ಗೇಮಿಂಗ್ ಆಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ರಣಬೀರ್ ಕಪೂರ್‌ಗೆ ಶುಕ್ರವಾರ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗುವಂತೆ ಸೂಚಿಸಲಾಗಿದೆ.
ಗೇಮ್ ಆಪ್‌ಗೆ ಪ್ರಚಾರ ನೀಡುವ ಹಲವಾರು ಜಾಹೀರಾತುಗಳಲ್ಲಿ ನಟ ಕಾಣಿಸಿಕೊಂಡಿದ್ದಾರೆ. ಒಂದು ಅಪರಾಧದ ಆದಾಯದಿಂದ ಅವರಿಗೆ ದೊಡ್ಡ ಮೊತ್ತದ ಹಣವನ್ನು ನೀಡಲಾಗಿದೆ ಎಂದು ತನಿಖಾ ಸಂಸ್ಥೆ ಹೇಳಿಕೊಂಡಿದೆ.
ಮಹಾದೇವ್ ಆನ್‌ಲೈನ್ ಬುಕ್ ಆಪ್‌ಗೆ ರಣಬೀರ್ ಕಪೂರ್ ಸೋಷಿಯಲ್ ಮೀಡಿಯಾ ಇನ್‌ಪ್ಲೂಯನ್ಸರ್ ಆಗಿದ್ದಾರೆ. ಅಲ್ಲದೆ ಈ ಆಪ್‌ಗಾಗಿ ಪ್ರಚಾರ ಕೈಗೊಳ್ಳಲು ಹಣವನ್ನು ಸ್ವೀಕರಿಸಿದ್ದಾರೆ ಎಂದು ವಿಚಾರಣೆಗೆ ಹಾಜರಾಗುವಂತೆ ರಣಬೀರ್ ಕಪೂರ್‌ಗೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿದೆ.
ಬಾಲಿವುಡ್ ನಟರು, ಗಾಯಕರು ಮತ್ತು ಹಾಸ್ಯನಟರು ಸೇರಿದಂತೆ ಹಲವಾರು ಖ್ಯಾತ ಸೆಲೆಬ್ರಿಟಿಗಳಿಗೆ ಪ್ರಕರಣದಲ್ಲಿ ಸಮನ್ಸ್ ನೀಡುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ.
ಕಳೆದ ತಿಂಗಳು ಆನ್‌ಲೈನ್ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣಕಾಸು ವಂಚನೆ ಪ್ರಕರಣದ ತನಿಖೆ ನಡೆಸುತ್ತಿರುವ ತನಿಖಾ ಸಂಸ್ಥೆ 417 ಕೋಟಿ ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಂಡಿದೆ.
ಛತ್ತೀಸ್‌ಗಢದ ಭಿಲಾಯಿ ಮೂಲದ ಕಂಪನಿಯ ಪ್ರವರ್ತಕರು ಇಂತಹ 4-5 ಆ್ಯಪ್‌ಗಳನ್ನು ನಡೆಸುತ್ತಿದ್ದು, ಅವರೆಲ್ಲರೂ ದಿನಕ್ಕೆ ಸುಮಾರು 200 ಕೋಟಿ ಲಾಭ ಗಳಿಸುತ್ತಿದ್ದಾರೆ ಎಂದು ತನಿಖಾ ಸಂಸ್ಥೆ ತಿಳಿಸಿದೆ.
ಗೇಮಿಂಗ್ ಅಪ್ಲಿಕೇಶನ್‌ನ್ನು ಯುಎಇಯ ಕೇಂದ್ರ ಕಚೇರಿಯಿಂದ ನಡೆಸಲಾಗುತ್ತಿದೆ ಎಂದು ತನಿಖಾ ಸಂಸ್ಥೆ ತನಿಖೆ ತೋರಿಸಿದೆ. ಆ್ಯಪ್ ಶ್ರೀಲಂಕಾ, ನೇಪಾಳದಲ್ಲೂ ತನ್ನ ಕಾಲ್ ಸೆಂಟರ್‌ಗಳನ್ನು ಹೊಂದಿದೆ ಎನ್ನಲಾಗಿದೆ.
ಹೊಸ ಬಳಕೆದಾರರನ್ನು ಆಕರ್ಷಿಸಲು ಬೆಟ್ಟಿಂಗ್ ವೆಬ್‌ಸೈಟ್‌ಗಳ ಜಾಹೀರಾತಿಗಾಗಿ ಭಾರತದಲ್ಲಿ ದೊಡ್ಡ ಮೊತ್ತದ ವೆಚ್ಚವನ್ನು ಮಾಡುತ್ತಿತ್ತು ಎಂದು ಕೂಡ ತನಿಖೆಯಿಂದ ಬಯಲಾಗಿದೆ.
ಇದನ್ನು ಓದಿ: ರಸಾಯನಶಾಸ್ತ್ರ ವಿಭಾಗದ ಮೂವರು ವಿಜ್ಞಾನಿಗಳಿಗೆ ನೊಬೆಲ್ ಬಹುಮಾನ ಘೋಷಣೆ


