HomeಮುಖಪುಟRamadan 2020: ಭಾರತದಲ್ಲಿ ನಾಳೆಯಿಂದ ಆರಂಭವಾಗಲಿದೆ ಪವಿತ್ರ ರಂಜಾನ್

Ramadan 2020: ಭಾರತದಲ್ಲಿ ನಾಳೆಯಿಂದ ಆರಂಭವಾಗಲಿದೆ ಪವಿತ್ರ ರಂಜಾನ್

- Advertisement -
- Advertisement -

ವಿಶ್ವದಾದ್ಯಂತ ಎಲ್ಲೆಡೆ ಇರುವ ಮುಸ್ಲಿಂ ಬಾಂಧವರು ಸಡಗರ ಮತ್ತು ಸಂಭ್ರಮದಿಂದ ಆಚರಿಸುವ ಪವಿತ್ರ ರಂಜಾನ್ ಹಬ್ಬ ಭಾರತದಲ್ಲಿ ನಾಳೆಯಿಂದ ಆರಂಭವಾಗಲಿದೆ. ಮುಸ್ಲಿಂ ಸಂಪ್ರದಾಯದ ಪ್ರಕಾರ ರಂಜಾನ್ ತಿಂಗಳನ್ನು ಪವಿತ್ರ ತಿಂಗಳು ಎಂದು ಪರಿಗಣಿಸಲಾಗಿದ್ದು, ಈ ವರ್ಷದ ಹಿಜರಿ ಕ್ಯಾಲೆಂಡರ್‌ ಪ್ರಕಾರ 9ನೇ ತಿಂಗಳು ಅಂದರೆ ಇದೇ ಏಪ್ರಿಲ್‌ನಲ್ಲಿ ಇದನ್ನು ಆಚರಿಸಲಾಗುತ್ತದೆ.

ಭಾರತದಲ್ಲಿ ಎಂದಿನಿಂದ ಆಚರಿಸಲಾಗುತ್ತದೆ?

ಸಂಪ್ರದಾಯದಂತೆ ಅರ್ಧ ಚಂದ್ರಾಕೃತಿಯನ್ನು ಆಧರಿಸಿ ಎಲ್ಲೆಡೆ ರಂಜಾನ್ ಆಚರಿಸಲಾಗುತ್ತದೆ. ಹೀಗಾಗಿ ಒಂದೊಂದು ದೇಶದಲ್ಲಿ ಆಚರಣೆಯ ದಿನ ಒಂದೆರಡು ದಿನ ಏರುಪೇರಾಗುತ್ತದೆ. ಹೀಗಾಗಿ ಚಂದ್ರಾಕೃತಿಯನ್ನು ಆಧರಿಸಿ ಭಾರತದಲ್ಲಿ ಪವಿತ್ರ ರಂಜಾನ್ 2020 ಏಪ್ರಿಲ್ 24 ರಿಂದ ಪ್ರಾರಂಭವಾಗುವ ಸಾಧ್ಯತೆಯಿದೆ. ಹೀಗೆ ಆರಂಭವಾಗುವ ರಂಜಾನ್ ಅನ್ನು ನಾಲ್ಕು ವಾರಗಳವರೆಗೆ ಆಚರಿಸಲಾಗುತ್ತದೆ.

ಈ ರಂಜಾನ್ ತಿಂಗಳಲ್ಲಿ ಮುಸ್ಲಿಮರು ಮುಂಜಾನೆಯಿಂದ ಮುಸ್ಸಂಜೆಯವರೆಗೆ ಉಪವಾಸ ಆಚರಿಸುತ್ತಾರೆ. ಸೂರ್ಯಾಸ್ತಮನದ ನಂತರ ಸಂಜೆ ವೇಳೆಗೆ ಎಲ್ಲರೂ ಒಟ್ಟಾಗಿ ಅವರ ಕುಟುಂಬ ಮತ್ತು ಸ್ನೇಹಿತರೊಂದಿಗೆ ಇಫ್ತಾರ್ ಎಂದೂ ಕರೆಯಲ್ಪಡುವ ಆಹಾರವನ್ನು ಸೇವಿಸುವ ಮೂಲಕ ಉಪವಾಸವನ್ನು ಮುರಿಯುತ್ತಾರೆ.

ಒಬ್ಬ ವ್ಯಕ್ತಿ ದಿನವಿಡೀ ಆಹಾರ ಮತ್ತು ನೀರಿನಿಂದ ದೂರವಿರುವುದರಿಂದ ಆತ ಜನರ ನೋವು ಮತ್ತು ಸಂಕಟಗಳನ್ನು ಅರ್ಥಮಾಡಿಕೊಳ್ಳುತ್ತಾನೆ. ಅಲ್ಲದೆ ದೇವರಿಗೆ (ಅಲ್ಲಾಹ್) ಹತ್ತಿರವಾಗುತ್ತಾನೆ ಎಂದು ಇಸ್ಲಾಂ ಧರ್ಮದಲ್ಲಿ ನಂಬಲಾಗಿದೆ.

ಇಸ್ಲಾಂ ಧರ್ಮದ ಪ್ರಮುಖ 5 ನಂಬಿಕೆ ಅಥವಾ ಆಚರಣೆಯಲ್ಲಿ ಈ ಸಮಯದ ಉಪಾವಾಸವನ್ನೂ ಒಂದು ಎಂದು ಪರಿಗಣಿಸಲಾಗಿದೆ. ಇದಲ್ಲದೆ, ದೇವರಲ್ಲಿ ನಂಬಿಕೆ, ದೈನಂದಿನ ಪ್ರಾರ್ಥನೆ, ದಾನ ಮತ್ತು ಬದುಕಿನಲ್ಲಿ ಒಮ್ಮೆ ಮೆಕ್ಕಾಗೆ ಹಜೆ ಯಾತ್ರೆ ಕೈಗೊಳ್ಳುವುದು ಇಸ್ಲಾಂ ಧರ್ಮದ ಉಳಿದ ಪ್ರಮುಖ ನಾಲ್ಕು ನಂಬಿಕೆಗಳಾಗಿವೆ.

ಲಾಕ್‌ಡೌನ್‌ ಎಫೆಕ್ಟ್‌?

ಈ ಬಾರಿ ಹಬ್ಬ‌ ಆರಂಭವಾಗುತ್ತಿದ್ದರೂ ಲಾಕ್‌ಡೌನ್‌ ಹಬ್ಬದ ವಾತವಾರಣವನ್ನು ಮಂಕುಗೊಳಿಸಿದೆ. ಕೋವಿಡ್‌ ಸಾಂಕ್ರಮಿಕದ ಕಾರಣಕ್ಕಾಗಿ ಸರಳವಾಗಿ ಹಬ್ಬ ನಡೆಯುವ ಸಾಧ್ಯತೆಯಿದೆ. ಸಾಮೂಹಿಕ ಪ್ರಾರ್ಥನೆ ಇಲ್ಲದೇ ಮನೆಯಲ್ಲಿಯೇ ಪ್ರಾರ್ಥನೆಗೆ ಎಲ್ಲೆಡೆ ಮಾನಸಿಕವಾಗಿ ಸಿದ್ದಗೊಂಡಿದ್ದಾರೆ.

ಈ ನಡುವೆ ಈ ಹಬ್ಬದ ತಿಂಗಳಲ್ಲಿ ಎಲ್ಲಾ ಮುಸ್ಲಿಮರೂ ಲಾಕ್‌ಡೌನ್‌ ನಿಯಮಗಳನ್ನು ಮುರಿಯದೆ ಮನೆಯಲ್ಲೇ ಪ್ರಾರ್ಥನೆ ಸಲ್ಲಿಸಲು ಮತ್ತು ಇತರೆ ಧಾರ್ಮಿಕ ಆಚರಣೆಗಳಲ್ಲಿ ತೊಡಗಲು ಎಲ್ಲಾ ವಕ್ಫ್ ಮಂಡಳಿಗಳು ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಕೇಂದ್ರ ಸರ್ಕಾರದ ಅಲ್ಪ ಸಂಖ್ಯಾತ ವ್ಯವಹಾರಗಳ ಸಚಿವ ಮತ್ತು ಕೇಂದ್ರ ವಕ್ಫ್ ಕೌನ್ಸಿಲ್ ಅಧ್ಯಕ್ಷ ಮುಖ್ತಾರ್ ಅಬ್ಬಾಸ್ ನಖ್ವಿ ಸೂಚಿಸಿದ್ದಾರೆ.


ಇದನ್ನೂ ಓದಿ: `ವೈರಸ್’ ಕಾರಣಕ್ಕೆ ಹೊರಗಿಟ್ಟ ಸಾಬರನ್ನು ಬಿಟ್ಟು ಬದುಕೀತೇ ನಮ್ಮೂರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...