Homeಮುಖಪುಟಸಂಸ್ಕೃತ ಕಲಿಸಲು ಮುಸ್ಲಿಂ ಪ್ರಾಧ್ಯಾಪಕರನ್ನು ನೇಮಿಸಿಕೊಂಡ ಬಂಗಾಳದ ರಾಮಕೃಷ್ಣ ಮಿಷನ್ ವಿದ್ಯಾಮಂದಿರ..

ಸಂಸ್ಕೃತ ಕಲಿಸಲು ಮುಸ್ಲಿಂ ಪ್ರಾಧ್ಯಾಪಕರನ್ನು ನೇಮಿಸಿಕೊಂಡ ಬಂಗಾಳದ ರಾಮಕೃಷ್ಣ ಮಿಷನ್ ವಿದ್ಯಾಮಂದಿರ..

- Advertisement -
- Advertisement -

ಬನಾರಸ್ ಹಿಂದೂ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಸಂಸ್ಕೃತ ವಿಷಯದಲ್ಲಿ ಪಿಎಚ್‌ಡಿ ಮಾಡಿದ ಫಿರೋಜ್ ಖಾನ್ ಅವರಿಂದ ಸಂಸ್ಕೃತ ಕಲಿಯಲು ನಿರಾಕರಿಸುತ್ತಿರುವ ಸಮಯದಲ್ಲಿಯೇ, ಬಂಗಾಳದ ಬೇಲೂರ್‌ ರಾಮಕೃಷ್ಣ ಮಿಷನ್ ವಿದ್ಯಾಮಂದಿರವು ‍ಮುಸ್ಲಿಂ ಪ್ರಾಧ್ಯಾಪಕ ರಂಜಾನ್ ಖಾನ್ ಮತ್ತು ಬುಡಕಟ್ಟು ಸಮುದಾಯದ ಗಣೇಶ್ ತುಡು ಅವರನ್ನು ಸಂಸ್ಕೃತದ ಸಹಾಯಕ ಪ್ರಾಧ್ಯಾಪಕರಾಗಿ ನೇಮಿಸಿಕೊಂಡಿದೆ.

ಈ ವಿದ್ಯಾಮಂದಿರ ಭಾರತದ ಅತ್ಯುತ್ತಮ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾಗಿದೆ ಎಂದು ಮಾನವ ಸಂಪನ್ಮೂಲ ಸಚಿವಾಲಯ ಇದನ್ನು 2018 ರಲ್ಲಿ ಪ್ರಧಾನ ಕಾಲೇಜು ಎಂದು ಘೋಷಿಸಿತ್ತು.

ಬಿಎಚ್‌ಯುನಲ್ಲಿ ವಿದ್ಯಾರ್ಥಿಗಳು ಮುಸ್ಲಿಂ ಪ್ರಾಧ್ಯಾಪಕನಿಂದ ಕಲಿಯಲು ನಿರಾಕರಿಸಿ ಉಪಕುಲಪತಿಗಳ ನಿವಾಸದ ಮುಂದೆ ಪ್ರತಿಭಟನೆ ನಡೆಸುತ್ತಿದ್ದರೆ, ರಾಮಕೃಷ್ಣ ಮಿಷನ್ ಮಾತ್ರ ಸ್ವಾಮಿ ವಿವೇಕಾನಂದರ ಮತ್ತು ಶ್ರೀ ರಾಮಕೃಷ್ಣ ಸಿದ್ಧಾಂತದ ಮೂಲಕ ಹೋಗುತ್ತಿದೆ ಎಂದು ಗೆಟ್‌ ಬೆಂಗಾಲ್‌ ವೆಬ್‌ಸೈಟ್‌ ವರದಿ ಮಾಡಿದೆ.

ಬಂಗಾಳದಲ್ಲಿ ಇಂತಹ ಸಾಕಷ್ಟು ನಿದರ್ಶನಗಳಿವೆ. ಕಲ್ಕತ್ತಾ ವಿಶ್ವವಿದ್ಯಾಲಯದಿಂದ ಸಂಸ್ಕೃತದಲ್ಲಿ ಪದವಿಪೂರ್ವ ಮತ್ತು ಸ್ನಾತಕೋತ್ತರ ಹಂತಗಳಲ್ಲಿ ಅತ್ಯಧಿಕ ಅಂಕಗಳನ್ನು ಪಡೆದ ಶೇಖ್ ಸಬೀರ್ ಅಲಿ ಈಗ ಬಾರಸತ್‌ನ ಪಶ್ಚಿಮ ಬಂಗಾಳ ರಾಜ್ಯ ವಿಶ್ವವಿದ್ಯಾಲಯದಲ್ಲಿ ಸಂಸ್ಕೃತ ವಿಷಯವನ್ನು ಕಲಿಸುತ್ತಿದ್ದಾರೆ. ವಿದ್ಯಾಮಂದಿರ್ ಈ ಹಿಂದೆ 2000ರಲ್ಲಿ ಶಮೀಮ್ ಅಹ್ಮದ್ ಅವರನ್ನು ತತ್ವಶಾಸ್ತ್ರ ವಿಭಾಗದಲ್ಲಿ ನೇಮಕ ಮಾಡಿದ್ದರು. ಅಹ್ಮದ್ ಈಗ ವಿಭಾಗದ ಮುಖ್ಯಸ್ಥರಾಗಿದ್ದಾರೆ ಮತ್ತು ಮಹಾಭಾರತದಲ್ಲಿ ಪಿಎಚ್‌ಡಿ ಮಾಡಿದರು. ಅವರು ಕಳೆದ ಎರಡು ದಶಕಗಳಿಂದ ಭಾರತೀಯ ತತ್ವಶಾಸ್ತ್ರವನ್ನು ಕಲಿಸುತ್ತಿದ್ದಾರೆ. ಅಹ್ಮದ್ ಜೊತೆಗೆ, ಫರೀದುಲ್ ರಹಮಾನ್ ಅವರನ್ನು ಸಹ ಇಲಾಖೆಯಲ್ಲಿ ನೇಮಿಸಿಕೊಳ್ಳಲಾಗಿದೆ.

ರಾಮಕೃಷ್ಣ ಮಠ ಮತ್ತು ಮಿಷನ್ ಬಹುತ್ವ ಮತ್ತು ಒಳಗೊಳ್ಳುವಿಕೆಯ ಸಂಘಟನೆಯಾಗಿದೆ. ಸ್ವಾಮಿ ವಿವೇಕಾನಂದರು ಯಾವಾಗಲೂ ಸಾರ್ವತ್ರಿಕ ಧರ್ಮದ ಬಗ್ಗೆ ಮಾತನಾಡಿದ್ದಾರೆ ಮತ್ತು ಈ ನೇಮಕಾತಿಯು  ಸಹಿಷ್ಣುತೆಗೆ ಒಂದು ಉದಾಹರಣೆಯಾಗಿದೆ ಎಂದು ವೆಬ್‌ಸೈಟ್‌ ವರದಿ ಮಾಡಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ

0
ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ" ಎಂಬ ಬಿಜೆಪಿಗರ ಆರೋಪಕ್ಕೆ...