ಅಪ್ರಾಪ್ತ ಬಾಲಕಿ ಮೇಲೆ ವರ್ಷಗಳ ಕಾಲ ಅತ್ಯಾಚಾರವೆಸಗಿದ್ದ ಪೊಲೀಸ್ ಅಧಿಕಾರಿಯನ್ನು ಬಂಧಿಸಿರುವ ಘಟನೆ ಜಾರ್ಖಂಡ್ನ ರಾಂಚಿಯಲ್ಲಿ ನಡೆದಿದೆ.
ಸಹಾಯಕ ಪೊಲೀಸ್ ಸಬ್ ಇನ್ಸ್‌ಪೆಕ್ಟರೊಬ್ಬ ಅಪ್ರಾಪ್ತ ಬಾಲಕಿಯ ಮೇಲೆ ಒಂದು ವರ್ಷಕ್ಕೂ ಹೆಚ್ಚು ಕಾಲ ಅತ್ಯಾಚಾರ ಮಾಡಿದ ಆರೋಪದ ಮೇಲೆ ಬಂಧಿಸಲಾಗಿದೆ. ಈ ವರ್ಷ ನವೆಂಬರ್ 14 ರಂದು ಬಾಲಕಿಯ ತಾಯಿ ಪೊಲೀಸ್ ಠಾಣೆಗೆ ಬಂದು ಪ್ರಕರಣ ದಾಖಲಿಸಿದ್ದಾರೆ.
ಆರೋಪಿಯನ್ನು ನೀರಜ್ ಖೋಸ್ಲಾ ಎಂದು ಗುರುತಿಸಲಾಗಿದ್ದು, ಈತ ಎಎಸ್‌ಐ ಶುಕ್‌ದೇವ್ ನಗರ ಪೊಲೀಸ್ ಠಾಣೆಯಲ್ಲಿ ಕಳೆದ ವರ್ಷದಿಂದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸುತ್ತಿದ್ದ ಎನ್ನಲಾಗಿದೆ.
ನವೆಂಬರ್ 10ರಂದು ಬಾಲಕಿ ತೀವ್ರ ಹೊಟ್ಟೆ ನೋವೆಂದು ಹೇಳಿದಾಗ ತಾಯಿ ಮಗಳ ಬಳಿ ವಿಚಾರಿಸಿದ್ದಾಳೆ ಆಗ ನಡೆದ ವಿಚಾರವನ್ನು ಹೇಳಿಕೊಂಡಿದ್ದಾರೆ. ಪೊಲೀಸರು ಕಾರ್ಯಾಚರಣೆ ನಡೆಸಿ ಎರಡು ದಿನಗಳ ನಂತರ ಆರೋಪಿಯನ್ನು ಬಂಧಿಸಿದ್ದಾರೆ. ವಿಷಯ ಎಲ್ಲರಿಗೂ ತಿಳಿಯುತ್ತಿದ್ದಂತೆ ಆತ ಬಾಲಕಿ ಕುಟುಂಬಕ್ಕೆ ಕಿರುಕುಳ ನೀಡಲು ಶುರುಮಾಡಿದ್ದ. ಬೆದರಿಕೆ ಕರೆಗಳು ಬರುತ್ತಿದ್ದವು, ಪತಿ ಕೆಲಸ ಮಾಡುವ ಸ್ಥಳಕ್ಕೆ ಹೋಗಿ ಥಳಿಸಲಾಗಿದೆ ಎಂದು ಆರೋಪಿಸಿದ್ದಾರೆ.
ನವೆಂಬರ್ 14 ರಂದು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೋಕ್ಸೊ) ಕಾಯ್ದೆಯಡಿ ಎಫ್‌ಐಆರ್ ದಾಖಲಿಸಲಾಯಿತು.
ಪೊಲೀಸರು ಕಾರ್ಯಾಚರಣೆ ನಡೆಸಿ ಎರಡು ದಿನಗಳ ನಂತರ ಆರೋಪಿಯನ್ನು ಬಂಧಿಸಿದ್ದಾರೆ.
ಅಪ್ರಾಪ್ತ ಬಾಲಕಿಯ ತಾಯಿ ನೀಡಿದ ದೂರಿನಲ್ಲಿ, ”ಆರೋಪಿಯ ಕುಟುಂಬದಿಂದ ತನ್ನ ಕುಟುಂಬಕ್ಕೆ ನಿರಂತರ ಬೆದರಿಕೆಗಳು ಬರುತ್ತಿವೆ ಮತ್ತು ಆರೋಪಿಯ ತಾಯಿ, ಪತ್ನಿ ಮತ್ತು ಇಬ್ಬರು ಸೋದರ ಮಾವಂದಿರು ತನ್ನ ಪತಿಗೆ ಥಳಿಸಿದ್ದಾರೆ” ಎಂದು ಅವರು ದೂರಿದ್ದಾರೆ.
ಇದನ್ನೂ ಓದಿ: ಕಂಬಳ ಆಹ್ವಾನ ಪತ್ರಿಕೆಯಿಂದ ಅತ್ಯಾಚಾರದ ಆರೋಪಿ ಬ್ರಿಜ್‌ಭೂಷಣ್ ಹೆಸರು ಕೈಬಿಟ್ಟ ಸಮಿತಿ


