Homeಕರ್ನಾಟಕರಾಮೇಶ್ವರಂ ಕೆಫೆಯಲ್ಲಿ ಸ್ಪೋಟ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಖಚಿತ; ಸಿಎಂ ಸಿದ್ದರಾಮಯ್ಯ

ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಖಚಿತ; ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಬೆಂಗಳೂರಿನ ರಾಮೇಶ್ವರ ಕೆಫೆಯಲ್ಲಿ ನಡೆದಿರುವ ಸ್ಪೋಟ ಘಟನೆಯ ಕುರಿತು ತನಿಖೆ ನಡೆಯುತ್ತಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಾಥಮಿಕ ತನಿಖೆಯ ಪ್ರಕಾರ ಅದು ಸಣ್ಣ ಪ್ರಮಾಣದ ಸುಧಾರಿತ ಸ್ಪೋಟಕವಾಗಿತ್ತು ಎಂದು ತಿಳಿದು ಬಂದಿದೆ, ಪೂರ್ಣ ವರದಿಗಾಗಿ ಕಾಯುತ್ತಿದ್ದೇನೆ ಎಂದು ತಿಳಿಸಿದರು.

ಕ್ಯಾಶಿಯರ್ ಬಳಿ ಟೋಕನ್ ಪಡೆದು ಅಲ್ಲಿ ತಿಂಡಿ ತಿಂದಿರುವ ವ್ಯಕ್ತಿ, ಬ್ಯಾಗ್ ಇಟ್ಟು ಬಂದಿದ್ದಾನೆ ಎಂಬ ಮಾಹಿತಿ ದೊರೆತಿದೆ. ಸುಮಾರು ಎಂಟು ಜನರಿಗೆ ಗಾಯಗಳಾಗಿವೆ. ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಿಸಿ ಟಿವಿ ಕ್ಯಾಮರಾ ಪರೀಕ್ಷಿಸಲಾಗುತ್ತಿದೆ. ಈ ಬಗ್ಗೆ ತನಿಖೆ ನಡೆಯುತ್ತಿದ್ದು, ಗೃಹ ಸಚಿವರಿಗೆ ಸ್ಥಳಕ್ಕೆ ಭೇಟಿ ನೀಡುವಂತೆ ತಿಳಿಸಲಾಗಿದೆ. ಇನ್ನು ಸ್ವಲ್ಪ ಹೊತ್ತಿನಲ್ಲಿಯೇ ಸ್ಪಷ್ಟ ಮಾಹಿತಿ ದೊರೆಯಲಿದೆ ಎಂದರು.

ಕಠಿಣ ಕ್ರಮ : ರಾಜ್ಯದಲ್ಲಿ ಇಂಥದ್ದು ನಡೆಯಬಾರದಿತ್ತು. ಮಂಗಳೂರಿನಲ್ಲಿ ಆಗಿದ್ದು ಬಿಟ್ಟರೆ ಪುನ: ಇಂಥ ಘಟನೆ ಸಂಭವಿಸಿದೆ. ಯಾರು ಇದನ್ನು ಮಾಡಿದ್ದಾರೆ ಎಂದು ಪತ್ತೆ ಹಚ್ಚಿ ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

ರಾಜಕಾರಣ ಮಾಡಬಾರದು : ವಿರೋಧ ಪಕ್ಷಗಳು ಈ ವಿಷಯಗಳ ಬಗ್ಗೆ ರಾಜಕಾರಣ ಮಾಡಬಾರದು, ಎಲ್ಲರೂ ಸಹಕರಿಸಬೇಕು ಎಂದರು. ಪೋಲಿಸರೊಂದಿಗೆ ಮಾತನಾಡಿದ್ದು, ಸದ್ಯದಲ್ಲಿಯೇ ಪೂರ್ಣ ಚಿತ್ರಣ ಸಿಗಲಿದೆ. ವಿಚಾರಣೆ ತ್ವರಿತಗತಿಯಲ್ಲಿ ನಡೆದಿದೆ ಎಂದರು ಹೇಳಿದರು.

ದೇಶದಲ್ಲಿ ಶೇ 5 ರಷ್ಟು ಮಾತ್ರ ಬಡತನ: ಪರಿಶೀಲನೆ ಅಗತ್ಯ

ನೀತಿ ಆಯೋಗದವರು ನೀಡಿರುವ ವರದಿ ಪ್ರಕಾರ ಕಳೆದ 10 ವರ್ಷಗಳಲ್ಲಿ ಬಡತನ ಶೇ 5ರಷ್ಟು ಮಾತ್ರ ಇದೆ ಎಂದು ಹೇಳಲಾಗಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಸಿಎಂ, ಅದನ್ನು ಪರಿಶೀಲಿಸಬೇಕಿದೆ. ಅದು ಸಮೀಕ್ಷೆಯ ವರದಿಯಲ್ಲ. ಅವರು ಹೇಳಿರುವುದು ಸತ್ಯವೋ ಅಸತ್ಯವೋ ಎಂದು ತಿಳಿಯಬೇಕಿದೆ. ಬಡತನ 5% ಕಡಿಮೆಯಾಗಿದ್ದರೆ ಅದು ಖುಷಿ ಪಡುವ ವಿಚಾರ. ಪರಿಸ್ಥಿತಿ ನೋಡಿದರೆ ಆ ರೀತಿ ಕಾಣುವುದಿಲ್ಲ. ಬಡತನ ರೇಖೆಗಿಂತ ಕೆಳಗಿರುವ 82 ಕೋಟಿ ಕುಟುಂಬಗಳಿಗೆ ಅಕ್ಕಿ ಕೊಡಲಾಗುತ್ತಿದೆ ಎಂದರು.

ಬಿಜೆಪಿ 50 ಕೋಟಿ ಆಮಿಷ ಒಡ್ಡುತ್ತಿದೆ : ನಮ್ಮ ಶಾಸಕರು ಆಮಿಷಕ್ಕೆ ಬಲಿಯಾಗುವುದಿಲ್ಲ

ಕಾಂಗ್ರೆಸ್ ಆಡಳಿತವಿರುವ ಹಿಮಾಚಲ ಪ್ರದೇಶವನ್ನು ಬಿಜೆಪಿ ಗುರಿಯಾಗಿಸಿಕೊಂಡಿದೆಯೇ? ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಸಿಎಂ, ಬಿಜೆಪಿ ಎಂದಿಗೂ ಜನರ ಆಶೀರ್ವಾದ ಪಡೆದು ಅಧಿಕಾರಕ್ಕೆ ಬಂದೇ ಇಲ್ಲ. ಆಪರೇಷನ್ ಕಮಲ ಮಾಡಿಯೇ ಬಂದಿದ್ದಾರೆ. 113ಕ್ಕಿಂತ ಸ್ಥಾನಗಳನ್ನು ಹೆಚ್ಚು ಗೆದ್ದೇ ಇಲ್ಲ, 2018ರಲ್ಲಿ 100 ಗೆದ್ದಿದ್ದರು. ಕರ್ನಾಟಕದಲ್ಲಿಯೂ ಆಪರೇಷನ್ ಕಮಲ ಪ್ರಯತ್ನ ಮಾಡುತ್ತಿದ್ದಾರೆ. ಆದರೆ ನಮ್ಮ ಶಾಸಕರು ಅವರ ಆಸೆ ಆಮಿಷಗಳಿಗೆ ಬಲಿಯಾಗುವುದಿಲ್ಲ. ಅವರು ಈಗ 50 ಕೋಟಿ ಆಮಿಷವೊಡ್ಡುತ್ತಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ : ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣ: ಪ್ರಸಿದ್ಧ ಉಪಾಹಾರ ಗೃಹದಲ್ಲಿ ನಡೆದದ್ದೇನು?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಉತ್ತರ ಕನ್ನಡ “ಲೋಕ” ಲಡಾಯಿ; ಕೇಸರಿಪಡೆಯ ಕಲಹ ಕಾಂಗ್ರೆಸ್‌ಗೆ ವರವಾದೀತೆ?

0
ಉತ್ತರ ಕನ್ನಡದ ಅಷ್ಟೂ ಎಂಟು ವಿಧಾನಸಭಾ ಕ್ಷೇತ್ರಗಳ ಜತೆ ಬೆಳಗಾವಿ ಜಿಲ್ಲೆಯ ಖಾನಾಪುರ ಮತ್ತು ಕಿತ್ತೂರು ಸೇರಿಸಿ ರಚಿಸಲಾಗಿರುವ "ಉತ್ತರ ಕನ್ನಡ ಲೋಕಸಭಾ ಕ್ಷೇತ್ರ" ವಿಭಿನ್ನತೆ, ವೈವಿಧ್ಯತೆಗಳ ವಿಶಿಷ್ಟ ಸೀಮೆ. ಭೋರ್ಗರೆವ ಅರಬ್ಬೀ...