Homeಕರ್ನಾಟಕಸಿಡಿ ಪ್ರಕರಣ: SIT ತನಿಖಾ ವರದಿಗೆ ಸುಪ್ರೀಂಕೋರ್ಟ್ ತಡೆ, ರಮೇಶ್‌ ಜಾರಕಿಹೊಳಿಗೆ ಮತ್ತೆ ಸಂಕಷ್ಟ

ಸಿಡಿ ಪ್ರಕರಣ: SIT ತನಿಖಾ ವರದಿಗೆ ಸುಪ್ರೀಂಕೋರ್ಟ್ ತಡೆ, ರಮೇಶ್‌ ಜಾರಕಿಹೊಳಿಗೆ ಮತ್ತೆ ಸಂಕಷ್ಟ

- Advertisement -
- Advertisement -

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ವಿರುದ್ಧದ ಅಶ್ಲೀಲ ಸಿಡಿ ಪ್ರಕರಣದ ತನಿಖೆ ನಡೆಸಿದ್ದ ವಿಶೇಷ ತನಿಖಾ ತಂಡ (ಎಸ್‌ಐಟಿ) ಸಲ್ಲಿಸಿದ್ದ ತನಿಖಾ ವರದಿಗೆ ಸುಪ್ರೀಂಕೋರ್ಟ್ ತಡೆ ನೀಡಿದೆ. ಇದರಿಂದ ಎಸ್‌ಐಟಿಯಿಂದ ಕ್ಲೀನ್ ಚಿಟ್ ಪಡೆದಿದ್ದ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿಗೆ ಮತ್ತೆ ಸಂಕಷ್ಟ ಎದುರಾಗಿದೆ.

ಎಸ್‌ಐಟಿ ತನಿಖಾ ವರದಿಯನ್ನು ವಿಚಾರಣಾಧೀನ ನ್ಯಾಯಾಲಯಕ್ಕೆ ಸಲ್ಲಿಸಲು ಕರ್ನಾಟಕ ಹೈಕೋರ್ಟ್ ಫೆ. 3ರಂದು ನೀಡಿದ್ದ ಮಧ್ಯಂತರ ಆದೇಶಕ್ಕೆ ತಡೆ ನೀಡುವಂತೆ ಸಂತ್ರಸ್ತೆಯು ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು.

ಹೀಗಾಗಿ ಸಂತ್ರಸ್ತೆ ಸಲ್ಲಿಸಿದ್ದ, ಹೈಕೋರ್ಟ್‌ನಲ್ಲಿ ವಿಲೇವಾರಿಗೆ ಬಾಕಿ ಇರುವ ಎಸ್ಐಟಿ ರಚನೆಯ ನ್ಯಾಯಬದ್ಧತೆ ಹಾಗೂ ತನಿಖೆಯ ಸಿಂಧುತ್ವ ಕುರಿತಾದ ಆಕ್ಷೇಪಣಾ ಅರ್ಜಿ ಇತ್ಯರ್ಥ ಆಗುವವರೆಗೂ, ಎಸ್ಐಟಿ ತನಿಖಾ ವರದಿಗೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ.

ಇದನ್ನೂ ಓದಿ: ಸದ್ದಿಲ್ಲದೆ ಮುಸ್ಲಿಂ ವಿದ್ಯಾರ್ಥಿಗಳ ಡಾಟಾ ಸಂಗ್ರಹಿಸುತ್ತಿರುವ ರಾಜ್ಯ ಸರ್ಕಾರ!

ಪ್ರಕರಣದ ತನಿಖೆ ನಡೆಸಿದ ವಿಶೇಷ ತನಿಖಾ ತಂಡ (ಎಸ್‌ಐಟಿ), ತನಿಖೆಯಲ್ಲಿ ರಮೇಶ್ ಜಾರಕಿಹೊಳಿ ವಿರುದ್ಧ ಯಾವುದೇ ಸಾಕ್ಷ್ಯಗಳು ಪತ್ತೆಯಾಗಿಲ್ಲ ಎಂದು ಹೇಳಿದ್ದರು.  ತನಿಖಾಧಿಕಾರಿ ಎಸಿಪಿ ಕವಿತಾ 150 ಪುಟಗಳ ತನಿಖಾ ವರದಿಯನ್ನು 1ನೇ ಎಸಿಎಂಎಂ ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಪ್ರಕರಣದಲ್ಲಿ ಸಂತ್ರಸ್ತೆ ರಮೇಶ್ ಜಾರಕಿಹೊಳಿ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಿದ್ದರು. ಎಸ್‌ಐಟಿ ಅಧಿಕಾರಿಗಳು, ತನಿಖೆಯ ಸಮಯದಲ್ಲಿ ಇದು ಲೈಂಗಿಕ ದೌರ್ಜನ್ಯದ ಪ್ರಕರಣ ಎಂದು ಸಾಬೀತುಪಡಿಸಲು ಯಾವುದೇ ಸೂಕ್ತ ಸಾಕ್ಷ್ಯಾಧಾರಗಳಿಲ್ಲ. ಇಬ್ಬರೂ ಸಮ್ಮತಿ ಮೇರೆಗೆ ಲೈಂಗಿಕ ಸಂಪರ್ಕ ಹೊಂದಿದ್ದಾರೆ.  ಹೀಗಾಗಿ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಲಾಗಿದೆ ಎಂದಿದ್ದರು.


ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಲೈಂಗಿಕ ದೌರ್ಜನ್ಯ ನಡೆದಿರುವುದಕ್ಕೆ ಸಾಕ್ಷ್ಯವಿಲ್ಲ-ಎಸ್‌ಐಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಡಿಶಾ | ಆಸ್ಪತ್ರೆಯಲ್ಲಿ ಬೆಂಕಿ ಅವಘಡ : 10 ಮಂದಿ ಸಾವು

ಒಡಿಶಾದ ಕಟಕ್‌ನಲ್ಲಿರುವ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಟ್ರಾಮಾ ಕೇರ್ ಐಸಿಯುನಲ್ಲಿ ಸೋಮವಾರ (ಮಾರ್ಚ್ 16) ಬೆಂಕಿ ಅವಘಡ ಸಂಭವಿಸಿದ್ದು, ಕನಿಷ್ಠ 10 ರೋಗಿಗಳು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು...

ಆಸ್ಕರ್‌ 2026 : ಮೈಕೆಲ್ ಬಿ. ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ, ಒನ್ ಬ್ಯಾಟಲ್ ಆಫ್ಟರ್ ಅನದರ್‌ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ

ಪ್ರತಿಷ್ಠಿತ 98ನೇ ಅಕಾಡೆಮಿ ಪ್ರಶಸ್ತಿ (ಆಸ್ಕರ್ 2026) ಸಮಾರಂಭ ಲಾಸ್ ಏಂಜಲೀಸ್‌ನ ಡಾಲ್ಬಿ ಥಿಯೇಟರ್‌ನಲ್ಲಿ ಮಾರ್ಚ್ 15ರಂದು (ಭಾರತೀಯ ಕಾಲಮಾನ ಮಾರ್ಚ್ 16) ನಡೆಯಿತು. ಖ್ಯಾತ ಹಾಸ್ಯನಟ ಕೋನನ್ ಒಬ್ರೇನ್ ಅವರು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು....

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...