Homeಅಂತರಾಷ್ಟ್ರೀಯರಾಮಚಂದ್ರ ಗುಹಾರವರಿಗೆ ಅಮೆರಿಕನ್ ಹಿಸ್ಟಾರಿಕಲ್ ಅಸೋಸಿಯೇಶನ್‌ನಿಂದ ಗೌರವ ವಿದೇಶಿ ಸದಸ್ಯ ಪ್ರಶಸ್ತಿ..

ರಾಮಚಂದ್ರ ಗುಹಾರವರಿಗೆ ಅಮೆರಿಕನ್ ಹಿಸ್ಟಾರಿಕಲ್ ಅಸೋಸಿಯೇಶನ್‌ನಿಂದ ಗೌರವ ವಿದೇಶಿ ಸದಸ್ಯ ಪ್ರಶಸ್ತಿ..

ಜದುನಾಥ್ ಸರ್ಕಾರ್ ಮತ್ತು ರೋಮಿಲಾ ಥಾಪರ್ ನಂತರ 1886 ರಿಂದ ಈ ಪ್ರಶಸ್ತಿಯನ್ನು ಪಡೆದ ಮೂರನೇ ಭಾರತೀಯ ಇತಿಹಾಸಕಾರ ಇವರಾಗಿದ್ದಾರೆ.

- Advertisement -
- Advertisement -

ಇತಿಹಾಸಕಾರ ರಾಮಚಂದ್ರ ಗುಹಾ ಅವರಿನ್ನು ಈ ವರ್ಷದ ಗೌರವ ವಿದೇಶಿ ಸದಸ್ಯರನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಅಮೆರಿಕನ್ ಹಿಸ್ಟಾರಿಕಲ್ ಅಸೋಸಿಯೇಷನ್ ಸೋಮವಾರ ಪ್ರಕಟಿಸಿದೆ. ಜದುನಾಥ್ ಸರ್ಕಾರ್ ಮತ್ತು ರೊಮಿಲಾ ಥಾಪರ್ ನಂತರ 1886 ರಿಂದ ಈ ಪ್ರಶಸ್ತಿಯನ್ನು ಪಡೆದ ಮೂರನೇ ಭಾರತೀಯ ಇತಿಹಾಸಕಾರ ಗುಹಾರವರಾಗಿದ್ದಾರೆ.

ಈ ಪ್ರಶಸ್ತಿಯು ಅಮೆರಿಕದ  ಹೊರಗೆ ಕೆಲಸ ಮಾಡುವ ಇತಿಹಾಸಕಾರು, ತಮ್ಮ ದೇಶದಲ್ಲಿನ ಅಮೇರಿಕನ್ ವಿದ್ವಾಂಸರಿಗೆ ನೀಡಿದ ವಿಶೇಷ ವಿದ್ಯಾರ್ಥಿವೇತನ ಮತ್ತು ಸಹಾಯಕ್ಕಾಗಿ ಕೊಡಲಾಗುತ್ತದೆ. ಜನವರಿ 3 ರಂದು ನ್ಯೂಯಾರ್ಕ್‌ನಲ್ಲಿ ನಡೆಯುವ ಸಮಾರಂಭದಲ್ಲಿ ಗುಹಾರವರು ಪ್ರಶಸ್ತಿ ಸ್ವೀಕರಿಸಲಿದ್ದಾರೆ.

ಗುಹಾ ಮಂಗಳವಾರ ಎಎಚ್‌ಎ ಪ್ರಶಸ್ತಿ ಪುರಸ್ಕೃತರ ಪಟ್ಟಿಯಲ್ಲಿ ಸ್ಥಾನ ಪಡೆದಿರುವುದನ್ನು “ಮಹತ್ವದ ಗೌರವ” ಎಂದು ಹೇಳಿದರು. “ಈ ಸಮಯದಲ್ಲಿ ಒಬ್ಬರು ಹೆಚ್ಚು  ಋಣಿಯಾಗಿರುವವರನ್ನು ಹೆಚ್ಚು ನೆನಪಿಸಿಕೊಳ್ಳುತ್ತಾರೆ”  “ಮೂರು ಜನರು ನನ್ನನ್ನು ವಿದ್ವಾಂಸರನ್ನಾಗಿ ಮಾಡಿದರು; ನನ್ನ ಪತ್ನಿ ಸುಜಾತಾ, ನನ್ನ ಶಿಕ್ಷಕ (ದಿವಂಗತ) ಅಂಜನ್ ಘೋಷ್ ಮತ್ತು ನನ್ನ ಮೊದಲ (ಮತ್ತು ಅತ್ಯುತ್ತಮ) ಸಂಪಾದಕ ಡಾ. ರುಕುನ್ ಅಡ್ವಾಣಿ.” ಎಂದು ಅವರು ಟ್ವೀಟ್ ಮಾಡಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...

ಇರಾನ್ ನಮ್ಮ ದೀರ್ಘಕಾಲೀನ ಮಿತ್ರ ರಾಷ್ಟ್ರ; ವಿಶ್ವಾಸಾರ್ಹ ಪಾಲುದಾರರೊಂದಿಗೆ ನಿಲ್ಲಲು ವಿಫಲವಾದರೆ ಭಾರತಕ್ಕೆ ಭಾರಿ ನಷ್ಟ: ರಾಜ್ ಠಾಕ್ರೆ

ಸೂಕ್ತ ಸಮಯದಲ್ಲಿ ಕೇಂದ್ರ ಸರ್ಕಾರ ಇರಾನ್‌ಗೆ ಬೆಂಬಲ ನೀಡದಿರುವುದನ್ನು ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಪ್ರಶ್ನಿಸಿದ್ದಾರೆ.​ ಈ ಕುರಿತು ಗುರುವಾರ (ಮಾ.19) ಮಾತನಾಡಿರುವ ಅವರು, "ಇರಾನ್ ಭಾರತದ ದೀರ್ಘಕಾಲೀನ ಮಿತ್ರ...

ಕೇರಳ: 2026 ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಸಿದ್ಧ; ಹಾಲಿ ಸಂಸದರು, ಲೈಂಗಿಕ ಪ್ರಕರಣದ ಆರೋಪಿಗಳಿಗಿಲ್ಲ ಸ್ಥಾನ

ತಿರುವನಂತಪುರಂ: ಬಹಳ ದಿನಗಳ ನಂತರ, ಏಪ್ರಿಲ್ 9 ರಂದು ನಡೆಯಲಿರುವ ಕೇರಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಕೇರಳದ ಉಳಿದ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ.  ಕಣ್ಣೂರು ಕಾರ್ಪೊರೇಷನ್‌ನ ಮಾಜಿ ಮೇಯರ್ ಟಿ.ಒ. ಮೋಹನನ್ ಅವರನ್ನು ಕಣ್ಣೂರಿನಲ್ಲಿ...