ಅಕ್ಟೋಬರ್ 28 ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗೆ ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ರಮೇಶ್ ಬಾಬು ಅವರನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿ ಅನುಮೋದನೆ ನೀಡಿದ್ದಾರೆ.
INC COMMUNIQUE
Important Notification regarding biennial election to the legislative council of Karnataka pic.twitter.com/MZEt2Xs0y0
— INC Sandesh (@INCSandesh) October 7, 2020
ಅಕ್ಟೋಬರ್ 4 ರಂದೆ ಕಾಂಗ್ರೆಸ್ ವಿಧಾನ ಪರಿಷತ್ ಚುನಾವಣೆಗೆ ತನ್ನ ಮೂರು ಅಭ್ಯರ್ಥಿಗಳ ಅಂತಿಮಗೊಳಿಸಿ, ಅಧ್ಯಕ್ಷ ಡಿಕೆ ಶಿವಕುಮಾರ್ ‘ಬಿ’ ಫಾರಂ ವಿತರಿಸಿದ್ದರು.
ಇದನ್ನೂ ನೋಡಿ: ಉಪಚುನಾವಣೆ: ಆರ್.ಆರ್ ನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಿ.ಕೆ.ರವಿ ಪತ್ನಿ ಕುಸುಮಾ-ಸಿದ್ದರಾಮಯ್ಯ
ಈಶಾನ್ಯ ಶಿಕ್ಷರ ಕ್ಷೇತ್ರಕ್ಕೆ ಶರಣಪ್ಪ ಮಟ್ಟೂರು, ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಪ್ರವೀಣ್ ಪೀಟರ್ ಹಾಗೂ ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಆರ್.ಎಮ್.ಕುಬೇರಪ್ಪ ಅವರಿಗೆ `ಬಿ’ ಫಾರಂ ವಿತರಣೆ ಮಾಡಲಾಗಿತ್ತು. ಆದರೆ ಆಗ್ನೇಯ ಪದವೀಧರರ ಸ್ಥಾನಕ್ಕೆ ಅಭ್ಯರ್ಥಿಯನ್ನು ಹೆಸರಿಸಿರಲಿಲ್ಲ.
ನಾಲ್ಕು ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಸಲು ಅ.8ಕ್ಕೆ ಕೊನೆಯ ದಿನವಾಗಿದ್ದು, ಅ.9 ಕ್ಕೆ ಉಮೇದುವಾರಿಕೆ ಪರಿಶೀಲನೆ ನಡೆಯಲಿದ್ದು, ಅ.12ಕ್ಕೆ ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ಚುನಾವಣೆಯು 28 ರ ಬೆಳಗ್ಗೆ 8 ರಿಂದ ಸಂಜೆ 5 ರ ವರೆಗೆ ನಡೆಯಲಿದೆ.
ವಿಡಿಯೋ ನೋಡಿ: ಭಾರತೀಯ ಸಂಸ್ಕೃತಿಯ ಅಧ್ಯಯನ: ವೈದಿಕಶಾಹಿ ಹೇರಿಕೆಯ ಹುನ್ನಾರವೇ?


