Homeಮುಖಪುಟರಂಜಿತ್ ಸಿಂಗ್ ಕೊಲೆ ಪ್ರಕರಣ: ಡೇರಾ ಸಚ್ಚಾ ಸೌಧದ ಮುಖ್ಯಸ್ಥ ಸೇರಿ ಐವರಿಗೆ ಜೀವಾವಧಿ ಶಿಕ್ಷೆ

ರಂಜಿತ್ ಸಿಂಗ್ ಕೊಲೆ ಪ್ರಕರಣ: ಡೇರಾ ಸಚ್ಚಾ ಸೌಧದ ಮುಖ್ಯಸ್ಥ ಸೇರಿ ಐವರಿಗೆ ಜೀವಾವಧಿ ಶಿಕ್ಷೆ

- Advertisement -
- Advertisement -

ಸುಮಾರು ಎರಡು ದಶಕಗಳ ಹಿಂದಿನ ಮ್ಯಾನೇಜರ್ ರಂಜಿತ್ ಸಿಂಗ್ ಕೊಲೆ ಪ್ರಕರಣದಲ್ಲಿ ಪಂಚಕುಲದ ವಿಶೇಷ ಸಿಬಿಐ ನ್ಯಾಯಾಲಯ ಡೇರಾ ಸಚ್ಚಾ ಸೌಧದ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಮತ್ತು ಇತರ ನಾಲ್ವರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.

ಕೊಲೆ ಪ್ರಕರಣದ ಇತರ ಆರೋಪಿಗಳಾದ ಕ್ರಿಶನ್ ಲಾಲ್, ಜಸ್ಬೀರ್ ಸಿಂಗ್, ಅವತಾರ್ ಸಿಂಗ್ ಮತ್ತು ಸಬ್ದಿಲ್‌ ಸಿಂಗ್‌ಗೂ ಜೀವಾವಧಿ ಶಿಕ್ಷೆ ನೀಡಿದೆ. ಗುರ್ಮೀತ್ ರಾಮ್ ರಹೀಮ್ ಸಿಂಗ್‌ಗೆ 31 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ.

ಪ್ರಕರಣದ ಆರನೇ ಆರೋಪಿ ಒಂದು ವರ್ಷದ ಹಿಂದೆ ಮೃತಪಟ್ಟಿದ್ದರು. ಈ ತಿಂಗಳ ಆರಂಭದಲ್ಲಿ ಹರಿಯಾಣದ ಪಂಚಕುಲಾದ ವಿಶೇಷ ಸಿಬಿಐ ನ್ಯಾಯಾಲಯವು ಈ ಐವರೂ ತಪ್ಪಿತಸ್ಥರೆಂದು ಘೋಷಿಸಿತ್ತು.

2017 ರಲ್ಲಿ ಇಬ್ಬರು ಅನುಯಾಯಿಗಳ ಅತ್ಯಾಚಾರದ ಆರೋಪ ಹೊತ್ತು ರೋಹ್ಟಕ್ ಜಿಲ್ಲೆಯ ಸುನಾರಿಯಾ ಜೈಲಿನಲ್ಲಿರುವ ಡೇರಾ ಸಚ್ಚಾ ಸೌಧದ ಮುಖ್ಯಸ್ಥ ರಾಮ್ ರಹೀಮ್, ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ವಿಚಾರಣೆಗೆ ಹಾಜರಾಗಿದ್ದರು. ಇತರ ಆರೋಪಿಗಳು ನ್ಯಾಯಾಲಯದಲ್ಲಿ ಹಾಜರಾಗಿದ್ದರು.

ಇದನ್ನೂ ಓದಿ: ’ಹಿಂದೂಗಳಿಗೆ ಮಾತ್ರ’: ವಿವಾದ ಸೃಷ್ಟಿಸಿದ ತಮಿಳುನಾಡಿನ ಧಾರ್ಮಿಕ ದತ್ತಿ ಇಲಾಖೆ ಜಾಹೀರಾತು

ಡೇರಾ ಸಚ್ಚಾ ಸೌಧದ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅನುಯಾಯಿ ಮತ್ತು ಹರಿಯಾಣದ ಸಿರ್ಸಾದಲ್ಲಿ ಡೇರಾದ ಮ್ಯಾನೇಜರ್ ಆಗಿದ್ದ ರಂಜಿತ್ ಸಿಂಗ್ ಅವರನ್ನು ಜುಲೈ 10, 2002 ರಂದು ಗುಂಡಿಕ್ಕಿ ಕೊಲೆ ಮಾಡಲಾಗಿತ್ತು.

ಡೇರಾ ಸಚ್ಚಾ ಸೌಧದ ಅನುಯಾಯಿಗಳ ನಡುವೆ ಅನಾಮಧೇಯ ಪ್ರಸಾರ ಮಾಡಿದರೆಂದು ರಂಜಿತ್ ಸಿಂಗ್ ಅವರನ್ನು ಶಂಕಿಸಿ ಕೊಲೆ ಮಾಡಲಾಗಿತ್ತು. ಪತ್ರದಲ್ಲಿ ರಾಮ್ ರಹೀಮ್‌ ಮಹಿಳಾ ಅನುಯಾಯಿಗಳನ್ನು ಹೇಗೆ ಲೈಂಗಿಕವಾಗಿ ಶೋಷಣೆಗೊಳಪಡಿಸುತ್ತಾರೆ ಎಂಬ ಬಗ್ಗೆ ವಿವರಿಸಲಾಗಿತ್ತು.

2017 ರಲ್ಲಿ ಅತ್ಯಾಚಾರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ 20 ವರ್ಷಗಳ ಶಿಕ್ಷೆಯ ಹೊರತಾಗಿಯೂ, ರಾಮ್ ರಹೀಮ್‌ಗೆ ಪತ್ರಕರ್ತ ರಾಮ್ ಚಂದರ್ ಛತ್ರಪತಿ ಹತ್ಯೆ ಕೇಸ್‌ನಲ್ಲಿ ಎರಡು ವರ್ಷಗಳ ಹಿಂದೆ ಮತ್ತೊಂದು ಜೀವಾವಧಿ ಶಿಕ್ಷೆ ನೀಡಲಾಗಿದೆ.


ಇದನ್ನೂ ಓದಿ: ‘ರಾಮಾಯಣ’ ಅಣಕ ಆರೋಪ: ಕ್ಷಮೆಯಾಚಿಸಿದ ಏಮ್ಸ್‌ ವಿದ್ಯಾರ್ಥಿ ಸಂಘ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....