Homeಕರ್ನಾಟಕರಾಮನಗರ: ಪರೀಕ್ಷೆಗಳನ್ನು ಮುಂದೂಡುವಂತೆ ಕಾನೂನು ವಿದ್ಯಾರ್ಥಿಗಳಿಂದ ಪ್ರತಿಭಟನೆ

ರಾಮನಗರ: ಪರೀಕ್ಷೆಗಳನ್ನು ಮುಂದೂಡುವಂತೆ ಕಾನೂನು ವಿದ್ಯಾರ್ಥಿಗಳಿಂದ ಪ್ರತಿಭಟನೆ

- Advertisement -
- Advertisement -

ಕರ್ನಾಟಕ ರಾಜ್ಯ ಕಾನೂನು ವಿಶ್ವ ವಿಶ್ವವಿದ್ಯಾಲಯ ಹುಬ್ಬಳ್ಳಿಯು ನಡೆಸುತ್ತಿರುವ ಪರೀಕ್ಷೆಗಳನ್ನು ರದ್ದುಪಡಿಸಿ ಅವುಗಳನ್ನು ಮುಂದೂಡುವಂತೆ ರಾಮನಗರ ಜಿಲ್ಲೆಯ ಸರ್ಕಾರಿ ಕಾನೂನು ಕಾಲೇಜು ಮತ್ತು ಎಂ.ಎಚ್. ಕಾನೂನು ಕಾಲೇಜು ವಿದ್ಯಾರ್ಥಿಗಳು ಗುರುವಾರ ರಾಮನಗರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ.

ಕೊರೊನಾ ಸಾಂಕ್ರಮಿಕದ ಕಾರಣಕ್ಕೆ ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ)ವು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅಂತಿಮ ಪದವಿ ಪರೀಕ್ಷಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ತರಗತಿಯ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸಿ ಎಂದು ಆದೇಶ ಹೊರಡಿಸಿದೆ. ಆದರೆ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯವು ಇದನ್ನು ಪರಿಗಣಿಸದೆ ಎಲ್ಲಾ ವಿದ್ಯಾರ್ಥಿಗಳಿಗೆ ಸಮ-ಬೆಸ ಸಂಖ್ಯೆಯ ಆಧಾರದಲ್ಲಿ ಪರೀಕ್ಷೆಗಳನ್ನು ಆಯೋಜಿಸಿದೆ ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ.

ಇದನ್ನೂ ಓದಿ: ರೈತ ಚಲನೆಗೆ ಸ್ಪಂದಿಸದ ವಿದ್ಯಾರ್ಥಿ ಸಮೂಹ – ಡಾ.ಜಿ.ವಿ.ಆನಂದಮೂರ್ತಿ ಆತಂಕ

ವಿಶ್ವವಿದ್ಯಾಲಯವು ಬೆಸ ಸಂಖ್ಯೆಯ(1,3,5,7 & 9) ತರಗತಿಗಳನ್ನು ಕೇವಲ ಒಂದು ತಿಂಗಳು ನಡೆಸಿ, ತಿಂಗಳ ನಂತರ ಪರೀಕ್ಷೆ ನಡೆಸುವುದಾಗಿ ಆದೇಶ ಹೊರಡಿಸಿದೆ. ಇದರಿಂದಾಗಿ ವಿದ್ಯಾರ್ಥಿಗಳಿಗೆ ಪರೀಕ್ಷೆಯ ಸಿದ್ದತೆ ನಡೆಸಲು ಸಮಯ ಸಿಗುವುದಿಲ್ಲ ಎಂದು ವಿದ್ಯಾರ್ಥಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಆದ್ದರಿಂದ ಸಮ(2,4,6 & 8) ಸಂಖ್ಯೆಯ ತರಗತಿಗಳ ಪರೀಕ್ಷೆಗಳನ್ನು ರದ್ದು ಮಾಡಬೇಕು ಅಥವಾ ಪರ್ಯಾಯವಾಗಿ ಆ ವಿಷಯಗಳನ್ನು ಪ್ರಾಯೋಗಿಕ ವಿಷಯಗಳನ್ನಾಗಿ ಪರಿವರ್ತಿಸಬೇಕು. ಬೆಸ(1,3,5,7 & 9) ಸಂಖ್ಯೆ ತರಗತಿಗಳ ಪರೀಕ್ಷೆಗಳನ್ನು ಮುಂದುವರೆಸಲಬೇಕು ಎಂದು ವಿದ್ಯಾರ್ಥಿಗಳು ವಿಶ್ವವಿದ್ಯಾಲಯದ ಕುಲಪತಿ ಮತ್ತು ಕಾನೂನು ಮಂತ್ರಿಗಳಿಗೆ ರಾಮನಗರ ಜಿಲ್ಲಾಧಿಕಾರಿ ಮೂಲಕ ಮನವಿ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಅಲ್ಪಸಂಖ್ಯಾತರ ಅನುದಾನ, ವಿದ್ಯಾರ್ಥಿ ವೇತನದಲ್ಲಿ ಅರ್ಧದಷ್ಟು ಕಡಿತಗೊಳಿಸಿದ ಬಿಎಸ್‌ವೈ ಸರ್ಕಾರ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಸಿದ್ದರಾಮಯ್ಯ ಸರ್ಕಾರ ಮುಸ್ಲಿಮರನ್ನು ಒಬಿಸಿ ಪಟ್ಟಿಗೆ ಸೇರಿಸಿದ್ದು ನಿಜಾನಾ?

0
ಕರ್ನಾಟಕದಲ್ಲಿ ಮುಸ್ಲಿಮರನ್ನು ಹಿಂದುಳಿದ ವರ್ಗಕ್ಕೆ ಸೇರಿಸುವ ಮೂಲಕ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದುಳಿದ ವರ್ಗಗಳ 36 ಜಾತಿಗಳಿಗೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ. ಸಿದ್ದರಾಮಯ್ಯ ಸರ್ಕಾರ ಹಿಂದುಳಿದ ವರ್ಗಗಳಿಗೆ...