Homeಕರ್ನಾಟಕರಮೇಶ್ ಜಾರಕಿಹೊಳಿಗೆ ಕೊರೊನಾ ಎಂದ ಭೈರತಿ ಬಸವರಾಜ್, ಎಸ್‌ಐಟಿ ವಿಚಾರಣೆಗೆ ಗೈರು ಸಾಧ್ಯತೆ

ರಮೇಶ್ ಜಾರಕಿಹೊಳಿಗೆ ಕೊರೊನಾ ಎಂದ ಭೈರತಿ ಬಸವರಾಜ್, ಎಸ್‌ಐಟಿ ವಿಚಾರಣೆಗೆ ಗೈರು ಸಾಧ್ಯತೆ

- Advertisement -
- Advertisement -

ಸಿಡಿ ಪ್ರಕರಣದ ಆರೋಪಿ ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಕೊರೊನಾ ಪಾಸಿಟಿವ್ ಆಗಿದೆ ಎಂದು ಸಚಿವ ಭೈರತಿ ಬಸವರಾಜ್ ಹೇಳಿದ್ದಾರೆ. ರಮೇಶ್ ಜಾರಕಿಹೊಳಿ ಹುಷಾರಾಗಿ ಚುನಾವಣಾ ಪ್ರಚಾರಕ್ಕೆ ಬರುತ್ತಾರೆ ಎಂದು ಹೇಳಿದ್ದಾರೆ.

ರಮೇಶ್ ಜಾರಕಿಹೊಳಿ ಎಲ್ಲೂ ಹೊಗಿಲ್ಲ, ಅವರು ಬೆಂಗಳೂರಿನಲ್ಲೇ ಇದ್ದಾರೆ. ಪ್ರಚಾರಕ್ಕೆ ಕರೆಯಲು ಫೋನ್ ಮಾಡಿದ ವೇಳೆ ಕೊರೊನಾ ಪಾಸಿಟಿವ್ ಬಂದಿರುವುದಾಗಿ ತಿಳಿಸಿದ್ದಾರೆ. ಚಿಕಿತ್ಸೆ ಪಡೆದ ನಂತರ ಪ್ರಚಾರಕ್ಕೆ ಬರುತ್ತಾರೆ ಎಂದಿದ್ದಾರೆ.

ಇನ್ನೆರಡು ದಿನಗಳಲ್ಲಿ ಬಾಲಚಂದ್ರ ಜಾರಕಿಹೊಳಿ‌ ಚುನಾವಣಾ ಪ್ರಚಾರದ ಆಖಾಡಕ್ಕೆ ಇಳಿಯಲಿದ್ದಾರೆ. ಚುನಾವಣಾ ಪ್ರಚಾರ ಕುರಿತು ರಮೇಶ್ ಜಾರಕಿಹೊಳಿ ಮತ್ತು ಬಾಲಚಂದ್ರ ಜಾರಕಿಹೊಳಿ ಜೊತೆ ನಿನ್ನೆ ಫೋನ್‌ನಲ್ಲಿ ಮಾತನಾಡಿದ್ದೇನೆ ಎಂದು ಭೈರತಿ ಬಸವರಾಜ್ ಹೇಳಿದ್ದಾರೆ.

ಇದನ್ನೂ ಓದಿ: ಸಿಡಿ ಪ್ರಕರಣ: ನಗರ ಪೊಲೀಸ್ ಆಯುಕ್ತ ಕಮಲ್ ಪಂತ್‌ಗೆ ಪತ್ರ ಬರೆದ ಸಂತ್ರಸ್ತೆ

ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೂ ಕೂಡ ರಮೇಶ್ ಜಾರಕಿಹೊಳಿ ಹಾಜರಾಗಿಲ್ಲ. ಶುಕ್ರವಾರ (ಏಪ್ರಿಲ್ 2) ವಿಶೇಷ ತನಿಖಾ ತಂಡದ ಮುಂದೆ ವಿಚಾರಣೆಗೆ ಹಾಜರಾಗಬೇಕಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಆರೋಗ್ಯ ಸಮಸ್ಯೆಯ ನೆಪ ಹೇಳಿ ತಪ್ಪಿಸಿಕೊಂಡಿದ್ದರು. ಪ್ರಕರಣದ ಬಗ್ಗೆ ಸಂತ್ರಸ್ತ ಯುವತಿ ಪ್ರತ್ಯಕ್ಷವಾಗಿ ಹೇಳಿಕೆ ನೀಡಿದ ನಂತರ ಮಾಜಿ ಸಚಿವರಿಗೆ ಬಂಧನದ ಭೀತಿ ಶುರುವಾಗಿದೆ ಎನ್ನಲಾಗಿತ್ತು.

ವಕೀಲರ ಮೂಲಕ ಎರಡು ದಿನಗಳ ಗಡುವು ಕೇಳಿದ್ದರು. ಸೋಮವಾರ (ಏಪ್ರಿಲ್ 5) ರಂದು ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ನೊಟೀಸ್ ನೀಡಿತ್ತು. ಈಗ ಕೊರೊನಾ ಸೋಂಕು ಬಂದಿದೆ ಎಂದು ಹೇಳಲಾಗುತ್ತಿದ್ದು ವಿಚಾರಣೆಗೆ ಇಂದು ಕೂಡ ಗೈರಾಗುವ ಸಾಧ್ಯತೆಯಿದೆ.


ಇದನ್ನೂ ಓದಿ: ‘ದೀದಿ, ಬಂಗಾಳ ಮುಗೀತು, ವಾರಣಾಸಿಗೆ ಬನ್ನಿ’: ಮಮತಾ ವಿರುದ್ಧ ಪ್ರಧಾನಿಯ ಕೊಂಕು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

2023ರಲ್ಲಿ ತೀವ್ರ ಹಸಿವಿನಿಂದ ತತ್ತರಿಸಿದ 282 ಮಿಲಿಯನ್ ಜನರು: ಆಹಾರದ ಅಭಾವಕ್ಕೆ ವಿಶ್ವಸಂಸ್ಥೆ ಉಲ್ಲೇಖಿಸಿದ...

0
ಕಳೆದ ವರ್ಷ ಪ್ರಪಂಚದಾದ್ಯಂತ ಆಹಾರ ಅಭದ್ರತೆ ಸ್ಥಿತಿ ಭಾರೀ ಹದಗೆಟ್ಟಿದೆ, 2023ರಲ್ಲಿ ಸುಮಾರು 282 ಮಿಲಿಯನ್ ಜನರು ತೀವ್ರ ಹಸಿವಿನಿಂದ ಬಳಲಿದ್ದಾರೆ, ಇದರಲ್ಲಿ ವಿಶೇಷವಾಗಿ ಯುದ್ಧಪೀಡಿತ ಗಾಝಾ ಮತ್ತು ಸುಡಾನ್‌ನಲ್ಲಿ ಹೆಚ್ಚಿನ ಜನರು...