Homeಕರ್ನಾಟಕಮಂಗಳೂರು | ಸಲೂನ್‌ಗೆ ನುಗ್ಗಿ ದಾಂಧಲೆ ನಡೆಸಿದ ರಾಮಸೇನಾ ದುಷ್ಕರ್ಮಿಗಳು : ಮಹಿಳೆಯರಿಗೆ ಬೆದರಿಕೆ

ಮಂಗಳೂರು | ಸಲೂನ್‌ಗೆ ನುಗ್ಗಿ ದಾಂಧಲೆ ನಡೆಸಿದ ರಾಮಸೇನಾ ದುಷ್ಕರ್ಮಿಗಳು : ಮಹಿಳೆಯರಿಗೆ ಬೆದರಿಕೆ

- Advertisement -
- Advertisement -

ಮಂಗಳೂರು ನಗರದ ಸಲೂನ್‌ ಒಂದಕ್ಕೆ ನುಗ್ಗಿದ ಹಿಂದುತ್ವ ಸಂಘಟನೆ ಕಾರ್ಯಕರ್ತರು ಪೀಠೋಪಕರಣಗಳನ್ನು ಪುಡಿಗೈದು ದಾಂಧಲೆ ನಡೆಸಿರುವ ಬಗ್ಗೆ ಗುರುವಾರ (ಜ.23) ವರದಿಯಾಗಿದೆ.

ಪ್ರಸಾದ್ ಅತ್ತಾವರ ನೇತೃತ್ವದ ರಾಮಸೇನಾ ಸಂಘಟನೆಯ ದುಷ್ಕರ್ಮಿಗಳು ಬಿಜೈ ಕೆಎಸ್ಆರ್‌ಟಿಸಿ ಬಳಿಯ ಕಲರ್ಸ್ ಸಲೂನ್‌ಗೆ ನುಗ್ಗಿ ದಾಂಧಲೆ ನಡೆಸಿದ್ದಾರೆ. ಅಲ್ಲದೆ, ಸಲೂನ್‌ನ ಪುರುಷ ಸಿಬ್ಬಂದಿಗೆ ಹಲ್ಲೆ ನಡೆಸಿ, ಮಹಿಳಾ ಸಿಬ್ಬಂದಿಗೆ ಬೆದರಿಕೆ ಹಾಕಿದ್ದಾರೆ ಎಂದು ವರದಿಯಾಗಿದೆ. ಈ ಕುರಿತ ವಿಡಿಯೋವೊಂದು ವೈರಲ್ ಆಗಿದೆ.

ವಿಡಿಯೋದಲ್ಲಿ ಐದಾರು ಮಂದಿ ಯುವಕರ ತಂಡ ಏಕಾಏಕಿ ಸಲೂನ್‌ ಒಳಗೆ ನುಗ್ಗಿ ಪೀಠೋಪಕರಣ, ಗಾಜು, ಕಂಪ್ಯೂಟರ್ ಸೆಟ್ ಸೇರಿದಂತೆ ಕೈಗೆ ಸಿಕ್ಕ ವಸ್ತುಗಳನ್ನು ಪುಡಿಗೈದಿರುವುದು ಮತ್ತು ವೇಶ್ಯಾವಟಿಕೆ ನಡೆಸುತ್ತಿದ್ದೀರಾ ಎಂದು ಪ್ರಶ್ನಿಸಿ ಮಹಿಳೆಯರಿಗೆ ಆವಾಜ್ ಹಾಕಿರುವ ದೃಶ್ಯಗಳಿವೆ.

ಮಹಿಳೆಯರು ಕೈ ಮುಗಿದು ಹಲ್ಲೆ ಮಾಡಬೇಡಿ ಎಂದು ಬೇಡಿಕೊಂಡಿರುವುದನ್ನೂ ವಿಡಿಯೋದಲ್ಲಿ ನೋಡಬಹುದು. ಅಲ್ಲದೆ, ದಾಂಧಲೆ ನಡೆಸಿದ ದುಷ್ಕರ್ಮಿಗಳು ಕಾಂಡೋಮ್ ಪ್ಯಾಕೆಟ್‌ಗಳನ್ನ ತೋರಿಸಿ, ಅದರೆ ಬಗ್ಗೆ ಪ್ರಶ್ನಿಸುವ ದೃಶ್ಯವಿದೆ. ಈ ವೇಳೆ ಸಲೂನ್‌ನ ಮಹಿಳಾ ಸಿಬ್ಬಂದಿ “ಅದು ಯಾರು ಇಟ್ಟಿದ್ದು?” ಎಂದು ಮರು ಪ್ರಶ್ನಿಸುವುದು ಕೇಳಿಸುತ್ತದೆ.

ಕಾನೂನು ಕೈಗೆತ್ತಿಕೊಂಡು ಅನೈತಿಕ ಪೊಲೀಸ್‌ಗಿರಿ ಮಾಡಿದ ದುಷ್ಕರ್ಮಿಗಳ ವಿರುದ್ದ ಕ್ರಮಕ್ಕೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

ದುಷ್ಕರ್ಮಿಗಳ ಬಂಧನಕ್ಕೆ ಸೂಚಿಸಿದ್ದೇನೆ : ಗೃಹ ಸಚಿವ ಪರಮೇಶ್ವರ್

ಸಲೂನ್‌ಗೆ ನುಗ್ಗಿ ದಾಂಧಲೆ ನಡೆಸಿದವರನ್ನು ತಕ್ಷಣ ಬಂಧಿಸಿ, ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳುವಂತೆ ಸೂಚನೆ ಕೊಟ್ಟಿದ್ದೇನೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ. ಉಡುಪಿಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಯಾವ ಉದ್ದೇಶಕ್ಕೆ ಸಲೂನ್ ಮೇಲೆ ದಾಳಿಯಾಗಿದೆ ಎಂಬುವುದು ಗೊತ್ತಿಲ್ಲ. ಇಂತಹ ಕೃತ್ಯಗಳು ನಡೆಯಬಾರದು. ಯಾರಿಗೂ ವ್ಯಾಪಾರ ಮಾಡಿಕೊಳ್ಳುವುದ್ದಕ್ಕೆ ಅಡ್ಡಿಪಡಿಸಬಾರದು. ಪ್ರತಿಯೊಬ್ಬರಿಗೂ ಕೆಲಸ ಮಾಡಿಕೊಳ್ಳುವ ಹಕ್ಕಿದೆ. ಯಾರು ಕೂಡ ಕಾನೂನು ಕೈಗೆ ಎತ್ತಿಕೊಳ್ಳಬಾರದು ಎಂದಿದ್ದಾರೆ.

ಕೊನೆಗೂ ‘ಪಾಶ್ ಸಮಿತಿ’ ರಚಿಸಿದ ಕರ್ನಾಟಕ ಫಿಲಂ ಚೇಂಬರ್ : ಆದರೆ ಬಹುಪಾಲು ಸದಸ್ಯರು ಪುರುಷರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...