Homeಮುಖಪುಟರಂಜನ್ ಗೊಗೊಯ್ ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ: ಶೇಮ್‌ ಎಂಬ ಘೋಷಣೆ ಮೂಲಕ ಪ್ರತಿಭಟನೆ

ರಂಜನ್ ಗೊಗೊಯ್ ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ: ಶೇಮ್‌ ಎಂಬ ಘೋಷಣೆ ಮೂಲಕ ಪ್ರತಿಭಟನೆ

ಈ ನೇಮಕಾತಿ ನ್ಯಾಯಾಂಗದ ಸ್ವಾತಂತ್ರ್ಯದ ಮೇಲಿನ ಆಕ್ರಮಣ ಎಂದು ಕಾಂಗ್ರೆಸ್‌ ಪಕ್ಷ ಟೀಕಿಸಿ, ನಂತರ ರಾಜ್ಯಸಭೆಯಿಂದ ಹೊರನಡೆದಿದೆ.

- Advertisement -
- Advertisement -

ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ (ಸಿಜೆಐ) ರಂಜನ್ ಗೊಗೊಯ್ ಅವರು ಗುರುವಾರ ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಅಧ್ಯಕ್ಷ ರಾಮ್ ನಾಥ್ ಕೋವಿಂದ್ ಅವರನ್ನು ಮೇಲ್ಮನೆಗೆ ನಾಮಕರಣ ಮಾಡಿದರು. ಅವರಿಗೆ ಸದನದಲ್ಲಿ ಸೀಟು ಸಂಖ್ಯೆ 131 ನೀಡಲಾಗಿದೆ.

ಕಾಂಗ್ರೆಸ್ ಮತ್ತು ಬಹುಜನ ಸಮಾಜ ಪಕ್ಷದ (ಬಿಎಸ್ಪಿ) ಸದಸ್ಯರು ಗೊಗೊಯ್ ಅವರ ನೇಮಕವನ್ನು ವಿರೋಧಿಸಿದರು. ಶೇಮ್‌ ಎಂಬ ಘೋಷಣೆಗಳನ್ನು ಕೂಗಿದರು. ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ, ಡಿಎಂಕೆ ಮತ್ತು ಎಂಡಿಎಂಕೆ ಕೂಡ ಪ್ರತಿಭಟನೆಯಲ್ಲಿ ಸೇರಿಕೊಂಡವು.

ಈ ನೇಮಕಾತಿ ನ್ಯಾಯಾಂಗದ ಸ್ವಾತಂತ್ರ್ಯದ ಮೇಲಿನ ಆಕ್ರಮಣ ಎಂದು ಕಾಂಗ್ರೆಸ್‌ ಪಕ್ಷ ಟೀಕಿಸಿ, ನಂತರ ರಾಜ್ಯಸಭೆಯಿಂದ ಹೊರನಡೆದಿದೆ.

ನ್ಯಾಯಮೂರ್ತಿ ಗೊಗೊಯ್ ಅವರು 2019 ರ ನವೆಂಬರ್‌ನಲ್ಲಿ ನಿವೃತ್ತಿಯಾದ ನಾಲ್ಕು ತಿಂಗಳ ನಂತರ ಮಾರ್ಚ್ 16 ರಂದು ರಾಜ್ಯಸಭಾ ಸದಸ್ಯರಾಗಿ ನಾಮನಿರ್ದೇಶನಗೊಂಡರು.

ನ್ಯಾಯಮೂರ್ತಿ ಗೊಗೊಯ್ ಅವರು ರಾಜ್ಯಸಭೆಗೆ ನಾಮನಿರ್ದೇಶನಗೊಂಡಿದ್ದರ ವಿರುದ್ಧ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಾಧೀಶರಾದ ಮದನ್ ಲೋಕೂರ್, ಎ.ಕೆ.ಪಟ್ನಾಯಕ್ ಮತ್ತು ಕುರಿಯನ್ ಜೋಸೆಫ್ ಖಂಡಿಸಿದ್ದಾರೆ. ಆದರೆ ಗೊಗೊಯ್ ಅವರು ತಮ್ಮ ನಾಮನಿರ್ದೇಶನವನ್ನು ಸಮರ್ಥಿಸಿಕೊಂಡಿದ್ದಾರೆ, ಶಾಸಕಾಂಗ ಮತ್ತು ನ್ಯಾಯಾಂಗವು ರಾಷ್ಟ್ರ ನಿರ್ಮಾಣಕ್ಕಾಗಿ ಒಟ್ಟಾಗಿ ಕೆಲಸ ಮಾಡಬೇಕು ಎಂಬ ದೃಢನಿಶ್ಚಯದಿಂದಾಗಿ ಈ ಪ್ರಸ್ತಾಪವನ್ನು ಸ್ವೀಕರಿಸಿದ್ದೇನೆ ಎಂದು ಗೊಗೊಯ್‌ ಹೇಳಿದ್ದಾರೆ.

ಕೇವಲ ನಾಲ್ಕು ತಿಂಗಳ ಹಿಂದೆ ದೇಶದ ಉನ್ನತ ನ್ಯಾಯಾಧೀಶರಾಗಿ ನಿವೃತ್ತರಾದ ನ್ಯಾಯಮೂರ್ತಿ ಗೊಗೊಯ್ ಅವರು ಸಂಸತ್ತಿನಲ್ಲಿ ತಮ್ಮ ಉಪಸ್ಥಿತಿಯು “ನ್ಯಾಯಾಂಗದ ಅಭಿಪ್ರಾಯಗಳನ್ನು ಶಾಸಕಾಂಗ ಮತ್ತು ಉಪಾಧ್ಯಕ್ಷರ ಮುಂದೆ ಮಂಡಿಸಲು ಒಂದು ಅವಕಾಶವಾಗಿರುತ್ತದೆ” ಎಂದು ಹೇಳಿದ್ದಾರೆ.

ನ್ಯಾಯಮೂರ್ತಿ ಗೊಗೊಯ್ ಅವರನ್ನು ಸ್ವಾಗತಿಸಿದ ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಅವರು: “ಮಾಜಿ ಮುಖ್ಯ ನ್ಯಾಯಮೂರ್ತಿಗಳು ಸೇರಿದಂತೆ ವಿವಿಧ ಕ್ಷೇತ್ರಗಳಿಂದ ಬರುವ ಅನೇಕ ಶ್ರೇಷ್ಠ ವ್ಯಕ್ತಿಗಳು ಒಳಗೊಂಡಂತೆ ರಾಜ್ಯಸಭೆಯು ಒಂದು ದೊಡ್ಡ ಸಂಪ್ರದಾಯವನ್ನು ಹೊಂದಿದೆ. ಇಂದು ಪ್ರಮಾಣವಚನ ಸ್ವೀಕರಿಸಿದ ನ್ಯಾಯಮೂರ್ತಿ ಗೊಗೊಯ್ ಖಂಡಿತವಾಗಿಯೂ ಅವರ ಅತ್ಯುತ್ತಮ ಕೊಡುಗೆಯನ್ನು ನೀಡುತ್ತಾರೆ. ಕಾಂಗ್ರೆಸ್‌ ಹೊರನಡೆಯುವ ಮೂಲಕ ಅನ್ಯಾಯ ಮಾಡಿದೆ” ಎಂದಿದ್ದಾರೆ.

ಪ್ರಮಾಣ ವಚನ ಸಂದರ್ಭದಲ್ಲಿ ನ್ಯಾಯಮೂರ್ತಿ ಗೊಗೊಯ್ ಅವರ ಪತ್ನಿ ರೂಪಂಜಲಿ ಗೊಗೊಯ್, ಮಗಳು ಮತ್ತು ಅಳಿಯ ಸಂಸತ್ತಿನಲ್ಲಿ ಉಪಸ್ಥಿತರಿದ್ದರು.

“ನಮ್ಮ ಸಂವಿಧಾನವು ನ್ಯಾಯಾಂಗ ಮತ್ತು ಕಾರ್ಯಾಂಗದ ಅಧಿಕಾರಗಳನ್ನು ಬೇರ್ಪಡಿಸುವುದನ್ನು ಆಧರಿಸಿದೆ. ನ್ಯಾಯಾಂಗವು ನಂಬಿಕೆ ಮತ್ತು ವಿಶ್ವಾಸಗಳ ಗ್ರಹಿಕೆಗೆ ತಕ್ಕಂತೆ ಅಭಿವೃದ್ಧಿ ಹೊಂದುತ್ತದೆ. ಆದರೆ ಅವರು ಅದನ್ನು ಸೋಲಿಸಿದ್ದಾರೆ” ಎಂದು ಕಾಂಗ್ರೆಸ್‌ನ ಅಭಿಷೇಕ್ ಮನು ಸಿಂಗ್ವಿ ಹೇಳಿದ್ದಾರೆ.

ಮಾಜಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಕುರಿಯನ್ ಜೋಸೆಫ್ ತಮ್ಮ ಮಾಜಿ ಸಹೋದ್ಯೋಗಿಯನ್ನು ಟೀಕಿಸಿದ್ದಾರೆ. ಅವರ ನಿರ್ಧಾರವು ನ್ಯಾಯಾಂಗದ ಸ್ವಾತಂತ್ರ್ಯದ ಬಗ್ಗೆ ಸಾಮಾನ್ಯ ಜನರ ವಿಶ್ವಾಸವನ್ನು ಋಣಾತ್ಮಕವಾಗಿ ಪರಿಣಾಮ ಬೀರುತ್ತದೆ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...