Homeಮುಖಪುಟಅಯೋಧ್ಯೆ ಕುರಿತು ಪೋಸ್ಟ್‌: ಸಾಮಾಜಿಕ ಜಾಲತಾಣದಲ್ಲಿ ಸಂಚಲನ ಮೂಡಿಸಿದ ರಮ್ಯಾ ದಿವ್ಯಸ್ಪಂದನ!

ಅಯೋಧ್ಯೆ ಕುರಿತು ಪೋಸ್ಟ್‌: ಸಾಮಾಜಿಕ ಜಾಲತಾಣದಲ್ಲಿ ಸಂಚಲನ ಮೂಡಿಸಿದ ರಮ್ಯಾ ದಿವ್ಯಸ್ಪಂದನ!

ರಾಜಕೀಯಕ್ಕೆ ಬಲಿಪಶುವಾಗದಿರಿ. ಅಧಿಕಾರ ಮತ್ತು ನಿಯಂತ್ರಣಕ್ಕಾಗಿ ಅದು ಸೃಷ್ಟಿಸುವ ಅಸ್ಮಿತೆಯ (ಗುರುತಿನ) ಬಿಕ್ಕಟ್ಟಿಗೆ ಈಡಾಗದಿರಿ. ಪ್ರಶ್ನಿಸಿ, ಅರ್ಥೈಸಿಕೊಳ್ಳಿ (ಕಂಡುಕೊಳ್ಳಿ) ಮತ್ತು ಅದರಿಂದ ಮೇಲೆದ್ದು ನಿಲ್ಲಿ

- Advertisement -
- Advertisement -

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮದ ಕುರಿತು ಹಲವು ರೀತಿಯ ಅಭಿಪ್ರಾಯಗಳು ವ್ಯಕ್ತವಾಗಿವೆ. ಪ್ರಿಯಾಂಕ ಗಾಂಧಿ, ಕಮಲ್‌ನಾಥ್‌ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಮಂದಿರ ನಿರ್ಮಾಣಕ್ಕೆ ಶುಭಹಾರೈಸಿರುವುದು ಟೀಕೆಗೆ ಗುರಿಯಾಗಿದೆ. ಇಂತಹ ಸಂದರ್ಭದಲ್ಲಿ ಚಿತ್ರನಟಿ, ಮಾಜಿ ಸಂಸದೆ ರಮ್ಯಾ ದಿವ್ಯಸ್ಪಂದನ ಈ ಕುರಿತು ಫೇಸ್‌ಬುಕ್‌ನಲ್ಲಿ ಹಾಕಿರುವ ಪೋಸ್ಟ್‌ ತೀವ್ರ ಚರ್ಚೆಗೆ ಒಳಗಾಗಿದೆ.

ಮಂದಿರ, ಮಸೀದಿ ನಿರ್ಮಾಣದ ವಿಚಾರದಲ್ಲಿ ರಮ್ಯಾರವರ ನಿಲುವನ್ನು ಬಹಳಷ್ಟು ಜನ ಸ್ವಾಗತಿಸಿದ್ದಾರೆ. ರಮ್ಯಾರವರಷ್ಟು ಸೂಕ್ಷ್ಮವಾಗಿ ಯೋಚಿಸುವ ಮನಸ್ಥಿತಿ ಎಲ್ಲಾ ರಾಜಕಾರಣಿಗಳಿಗೂ ಬರಲಿ ಎಂದು ಆಶಿಸಿದ್ದಾರೆ. ಇನ್ನು ಕೆಲವರು ಅವರ ನಿಲುವನ್ನು ವಿರೋಧಿಸಿದ್ದಾರೆ. ಮತ್ತಷ್ಟು ಜನ ಕನ್ನಡದಲ್ಲಿ ಪೋಸ್ಟ್‌ ಮಾಡದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಷ್ಟಕ್ಕೂ ರಮ್ಯಾ ಹೇಳಿದ್ದೇನು? ಇಲ್ಲಿದೆ ನೋಡಿ.

“ರಾಮಮಂದಿರ ಕಟ್ಟಲಾಗುತ್ತಿರುವುದರಿಂದ ಹಿಂದೂಗಳಿಗೆ ಸಂತಸವಾಗಿದೆ ಎಂದು ನನಗೆ ಸಂತಸ. ಮಸೀದಿ ಕಟ್ಟಲಾಗುವುದು ಎಂದು ಮುಸ್ಲಿಮರಿಗೆ ಸಂತಸವಾದಾಗಲೂ ನನಗೂ ಸಂತಸ. ಸಂತಸದಿಂದಿರಲು ಅಥವಾ ದೇವರನ್ನು ತಿಳಿದುಕೊಳ್ಳಲು ಮಂದಿರ, ಮಸೀದಿಗಳು ಬೇಕಾಗಿಲ್ಲವೆಂದು ಅವರಿಬ್ಬರೂ ತಿಳಿದುಕೊಂಡರೆ ನನಗೆ ಅತ್ಯಂತ ಹೆಚ್ಚು ಸಂತಸ. ಸಂತಸವು ಒಗ್ಗಟ್ಟು, ಏಕತೆ, ಜೊತೆಜೊತೆಗೆ ಬದುಕುವುದರಲ್ಲಿದೆ. ಬಾಹ್ಯವಾದುದನ್ನು ತಿರಸ್ಕರಿಸಿ. ನಿಮ್ಮೊಳಗೆ ಇಣುಕಿ ನೋಡಿ. ಅಲ್ಲಿ ನಿಮ್ಮ ನಿಜವಾದ ದೇವರಿರುತ್ತಾನೆ ಮತ್ತು ನಿಜವಾದ ನೀವಿರುತ್ತೀರಿ.” ಎಂದು ರಮ್ಯಾ ಬರೆದಿದ್ದಾರೆ.

Don't be a victim to politics. Don't succumb to the identity crisis it creates for power and control. Question, look through it & rise above.

Posted by Divya Spandana/Ramya on Thursday, August 6, 2020

ಜೊತೆಗೆ “ರಾಜಕೀಯಕ್ಕೆ ಬಲಿಪಶುವಾಗದಿರಿ. ಅಧಿಕಾರ ಮತ್ತು ನಿಯಂತ್ರಣಕ್ಕಾಗಿ ಅದು ಸೃಷ್ಟಿಸುವ ಅಸ್ಮಿತೆಯ (ಗುರುತಿನ) ಬಿಕ್ಕಟ್ಟಿಗೆ ಈಡಾಗದಿರಿ. ಪ್ರಶ್ನಿಸಿ, ಅರ್ಥೈಸಿಕೊಳ್ಳಿ (ಕಂಡುಕೊಳ್ಳಿ) ಮತ್ತು ಅದರಿಂದ ಮೇಲೆದ್ದು ನಿಲ್ಲಿ (ಅದನ್ನು ಮೆಟ್ಟಿನಿಲ್ಲಿ.) ಎಂದು ರಮ್ಯಾ ದಿವ್ಯಸ್ಪಂದನ ಅಭಿಪ್ರಾಯಪಟ್ಟಿದ್ದಾರೆ.


ಇದನ್ನೂ ಓದಿ: ಸಿಜೆಐ ಅಂದ್ರೆ ಸುಪ್ರೀಂ ಕೋರ್ಟ್ ಅಲ್ಲ: ನ್ಯಾಯಾಧೀಶರಿಗಿಂತ ನ್ಯಾಯಾಲಯ ದೊಡ್ಡದು – ಪ್ರಶಾಂತ್ ಭೂಷಣ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...