Homeಮುಖಪುಟರಾಮ ಮಂದಿರ ಹಗರಣ: ಮಾನನಷ್ಟ ಮೊಕದ್ದಮೆ ಹೂಡಲು ಸೂಚಿಸಿದ ವಿಎಚ್‌‌ಪಿ!

ರಾಮ ಮಂದಿರ ಹಗರಣ: ಮಾನನಷ್ಟ ಮೊಕದ್ದಮೆ ಹೂಡಲು ಸೂಚಿಸಿದ ವಿಎಚ್‌‌ಪಿ!

- Advertisement -
- Advertisement -

ರಾಮ ಜನ್ಮಭೂಮಿ ಟ್ರಸ್ಟ್‌ ವಿರುದ್ದ ಮಾಡಲಾಗುತ್ತಿರುವ ಭೂ ಹಗರಣದ ಆರೋಪ ಸುಳ್ಳಾಗಿದ್ದು, ಆರೋಪ ಎಸಗುವವರ ವಿರುದ್ದ ಮಾನನಷ್ಟ ಮೊಕದ್ದಮೆ ಹೂಡಲು ನಾವು ಸೂಚಿಸಿದ್ದೇವೆ ಎಂದು ವಿಶ್ವ ಹಿಂದೂ ಪರಿಷತ್‌ ಅಂತಾರಾಷ್ಟ್ರೀಯ ಕಾರ್ಯಕಾರಿ ಅಧ್ಯಕ್ಷ ಅಲೋಕ್ ಕುಮಾರ್‌ ಮಂಗಳವಾರ ಹೇಳಿದ್ದಾರೆ.

ಆಮ್‍ ಆದ್ಮಿ ಪಕ್ಷದ ರಾಜ್ಯಸಭಾ ಸದಸ್ಯ ಸಂಜಯ ಸಿಂಗ್‍ ಮತ್ತು ಸಮಾಜವಾದಿ ಪಕ್ಷದ ಮಾಜಿ ಶಾಸಕ ಪವನ್‍ ಪಾಂಡೆ ಭಾನುವಾರ ಪ್ರತ್ಯೇಕ ಪತ್ರಿಕಾಗೋಷ್ಠಿ ನಡೆಸಿ ರಾಮ ಜನ್ಮಭೂಮಿ ಟ್ರಸ್ಟ್‌ ಭೂ ಹಗರಣ ನಡೆಸುತ್ತಿದೆ ಎಂದು ಆರೋಪಿಸಿದ್ದರು. 2 ಕೋಟಿ ರೂ. ಗೆ ಒಂದು ಜಮೀನು ಖರೀದಿ ಮಾಡಿ, ಕೇವಲ 5 ನಿಮಿಷಗಳ ಅಂತರದಲ್ಲಿ ರಾಮಜನ್ಮಭೂಮಿ ಟ್ರಸ್ಟ್‌‌ ಅದೇ ಜಮೀನನ್ನು 18.5 ಕೋಟಿ ರೂ.ಗಳಿಗೆ ಖರೀದಿಸಿದೆ ಎಂದು ಸಂಜಯ್‍ಸಿಂಗ್‍ ದಾಖಲೆಗಳನ್ನು ಅವರು ಬಿಡುಗಡೆ ಮಾಡಿದ್ದಾರೆ.

ಇದನ್ನೂ ಓದಿ: ರಾಮ ಮಂದಿರ ಟ್ರಸ್ಟ್‌ ಭೂ ದಂಧೆ – ಅಧರ್ಮ, ಪಾಪ ಮತ್ತು ಭಕ್ತರ ನಂಬಿಕೆಗೆ ಅಪಮಾನ: ಪ್ರಿಯಾಂಕ

ಇದಕ್ಕೆ ಪ್ರತಿಕ್ರಿಯಿಸಿರುವ  ಅಲೋಕ್ ಕುಮಾರ್‌‌, “ಸುಳ್ಳಾರೋಪಗಳನ್ನು ಎಸಗುವ ವ್ಯಕ್ತಿಗಳ ವಿರುದ್ಧ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಮಾನನಷ್ಟ ಮೊಕದ್ದಮೆ ಹೂಡುವಂತೆ ನಾವು ಸೂಚಿಸಿದ್ದೇವೆ. ಮುಂದಕ್ಕೆ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗಳು ನಡೆಯಲಿದ್ದು, ಅದಕ್ಕಾಗಿ ಅವರು ಜನರಿಗೆ ಸುಳ್ಳು ಹೇಳಿ ದಾರಿ ತಪ್ಪಿಸುತ್ತಿದ್ದಾರೆ” ಎಂದು ಅವರ ತಿಳಿಸಿದ್ದಾರೆ.

ಅಯೋಧ್ಯೆಯ ರಾಮ ಜನ್ಮಭೂಮಿ ಟ್ರಸ್ಟ್ ಖರೀದಿಸಿದ ಭೂಮಿಯಲ್ಲಿ ಭ್ರಷ್ಟಾಚಾರದ ಆರೋಪದ ಬಗ್ಗೆ ಸೋಮವಾರ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಶ್ರೀರಾಮನ ಹೆಸರಲ್ಲಿ ಮೋಸ ಮಾಡುವುದು ಅಧರ್ಮವಾಗಿದೆ ಎಂದು ಹೇಳಿದ್ದಾರೆ.

ಬಿಜೆಪಿಯ ಮಾಜಿ ಮಿತ್ರ ಪ್ರಕ್ಷವಾಗಿರುವ ಶಿವಸೇನೆ ಕೂಡಾ ಇದರ ಬಗ್ಗೆ ಸ್ಪಷ್ಟನೆ ಕೋರಿದ್ದು, ಶಿವಸೇನೆ ಸಂಸದ ಸಂಜಯ್ ರಾವತ್‌, “ರಾಮ ಮತ್ತು ರಾಮ ಮಂದಿರದ ಹೋರಾಟವು ನಮಗೆ ನಂಬಿಕೆಯ ವಿಷಯವಾಗಿದೆ. ಕೆಲವರಿಗೆ ಇದು ರಾಜಕೀಯ ವಿಷಯ. ಮಂದಿರದ ನಿರ್ಮಾಣಕ್ಕಾಗಿ ರಚಿಸಲಾದ ಟ್ರಸ್ಟ್‌ ತಮ್ಮ ಮೇಲಿನ ಆರೋಪಗಳು ನಿಜವೋ ಸುಳ್ಳೋ ಎಂದು ಸ್ಪಷ್ಟಪಡಿಸಬೇಕು ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ತೆಲಂಗಾಣ: ಭೂ ಕಬಳಿಕೆ ಆರೋಪದಿಂದ ಟಿಆರ್‌ಎಸ್‌ ತೊರೆದಿದ್ದ ಮಾಜಿ ಸಚಿವ ಬಿಜೆಪಿ ಸೇರ್ಪಡೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಡ ಜನರಿಗೆ ಬದುಕು ಕಟ್ಟಿಕೊಳ್ಳಲು ನೆರವಾದ ‘ಕಾಂಗ್ರೆಸ್‌’ ಸರಕಾರದ ‘ಗ್ಯಾರಂಟಿ ಯೋಜನೆ’ ಬಗ್ಗೆ ತೇಜಸ್ವಿ...

0
ಕರ್ನಾಟಕದ ಕಾಂಗ್ರೆಸ್‌ ಸರಕಾರ ಜಾರಿಗೆ ತಂದಿದ್ದ ಪಂಚ ಗ್ಯಾರಂಟಿಗಳ ಬಗ್ಗೆ ತುಚ್ಛವಾಗಿ ಮಾತನಾಡಿದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ರಾಜ್ಯದ ಕೋಟ್ಯಾಂತರ ಜನರಿಗೆ ಆಶ್ರಯವಾದ ಗ್ಯಾರಂಟಿ ಯೋಜನೆಗಳನ್ನು 'ಮತಿ ಹೀನ ಉಚಿತ ಕೊಡುಗೆ'...