Homeಕರ್ನಾಟಕರಾಮನಗರ: ದಲಿತ ಬಾಲಕಿಗೆ ಲೈಂಗಿಕ ಕಿರುಕುಳ; ಪೋಕ್ಸೋ ಪ್ರಕರಣದಲ್ಲಿ ನಿವೃತ್ತ ಪೊಲೀಸ್ ಪೇದೆ ಅರೆಸ್ಟ್‌

ರಾಮನಗರ: ದಲಿತ ಬಾಲಕಿಗೆ ಲೈಂಗಿಕ ಕಿರುಕುಳ; ಪೋಕ್ಸೋ ಪ್ರಕರಣದಲ್ಲಿ ನಿವೃತ್ತ ಪೊಲೀಸ್ ಪೇದೆ ಅರೆಸ್ಟ್‌

ಪೋಕ್ಸೋ ಹಾಗೂ ಅಟ್ರಾಸಿಟಿ ಕಾಯ್ದೆಯಡಿ ಪ್ರಕರಣವನ್ನು ರಾಮನಗರ ಪೊಲೀಸರು ದಾಖಲಿಸಿದ್ದಾರೆ.

- Advertisement -
- Advertisement -

ಹತ್ತು ವರ್ಷದ ದಲಿತ ಬಾಲಕಿ ಮೇಲೆ ನಿವೃತ್ತ ಪೊಲೀಸ್‌ ಪೇದೆ ಅತ್ಯಾಚಾರಕ್ಕೆ ಯತ್ನಿಸಿ, ಲೈಂಗಿಕ ಕಿರುಕುಳ ನೀಡಿರುವ ಘಟನೆ ರಾಮನಗರದಲ್ಲಿ ನಡೆದಿದೆ. ಈ ಕುರಿತು ಪ್ರಕರಣ ದಾಖಲಾಗಿದೆ.

‘ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ’ (ಪೋಕ್ಸೋ) ಹಾಗೂ ‘ಎಸ್‌ಸಿ, ಎಸ್‌ಟಿ ಸಮುದಾಯಗಳ ಮೇಲಿನ ದೌರ್ಜನ್ಯಗಳ ತಡೆ ಕಾಯ್ದೆ’ಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ರಾಮನಗರ ಟೌನ್‌ ಸರ್ಕಲ್‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಗುವಿನ ತಾಯಿ ಘಟನೆಯ ಕುರಿತು ದೂರು ನೀಡಿದ್ದು, ನಿವೃತ್ತ ಪೊಲೀಸ್‌ ಪೇದೆ ಮಲ್ಲಿಕಾರ್ಜುನ್‌ (65) ಎಂಬಾತನ ವಿರುದ್ಧ ಎಫ್‌ಐಆರ್‌ ಆಗಿದೆ. ಆರೋಪಿಯನ್ನು ಬಂಧಿಸಲಾಗಿದೆ.

ಸಂತ್ರಸ್ತ ಬಾಲಕಿಯ ತಾಯಿ ದೂರಿನಲ್ಲಿ ಹೇಳಿದ್ದೇನು?

“ದಿನಾಂಕ 16-10-2022ರಂದು ಮಧ್ಯಾಹ್ನ 12 ಗಂಟೆ ವೇಳೆಯಲ್ಲಿ ನನ್ನ ಮಗಳು ಹೆದರಿಕೊಂಡು ಹಾಗೂ ಜ್ವರದಿಂದ ಬಳಲುತ್ತಿರುವುದನ್ನು ಗಮನಿಸಿದೆ. ಯಾಕಮ್ಮ? ಏನಾಯಿತು? ಎಂದು ಕೇಳಿದಾಗ, -ಅಮ್ಮ ನನಗೆ ಭಯವಾಗುತ್ತಿದೆ- ಎಂದಳು. ಭಯದಿಂದ ನನ್ನನ್ನು ಬಿಗಿದಪ್ಪಿಕೊಂಡಳು. ಭಯಪಡಬೇಡ ಏನಾಯಿತೆಂದು ಹೇಳು ಎಂದಾಗ ವಿಷಯ ತಿಳಿಸಿದಳು.”

“ದಿನಾಂಕ 14-10-2022ರಂದು (ಶುಕ್ರವಾರ) ಸಂಜೆ 7.30ರ ವೇಳೆಯಲ್ಲಿ ನಮ್ಮ ಗ್ರಾಮದ ಮಲ್ಲಿಕಾರ್ಜುನ್‌ ಎಂಬವರ ಅಂಗಡಿಗೆ ಹೋಗಿದ್ದೆ. ಆಗ ಆ ಅಂಕಲ್‌ ನನ್ನ ಬಟ್ಟೆ ಬಿಚ್ಚುವಂತೆ ಗದರಿಸಿದರು ಎಂದು ಮಗಳು ತಿಳಿಸಿದಳು. ಆಗ ನನ್ನ ಮಗಳು ಆಗಲ್ಲ ಎಂದಾಗ ಹೆದರಿಸಿದ್ದಾನೆ. ಬಲವಂತವಾಗಿ ಬಟ್ಟೆ ಬಿಚ್ಚಿಸಿದ್ದಾನೆ.”

“ಅಂಗಡಿ ಮಾಲೀಕನೂ ಆಗಿರುವ ಮಲ್ಲಿಕಾರ್ಜುನ, ತನ್ನ ಹೆಂಡತಿ ಆಟೋದಲ್ಲಿ ಬಂದಿದ್ದು ನೋಡಿದ ತಕ್ಷಣವೇ ನನ್ನ ಮಗಳ ಗುಪ್ತಾಂಗಳನ್ನು ಮುಟ್ಟಿದ್ದಾನೆ. ನನ್ನ ಮಗಳು ಮಲ್ಲಿಕಾರ್ಜುನನ ಕೈಯನ್ನು ಕಚ್ಚಿ ಓಡಿ ಬಂದಿದ್ದಾಳೆ. ಇದರಿಂದ ಭಯಭೀತಳಾಗಿದ್ದ ನನ್ನ ಮಗಳು ಎರಡು ದಿನಗಳಿಂದ ದೈಹಿಕವಾಗಿ ಹಾಗೂ ಮಾನಸಿಕವಾಗಿ ಕುಗ್ಗಿ ಹೋಗಿದ್ದಳು.”

“ನಾನು ದಿನಾಂಕ 16-10-2022ರಂದು ಮಧ್ಯಾಹ್ನ 12 ಗಂಟೆಯ ಸಮಯದಲ್ಲಿ ಮಲ್ಲಿಕಾರ್ಜುನ್‌ನ ಹೆಂಡತಿಯ ಹತ್ತಿರ ಘಟನೆಯನ್ನು ವಿವರಿಸಿ, ನನ್ನ ಮಗಳಿಗೆ ಆಗಿರುವ ಅನ್ಯಾಯವನ್ನು ಹೇಳಿದೆ. ಪೊಲೀಸರಿಗೆ ದೂರು ನೀಡಿರೆಂದು ಮಲ್ಲಿಕಾರ್ಜುನ್‌ ಅವರ ಹೆಂಡತಿ ತಿಳಿಸಿದರು.”

“ಊರಿನ ಗ್ರಾಮಸ್ಥರಿಗೆ ತಿಳಿಸಿದೆ. ನಂತರ ಮಲ್ಲಿಕಾರ್ಜುನ್‌ ಮನೆ ಹತ್ತಿರ ಹೋಗಿ ನ್ಯಾಯ ಕೇಳಿದಾಗ ನೀವು ‘ಹೊಲೆಯರು, ನಮ್ಮ ಮನೆಯ ಹತ್ತಿರ ಯಾಕೆ ಬಂದಿರಿ ’ ಎಂದು ಜಾತಿ ನಿಂದನೆ ಮಾಡಿದ್ದಾರೆ. ಊರಿನ ಜನರಿಗೂ ಬೈದಿದ್ದಾನೆ. ಊರಿನ ಜನರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.”

-ಹೀಗೆ ನೊಂದ ತಾಯಿ ದೂರು ನೀಡಿದ್ದಾರೆ.

ನ್ಯಾಯಾಂಗ ತನಿಖೆಗೆ ಆಗ್ರಹ

ಕರ್ನಾಟಕ ರಾಜ್ಯದ ವಿವಿಧ ಭಾಗಗಳಲ್ಲಿ ಮಕ್ಕಳ ಮೇಲಿನ ಲೈಂಗಿಕ ಕಿರುಕುಳ, ಹಿಂಸೆ ಮತ್ತು ಅತ್ಯಾಚಾರದಂತಹ ಪ್ರಕರಣಗಳು ಹೆಚ್ಚುತ್ತಲಿವೆ. ಚಿತ್ರದುರ್ಗದಲ್ಲಿ ಮಕ್ಕಳ ಮೇಲೆ ಅತ್ಯಾಚಾರ ನಡೆದಿದೆ. ಮಳವಳ್ಳಿಯಲ್ಲಿ ಮೊನ್ನೆಯಷ್ಟೇ ಬಾಲಕಿ ಮೇಲಿನ ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದೆ. ಈಗ ರಾಮನಗರದಲ್ಲಿ ಪ್ರಕರಣದ ವರದಿಯಾಗಿದೆ ಎಂದು ರಾಮನಗರ ಜಿಲ್ಲಾ, ಉಪವಿಭಾಗಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ಸದಸ್ಯರಾದ ಸಮತಾ ರಾಣಿ, ವಿ.ವೆಂಕಟೇಶ್, ಎನ್‌.ಹರೀಶ್‌ ಬೇಸರ ವ್ಯಕ್ತಪಡಿಸಿದ್ದಾರೆ.

“ನಿವೃತ್ತ ಪೊಲೀಸ್‌ ಪೇದೆ ಮಲ್ಲಿಕಾರ್ಜುನ್‌ ಅತ್ಯಾಚಾರದ ಆರೋಪಿಯಾಗಿದ್ದು, ಪ್ರಕರಣ ದಾಖಲಿಸುವುದು ವಿಳಂಬವಾಗಿದೆ. ಸಿಡಬ್ಲ್ಯೂಸಿ ಗಮನಕ್ಕೆ ತರುವುದು ತಡವಾಗಿದೆ. ಹೀಗಾಗಿ ತಪ್ಪಿತಸ್ಥ ಪೊಲೀಸರ ವಿರುದ್ಧವೂ ತನಿಖೆ ನಡೆಸಬೇಕು. ಇಡೀ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಬೇಕು” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿರಿ: ಮಂಡ್ಯ: ಟ್ಯೂಷನ್‌ಗೆ ಬಂದಿದ್ದ ಬಾಲಕಿಯನ್ನು ಅತ್ಯಾಚಾರ ಎಸಗಿ ಕೊಲೆ ಮಾಡಿದ ಶಿಕ್ಷಕ

ಮಂಡ್ಯದ ಮಳವಳ್ಳಿಯಲ್ಲಿ ಟ್ಯೂಷನ್‌ಗೆಂದು ತೆರಳಿದ್ದ 6ನೇ ತರಗತಿ ವಿದ್ಯಾರ್ಥಿನಿಯೊಬ್ಬರು ನಿರ್ಮಾಣ ಹಂತದ ಮನೆಯ ಮುಂಭಾಗದಲ್ಲಿದ್ದ ನೀರಿನ ಸಂಪ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಳು. ಟ್ಯೂಷನ್‌ ನೀಡುತ್ತಿದ್ದ ಶಿಕ್ಷಕ ಕಾಂತರಾಜು ಬಾಲಕಿಯನ್ನು ಅತ್ಯಾಚಾರ ನಡೆಸಿ ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿತ್ತು.

ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ತಮ್ಮ ಮಠದಲ್ಲಿ ಓದುತ್ತಿದ್ದ ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂದು ಪ್ರಕರಣ ದಾಖಲಾಗಿ, ಬಂಧನದಲ್ಲಿದ್ದಾರೆ. ಅಲ್ಲದೆ ಋತುಮತಿಯಾಗದ ಹೆಣ್ಣುಮಕ್ಕಳ ಮೇಲೂ ಮರುಘಾ ಮಠಾಧೀಶರು ಅತ್ಯಾಚಾರ ಎಸಗಿರುವ ಆರೋಪ ಬಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...