ ಶಾಲೆಗೆ ತನ್ನನ್ನು ವರ್ಗಾಯಿಸುವಂತೆ ಮುಖ್ಯೋಪಾಧ್ಯಾಯಿನಿ ವಿನಂತಿಸಿದ್ದಾರೆ.


ಇದನ್ನೂ ಓದಿ: ರಾಮ ಮಂದಿರ ಟ್ರಸ್ಟ್: ಭೂ ಕಬಳಿಕೆ ಆರೋಪ ಮಾಡಿದ ಪತ್ರಕರ್ತನ ವಿರುದ್ಧ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುಪ್ರೀಂ ಕೋರ್ಟ್ ನಿರ್ದೇಶನದ ಹೊರತಾಗಿಯೂ ಮುಂದುವರೆದ ಬುಲ್ಡೋಝರ್ ಅ’ನ್ಯಾಯ’ : ಯುಪಿ ಸರ್ಕಾರಕ್ಕೆ ಅಲಾಹಾಬಾದ್‌ ಹೈಕೋರ್ಟ್‌ ಛೀಮಾರಿ

ಉತ್ತರ ಪ್ರದೇಶದ ಸರ್ಕಾರದ "ಬುಲ್ಡೋಝರ್ ಅನ್ಯಾಯ" ವಿರುದ್ಧ ಸುಪ್ರೀಂ ಕೋರ್ಟ್ 2024ರ ನವೆಂಬರ್‌ನಲ್ಲಿ ಕಟ್ಟುನಿಟ್ಟಾದ ತೀರ್ಪು ನೀಡಿದ್ದರೂ, ದಂಡನಾತ್ಮಕ ಕ್ರಮವಾಗಿ ಕಟ್ಟಡಗಳನ್ನು ಉರುಳಿಸುವ ಪ್ರಕ್ರಿಯೆ ಇನ್ನೂ ಮುಂದುವರಿಯುತ್ತಿರುವುದರ ಬಗ್ಗೆ ಅಲಹಾಬಾದ್ ಹೈಕೋರ್ಟ್ ತೀವ್ರ...

‘ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರ ಪ್ರೋತ್ಸಾಹಿಸುತ್ತಿದೆ’: ಮೆಹಬೂಬಾ ಮುಫ್ತಿ ಆರೋಪ

ಶ್ರೀನಗರ: ಕೇಂದ್ರಾಡಳಿತ ಪ್ರದೇಶದ ಹೊರಗೆ ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರಗಳು ಪ್ರೋತ್ಸಾಹ ನೀಡುತ್ತಿರುವಂತೆ ಕಾಣುತ್ತಿದೆ, ಕಾನೂನಿನ ಆಡಳಿತವನ್ನು ದ್ವೇಷವು ಬದಲಾಯಿಸಲು ಅವಕಾಶ ನೀಡುತ್ತದೆ ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಒತ್ತಡಕ್ಕೆ ಮಣಿದು ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ : ರಾಹುಲ್ ಗಾಂಧಿ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಸಂಬಂಧ ಪ್ರಧಾನಿ ನರೇಂದ್ರ ಮೋದಿ ವಿರುದ್ದ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಂಗಳವಾರ (ಫೆ.3) ತೀವ್ರ ವಾಗ್ದಾಳಿ ನಡೆಸಿದ್ದು, "ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ" ಎಂದು ಆರೋಪಿಸಿದರು. ಸಂಸತ್ತಿನ...

ಧರ್ಮಸ್ಥಳ ಪ್ರಕರಣದ ಚರ್ಚೆ ವೇಳೆ ಹಲ್ಲೆಗೆ ಯತ್ನ; ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ, ಕಿರಿಕ್ ಕೀರ್ತಿ ವಿರುದ್ಧ ಎಫ್‌ಐಆರ್

2025ರ ಅಕ್ಟೋಬರ್‌ನಲ್ಲಿ ‘R.ಕನ್ನಡ’ ಸುದ್ದಿ ವಾಹಿನಿಯಲ್ಲಿ ಧರ್ಮಸ್ಥಳ ಪ್ರಕರಣ ಸಂಬಂಧ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಹಿಂದುತ್ವ ಕೋಮುವಾದಿ ಕಾರ್ಯಕರ್ತ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ...

ಲೋಕಸಭೆಯಲ್ಲಿ ನರವಾಣೆ ಆತ್ಮಕಥೆ ಗದ್ದಲ : ವಿಪಕ್ಷಗಳ 8 ಮಂದಿ ಸಂಸದರು ಅಮಾನತು

ಮಾಜಿ ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಕತೆಯ ವಿಚಾರ ಮಂಗಳವಾರ (ಫೆ.3) ಕೂಡ ಲೋಕಸಭೆಯಲ್ಲಿ ತೀವ್ರ ಗದ್ದಲಕ್ಕೆ ಕಾರಣವಾಯಿತು. ಪುಸ್ತಕದ ವಿಷಯಗಳನ್ನು ಪ್ರಸ್ತಾಪಿಸಲು ವಿರೋಧ ಪಕ್ಷದ ನಾಯಕ ರಾಹುಲ್...

ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್ ರಾಷ್ಟ್ರಪತಿಗಳಿಗೆ ಬರೆದ ಮನ ಮುಟ್ಟುವ ಪತ್ರ

ಕೇಂದ್ರ ಸರ್ಕಾರ ವಿಬಿಜಿ- ರಾಮ್ ಜಿ 2025 ಕಾನೂನನ್ನು ವಾಪಸ್ ಪಡೆಯಬೇಕು ಹಾಗೂ ನರೇಗಾ ಯೋಜನೆಯನ್ನು ಮರು ಸ್ಥಾಪಿಸಬೇಕು ಎಂದು ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್‌ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದೆ.  2026 ಫೆಬ್ರವರಿ...

ಗುಜರಾತ್‌| ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ

ಗುಜರಾತ್‌ನ ಪಠಾನ್ ಜಿಲ್ಲೆಯ ಗ್ರಾಮವೊಂದರಲ್ಲಿ, ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ದಲಿತ ಸಮುದಾಯದ ಯುವಕ ವಿಶಾಲ್ ಚಾವ್ಡಾಗೆ ಮದುವೆಯ ಸಂತೋಷದ ದಿನವು ಜೀವನದ ದುಃಸ್ವಪ್ನವಾಗಿ...

ಗೃಹಲಕ್ಷ್ಮಿ ಯೋಜನೆಯಿಂದ 52 ಸಾವಿರಕ್ಕೂ ಹೆಚ್ಚಿನ ಮಹಿಳೆಯರು ಹೊರಕ್ಕೆ: ಆದಾಯ ತೆರಿಗೆ ಇಲಾಖೆ ದಾಖಲೆಗಳು ಕಾರಣ ಎಂದ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ರಾಜ್ಯಾದ್ಯಂತ 1.26 ಕೋಟಿ ಫಲಾನುಭವಿಗಳಲ್ಲಿ 52,000 ಕ್ಕೂ ಹೆಚ್ಚು ಮಹಿಳೆಯರನ್ನು ಗೃಹಲಕ್ಷ್ಮಿ ಯೋಜನೆಯಿಂದ ತೆಗೆದುಹಾಕಲಾಗಿದೆ, ಏಕೆಂದರೆ ಅವರು ಜಿಎಸ್ಟಿ ಅಥವಾ ಆದಾಯ ತೆರಿಗೆ ಇಲಾಖೆಗಳ ದಾಖಲೆಗಳಲ್ಲಿ ತೆರಿಗೆದಾರರಾಗಿದ್ದಾರೆ ಎಂದು ಮಹಿಳಾ ಮತ್ತು...

ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ಮನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ (ಫೆ.3) ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದರು. ರಾಜ್ಯದ ಗ್ರಾಮೀಣ ಜನರ ಬದುಕಿನ ಹಕ್ಕನ್ನು ಕಾಪಾಡುವ ದೃಷ್ಟಿಯಿಂದ,...

‘ಖಾಸಗಿ ಮಾಹಿತಿಯ ಕಳ್ಳತನ’ : ವಿವಾದಾತ್ಮಕ ಗೌಪ್ಯತೆ ನೀತಿ ಸಂಬಂಧ ವಾಟ್ಸಾಪ್, ಮೆಟಾ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ

ನಾಗರಿಕರ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ವಾಟ್ಸಾಪ್ ಮತ್ತು ಅದರ ಪೋಷಕ ಕಂಪನಿ ಮೆಟಾವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಡೇಟಾ ಹಂಚಿಕೆಯ ಹೆಸರಿನಲ್ಲಿ ಬಳಕೆದಾರರ ಖಾಸಗಿ ಡೇಟಾವನ್ನು ಬಳಸಿಕೊಳ್ಳಲು...