Homeಚಳವಳಿರಾಮನಗರ ಅರವಿಂದ್ ಫ್ಯಾಶನ್ ಕಾರ್ಖಾನೆ ಲಾಕೌಟ್: 17ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ

ರಾಮನಗರ ಅರವಿಂದ್ ಫ್ಯಾಶನ್ ಕಾರ್ಖಾನೆ ಲಾಕೌಟ್: 17ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ

ನಷ್ಟದ ನೆಪ ಹೇಳಿ ಕಾನೂನುಬಾಹಿರವಾಗಿ ಕಾರ್ಖಾನೆ ಲಾಕೌಟ್ ಘೋಷಿಸಿದ ಆಡಳಿತ ಮಂಡಳಿ, ಅದೇ ಸಮಯದಲ್ಲಿ ಹೊಸಕೋಟೆ ಬಳಿಯ ಸೂಲಿಬೆಲೆಯಲ್ಲಿ ಕಾರ್ಖಾನೆಯ ಹೊಸ ಘಟಕ ಆರಂಭಿಸಿದೆ.

- Advertisement -
- Advertisement -

ರಾಮನಗರದ ಅರವಿಂದ್ ಕಾರ್ಖಾನೆ ಕಾರ್ಮಿಕರು ಆಡಳಿತ ಮಂಡಳಿಯ ನಡೆ ಖಂಡಿಸಿ ನಡೆಸುತ್ತಿರುವ ಪ್ರತಿಭಟನೆ 17ನೇ ದಿನಕ್ಕೆ ಕಾಲಿಟ್ಟಿದೆ. ಅರವಿಂದ್ ಲೈಫ್‌ಸ್ಟೈಲ್‌ ಬ್ರಾಂಡ್‌ ಲಿಮಿಟೆಡ್ ಕಂಪನಿ ಶಾಶ್ವತ ಲಾಕೌಟ್ ಘೋಷಿಸಿದ್ದರ ಪರಿಣಾಮ ಗಾರ್ಮೆಂಟ್ಸ್ ಕಾರ್ಮಿಕರು ಕಾರ್ಖಾನೆಯ ಮುಖ್ಯದ್ವಾರದಲ್ಲಿ ಕೂತು ತಮ್ಮ ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ.

ಈ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ 66 ಕಾರ್ಮಿಕರು ಏಕಾಏಕಿ ಕೆಲಸ ಕಳೆದುಕೊಂಡು ಏನು ಮಾಡಬೇಕೆಂದು ದಿಕ್ಕುತೋಚದೆ ಕಾರ್ಖಾನೆಯ ಹೊರಗೆ ಧರಣಿ ಆರಂಭಿಸಿದ್ದಾರೆ. 12-13 ವರ್ಷಗಳಿಂದ ಅಲ್ಲಿ ದುಡಿಯುತ್ತಿದ್ದ ಕಾರ್ಮಿಕರನ್ನು ಬೀದಿಗೆ ತಳ್ಳಿದೆ ಎಂದು ಕಾರ್ಖಾನೆಯ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ನವೆಂಬರ್‌ 30 ರಂದು ಶುರುವಾದ ಪ್ರತಿಭಟನೆ ಇಂದಿಗೆ 17ನೇ ದಿನಕ್ಕೆ ಕಾಲಿಟ್ಟಿದೆ. ಘಟಕದ ಲಾಕೌಟ್‌ಗೆ ನಷ್ಟದ ಕಾರಣ ನೀಡಿ, ಕಾರ್ಮಿಕ ಕಾನೂನುಗಳ ಉಲ್ಲಂಘನೆ ಮಾಡುತ್ತಿರುವ ಕಾರ್ಖಾನೆ, ಸಂಸ್ಥೆ ಲಾಭದಾಯಕವಾಗಿದ್ದಾಗ ಕಾರ್ಮಿಕರಿಗೆ ಕನಿಷ್ಠ ಪರಿಹಾರವನ್ನು ಕೊಡದೇ ಇರುವುದು ಅಮಾನವೀಯ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

12-13 ವರ್ಷಗಳಿಂದ ದುಡಿಯುತ್ತಿದ್ದ ಕಾರ್ಮಿಕರು, ತಮಗೆ ಬೇರೆ ಘಟಕದಲ್ಲಿ ಕೆಲಸ ನೀಡಬೇಕೆಂದು ಇಲ್ಲವೇ ವಾರ್ಷಿಕ ಆರು ತಿಂಗಳ  ವೇತನದ ಪರಿಹಾರವನ್ನು ನೀಡುವಂತೆ ಆಗ್ರಹಿಸಿ ಪ್ರತಿಭಟನಾ ಹೋರಾಟವನ್ನು ಮುಂದುವರೆಸಿದ್ದಾರೆ.

ಇದನ್ನೂ ಓದಿ: ರಾಮನಗರ ಅರವಿಂದ್ ಫ್ಯಾಶನ್ ಲಿಮಿಟೆಡ್ ಕಾರ್ಖಾನೆ ಲಾಕೌಟ್: ಬೀದಿಗೆ ಬಿದ್ದ ಕಾರ್ಮಿಕರು

ನಷ್ಟದ ನೆಪ ಹೇಳಿ ಕಾನೂನುಬಾಹಿರವಾಗಿ ಕಾರ್ಖಾನೆ ಲಾಕೌಟ್ ಘೋಷಿಸಿದ ಆಡಳಿತ ಮಂಡಳಿ, ಅದೇ ಸಮಯದಲ್ಲಿ ಹೊಸಕೋಟೆ ಬಳಿಯ ಸೂಲಿಬೆಲೆಯಲ್ಲಿ ಕಾರ್ಖಾನೆಯ ಹೊಸ ಘಟಕ ಆರಂಭಿಸಿದೆ. ಅಲ್ಲಿಯಾದರೂ ಕೆಲಸ ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.

ಪ್ರತಿಭಟನೆ ಕುರಿತು ಕಾರ್ಮಿಕ ಇಲಾಖೆಯಲ್ಲಿ ರಾಜೀ ಸಂಧಾನ ಸಭೆ ನಡೆಯುತ್ತಿದ್ದು, ಯಥಾಸ್ಥಿತಿ ಕಾಪಾಡುವಂತೆ ಕಾರ್ಮಿಕ ಇಲಾಖೆ ಸೂಚನೆಯನ್ನು ನೀಡಿದೆ. ಆದರೆ, ಆಡಳಿತ ಮಂಡಳಿ ಅದನ್ನು ಪಾಲಿಸದೇ ಈ ಘಟಕದಲ್ಲಿರುವ ಸಾಮಗ್ರಿಗಳನ್ನು ಬೇರೆಡೆಗೆ ಸಾಗಿಸುತ್ತಿದೆ ಎನ್ನಲಾಗಿದೆ.

ಅರವಿಂದ್ ಕಾರ್ಖಾನೆಯ ಕಾರ್ಮಿಕರ ಹೋರಾಟಕ್ಕೆ ಗಾರ್ಮೆಂಟ್ಸ್ ಅಂಡ್ ಟೆಕ್ಸ್ಟ್‌ಟೈಲ್ಸ್‌ ವರ್ಕರ್ಸ್‌ ಯೂನಿಯನ್ (GATWU) ಕೈಜೋಡಿಸಿದೆ.

ಕಾರ್ಮಿಕ ಇಲಾಖೆಯ ಅಪರ ಕಾರ್ಮಿಕ ಆಯುಕ್ತರ ಬಳಿ ಪ್ರಕರಣ ದಾಖಲಾಗಿದ್ದು, ಡಿಸೆಂಬರ್‌ 4 ರಂದು ನಡೆದ  ಸಂಧಾನ ಸಭೆ ವಿಫಲವಾದ ಕಾರಣ ಕಾರ್ಮಿಕರು ಮುಷ್ಕರವನ್ನು ಮುಂದುವರಿಸಿದ್ದಾರೆ. ಜೊತೆಗೆ ಶೀಘ್ರವೇ ಪ್ರಕರಣವನ್ನು ಕಾರ್ಮಿಕ ಇಲಾಖೆ ಇತ್ಯರ್ಥಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.


ಇದನ್ನೂ ಓದಿ: ‘ಬಿಜೆಪಿ’ ನಿಜವಾದ ತುಕ್ಡೇ-ತುಕ್ಡೇ ಗ್ಯಾಂಗ್: ಸುಖ್‌ಬೀರ್ ಸಿಂಗ್ ಬಾದಲ್ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...