Homeಕರ್ನಾಟಕರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಲೈಂಗಿಕ ದೌರ್ಜನ್ಯ ನಡೆದಿರುವುದಕ್ಕೆ ಸಾಕ್ಷ್ಯವಿಲ್ಲ-ಎಸ್‌ಐಟಿ

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಲೈಂಗಿಕ ದೌರ್ಜನ್ಯ ನಡೆದಿರುವುದಕ್ಕೆ ಸಾಕ್ಷ್ಯವಿಲ್ಲ-ಎಸ್‌ಐಟಿ

- Advertisement -
- Advertisement -

ರಾಜ್ಯ ರಾಜಕೀಯದಲ್ಲಿ ಕೋಲಾಹಲಕ್ಕೆ ಕಾರಣವಾಗಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ವಿರುದ್ಧದ ಅಶ್ಲೀಲ ಸಿಡಿ ಪ್ರಕರಣದಲ್ಲಿ ಎಸ್‌ಐಟಿ ಬಿ ರಿಪೋರ್ಟ್ ಸಲ್ಲಿಸಿದೆ. ಪ್ರಕರಣದ ತನಿಖೆ ನಡೆಸಿದ ವಿಶೇಷ ತನಿಖಾ ತಂಡ (ಎಸ್‌ಐಟಿ) ಶುಕ್ರವಾರ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದು, ತನಿಖೆಯಲ್ಲಿ ಅವರ ವಿರುದ್ಧ ಯಾವುದೇ ಸಾಕ್ಷ್ಯಗಳು ಪತ್ತೆಯಾಗಿಲ್ಲ ಎಂದು ಹೇಳಿದ್ದಾರೆ.

ಪ್ರಕರಣದಲ್ಲಿ ಸಂತ್ರಸ್ತೆ ರಮೇಶ್ ಜಾರಕಿಹೊಳಿ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಿದ್ದರು. ತನಿಖಾ ಅಧಿಕಾರಿಗಳು ವರದಿಯಲ್ಲಿ  ‘ಒಮ್ಮತದ’ ಲೈಂಗಿಕ ಸಂಪರ್ಕ ನಡೆದಿದೆ. ಇಲ್ಲಿ ಲೈಂಗಿಕ ದೌರ್ಜನ್ಯದ ಪ್ರಶ್ನೆಯಿಲ್ಲ ಎಂದು ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.

ಹೈಕೋರ್ಟ್ ಆದೇಶದ ಹಿನ್ನೆಲೆ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಲಾಗಿದೆ. ತನಿಖಾಧಿಕಾರಿ ಎಸಿಪಿ ಕವಿತಾ 150 ಪುಟಗಳ ತನಿಖಾ ವರದಿಯನ್ನು 1ನೇ ಎಸಿಎಂಎಂ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

ಇದನ್ನೂ ಓದಿ: ನಟಿಯ ಬಗ್ಗೆ ಅವಹೇಳನಾಕಾರಿ ಪ್ರಶ್ನೆ ಕೇಳಿದ ಪತ್ರಕರ್ತ: ಇದು ಮಹಿಳೆಯರ ಮೇಲೆ ಆತನಿಗಿರುವ ಗೌರವ ವ್ಯಕ್ತಪಡಿಸುತ್ತದೆ ಎಂದ ನಟಿ

ಹಿರಿಯ ಪೊಲೀಸ್ ಅಧಿಕಾರಿಯೊಬ್ಬರನ್ನು ಉಲ್ಲೇಖಿಸಿರುವ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌, “ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ನ್ಯಾಯಾಲಯಕ್ಕೆ ಅಂತಿಮ ವರದಿಯನ್ನು ಸಲ್ಲಿಸಲಾಗಿದೆ. ಸಂತ್ರಸ್ತೆ ಪ್ರಕರಣವನ್ನು ಉನ್ನತ ನ್ಯಾಯಾಲಯದಲ್ಲಿ ಪ್ರಶ್ನಿಸಬಹುದು” ಎಂದು  ಹೇಳಿದ್ದಾರೆ.

ಎಸ್‌ಐಟಿ ಅಧಿಕಾರಿಗಳ ಪ್ರಕಾರ, ತನಿಖೆಯ ಸಮಯದಲ್ಲಿ ಇದು ಲೈಂಗಿಕ ದೌರ್ಜನ್ಯದ ಪ್ರಕರಣ ಎಂದು ಸಾಬೀತುಪಡಿಸಲು ಯಾವುದೇ ಸೂಕ್ತ ಸಾಕ್ಷ್ಯಾಧಾರಗಳಿಲ್ಲ. ಇಬ್ಬರೂ ಸಮ್ಮತಿ ಮೇರೆಗೆ ಲೈಂಗಿಕ ಸಂಪರ್ಕ ಹೊಂದಿದ್ದಾರೆ.  ಹೀಗಾಗಿ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಲಾಗಿದೆ.

ಯುವತಿ ಸಲ್ಲಿಸಿರುವ ದೂರಿನ ಆಧಾರದ ಮೇಲೆ ಕಬ್ಬನ್ ಪಾರ್ಕ್ ಪೊಲೀಸರು ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಲು ಕರ್ನಾಟಕ ಹೈಕೋರ್ಟ್ ಗುರುವಾರ ಎಸ್‌ಐಟಿಗೆ ಅನುಮತಿ ನೀಡಿತ್ತು.


ಇದನ್ನೂ ಓದಿ: ಜಾರಕಿಹೊಳಿ ಲೈಂಗಿಕ ಸಿಡಿ ಹಗರಣ: ಬಂಧನದ ಭೀತಿಯಲ್ಲಿ ಅತ್ಯಾಚಾರ ಸಂತ್ರಸ್ತೆ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಸಿದ್ದರಾಮಯ್ಯ ಸರ್ಕಾರ ಮುಸ್ಲಿಮರನ್ನು ಒಬಿಸಿ ಪಟ್ಟಿಗೆ ಸೇರಿಸಿದ್ದು ನಿಜಾನಾ?

0
ಕರ್ನಾಟಕದಲ್ಲಿ ಮುಸ್ಲಿಮರನ್ನು ಹಿಂದುಳಿದ ವರ್ಗಕ್ಕೆ ಸೇರಿಸುವ ಮೂಲಕ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದುಳಿದ ವರ್ಗಗಳ 36 ಜಾತಿಗಳಿಗೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ. ಸಿದ್ದರಾಮಯ್ಯ ಸರ್ಕಾರ ಹಿಂದುಳಿದ ವರ್ಗಗಳಿಗೆ...