Homeಮುಖಪುಟನನ್ನ ತಪ್ಪಿನಿಂದ ರಾಹುಲ್ ಗಾಂಧಿ ಕೆಟ್ಟ ರೀತಿಯ ಟ್ರೋಲ್‌ಗೆ ಒಳಗಾದರು- ನಟಿ ರಮ್ಯಾ

ನನ್ನ ತಪ್ಪಿನಿಂದ ರಾಹುಲ್ ಗಾಂಧಿ ಕೆಟ್ಟ ರೀತಿಯ ಟ್ರೋಲ್‌ಗೆ ಒಳಗಾದರು- ನಟಿ ರಮ್ಯಾ

- Advertisement -
- Advertisement -

2019 ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ನಂತರ ಕಾಂಗ್ರೆಸ್ಸಿನ ಸಾಮಾಜಿಕ ಮಾಧ್ಯಮ ವಿಭಾಗದ ಮುಖ್ಯಸ್ಥೆಯಾಗಿದ್ದ ನಟಿ, ರಾಜಕಾರಣಿ ರಮ್ಯಾ ಅವರ ಹಠಾತ್ ನಿರ್ಗಮನವು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿತ್ತು.ಈ ಪ್ರಶ್ನೆಗಳಿಗೆ ಎರಡು ವರ್ಷಗಳ ಬಳಿಕ ಉತ್ತರ ದೊರೆತಿದೆ.

ಕನ್ನಡ ಚಿತ್ರರಂಗ ಸೇರಿದಂತೆ ಬಹುಭಾಷ ನಟಿಯಾಗಿ ಮೆರೆದ ನಟಿ ರಮ್ಯಾ ರಾಜಕೀಯಕ್ಕೆ ಬಂದು ಮಂಡ್ಯದ ಸಂಸದೆಯಾದರು. ರಾಷ್ಟ್ರ ರಾಜಕಾರಣದಲ್ಲಿ ಗುರುತಿಸಿಕೊಂಡ ರಮ್ಯಾ ಬಳಿಕ ಕಾಂಗ್ರೆಸ್ ಸೋಷಿಯಲ್ ಮೀಡಿಯಾದ ಮುಖ್ಯಸ್ಥೆ ಪಟ್ಟಕ್ಕೇರಿದ್ದರು. ಆದರೆ 2019 ರ ಲೋಕಸಭಾ ಚುನಾವಣೆ ಬಳಿಕ ಕಣ್ಮರೆಯಾಗಿದ್ದರು.

ಈ ಬಗ್ಗೆ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಉತ್ತರ ನೀಡಿದ್ದಾರೆ. ತಾವು ಮಾಡಿದ ತಪ್ಪಿನಿಂದ ಅಂದಿನ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ರಾಹುಲ್ ಗಾಂಧಿ ಅವರಿಗಾದ ತೊಂದರೆಗಳ ಬಗ್ಗೆ ಮಾತನಾಡಿದ್ದಾರೆ. ತಾವು ಏಕೆ ಕಾಂಗ್ರೆಸ್ ಸೋಷಿಯಲ್ ಮೀಡಿಯಾದ ಮುಖ್ಯಸ್ಥೆ ಸ್ಥಾನಕ್ಕೆ ರಾಜೀನಾಮೆ ನೀಡಿದೆ ಎಂಬುದನ್ನು ತಿಳಿಸಿದ್ದಾರೆ.

ಇದನ್ನೂ ಓದಿ: ’ಬಂಗಾರದ ಮನುಷ್ಯ’ನ ಅಡಿಪಾಯದಿಂದ ಹೊಸತನ ಮತ್ತು ಸದಭಿರುಚಿಯನ್ನು ತಮ್ಮದಾಗಿಸಿಕೊಂಡಿದ್ದ ಚಂದ್ರು

ಅಂದಿನ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ರಾಹುಲ್ ಗಾಂಧಿ 2018 ರ ಆಗಸ್ಟ್‌ನಲ್ಲಿ ಪಕ್ಷದ ಕೆಲ ಸಂಸದರೊಂದಿಗೆ ಜರ್ಮನಿಗೆ ಭೇಟಿ ನೀಡಿದ್ದರು. ಬರ್ಲಿನ್‌ನ ವಸ್ತುಸಂಗ್ರಹಾಲಯದ ಪ್ರವಾಸದ ವೇಳೆ ರಮ್ಯಾ ಫೋಟೋಗಳನ್ನು ತೆಗೆದಿದ್ದರಂತೆ. ಆ ಪೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಬೇಡದ ಕಾರಣಕ್ಕೆ ವೈರಲ್ ಆಗಿ, ರಾಹುಲ್ ಗಾಂಧಿ ಅವರಿಗೆ ತೀವ್ರ ಮುಜುಗರ ಉಂಟು ಮಾಡಿದ್ದವು ಎಂದು ಹೇಳಿಕೊಂಡಿದ್ದಾರೆ.

”ರಾಹುಲ್ ಗಾಂಧಿ ಅವರ ಫೋಟೋಗಳು ಹೆಚ್ಚು ಟ್ರೋಲ್‌ಗೆ ಒಳಗಾದವು. ರಾಹುಲ್ ಗಾಂಧಿ ಬಗ್ಗೆ ಅಪಹಾಸ್ಯ ಮಾಡಲಾಯಿತು. ನಾನು ಮಾಡಿದ ತಪ್ಪಿನಿಂದ ರಾಹುಲ್ ಗಾಂಧಿ ಅವರನ್ನು ಕೆಟ್ಟ ರೀತಿಯಲ್ಲಿ ಟ್ರೋಲ್ ಮಾಡಲಾಯಿತು. ನಾನು ಮಾಡಿದ ತಪ್ಪಿನಿಂದ ಅಂದು ರಾತ್ರಿ ನನಗೆ ನಿದ್ದೆಯೇ ಬರಲಿಲ್ಲ” ಎಂದು ರಮ್ಯಾ ಬರೆದಿದ್ದಾರೆ.

ತಮ್ಮ ತಪ್ಪಿಗೆ ಕ್ಷಮಾಪಣೆ ಕೇಳಲು ಹಾಗೂ ಹುದ್ದೆಗೆ ರಾಜೀನಾಮೆ ನೀಡಲು ರಾಹುಲ್ ಗಾಂಧಿ ಬಳಿ ತೆರಳಿದ್ದಾಗಿ, ಅವರು ರಾಜೀನಾಮೆಯನ್ನು ತಿರಸ್ಕರಿಸಿ, ಇನ್ನು ಮುಂದೆ ಜಾಗರೂಕರಾಗಿರಿ ಎಂದು ಹೇಳಿದ್ದರು. ಆ ಸಮಯದಲ್ಲಿ ತಾವು ಕಣ್ಣೀರಿಟ್ಟಿದ್ದಾಗಿ ರಮ್ಯಾ ಹೇಳಿಕೊಂಡಿದ್ದಾರೆ.

“ನಾನು ಮಾಡಿದ ತಪ್ಪಿಗೆ, ನನ್ನನ್ನ ಹುದ್ದೆಯಿಂದ ಹೊರದಬ್ಬಬೇಕಿತ್ತು. ಆದರೆ, ಅವರು ಹಾಗೆ ಮಾಡಲಿಲ್ಲ. ರಾಹುಲ್ ಗಾಂಧಿ ಒಳ್ಳೆಯ ಮನುಷ್ಯ. ಅವರ ಜನಪರ ಕಾಳಜಿ ನನ್ನ ಮೇಲೆ ಸದಾ ಪ್ರಭಾವ ಬೀರುತ್ತದೆ” ಎಂದು ಇನ್‌ಸ್ಟಾಗ್ರಾಮ್‌ನಲ್ಲಿ ನಟಿ ಬರೆದುಕೊಂಡಿದ್ದಾರೆ.


ಇದನ್ನೂ ಓದಿ: ಚಿತ್ರರಂಗದ ಅಭಿವ್ಯಕ್ತಿಯನ್ನೇ ಕಿತ್ತುಕೊಳ್ಳುವ ಕೇಂದ್ರದ ಹೊಸ ಕಾನೂನು: ಕಮಲ್ ಹಾಸನ್ ಸೇರಿ ಚಿತ್ರತಾರೆಯರ ವಿರೋಧ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ವಿವರಿಸಲು ಸಮಯಾವಕಾಶ ಕೋರಿ ಪ್ರಧಾನಿಗೆ ಖರ್ಗೆ ಪತ್ರ

0
ಲೋಕಸಭೆ ಚುನಾವಣೆಯ ಕಾಂಗ್ರೆಸ್ ಪ್ರಣಾಳಿಕೆ 'ನ್ಯಾಯಪತ್ರ'ದ ಕುರಿತು ಪ್ರಧಾನಿ ಮೋದಿ ಸರಣಿ ಹೇಳಿಕೆಗಳನ್ನು ಕೊಡುತ್ತಿದ್ದು, ಈ ಹಿನ್ನೆಲೆ ಪ್ರಣಾಳಿಕೆಯ ಕುರಿತು ವಿವರಿಸಲು ಸಮಯ ಕೋರಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪತ್ರ ಬರೆದಿದ್ದಾರೆ. ಖರ್ಗೆ...