Homeಮುಖಪುಟಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ರಮಾನಾಥ ರೈ

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ರಮಾನಾಥ ರೈ

- Advertisement -
- Advertisement -

ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಸೋಲು ಕಂಡ ಹಿರಿಯ ಕಾಂಗ್ರೆಸ್ ಮುಖಂಡರಾದ ರಮಾನಾಥ ರೈ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ.

ಮಂಗಳೂರಿನ ಕಾಂಗ್ರೆಸ್ ಭವನದಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, “ಪಕ್ಷದ ರಾಜಕೀಯದಲ್ಲಿ ಸಕ್ರಿಯವಾಗಿರುತ್ತೇನೆ. ಆದರೆ ಚುನಾವಣಾ ರಾಜಕಾರಣದಿಂದ ಹಿಂದೆ ಸರಿಯುತ್ತೇನೆ. ಪಕ್ಷದ ಮಾತಿಗೆ ಬೆಲೆ ಕೊಡುತ್ತೇನೆ” ಎಂದಿದ್ದಾರೆ.

ಬಂಟ್ವಾಳ ಕ್ಷೇತ್ರದಲ್ಲಿ ಕಳೆದ ಬಾರಿಗಿಂತ ಈ ಬಾರಿ ಹೆಚ್ಚು ಮತ ಪಡೆದರೂ ಗೆಲುವು ಸಾಧಿಸಲು ಸಾಧ್ಯವಾಗಲಿಲ್ಲ. ಈ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳುತ್ತೇನೆ. ಆದರೆ ರಾಜ್ಯದ್ಯಂತ ಕಾಂಗ್ರೆಸ್ ಗೆಲುವು ಕಂಡಿರುವುದಕ್ಕೆ ಸಂತೋಷವಾಗಿದೆ. ಮತ ಹಾಕಿದ ಜನತೆಗೆ ಮತ್ತು ಅಭೂತಪೂರ್ವ ಗೆಲುವಿಗೆ ದುಡಿದ ಕಾಂಗ್ರೆಸ್ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದಿದ್ದಾರೆ.

ಮುಂದಿನ ಜಿ.ಪಂ ಮತ್ತು ತಾ.ಪಂ ಚುನಾವಣೆಯಲ್ಲಿ ಉತ್ತಮ ಸಾಧನೆ ಮಾಡಲು ಯತ್ನಿಸುತ್ತೇವೆ. ನಮ್ಮ ಗ್ಯಾರಂಟಿಗಳನ್ನು ಜನರಿಗೆ ತಲುಪಿಸಲು ಶ್ರಮಿಸುತ್ತೇವೆ. ಹೈಕಮಾಂಡ್ ಶೀಘ್ರ ಮುಖ್ಯಮಂತ್ರಿ ಯಾರೆಂದು ತೀರ್ಮಾನಿಸುತ್ತದೆ. ಈ ಕುರಿತು ಯಾವುದೇ ಗೊಂದಲ ಇಲ್ಲ ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದರು.

ಮಾಜಿ ಸಚಿವರಾದ ರಮಾನಾಥ್ ರೈರವರು ಬಂಟ್ವಾಳ ಕ್ಷೇತ್ರದಲ್ಲಿ 85,042 ಮತಗಳನ್ನು ಪಡೆದರೆ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ 93,324 ಮತಗಳನ್ನು ಪಡೆದರು. ಅಂತಿಮವಾಗಿ ರಮಾನಾಥ್ ರೈ 8,282 ಮತಗಳ ಅಂತರದಿಂದ ಸೋಲೊಪ್ಪಿಕೊಂಡರು.

ಇದನ್ನೂ ಓದಿ: ಕರ್ನಾಟಕ ಚುನಾವಣೆ: ಬಿಜೆಪಿ ಇದುವರೆಗೂ ಒಮ್ಮೆಯೂ ಗೆಲ್ಲಲಾಗದ ಕ್ಷೇತ್ರಗಳಿವು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹೇಮಂತ್ ಕರ್ಕರೆ ಆರೆಸ್ಸೆಸ್‌ ನಂಟಿನ ಪೊಲೀಸ್ ಅಧಿಕಾರಿಯ ಗುಂಡಿಗೆ ಬಲಿಯಾಗಿದ್ದು: ವಿಜಯ್ ವಡೆಟ್ಟಿವಾರ್

0
2008ರ ಮುಂಬೈ ಭಯೋತ್ಪಾದಕ ದಾಳಿಯ ಸಮಯದಲ್ಲಿ ರಾಜ್ಯ ಭಯೋತ್ಪಾದನಾ ನಿಗ್ರಹ ದಳದ(ಎಟಿಎಸ್) ಮಾಜಿ ಮುಖ್ಯಸ್ಥ ಹೇಮಂತ್ ಕರ್ಕರೆ ಅವರನ್ನು ಹತ್ಯೆಗೈದಿದ್ದು ಭಯೋತ್ಪಾದಕ ಅಜ್ಮಲ್ ಅಮೀರ್ ಕಸಬ್ ಅಲ್ಲ, ಆರೆಸ್ಸೆಸ್‌ ಜೊತೆ ನಂಟು ಹೊಂದಿದ್ದ...