Homeಮುಖಪುಟಉತ್ತರ ಪ್ರದೇಶ: ಬಿಜೆಪಿ ನಾಯಕಿ, ನಟಿ ಜಯಪ್ರದಾ ಪತ್ತೆಗೆ ವಿಶೇಷ ತಂಡ ರಚಿಸಿದ ಪೊಲೀಸರು

ಉತ್ತರ ಪ್ರದೇಶ: ಬಿಜೆಪಿ ನಾಯಕಿ, ನಟಿ ಜಯಪ್ರದಾ ಪತ್ತೆಗೆ ವಿಶೇಷ ತಂಡ ರಚಿಸಿದ ಪೊಲೀಸರು

- Advertisement -
- Advertisement -

ಮಾದರಿ ನೀತಿ ಸಂಹಿತೆ ಉಲ್ಲಂಘನೆಯ ಎರಡು ಪ್ರಕರಣಗಳಿಗೆ ಸಂಬಂಧಿಸಿದಂತೆ ಬಿಜೆಪಿಯ ಮಾಜಿ ಸಂಸದೆ ಮತ್ತು ನಟಿ ಜಯಪ್ರದಾ ವಿರುದ್ಧ ಹೊರಡಿಸಲಾದ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಲು ರಾಂಪುರ ಪೊಲೀಸರು ಇನ್ಸ್‌ಪೆಕ್ಟರ್ ನೇತೃತ್ವದಲ್ಲಿ ತಂಡವನ್ನು ರಚಿಸಿದ್ದಾರೆ.

“ತನ್ನ ವಿರುದ್ಧದ ಎರಡು ಕ್ರಿಮಿನಲ್ ಪ್ರಕರಣಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯದ ವಿಚಾರಣೆಯಿಂದ ತಪ್ಪಿಸಿಕೊಂಡಿರುವ ನಟಿ, ರಾಜಕಾರಣಿ ಜಯಪ್ರದಾ ಅವರನ್ನು ಪತ್ತೆಹಚ್ಚಲು ಪೊಲೀಸರಿಗೆ ಸಾಧ್ಯವಾಗುತ್ತಿಲ್ಲ” ಎಂದು ರಾಂಪುರ ಪೊಲೀಸ್ ವರಿಷ್ಠಾಧಿಕಾರಿ ರಾಜೇಶ್ ದ್ವಿವೇದಿ ಹೇಳಿದ್ದಾರೆ.

“ಜನವರಿ 10 ರೊಳಗೆ ಜಯಪ್ರದಾ ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲು ನ್ಯಾಯಾಲಯ ಆದೇಶಿಸಿದೆ. ಈ ಹಿನ್ನೆಲೆ ಇನ್ಸ್‌ಪೆಕ್ಟರ್ ನೇತೃತ್ವದಲ್ಲಿ ವಿಶೇಷ ತಂಡವನ್ನು ರಚಿಸಲಾಗಿದೆ. ಆದರೆ, ಆ ತಂಡಕ್ಕೂ ಅವರನ್ನು ಹುಡುಕಲು ಸಾಧ್ಯವಾಗಿಲ್ಲ” ಎಂದು ದ್ವಿವೇದಿ ತಿಳಿಸಿದ್ದಾರೆ.

ಹಲವು ಅವಕಾಶಗಳನ್ನು ನೀಡಿದರೂ, ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ನ್ಯಾಯಾಧೀಶರು ಜಯಪ್ರದಾ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಿದ್ದಾರೆ.

ಜಯಪ್ರದಾ ಅವರು 2019ರ ಲೋಕಸಭೆ ಚುನಾವಣೆಗೆ ಭಾರತೀಯ ಜನತಾ ಪಕ್ಷ (ಬಿಜೆಪಿ)ದ ಅಭ್ಯರ್ಥಿಯಾಗಿ ಉತ್ತರ ಪ್ರದೇಶದ ರಾಂಪುರ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದರು. ಈ ಚುನಾವಣೆಯ ವೇಳೆ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಅವರ ವಿರುದ್ಧ ಎರಡು ಪ್ರಕರಣಗಳು ದಾಖಲಾಗಿತ್ತು.

ಒಂದು ಪ್ರಕರಣ ಅವರ ಲೋಕಸಭಾ ಕ್ಷೇತ್ರವಾದ ರಾಂಪುರದ ಸ್ವರ್ ಪ್ರದೇಶದಲ್ಲಿ ದಾಖಲಾಗಿತ್ತು. ಏಪ್ರಿಲ್ 19,2019 ರಂದು ನೀತಿ ಸಂಹಿತೆ ಜಾರಿಯಲ್ಲಿದ್ದಾಗ ಸ್ವರ್ ಪ್ರದೇಶದ ನೂರ್‌ಪುರ ಗ್ರಾಮದಲ್ಲಿ ರಸ್ತೆ ಉದ್ಘಾಟಿಸಿದ ಆರೋಪ ಅವರ ಮೇಲಿದೆ. ಮತ್ತೊಂದು ಪಿಪ್ಲಿಯಾ ಮಿಶ್ರಾ ಗ್ರಾಮದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕೆಮ್ರಿ ಪೊಲೀಸ್ ಠಾಣೆಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.

ಎರಡೂ ಪ್ರಕರಣಗಳ ತನಿಖೆ ಪೂರ್ಣಗೊಳಿಸಿರುವ ಪೊಲೀಸರು, ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಜಯಪ್ರದಾ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಪ್ರಕರಣ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಲಯ ಜಯಪ್ರದಾ ಅವರಿಗೆ ಹಾಜರಾಗುವಂತೆ ಸೂಚಿಸಿತ್ತು. ಆದರೆ, ಅವರು ಇದುವರೆಗೆ ನ್ಯಾಯಾಲಯಕ್ಕೆ ಹಾಜರಾಗಿಲ್ಲ.

ಇದನ್ನೂ ಓದಿ : ತಪ್ಪು ಅನುವಾದದ ಭಗವದ್ಗೀತೆ ಶ್ಲೋಕ ಹಂಚಿಕೊಂಡ ಅಸ್ಸಾಂ ಸಿಎಂ; ವಿವಾದದ ನಂತರ ಕ್ಷಮೆಯಾಚನೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ಪಾಸ್‌ಪೋರ್ಟ್ ರದ್ದುಗೊಳಿಸುವಂತೆ ಕೇಂದ್ರ ಸರಕಾರಕ್ಕೆ ಪತ್ರ ಬರೆದ ಎಸ್‌ಐಟಿ

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣಗಳ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ(ಎಸ್‌ಐಟಿ) ಇದೀಗ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಗೊಳಿಸುವಂತೆ ವಿದೇಶಾಂಗ ಸಚಿವಾಲಯಕ್ಕೆ ಪತ್ರ ಬರೆದಿದೆ. ಲೈಂಗಿಕ ದೌರ್ಜನ್ಯ ಪ್ರಕರಣ ಬಯಲಾಗುತ್ತಿದ್ದಂತೆ...