Homeಕರ್ನಾಟಕರಮೇಶ್ ಜಾರಕಿಹೊಳಿ ವಿರುದ್ಧದ ಸಾಲ ವಂಚನೆ ಪ್ರಕರಣದ ತನಿಖಾ ವರದಿ ಸಲ್ಲಿಸಿ - ಹೈಕೋರ್ಟ್

ರಮೇಶ್ ಜಾರಕಿಹೊಳಿ ವಿರುದ್ಧದ ಸಾಲ ವಂಚನೆ ಪ್ರಕರಣದ ತನಿಖಾ ವರದಿ ಸಲ್ಲಿಸಿ – ಹೈಕೋರ್ಟ್

- Advertisement -
- Advertisement -

ಸಕ್ಕರೆ ಕಾರ್ಖಾನೆಯ ಅಭಿವೃದ್ಧಿಗಾಗಿ ಪಡೆದಿರುವ ಸಾಲ ಮತ್ತು ಬಡ್ಡಿಯ ಹಣ ಸೇರಿ ಭರ್ತಿ 439 ಕೋಟಿ ರೂಪಾಯಿ ಪಾವತಿಸದೆ ವಂಚಿಸಿರುವ ಆರೋಪದ ಮೇಲೆ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ದಾಖಲಾಗಿರುವ ಸಾಲ ವಂಚನೆ ಪ್ರಕರಣದ ತನಿಖಾ ವರದಿಯನ್ನು ಸಲ್ಲಿಸುವಂತೆ ಕರ್ನಾಟಕ ಹೈಕೋರ್ಟ್ ಸೂಚಿಸಿದೆ. ರಮೇಶ್ ಜಾರಕಿಹೊಳಿ ವಿರುದ್ಧದ 

ತಮ್ಮ ವಿರುದ್ದದ ದೂರು ಮತ್ತು ಎಫ್‌ಐಆರ್‌ ರದ್ದುಪಡಿಸುವಂತೆ ಕೋರಿ ಬಿಜೆಪಿ ಶಾಸಕ ರಮೇಶ್‌ ಜಾರಕಿಹೊಳಿ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ನಡೆಸಿದೆ. ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿದ್ದು, ಇದುವರೆಗೆ ನಡೆಸಿರುವ ತನಿಖಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲು ಸೂಚಿಸಿದ್ದಾರೆ. ಅರ್ಜಿದಾರರು ತನಿಖೆಗೆ ಸಹಕರಿಸಬೇಕು ಎಂದು ಹೇಳಿರುವ ಕೋರ್ಟ್ ಮಧ್ಯಂತರ ಆದೇಶ ವಿಸ್ತರಣೆ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ವಿಚಾರಣೆಯನ್ನು ಡಿಸೆಂಬರ್ 19ಕ್ಕೆ ಮುಂದೂಡಲಾಗಿದೆ. ಈ ಹಿಂದೆ ಮುಂದಿನ ವಿಚಾರಣೆವರೆಗೂ ರಮೇಶ್‌ ಜಾರಕಿಹೊಳಿ ವಿರುದ್ಧ ಯಾವುದೇ ಕ್ರಮ ಬೇಡ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿತ್ತು.

ವಿಚಾರಣೆ ವೇಳೆ ರಮೇಶ್‌ ಜಾರಕಿಹೊಳಿ ವಿರುದ್ಧದ ತನಿಖೆಗೆ ತಡೆಯಾಜ್ಞೆ ನೀಡಬೇಕು ಎಂದು ಹಿರಿಯ ವಕೀಲ ರವಿ ಬಿ. ನಾಯಕ್‌ ಕೋರಿದ್ದರು. ಹಾಗೆಯೇ ಅರ್ಜಿದಾರರನ್ನು ತನಿಖೆಗೆ ಸಹಕರಿಸಲು ಸೂಚಿಸಬೇಕು ಎಂದು ಹೆಚ್ಚುವರಿ ರಾಜ್ಯ ಸರ್ಕಾರಿ ಅಭಿಯೋಜಕ ಬಿ ಎನ್‌ ಜಗದೀಶ್‌ ಕೋರಿದ್ದಾರೆ.

ಸೌಭಾಗ್ಯಲಕ್ಷ್ಮಿ ಶುಗರ್ಸ್‌ ಲಿಮಿಟೆಡ್‌ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ರಮೇಶ್‌ ಜಾರಕಿಹೊಳಿ ಹಾಗೂ ಮತ್ತಿಬ್ಬರು ನಿರ್ದೇಶಕರಾಗಿದ್ದ ವಸಂತ್‌ ಪಾಟೀಲ್‌ ಮತ್ತು ಶಂಕರ್‌ ಪವಾಡೆ ಅವರು ಬೆಂಗಳೂರಿನ ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್‌ ಬ್ಯಾಂಕ್‌ ಲಿಮಿಟೆಡ್‌ಗೆ 439 ಕೋಟಿ ಸಾಲ ಮರು ಪಾವತಿ ಮಾಡದೆ ವಂಚಿಸಿದ್ದಾರೆ ಎಂದು ಆರೋಪಿಸಲಾಗಿದೆ. ರಮೇಶ್ ಜಾರಕಿಹೊಳಿ ವಿರುದ್ಧದ 

ಇದನ್ನೂ ಓದಿ: ಟೆಕ್ಕಿ ಆತ್ಮಹತ್ಯೆ ಪ್ರಕರಣ: ‘ನನ್ನನ್ನು ಮೃಗದಂತೆ ನಡೆಸಿಕೊಂಡರು..’ ಎಂದು ಪತಿ ವಿರುದ್ಧ ದೂರು ನೀಡಿದ್ದ ಪತ್ನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...