Homeಕರ್ನಾಟಕರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಮರುನಾಮಕರಣ| ರಾಜ್ಯ ಸರ್ಕಾರಕ್ಕೆ ತೀರ್ಮಾನಿಸುವ ಅಧಿಕಾರವಿದೆ: ಸಿಎಂ ಸಿದ್ದರಾಮಯ್ಯ

ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಮರುನಾಮಕರಣ| ರಾಜ್ಯ ಸರ್ಕಾರಕ್ಕೆ ತೀರ್ಮಾನಿಸುವ ಅಧಿಕಾರವಿದೆ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡುವ ಮೂಲಕ ಜಿಲ್ಲೆಯ ಇತಿಹಾಸವನ್ನು ತಿರುಚಲಾಗುತ್ತಿದೆ ಎಂಬ ಕೇಂದ್ರ ಸಚಿವ ಕುಮಾರಸ್ವಾಮಿಯವರು ಟೀಕೆಗೆ ಪ್ರತಿಕ್ರಿಯೆ ನೀಡಿದ ಸಿಎಂ, “ಅಲ್ಲಿನ ಜನರ ಅಭಿಪ್ರಾಯವನ್ನು ಪಡೆದೇ ಈ ನಿರ್ಣಯವನ್ನು ಕೈಗೊಳ್ಳಲಾಗಿದೆ. ಕುಮಾರಸ್ವಾಮಿಯವರು ರಾಮನಗರ ಜಿಲ್ಲೆ ಸೃಜಿಸುವಾಗ, ಅಲ್ಲಿನ ಇತಿಹಾಸದ ಬಗ್ಗೆ ಯೋಚಿಸಿರಲಿಲ್ಲವೇ? ಎಂದು ಪ್ರಶ್ನಿಸಿದರು.

ಇಡಿ, ಐಟಿ ದಾಳಿಗಳು ರಾಜಕೀಯ ಪ್ರೇರಿತವಾಗಬಾರದು

ಜಾರಿನಿರ್ದೇಶನಾಲಯ ತನ್ನ ಎಲ್ಲೆ ಮೀರುತ್ತಿದೆ ಎಂದು ಸುಪ್ರೀಂ ಕೋರ್ಟ್ ಹೇಳಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ, “ಇಡಿ, ಐಟಿಯವರು ತನಿಖೆ ಮಾಡುವುದನ್ನೇ ಆಗಲಿ ಅಥವಾ ಕಪ್ಪು ಹಣ ವ್ಯವಹಾರವನ್ನು ಪತ್ತೆ ಹಚ್ಚುವುದನ್ನೇ ಆಗಲಿ ಆಕ್ಷೇಪಿಸುವುದಿಲ್ಲ. ಆದರೆ ಇಡಿ ಮತ್ತು ಐಟಿ ದಾಳಿಗಳು ರಾಜಕೀಯ ದುರುದ್ದೇಶದಿಂದ ನಡೆಯಕೂಡದು. ಗೃಹ ಸಚಿವ ಪರಮೇಶ್ವರ್ ಅವರ ಶಿಕ್ಷಣ ಸಂಸ್ಥೆಯ ಮೇಲಿನ ಇಡಿ ದಾಳಿ ರಾಜಕೀಯ ಪ್ರೇರಿತ ಎಂದು ಸಿಎಂ ಹೇಳಿದರು.

ಒಂದು ವರ್ಷದಿಂದ ಅಪರಾಧ ಪ್ರಕರಣಗಳು ಕಡಿಮೆಯಿದೆ

ರಾಜ್ಯದಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಸಿಎಂ “ಅಪರಾಧ ಪ್ರಕರಣಗಳಲ್ಲಿ ಕಠಿಣ ಕ್ರಮವಾಗುತ್ತದೆ. ಕಳೆದ ಒಂದು ವರ್ಷದಿಂದ ರಾಜ್ಯದಲ್ಲಿ ಅಪರಾಧಗಳ ಸಂಖ್ಯೆ ಕಡಿಮೆಯಾಗಿದ್ದು, ಬಿಜೆಪಿ ಅವಧಿಗೆ ಹೋಲಿಸಿದರೆ ನಮ್ಮ ಸರ್ಕಾರದ ಅವಧಿಯಲ್ಲಿ ಅಪರಾಧಗಳ ಸಂಖ್ಯೆ ಕಡಿಮೆಯಿದೆ. ಅಪರಾಧಗಳನ್ನು ಗಮನಾರ್ಹವಾಗಿ ಕಡಿಮೆ ಮಾಡಲು ಸರ್ಕಾರ ಖಂಡಿತ ಪ್ರಯತ್ನಿಸುತ್ತದೆ ಎಂದರು.

ದೇಣಿಗೆ ನೀಡುವುದು ತಪ್ಪಲ್ಲ

ಯಂಗ್ ಇಂಡಿಯಾ ಸಂಸ್ಥೆಗೆ ದೇಣಿಗೆ ನೀಡಿರುವ ಬಗ್ಗೆ ಡಿಸಿಎಂ ಹಾಗೂ ಮಾಜಿ ಸಂಸದ ಡಿ.ಕೆ.ಸುರೇಶ್‌ರವರ ಮೇಲೆ ಚಾರ್ಜ್ ಶೀಟ್ ಸಲ್ಲಿಕೆಯಾಗಿರುವ ಬಗ್ಗೆ ಮಾತನಾಡಿ, ಯಾವುದೇ ಸಂಸ್ಥೆಗೆ ದೇಣಿಗೆ ನೀಡುವುದು ತಪ್ಪಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಅರಮನೆ ಮೈದಾನ ವಿವಾದ: ಮೈಸೂರು ರಾಜವಂಶಸ್ಥರಿಗೆ 3,400 ಕೋಟಿ ರೂ. ಟಿಡಿಆರ್ ಹಸ್ತಾಂತರಿಸಲು ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...