Homeಮುಖಪುಟರಾಮಮಂದಿರ ನಿರ್ಮಾಣಕ್ಕೆ ಸರ್ಕಾರ ಹಣಕೊಡುವುದಿಲ್ಲ, ಬಿಜೆಪಿ ಸದಸ್ಯರ್‍ಯಾರು ಟ್ರಸ್ಟ್‌ನಲ್ಲಿ ಇರುವುದಿಲ್ಲ: ಅಮಿತ್‌ ಶಾ

ರಾಮಮಂದಿರ ನಿರ್ಮಾಣಕ್ಕೆ ಸರ್ಕಾರ ಹಣಕೊಡುವುದಿಲ್ಲ, ಬಿಜೆಪಿ ಸದಸ್ಯರ್‍ಯಾರು ಟ್ರಸ್ಟ್‌ನಲ್ಲಿ ಇರುವುದಿಲ್ಲ: ಅಮಿತ್‌ ಶಾ

- Advertisement -
- Advertisement -

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಮೇಲ್ವಿಚಾರಣೆ ನಡೆಸುವ ಟ್ರಸ್ಟ್‌ನಲ್ಲಿ ಭಾರತೀಯ ಜನತಾ ಪಕ್ಷದ ಸದಸ್ಯರ್‍ಯಾರು ಇರುವುದಿಲ್ಲ ಎಂದು ಗೃಹ ಸಚಿವ ಅಮಿತ್ ಶಾ ಮಂಗಳವಾರ ಹೇಳಿದ್ದಾರೆ.

ಆ ಮೂಲಕ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಟ್ರಸ್ಟ್‌ನಲ್ಲಿದ್ದು ಮೇಲ್ವಿಚಾರಣೆ ನಡೆಸುತ್ತಾರೆ ಎಂಬ ಮಾಧ್ಯಮಗಳ ವರದಿಯನ್ನು ಅವರು ತಳ್ಳಿ ಹಾಕಿದ್ದಾರೆ.

“ನಾನು ಎರಡು ವಿಷಯಗಳನ್ನು ಸ್ಪಷ್ಟಪಡಿಸಲು ಬಯಸುತ್ತೇನೆ: ಟ್ರಸ್ಟ್‌ನಲ್ಲಿ ಯಾವುದೇ ಬಿಜೆಪಿ ಸದಸ್ಯರು  ಇರುವುದಿಲ್ಲ ಮತ್ತು ರಾಮಮಂದಿರ ನಿರ್ಮಾಣಕ್ಕೆ ಸರ್ಕಾರದಿಂದ ಹಣ ಕೊಡಲು ಸಾಧ್ಯವಿಲ್ಲ. ಇದಕ್ಕಾಗಿ ಟ್ರಸ್ಟ್ ಸಮಾಜದಿಂದ ದೇಣಿಗೆ ಸಂಗ್ರಹಿಸಬೇಕಾಗುತ್ತದೆ” ಎಂದು ಅವರು ದೂರದರ್ಶನ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

ಇನ್ನು ನಾಲ್ಕು ತಿಂಗಳಲ್ಲಿ ರಾಮಮಂದಿರ ನಿರ್ಮಾಣದ ಕೆಲಸ ಆರಂಭವಾಗಲಿದೆ. ಅದು ಯಾವಾಗ ಮುಗಿಯಲಿದೆ ಎಂಬುದನ್ನು ಜನರು ನಿರ್ಧರಿಸುತ್ತಾರೆ. “ಸುಪ್ರೀಂ ಕೋರ್ಟ್ 90 ದಿನಗಳ ಒಳಗೆ ದೇವಾಲಯವನ್ನು ನಿರ್ಮಿಸುವ ಯೋಜನೆಯೊಂದಿಗೆ ಎಲ್ಲಾ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ಆದೇಶಿಸಿದೆ ಮತ್ತು ನಾವು ಅದನ್ನು ಮಾಡಲು ಸಾಧ್ಯವಾಗುತ್ತದೆ ಎಂದು ನಾನು ನಂಬುತ್ತೇನೆ” ಎಂದು ಶಾ ಹೇಳಿದರು.

ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ 100 ಕೋಟಿ ರೂ.ಗಳನ್ನು ಕ್ರೌಡ್ ಫಂಡ್ ಮೂಲಕ ಸಂಗ್ರಹಿಸಲು ಯೋಜಿಸಿದೆ ಎಂದು ಸಂಘಟನೆಯ ಉನ್ನತ ಕಾರ್ಯಕರ್ತರು ತಿಳಿಸಿದ್ದಾರೆ ಎಂದು ಹಿಂದೂಸ್ತಾನ್‌ ಟೈಮ್ಸ್‌ ವರದಿ ಮಾಡಿದೆ.

ನವೆಂಬರ್ 9 ರಂದು ಅಯೋಧ್ಯೆ ಮೊಕದ್ದಮೆಯಲ್ಲಿ ಸುಪ್ರೀಂ ಕೋರ್ಟ್ ಹಿಂದೂ ಪಕ್ಷಗಳ ಪರವಾಗಿ ತೀರ್ಪು ನೀಡಿತು. ಜೊತೆಗೆ ದೇವಾಲಯದ ನಿರ್ಮಾಣಕ್ಕೆ ಒಂದು ಟ್ರಸ್ಟ್‌ಗೆ ರಚನೆಯಾಗಬೇಕೆಂದು ಅದು ಹೇಳಿದೆ.

2020 ರ ಫೆಬ್ರವರಿಯಲ್ಲಿ ಪ್ರಯಾಗರಾಜ್‌ನಲ್ಲಿ ನಡೆಯುವ ಮಾಘ ಮೇಳದ ಸಂತ ಸಮ್ಮೇಳನದಲ್ಲಿ ವಿಎಚ್‌ಪಿ ಧನಸಹಾಯದ ಅಭಿಯಾನ ಆರಂಭಿಸಬಹುದು ಎನ್ನಲಾಗುತ್ತಿದೆ.

ಸೋಮವಾರ, ಜಾರ್ಖಂಡ್‌ನಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಷಾ, ಮುಂದಿನ ನಾಲ್ಕು ತಿಂಗಳಲ್ಲಿ “ಆಕಾಶ ಎತ್ತರದ” ದೇವಾಲಯದ ನಿರ್ಮಾಣ ಪ್ರಾರಂಭವಾಗಲಿದೆ ಎಂದು ಹೇಳಿದರು.

ವಿಎಚ್‌ಪಿಯ ಕಾರ್ಯಕಾರಿ ಅಧ್ಯಕ್ಷ ಅಲೋಕ್ ಕುಮಾರ್ ರವರು “ವಿಎಚ್‌ಪಿ ಜನಸಮೂಹಕ್ಕೆ ಯಾವುದೇ ಮನವಿ ಮಾಡುವುದಿಲ್ಲ. ಬದಲಾಗಿ, ಟ್ರಸ್ಟ್ ಮನವಿಯನ್ನು ಮಾಡುತ್ತದೆ. ವಿಎಚ್‌ಪಿ ದೇವಾಲಯ ನಿರ್ಮಾಣಕ್ಕೆ ಯಾವುದೇ ಹಣವನ್ನು ಸಂಗ್ರಹಿಸುವುದಿಲ್ಲ ಎಂದು ನಾನು ಸ್ಪಷ್ಟಪಡಿಸುತ್ತೇನೆ; ಪರಿಷತ್ ದೇವಾಲಯವನ್ನು ನಿರ್ಮಿಸುವುದಿಲ್ಲ. ದೇವಾಲಯದ ನಿರ್ಮಾಣದ ನಂತರ, ಪರಿಷತ್ ದೇವಾಲಯವನ್ನು ನಿರ್ವಹಿಸುವುದಿಲ್ಲ ಅಥವಾ ದೇವಾಲಯದಲ್ಲಿ ಹಸ್ತಕ್ಷೇಪ ಮಾಡುವ ಹಕ್ಕನ್ನು ಹೊಂದಿರುವುದಿಲ್ಲ. ಎಲ್ಲವನ್ನೂ ಟ್ರಸ್ಟ್ ನಿರ್ವಹಿಸುತ್ತದೆ” ಎಂದು ಅವರು ಹೇಳಿದ್ದಾರೆ.

ಕಳೆದ ಶುಕ್ರವಾರ, ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ಜಾರ್ಖಂಡ್‌ನಲ್ಲಿ ನಡೆದ ಚುನಾವಣಾ ರ್‍ಯಾಲಿಯಲ್ಲಿ ಪ್ರತಿ ಹಿಂದೂ ಕುಟುಂಬವು ದೇವಾಲಯದ ನಿರ್ಮಾಣಕ್ಕೆ 11 ರೂ ಮತ್ತು ಇಟ್ಟಿಗೆ ಕೊಡುಗೆ ನೀಡಬೇಕು ಎಂದು ಜನರಿಗೆ ಮನವಿ ಮಾಡಿದ್ದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಐರ್ಲೆಂಡ್‌ನಲ್ಲಿರುವ ಭಾರತೀಯ ರಾಯಭಾರಿಯಿಂದ ವಿಪಕ್ಷಗಳ ಟೀಕೆ: ರಾಜತಾಂತ್ರಿಕ ಅಧಿಕಾರಿಯ ನಿಲುವಿಗೆ ವ್ಯಾಪಕ ವಿರೋಧ

0
ಐರ್ಲೆಂಡ್‌ನಲ್ಲಿರುವ ಭಾರತೀಯ ರಾಯಭಾರಿ ಅಖಿಲೇಶ್ ಮಿಶ್ರಾ ದಿ ಐರಿಶ್ ಟೈಮ್ಸ್‌ನ ಸಂಪಾದಕೀಯಕ್ಕೆ ಪ್ರತಿಕ್ರಿಯೆಯಾಗಿ ಪ್ರತಿಪಕ್ಷಗಳನ್ನು ಟೀಕಿಸಿ, ಮೋದಿಯನ್ನು ಶ್ಲಾಘಿಸಿ ಪೋಸ್ಟ್‌ ಮಾಡಿದ್ದು, ವ್ಯಾಪಕ ಟೀಕೆಗೆ ಕಾರಣವಾಗಿದೆ. ದಿ ಐರಿಶ್ ಟೈಮ್ಸ್‌ನ ಸಂಪಾದಕೀಯದಲ್ಲಿ ಪ್ರಧಾನಿ ನರೇಂದ್ರ...