Homeಕರ್ನಾಟಕರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣ: ಬಿಜೆಪಿಯ ಪಿತೂರಿ ಎಂದ ಸಚಿವ ಮಂಕಾಳ ವೈದ್ಯ

ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣ: ಬಿಜೆಪಿಯ ಪಿತೂರಿ ಎಂದ ಸಚಿವ ಮಂಕಾಳ ವೈದ್ಯ

- Advertisement -
- Advertisement -

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಪೋಟವು ಬಿಜೆಪಿಯ ರಾಜಕೀಯ ಪಿತೂರಿ ಎಂದು ಮೀನುಗಾರಿಕಾ ಸಚಿವ ಮಂಕಾಳ ವೈದ್ಯ ಆರೋಪಿಸಿದ್ದಾರೆ.

ಬಾಂಬ್‌ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಸಚಿವ ಮಂಕಾಳ ವೈದ್ಯ, ಇದು ಬೇರೆ ಏನು ಅಲ್ಲ, ಚುನಾವಣೆಗಾಗಿ ಬಿಜೆಪಿಯವರೇ ಮಾಡಿದ ಒಂದು ಪಿತೂರಿಯಾಗಿದೆ. ಚುನಾವಣೆ ಸಮೀಪವಾಗುತ್ತಿದ್ದಂತೆ ಬಿಜೆಪಿಯವರು ಏನು ಬೇಕಾದರೂ ಮಾಡುತ್ತಾರೆ ಎಂದು ದೂರಿದ್ದಾರೆ.

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟ ಮಾಡಿಸಿದವರು ಯಾರು ಎಂದು ಇಡೀ ವಿಶ್ವಕ್ಕೆ ತಿಳಿದ ವಿಚಾರ. ಆದರೆ ಇದಕ್ಕೆ ಯಾರೂ ಆತಂಕ ಪಡಬೇಕಾಗಿಲ್ಲ. ಈ ಕೃತ್ಯ ಯಾರು ಎಸಗಿದ್ದರೂ ಅವರ ವಿರುದ್ಧ ನಮ್ಮ ರಾಜ್ಯ ಸರ್ಕಾರವು ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಭರವಸೆ ನೀಡಿದರು.

ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟವನ್ನು ಬಿಜೆಪಿಯವರೇ ಮಾಡಿಸಿದ್ದಾರಾ ಎಂಬ ಪ್ರಶ್ನೆಗೆ ಉತ್ತರಿಸಿದ  ಮೀನುಗಾರಿಕಾ ಸಚಿವ ಮಂಕಾಳು ವೈದ್ಯ ಬಿಜೆಪಿಯವರು ಈವರೆಗೆ ನಡೆದ ಚುನಾವಣೆಗೂ ಮುನ್ನ ಯಾವುದರಲ್ಲಿ ಅಭಿವೃದ್ಧಿ ಪರವಾಗಿ ಮಾತನಾಡಿದ್ದಾರೆ? ಬಡವರ ಪರವಾಗಿ ಎಲ್ಲಿ ಮಾತನಾಡಿದ್ದಾರೆ? ಅವರು ಬರೀ ಇಂತದ್ದೆ ಮಾಡಿ ಚುನಾವಣೆಯನ್ನು ಎದುರಿಸೋದು ಅಲ್ವ ಎಂದು ಹೇಳಿದ್ದಾರೆ.

ಚುನಾವಣೆ ವೇಳೆ ಮತದಾರರ ಗಮನವನ್ನು ಸೆಳೆಯಲು ಒಂದೊಂದು ಪಕ್ಷ ಒಂದೊಂದು ಮಾರ್ಗ ಹುಡುಕುತ್ತೆ. ಯಾವ ಪಕ್ಷದವರು ಚುನಾವಣಾ ಪ್ರಚಾರಕ್ಕಾಗಿ ಏನು ಮಾಡುತ್ತಾರೆ ಅನ್ನೋದು ನಮಗೇನು ಗೊತ್ತಿಲ್ಲ, ಅದು ಎಲ್ಲರಿಗೂ ಗೊತ್ತಿದೆ ಎಂದು ಸಚಿವರು ಹೇಳಿದ್ದಾರೆ.

ಬಿಜೆಪಿಯವರು ಚುನಾವಣೆಯಲ್ಲಿ ಗೆಲ್ಲಬೇಕಾದರೆ ಏನು ಬೇಕಾದರೂ ಮಾಡುತ್ತಾರೆ. ಯಾವ ಕಥೆಯನ್ನು ಬೇಕಾದರೂ ಸೃಷ್ಟಿಸುತ್ತಾರೆ. ಬಿಜೆಪಿ ಈ ಹಿಂದೆ ಎಲ್ಲರ ಖಾತಗೆ 15 ಲಕ್ಷ ರೂಪಾಯಿ ಹಣ ಜಮೆ ಮಾಡಲಾಗುತ್ತದೆ ಎಂದು ಭರವಸೆ ನೀಡಿದ್ದರು. ಆದರೆ ಈವರೆಗೂ ಯಾರೊಬ್ಬರಿಗಾದರೂ ಹಣ ಬಂದಿದೆಯೇ? ಎಂದು ಪ್ರಶ್ನಿಸಿದರು.

ಬಿಜೆಪಿಯವರು ಯಾವಾಗಾದರೂ ನಿಜ ಹೇಳುತ್ತಾರಾ? ಅವರಿಗೆ ಚುನಾವಣಾ ಪ್ರಚಾರಕ್ಕೆ ಯಾವುದೇ ಅಭಿವೃದ್ಧಿ ಕಾರ್ಯವಿಲ್ಲ. ಅದಕ್ಕೆ ಈಗ ಮತ್ತೆ ಮೋದಿ ಗ್ಯಾರಂಟಿ ಎಂದು ಹೇಳಿಕೊಂಡು ಚುನಾವಣೆ ಪ್ರಚಾರವನ್ನು ಮಾಡುತ್ತಿದ್ದಾರೆ. ಪ್ರತಿ ಬಾರಿ ಮೋದಿ ಹೆಸರು ಹೇಳಿ ಮತ ಕೇಳ್ತಾರೆ. ಚುನಾವಣೆಯಲ್ಲಿ ಗೆಲುವಿಗಾಗಿ ಬಿಜೆಪಿಯವರು ಏನು ಬೇಕಾದರೂ ಮಾಡುತ್ತಾರೆ ಎಂದು ಹೇಳಿದ್ದಾರೆ.

ಶುಕ್ರವಾರ ಮಧ್ಯಾಹ್ನ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದ ತನಿಖೆ ಭರದಿಂದ ಸಾಗುತ್ತಿದೆ. ನಾಲ್ವರು ಶಂಕಿತರನ್ನು ವಶಕ್ಕೆ ಪಡೆಯಲಾಗಿದೆ ಎಂದು ವರದಿಯಾಗಿದೆ. ಈ ಕುರಿತು ಸಿಸಿಬಿ ತನಿಖೆ ನಡೆಯುತ್ತಿದೆ. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಸಿಎಂ ಸಿದ್ದರಾಮಯ್ಯ ಈಗಾಗಲೇ ಹೇಳಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

2ಜಿ ತರಂಗಾಂತರ ತೀರ್ಪಿನ ಸ್ಪಷ್ಟನೆ ಕೋರಿದ್ದ ಕೇಂದ್ರದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ ರಿಜಿಸ್ಟ್ರಿ

0
2ಜಿ ತರಂಗಾಂತರ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ 2012ರಲ್ಲಿ ನೀಡಿರುವ ತೀರ್ಪಿನ ಸ್ಪಷ್ಟನೆ ಕೋರಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸ್ವೀಕರಿಸಲು ಸುಪ್ರೀಂ ಕೋರ್ಟ್‌ನ ರಿಜಿಸ್ಟ್ರಾರ್ ನಿರಾಕರಿಸಿದ್ದಾರೆ. ಕೆಲ ಸಂದರ್ಭಗಳಲ್ಲಿ ಸಾರ್ವಜನಿಕ ಹರಾಜು ಹೊರತುಪಡಿಸಿ...