Homeಕರ್ನಾಟಕರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ನನಗೆ ರಕ್ಷಣೆ ಕೊಡಿ ಎಂದ ಯುವತಿ - ವೀಡಿಯೋ ವೈರಲ್

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ನನಗೆ ರಕ್ಷಣೆ ಕೊಡಿ ಎಂದ ಯುವತಿ – ವೀಡಿಯೋ ವೈರಲ್

- Advertisement -
- Advertisement -

“ಮಾಜಿ ಸಚಿವ ರಮೇಶ್ ಜಾರಕಿಹೊಳಿಯವರದ್ದು ಎನ್ನಲಾಗುವ ಅಶ್ಲೀಲ ವೀಡಿಯೋದಲ್ಲಿರುವ ಸಂತ್ರಸ್ತೆ ತಾನು” ಎಂದು ಹೇಳಿಕೊಂಡಿರುವ ಯುವತಿಯೊಬ್ಬರ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಇದರಲ್ಲಿ ಆಕೆ ತನಗೆ ರಕ್ಷಣೆಯಿಲ್ಲವೆಂದೂ, ಈ ಘಟನೆ ನಡೆದಿದೆ ಎಂದೂ ಭಾಗಶಃ ಒಪ್ಪಿಕೊಂಡಿದ್ದಾರೆ.

ಈ ವೀಡಿಯೋದಲ್ಲಿ ಮಾತನಾಡಿರುವ ಯುವತಿ, “ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ನಾನು ಇಷ್ಟೇ ಕೇಳಿಕೊಳ್ಳುವುದು. ಈ ವಿಡಿಯೋ ಹೇಗೆ ಮಾಡಿದ್ರೂ ಎಂಬುದು ನನಗೆ ಗೊತ್ತಿಲ್ಲ. ಈಗಾಗಲೇ ನನ್ನ ಮಾನ ಹರಾಜಾಗಿದೆ. ನಮ್ಮ ಮನೆ ಹತ್ತಿರ ಬಂದು ಜನಗಳು ಕೇಳಿಕೊಂಡು ಹೋಗುತ್ತಿದ್ದಾರೆ. ಈಗಾಗಲೇ ನಮ್ಮ ಅಪ್ಪ-ಅಮ್ಮ ಎರಡು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ನಾನು ಮೂರ್ನಾಲ್ಕು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದೇನೆ. ನಮ್ಮ ಹಿಂದೆ ಯಾರೂ ಇಲ್ಲ. ಪೊಲಿಟಿಕಲ್ ಸಪೋರ್ಟ್ ಅದು ಇದು ಏನೂ ಇಲ್ಲ. ರಮೇಶ್ ಜಾರಕಿಹೊಳಿ ಅವರೇ ನನಗೆ ಕೆಲಸ ಕೊಡಿಸುತ್ತೇನೆ ಅಂತ ಹೇಳಿದ್ರು. ಅದೆಲ್ಲಾ ಮಾಡಿ ಈಗ ವಿಡಿಯೋನು ಈಚೆ ಬಿಡ್ತಾ ಇದ್ದಾರೆ. ಇದೆಲ್ಲಾ ಹೇಗಾಯ್ತು, ಏನು ಅನ್ನೋದು ನನಗೆ ಗೊತ್ತಿಲ್ಲ. ನನಗೆ ಯಾವುದೇ ತರವಾದ ರಕ್ಷಣೆ ಇಲ್ಲ. ನಾನು ಇಷ್ಟೇ ಕೇಳಿಕೊಳ್ಳೋದು ನನಗೆ ರಕ್ಷಣೆ ಕೊಡಿ” ಎಂದು ವಿಡಿಯೋ ಮೂಲಕ ಮನವಿ ಮಾಡಿಕೊಂಡಿದ್ದಾರೆ.

ರಾಜ್ಯದೆಲ್ಲೆಡೆ ಸಂಚಲನ ಮೂಡಿಸಿದ್ದ ಸಿಡಿ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ರಮೇಶ್ ಜಾರಕಿಹೊಳಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನಂತರ “ಇದೊಂದು ನಕಲಿ ಸಿಡಿ, ಬ್ಲಾಕ್​ ಮೇಲ್, ರಾಜಕೀಯ ದುರುದ್ದೇಶದಿಂದ ಹೀಗೆ ಮಾಡಿದ್ದಾರೆ” ಎಂದು ರಮೇಶ್ ಜಾರಕಿಹೊಳಿ ಆರೋಪ ಮಾಡಿದ್ದರು. ಆನಂತರ ರಾಜ್ಯ ಸರ್ಕಾರ ಈ ಪ್ರಕರಣ ತನಿಖೆಗೆ ವಿಶೇಷ ತನಿಖೆ ತಂಡ ರಚನೆ ಮಾಡಿದೆ.

ಆದರೆ ಅಧಿಕೃತವಾಗಿ ಯಾವುದೆ ಎಫ್‌ಐಆರ್ ದಾಖಲಿಸಲಾಗಿರುವುದಿಲ್ಲ. ವೀಡಿಯೋದಲ್ಲಿರುವ ಸಂತ್ರಸ್ತೆ ಬಲಿಪಶುವೇ ಅಥವಾ ಆರೋಪಿಯೇ ಎಂಬುದನ್ನೂ ತನಿಖೆ ಮಾಡಲು ಸರ್ಕಾರ ಆಸ್ಥೆ ವಹಿಸಿರುವುದಿಲ್ಲ. ಬದಲಿಗೆ ದೂರು ದಾಖಲಿಸಿದ ದಿನೇಶ್ ಅವರಿಗೇ ನೋಟಿಸ್ ನೀಡಿದೆ ಎಂಬ ಆರೋಪ ಕೇಳಿ ಬಂದಿದೆ. ಸಿಡಿ ಮಾಡಿದವರು ಯಾರು ಎಂಬುದನ್ನು ಹುಡುಕುವುದೇ ಸರ್ಕಾರದ ಉದ್ದೇಶವಾಗಿದೆ ಎಂಬ ಆರೋಪ ಕೇಳಿ ಬಂದಿದೆ.

ಇದನ್ನೂ ಓದಿ: ಕಾನೂನು ಎಲ್ಲರಿಗೂ ಒಂದೇ..! “ಸಾಹುಕಾರ್” ಹೊರತುಪಡಿಸಿ..! – ಅನನ್ಯ ಬೆಂಗಳೂರು

ಎಸ್​ಐಟಿ ರಚನೆಯಾದ ಬಳಿಕ ರಮೇಶ್ ಜಾರಕಿಹೊಳಿ ತಮ್ಮ ಆಪ್ತರ ಮೂಲಕ ಇಂದು (ಮಾ.13) ಸದಾಶಿವನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ರಮೇಶ್ ಜಾರಕಿಹೊಳಿ ಪರವಾಗಿ ನೆಲಮಂಗಲದ ಮಾಜಿ ಶಾಸಕ ನಾಗರಾಜ್ ಸದಾಶಿವನಗರದಲ್ಲಿ ದೂರು ದಾಖಲಿಸಿದ್ದಾರೆ.

ಸಿಡಿ ಬಿಡುಗಡೆಯಿಂದ ಮಾನಹಾನಿಯಾಗಿದೆ. ರಾಜಕೀಯ ಷಡ್ಯಂತ್ರ ರೂಪಿಸಲಾಗಿದೆ. ಬ್ಲಾಕ್ ಮೇಲ್ ಮಾಡಲಾಗಿದೆ. ಎಸ್ಐಟಿ ರಚನೆಯಾಗಿದೆ, ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳಲು ದೂರು ನೀಡಲಾಗಿದೆ. ರಾಜಕೀಯವಾಗಿ ಮುಗಿಸಲು, ಹಣ ವಸೂಲಿ ಮಾಡಲು, ರಾಜಕೀಯ ತೇಜೊವಧೆ ಮಾಡಲು ಷಡ್ಯಂತ್ರ ರೂಪಿಸಲಾಗಿದೆ. ಸುಮಾರು 3 ತಿಂಗಳಿಂದ ಸದಾಶಿವನಗರದಲ್ಲಿ ನನ್ನ ವಿರುದ್ಧ ಮಸಲತ್ತು ಮತ್ತು ಮೋಸ ಮಾಡಿ ನಕಲಿ ಸಿಡಿ ಸೃಷ್ಟಿಸಲಾಗಿದೆ. ಯಾರ ಹೆಸರಿನಲ್ಲೂ ದೂರು ಕೊಟ್ಟಿಲ್ಲ. ಅಪರಿಚಿತ ವ್ಯಕ್ತಿಗಳ ವಿರುದ್ಧ ದೂರು ನೀಡಲಾಗಿದೆ. ರಮೇಶ್ ಜಾರಕಿಹೊಳಿ ದೂರಿನ ಮೇರೆಗೆ ಐಪಿಸಿ ಸೆಕ್ಷನ್ 120B, 385, 465, 469 ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ.

ಇದಾದ ಕೆಲವೇ ಗಂಟೆಗಳ ನಂತರ ವೀಡಿಯೋದಲ್ಲಿರುವ ಸಂತ್ರಸ್ತೆ ಎಂದು ಹೇಳಿಕೊಂಡಿರುವ ಯುವತಿಯ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ.

ಈ ಸಿಡಿ ಪ್ರಕರಣದಲ್ಲಿ ಪ್ರಮುಖ ದೂರುದಾರರಾಗಿರುವ ದಿನೇಶ್ ಕಲ್ಲಹಳ್ಳಿಯವರು ದೂರು ನೀಡಿದ ನಂತರ, ಅಧಿಕೃತವಾಗಿ ಎಫ್‌ಐಆರ್ ದಾಖಲಿಸಿ ಅದನ್ನು ತನಿಖೆ ನಡೆಸಲು ಹಿಂದೇಟು ಹಾಕುತ್ತಿರುವ ಸರ್ಕಾರ ಈಗ ರಮೇಶ್ ಜಾರಕಿಹೊಳಿಯವರ ದೂರಿಗೆ ಎಫ್‌ಐಆರ್ ದಾಖಲಿಸಿದೆ. ಈ ಸಂದರ್ಭದಲ್ಲಿ ಸಂತ್ರಸ್ತ ಯುವತಿಯ ಈ ವೀಡಿಯೋ ವೈರಲ್ ಆಗುತ್ತಿದ್ದು, ಈ ಪ್ರಕರಣದಲ್ಲಿ ಮತ್ತೊಂದು ಮಹತ್ವದ ತಿರುವು ಸಿಕ್ಕಿದೆ.


ಇದನ್ನೂ ಓದಿ: ರೈತ ಹೋರಾಟ ಸರ್ಕಾರದ ವಿರುದ್ಧವೂ ಅಲ್ಲ ಕಾಂಗ್ರೆಸ್‌ನ ಪರವೂ ಅಲ್ಲ: ಚುಕ್ಕಿ ನಂಜುಂಡಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...