Homeಮುಖಪುಟ‘ರಾಮಾಯಣ’ ಅಣಕ ಆರೋಪ: ಕ್ಷಮೆಯಾಚಿಸಿದ ಏಮ್ಸ್‌ ವಿದ್ಯಾರ್ಥಿ ಸಂಘ

‘ರಾಮಾಯಣ’ ಅಣಕ ಆರೋಪ: ಕ್ಷಮೆಯಾಚಿಸಿದ ಏಮ್ಸ್‌ ವಿದ್ಯಾರ್ಥಿ ಸಂಘ

- Advertisement -
- Advertisement -

ಹಿಂದೂ ಭಾವನೆಗಳಿಗೆ ಧಕ್ಕೆ ಮಾಡಲಾಗಿದೆ ಎಂದು ಆರೋಪಿಸಿ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್‌‌ ಮಾಡಲಾಗಿರುವ ಪ್ರಹಸನ ಸಂಬಂಧ ಏಮ್ಸ್‌ ವಿದ್ಯಾರ್ಥಿ ಸಂಘಟನೆ ಕ್ಷಮೆಯಾಚಿಸಿದೆ.

“ಈ ಪ್ರಹಸನವನ್ನು ಯಾರಿಗಾದರೂ ನೋವು ನೀಡಬೇಕೆಂದು ಏಮ್ಸ್‌ ವಿದ್ಯಾರ್ಥಿಗಳು ಮಾಡಿಲ್ಲ” ಎಂದು ಹೇಳಿರುವ ಸಂಘವು, “ಮುಂದೆ ಈ ರೀತಿಯ ಪ್ರಮಾದಗಳು ಆಗದಂತೆ ಎಚ್ಚರಿಕೆ ವಹಿಸುತ್ತೇವೆ” ಎಂದು ಹೇಳಿರುವುದಾಗಿ ಎಎನ್‌ಐ ಸುದ್ದಿಸಂಸ್ಥೆಗೆ ವರದಿ ಮಾಡಿದೆ.

“ಏಮ್ಸ್‌ನ ಕೆಲವು ವಿದ್ಯಾರ್ಥಿಗಳಿಂದ ಮಾಡಲಾದ ರಾಮಲೀಲಾ ಸ್ಕಿಟ್‌ನ ವಿಡಿಯೋ ತುಣುಕು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಯಾರೊಬ್ಬರ ಭಾವನೆಗಳನ್ನು ನೋಯಿಸುವ ಉದ್ದೇಶವಿಲ್ಲದ ಈ ಪ್ರಹಸನದ ನಡವಳಿಕೆಗಾಗಿ ನಾವು ವಿದ್ಯಾರ್ಥಿಗಳ ಪರವಾಗಿ ಕ್ಷಮೆಯಾಚಿಸುತ್ತೇವೆ. ಭವಿಷ್ಯದಲ್ಲಿ ಅಂತಹ ಯಾವುದೇ ಚಟುವಟಿಕೆ ನಡೆಯದಂತೆ ನಾವು ನೋಡಿಕೊಳ್ಳುತ್ತೇವೆ” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಪ್ರಹಸನದಲ್ಲಿ ರಾಮಾಯಣಕ್ಕೆ ಆಧುನಿಕ ಸ್ಪರ್ಶ ನೀಡಲಾಗಿತ್ತು. ಶೂರ್ಪನಖಿ ಲಕ್ಷ್ಮಣನ ಮುಂದೆ ‘ತು ಚೀಜ್ ಬಡಿ ಹೈ ಮಸ್ತ್ ಮಸ್ತ್’ ಹಾಡುತ್ತಿರುವುದು ಈಗ ವೈರಲ್‌ ಆಗಿರುವ ವಿಡಿಯೋ ಕ್ಲಿಪ್‌ನಲ್ಲಿ ಕಾಣಬಹುದು. ಲಕ್ಷ್ಮಣನು ಆಧುನಿಕ ಶುಪನಕಿಯ ಮೂಗನ್ನು ಕತ್ತರಿಸಿದ ನಂತರ, ಅವಳು, ‘ತು ಜಂತಾ ನಹಿ ಮೇರಾ ಭಾಯ್ ಕೌನ್ ಹೈ (ನನ್ನ ಸಹೋದರ ಯಾರೆಂದು ನಿನಗೆ ಗೊತ್ತಾ?)’ ಎಂದು ಕೇಳುತ್ತಾಳೆ.

“ಹಾಸ್ಯವಾಗಿಸಲು ಯತ್ನಿಸಿರುವ ವಿದ್ಯಾರ್ಥಿಗಳು ಹಿಂದೂ ಧರ್ಮದ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ್ದಾರೆ” ಎಂದು ಆರೋಪಿಸಲಾಗಿದೆ. ಪ್ರಥಮ ವರ್ಷದ ಎಂಬಿಬಿಎಸ್‌ ವಿದ್ಯಾರ್ಥಿ ಶೋಹೆಬ್‌ ಆಕ್ತಬ್‌ ಮತ್ತು ಎಜುಕೇಷನ್‌ ಆಪ್‌‌ನಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದ ಆಯೋಜಕರನ್ನು ಕಟುವಾಗಿ ಟೀಕಿಸಲಾಗಿದೆ.

ಕಾರ್ಯಕ್ರಮ ಆಯೋಜಕರ ಧರ್ಮವನ್ನು ಸಾಮಾಜಿಕ ಮಾಧ್ಯಮದ ಬಳಕೆದಾರರು ಬೊಟ್ಟು ಮಾಡಿದ್ದಾರೆ. “ಅಭಿನಯಿಸುವ ಕಲಾವಿದರು ಹಿಂದೂಗಳಾಗಿರಬೇಕು” ಎಂದು ಬರೆದಿದ್ದಾರೆ. ಆಯೋಜಕರು ಮಾತ್ರವಲ್ಲ, ಕಲಾವಿದರೂ ಈ ತಪ್ಪಿಗೆ ಕಾರಣರಾಗುತ್ತಾರೆ ಎಂದು ಎಚ್ಚರಿಸಿದ್ದಾರೆ. ಈ ಕಾರ್ಯಕ್ರಮವನ್ನು ಎಜುಕೇಷನ್‌ ಆಪ್‌ನಲ್ಲಿ ಪೋಸ್ಟ್‌ ಮಾಡಲಾಗಿತ್ತು.

ಬಿಜೆಪಿ ವಕ್ತಾರ ಸುರೇಶ್ ನಾಕ್ವಾ ಪ್ರತಿಕ್ರಿಯಿಸಿ, “ಅಕ್ತಬ್‌ ಶೋಯೆಬ್‌ ಈ ತಪ್ಪನ್ನು ಮೊದಲ ಬಾರಿಗೆ ಮಾಡುತ್ತಿಲ್ಲ. ಹಿಂದೂ ದೇವರುಗಳನ್ನು ಅಣಕಿಸುವ ಕೆಲಸವನ್ನು ಈ ಹಿಂದೆಯೂ ಮಾಡಿದ್ದಾರೆ. ಅನ್‌ಅಕಾಡೆಮಿಯವರು ವಿಡಿಯೋವನ್ನು ತಕ್ಷಣ ತೆಗೆದು ಹಾಕಿರುವುದು ಸ್ವಾಗತಾರ್ಹ. ಅಫ್ತಬ್‌‌ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಅಗತ್ಯವಿದೆ” ಎಂದಿದ್ದಾರೆ.

ಇದನ್ನೂ ಓದಿರಿ: ’ಹಿಂದೂಗಳಿಗೆ ಮಾತ್ರ’: ವಿವಾದ ಸೃಷ್ಟಿಸಿದ ತಮಿಳುನಾಡಿನ ಧಾರ್ಮಿಕ ದತ್ತಿ ಇಲಾಖೆ ಜಾಹೀರಾತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...