Homeರಾಷ್ಟ್ರೀಯರಾಮನವಮಿ ಹಿಂಸಾಚಾರ ಪ್ರಕರಣ: ಖಡ್ಗ ಹಿಡಿದು ಮೆರವಣಿಗೆಗೆ ಬಂದಿದ್ದ ಆರೋಪಿಗೆ ಜಾಮೀನು ನಿರಾಕರಿಸಿದ ಗುಜರಾತ್ ಹೈಕೋರ್ಟ್

ರಾಮನವಮಿ ಹಿಂಸಾಚಾರ ಪ್ರಕರಣ: ಖಡ್ಗ ಹಿಡಿದು ಮೆರವಣಿಗೆಗೆ ಬಂದಿದ್ದ ಆರೋಪಿಗೆ ಜಾಮೀನು ನಿರಾಕರಿಸಿದ ಗುಜರಾತ್ ಹೈಕೋರ್ಟ್

- Advertisement -
- Advertisement -

ಎಪ್ರಿಲ್‌ 10 ರಂದು ಗುಜರಾತಿನ ಸಬರ್ಕಾಂತ ಜಿಲ್ಲೆಯ ಹಿಮ್ಮತ್‌ನಗರದಲ್ಲಿ ರಾಮ ನವಮಿಯಂದು ಭುಗಿಲೆದ್ದ ಹಿಂಸಾಚಾರದ ಆರೋಪಿಯ ಸಾಮಾನ್ಯ ಜಾಮೀನು ಅರ್ಜಿಯನ್ನು ಗುಜರಾತ್ ಹೈಕೋರ್ಟ್ ಬುಧವಾರ ನಿರಾಕರಿಸಿದೆ. ಆರೋಪಿಯನ್ನು ಪ್ರಕಾಶ್ ಪಾಂಡ್ಯ(20) ಎಂದು ಗುರುತಿಸಲಾಗಿದ್ದು, ರಾಮನವಮಿಯ ‘ಶೋಭಾ ಯಾತ್ರೆ’ಯಲ್ಲಿ ಭಾಗವಹಿಸಿದ್ದನು.

ಈ ಮೆರವಣಿಗೆಯು ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಸಾಗಿದ್ದಾಗ ಎರಡು ಸಮುದಾಯಗಳ ನಡುವೆ ಹಿಂಸಾಚಾರ ಭುಗಿಲೆದ್ದಿತು. ಈ ಘಟನೆ ನಡೆದಾಗ ಪ್ರಕಾಶ್‌ ಪಾಂಡ್ಯ ಕೈಯ್ಯಲ್ಲಿ ತಲವಾರು ಹಿಡಿದ್ದನು ಎಂದು ಸಿಸಿಟಿವಿ ಫೂಟೇಜ್‌ನಲ್ಲಿ ಕಂಡುಬಂದಿದೆ ಎಂದು ವರದಿಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹೈಕೋರ್ಟ್‌ನಲ್ಲಿ ಆರೋಪಿಯ ವಕೀಲರು ಕೂಡಾ ಇದನ್ನು ಒಪ್ಪಿಕೊಂಡಿದ್ದಾರೆ. ಆದರೆ ವಕೀಲರು ಪ್ರಕಾಶ್‌ ಪಾಂಡ್ಯ ಆಯುಧವನ್ನು ಕೊಂಡೊಯ್ಯುವುದನ್ನು ಕೋರ್ಟ್‌ನಲ್ಲಿ ಸಮರ್ಥಿಸಿದ್ದಾರೆ. ಕೆಲವು ಹಬ್ಬಗಳ ಸಮಯದಲ್ಲಿ ಆಯುಧವನ್ನು ಕೊಂಡೊಯ್ಯುವುದು ಎಲ್ಲರಿಗೂ ತಿಳಿದಿರುವ ಆಚರಣೆಗೆ ಎಂದು ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: ಸೌಹಾರ್ದ ಕಥನ: ಹಿಂದೂ ಯುವಕರಿಗೆ ಕೇಸರಿ ಶಾಲು ತೊಡಿಸಿದ ಮುಸ್ಲಿಮರು – ಹಣ್ಣು ತಿನ್ನಿಸಿ ಇಫ್ತಾರ್ ಆಚರಿಸಿದ ರಾಮ ಮಾಲಧಾರಿಗಳೂ

“ರಾಮ ನವಮಿ ಮತ್ತು ಗುರುನಾನಕ್ ಜಯಂತಿಯಂತಹ ಸಂದರ್ಭಗಳ ಶೋಭಾ ಯಾತ್ರೆಯಲ್ಲಿ ಜನರು ಈ ಆಯುಧಗಳನ್ನು (ತಲವಾರುಗಳನ್ನು) ತಮ್ಮೊಂದಿಗೆ ತೆಗೆದುಕೊಂಡು ಹೋಗುತ್ತಾರೆ” ಎಂದು ಪ್ರಕಾಶ್‌ ಪಾಂಡ್ಯ ಅವರ ವಕೀಲರು ಹೇಳಿದ್ದಾರೆ ಎಂದು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ರಾಜ್ಯದ ಅಧಿಕಾರಿಗಳು ಕಾರ್ಯಕ್ರಮಕ್ಕೆ ಭದ್ರತೆಯನ್ನು ಒದಗಿಸದಿದ್ದರೂ ಪೊಲೀಸರ ಅನುಮತಿಯೊಂದಿಗೆ ಮೆರವಣಿಗೆಯನ್ನು ಮಾಡಲಾಗಿದೆ ಎಂದು ವಕೀಲರು ಹೇಳಿದ್ದಾರೆ.

ವಕೀಲರ ವಾದವನ್ನು ಆಲಿಸಿದ ನ್ಯಾಯಮೂರ್ತಿ ಸಮೀರ್ ದವೆ ಅವರ ಪೀಠವು ಈ ಹಂತದಲ್ಲಿ ಪ್ರಕಾಶ್‌ ಪಾಂಡ್ಯ ಅವರಿಗೆ ಸಾಮಾನ್ಯ ಜಾಮೀನು ನೀಡಲು ನಿರಾಕರಿಸಿತು. ಜೊತೆಗೆ ಪ್ರಕರಣದಲ್ಲಿ ಪೊಲೀಸರು ಆರೋಪಪಟ್ಟಿ ಸಲ್ಲಿಸಿದ ನಂತರ ನ್ಯಾಯಾಲಯವನ್ನು ಸಂಪರ್ಕಿಸಲು ಸೂಚಿಸಿದೆ.

ಇದನ್ನೂ ಓದಿ: ದೆಹಲಿ ಹನುಮ ಜಯಂತಿ ಘರ್ಷಣೆ: ಎರಡೂ ಸಮುದಾಯಗಳ 23 ಆರೋಪಿಗಳ ಬಂಧನ

ರಾಮ ನವಮಿ ಹಿಂಸಾಚಾರ

ರಾಮನವಮಿಯಂದು ದೇಶಾದ್ಯಂತ ನಡೆದ ಹಲವು ಘಟನೆಗಳಲ್ಲಿ ಹಿಮ್ಮತ್‌ನಗರದ ಕೋಮು ಘರ್ಷಣೆಯೂ ಒಂದಾಗಿದೆ. ಈ ಸಮಯದಲ್ಲಿ ಗುಜರಾತ್‌ನಲ್ಲಿ ಎರಡು ಕೋಮು ಸಂಘರ್ಷ ಘಟನೆಗಳು ನಡೆದಿತ್ತು.

ಪೊಲೀಸರ ಪ್ರಕಾರ, ಕಾರುಗಳು ಮತ್ತು ಮೋಟಾರ್‌ಸೈಕಲ್‌ಗಳ ಮೆರವಣಿಗೆಯು ಹಿಮ್ಮತ್‌ನಗರದ ಛಪಾರಿಯಾ ಪ್ರದೇಶವನ್ನು ತಲುಪಿದ ನಂತರ ಹಿಂಸಾಚಾರವು ಪ್ರಾರಂಭವಾಯಿತು. ಇಲ್ಲಿ ಹೆಚ್ಚಾಗಿ ಅಲ್ಪಸಂಖ್ಯಾತ ಸಮುದಾಯಗಳ ಜನರು ವಾಸಿಸುತ್ತಾರೆ.

ಎರಡೂ ಕಡೆಯಿಂದ ಕಲ್ಲು ತೂರಾಟಗಳು ನಡೆದವು, ಇದನ್ನು ಅನುಸರಿಸಿ ಬೆಂಕಿ ಹಚ್ಚಲಾಗಿದ್ದು, ಪ್ರದೇಶದಲ್ಲಿ ಅಂಗಡಿಗಳು ಮತ್ತು ವಾಹನಗಳನ್ನು ಧ್ವಂಸಗೊಳಿಸಲಾಯಿತು. ಹಿಂಸಾಚಾರವು ಮಧ್ಯಾಹ್ನ 3 ಗಂಟೆಯವರೆಗೂ ಮುಂದುವರೆದಿತ್ತು ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: ಶ್ರೀರಾಮಸೇನೆಯ ಪುಂಡರನ್ನು ಒದ್ದು ಒಳಗೆ ಹಾಕಲು ಆದೇಶ ನೀಡಿ 

ಇದರ ನಂತರ, ಸಂಜೆ 4 ಗಂಟೆಗೆ ಬಿಜೆಪಿ ಬೆಂಬಲಿತ ಸಂಘಟನೆಯಾದ ವಿಎಚ್‌ಪಿ ಕಾರ್ಯಕರ್ತರು ಸ್ಥಳಕ್ಕೆ ಬಂದು ಅಲ್ಲಿಂದ ಮತ್ತೊಂದು ಮೆರವಣಿಗೆಯನ್ನು ಪ್ರಾರಂಭಿಸಿದ್ದರು ಎಂದು ವರದಿಯಾಗಿದೆ. ಇದು ಮತ್ತೊಂದು ಸುತ್ತಿನ ಕಲ್ಲು ತೂರಾಟ ಮತ್ತು ಗಲಭೆಗೆ ನಾಂದಿ ಹಾಡಿತು ಪೊಲೀಸರು ಹೇಳಿದ್ದಾರೆ.

ಎರಡನೇ ಮೆರವಣಿಗೆಗೆ ಭದ್ರತೆಯಿದ್ದರೂ, ಗಲಭೆಯಲ್ಲಿ ತಮ್ಮ 15 ಸದಸ್ಯರು ಗಾಯಗೊಂಡಿದ್ದಾರೆ ಎಂದು ವಿಎಚ್‌ಪಿಯ ಸದಸ್ಯರೊಬ್ಬರು ತಿಳಿಸಿದ್ದಾರೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ತಮ್ಮ ನಾಲ್ವರು ಸಿಬ್ಬಂದಿಗೂ ಗಾಯಗಳಾಗಿವೆ ಎಂದು ಪೊಲೀಸರು ಹೇಳಿದ್ದಾರೆ.

ಈ ಘಟನೆಯ ನಂತರ, ಅಹಮದಾಬಾದ್ ಮೂಲದ ಹಕ್ಕುಗಳ ಸಂಘಟನೆಯಾದ ಅಲ್ಪಸಂಖ್ಯಾತ ಸಮನ್ವಯ ಸಮಿತಿಯು, ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದು ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನು ವಿಶ್ಲೇಷಿಸಲು ಮತ್ತು ಶಸ್ತ್ರಾಸ್ತ್ರಗಳನ್ನು ಹೊಂದಿರುವ ಯಾವುದೇ ವ್ಯಕ್ತಿಗಳನ್ನು ಬಂಧಿಸಲು ಪೊಲೀಸರಿಗೆ ಸ್ಪಷ್ಟವಾಗಿ ಕೇಳಿತ್ತು. ಈ ವೇಳ ಪ್ರಕಾಶ್ ಪಾಂಡ್ಯ ತಲವಾರು ಹಿಡಿದಿರುವುದು ಕಂಡು ಬಂದಿದ್ದು, ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: ರಾಮ ದೇವರಲ್ಲ, ಕಥೆಯಲ್ಲಿನ ಕಾಲ್ಪನಿಕ ಪಾತ್ರವಷ್ಟೆ: ಬಿಹಾರದ ಮಾಜಿ ಸಿಎಂ ಜಿತನ್ ರಾಮ್ ಮಾಂಜಿ

ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪೊಲೀಸರು 11 ಜನರನ್ನು ಬಂಧಿಸಿದ್ದು, 40 ಆರೋಪಿಗಳನ್ನು ಹೆಸರಿಸಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...