Homeಮುಖಪುಟರಣಥಂಬೋರ್ ರಾಷ್ಟ್ರೀಯ ಉದ್ಯಾನವನದಿಂದ 25 ಹುಲಿಗಳು ನಾಪತ್ತೆ!

ರಣಥಂಬೋರ್ ರಾಷ್ಟ್ರೀಯ ಉದ್ಯಾನವನದಿಂದ 25 ಹುಲಿಗಳು ನಾಪತ್ತೆ!

- Advertisement -
- Advertisement -

ರಣಥಂಬೋರ್ ರಾಷ್ಟ್ರೀಯ ಉದ್ಯಾನವನ (ಆರ್‌ಎನ್‌ಪಿ) ದಲ್ಲಿ ಇರುವ 75 ಹುಲಿಗಳಲ್ಲಿ 25 ಹುಲಿಗಳು ಕಳೆದ ವರ್ಷ ನಾಪತ್ತೆಯಾಗಿವೆ ಎಂದು ರಾಜಸ್ಥಾನದ ಮುಖ್ಯ ವನ್ಯಜೀವಿ ವಾರ್ಡನ್ ಪವನ್ ಕುಮಾರ್ ಉಪಾಧ್ಯಾಯ ಸೋಮವಾರ ಉದ್ಯಾನವನದ ಅಧಿಕಾರಿಗಳಿಗೆ ತಿಳಿಸಿದ್ದಾರೆ.

ಒಂದು ವರ್ಷದಲ್ಲಿ ಇಷ್ಟೊಂದು ಅಧಿಕ ಸಂಖ್ಯೆಯ ಹುಲಿಗಳು ನಾಪತ್ತೆಯಾಗಿರುವ ಬಗ್ಗೆ ಅಧಿಕೃತವಾಗಿ ವರದಿಯಾಗಿರುವುದು ಇದೇ ಮೊದಲು. ಈ ಹಿಂದೆ, ಜನವರಿ 2019 ಮತ್ತು ಜನವರಿ 2022 ರ ನಡುವೆ ರಣಥಂಬೋರ್‌ನಿಂದ 13 ಹುಲಿಗಳು ನಾಪತ್ತೆಯಾಗಿದ್ದವು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಹುಲಿಗಳು ನಾಪತ್ತೆಯಾದ ಹಿನ್ನಲೆ ಸೋಮವಾರದಂದು ವನ್ಯಜೀವಿ ಇಲಾಖೆಯು ನಾಪತ್ತೆಯಾದ ಹುಲಿಗಳ ತನಿಖೆಗಾಗಿ ತ್ರಿಸದಸ್ಯ ಸಮಿತಿಯನ್ನು ರಚಿಸಿದೆ. ಈ ತಂಡವು ಮೇಲ್ವಿಚಾರಣಾ ದಾಖಲೆಗಳನ್ನು ಪರಿಶೀಲಿಸುತ್ತದೆ ಮತ್ತು ಉದ್ಯಾನವನದ ಅಧಿಕಾರಿಗಳಿಂದ ಯಾವುದೇ ಲೋಪ ಕಂಡುಬಂದಲ್ಲಿ ಕ್ರಮಕ್ಕೆ ಶಿಫಾರಸು ಮಾಡುತ್ತದೆ.

ತಂಡವು ಈ ವರ್ಷದ ಮೇ 17 ರಿಂದ ಸೆಪ್ಟೆಂಬರ್ 30 ರ ನಡುವೆ ಕಾಣಿಸಿಕೊಳ್ಳದ 14 ಹುಲಿಗಳ ಪತ್ತೆಗೆ ಮುಖ್ಯವಾಗಿ ಗಮನಹರಿಸಲಾಗಿದೆ ಎಂದು ವರದಿ ಹೇಳಿವೆ. ನವೆಂಬರ್ 4 ರಂದು ಹೊರಡಿಸಲಾದ ಅಧಿಕೃತ ಆದೇಶದಲ್ಲಿ, “ರಣಥಂಬೋರ್‌ನ ಮೇಲ್ವಿಚಾರಣಾ ಮೌಲ್ಯಮಾಪನಗಳಿಂದ ನಾಪತ್ತೆಯಾದ ಹುಲಿಗಳ ವರದಿಗಳಿದ್ದು, ಉದ್ಯಾನದ ಕ್ಷೇತ್ರ ನಿರ್ದೇಶಕರಿಗೆ ಹಲವು ಬಾರಿ ನೋಟಿಸ್ ಕಳುಹಿಸಿದ್ದರೂ ಯಾವುದೇ ಮಹತ್ವದ ಸುಧಾರಣೆ ಕಂಡುಬಂದಿಲ್ಲ” ಎಂದು ಹೇಳಿದೆ.

ಅಕ್ಟೋಬರ್ 14, 2024 ರ ವರದಿಯ ಪ್ರಕಾರ, 11 ಹುಲಿಗಳು ಒಂದು ವರ್ಷದಿಂದ ಪತ್ತೆಯಾಗಿಲ್ಲ, ಮತ್ತೆ 14 ಹುಲಿಗಳು ನಾಪತ್ತೆಯಾಗಿರುವ ಪುರಾವೆಗಳು ಇವೆ. ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ರಣಥಂಬೋರ್‌ನಲ್ಲಿ ನಾಪತ್ತೆಯಾದ ಹುಲಿಗಳ ಬಗ್ಗೆ ತನಿಖೆ ನಡೆಸಲು ತನಿಖಾ ಸಮಿತಿಯನ್ನು ರಚಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಮುಖ್ಯ ವನ್ಯಜೀವಿ ವಾರ್ಡನ್ ಪವನ್ ಕುಮಾರ್ ಉಪಾಧ್ಯಾಯ ಮಾತನಾಡಿ, ಸಮಿತಿಯು ಎರಡು ತಿಂಗಳೊಳಗೆ ತನ್ನ ವರದಿಯನ್ನು ಸಲ್ಲಿಸಲಿದೆ ಎಂದು ಹೇಳಿದ್ದಾರೆ. “ಇತ್ತೀಚೆಗೆ, ನಾನು ಸಾಪ್ತಾಹಿಕ ನಿಗಾ ವರದಿಗಳನ್ನು ಸಂಗ್ರಹಿಸಲು ಪ್ರಾರಂಭಿಸಿದೆ, ಈ ಹುಲಿಗಳು ಟ್ರ್ಯಾಪ್ ಕ್ಯಾಮೆರಾದಲ್ಲಿ ದಾಖಲಾಗಿಲ್ಲ. ಈ ವಿಷಯವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಲಾಗುತ್ತಿದೆ” ಎಂದು ಅವರು ಹೇಳಿದ್ದಾರೆ.

ಉದ್ಯಾನವನದ ಮೇಲಿನ ಒತ್ತಡವನ್ನು ಸರಾಗಗೊಳಿಸುವ ಪ್ರಯತ್ನವಾಗಿ ಬಫರ್ ವಲಯದಿಂದ ಗ್ರಾಮಗಳನ್ನು ಸ್ಥಳಾಂತರಿಸುವುದು ಕೂಡಾ ಒಳಗೊಂಡಿವೆ. ಆದರೆ ಇದರ ಪ್ರಗತಿಯು ನಿಧಾನವಾಗಿದ್ದು, ಕೊನೆಯ ಸ್ಥಳಾಂತರವು 2016 ರಲ್ಲಿ ನಡೆಯಿತು.

ಹುಲಿಗಳ ಸಂಖ್ಯೆಯು ಮಿತಿಮೀರಿದ ಕಾರಣ ರಣಥಂಬೋರ್ ಸವಾಲುಗಳನ್ನು ಎದುರಿಸುತ್ತಿದೆ ಎಂದು ಉದ್ಯಾನದ ಅಧಿಕಾರಿಗಳು ಹೇಳಿದ್ದಾರೆ. ಹುಲಿಗಳು ಪ್ರದೇಶಗಳಿಗಾಗಿ ಕಾದಾಟ ಮಾಡುವುದರಿಂದ ಈ ಸಮಸ್ಯೆ ಉಲ್ಭಣಿಸಿದೆ. 75 ಹುಲಿಗಳು — ಇದರಲ್ಲಿ ಯುವ ಮತ್ತು ಮರಿ ಹುಲಿಗಳು ಒಳಗೊಂಡಿದೆ — ಉದ್ಯಾನದ 900 ಚದರ ಕಿಲೋಮೀಟರ್‌ಗಳಲ್ಲಿ ವಾಸಿಸಲು ಮತ್ತು ತಮ್ಮ ಪ್ರದೇಶಗಳ ಗಡಿಯನ್ನು ಗುರುಸಿಕೊಳ್ಳಲು ಹೆಣಗಾಡುತ್ತಿವೆ ಎಂದು ವರದಿಯಾಗಿದೆ.

ವೈಲ್ಡ್‌ಲೈಫ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ (2006-2014) ಅಧ್ಯಯನದ ಪ್ರಕಾರ, ಪ್ರಸ್ತುತ ರಣಥಂಬೋರ್ ರಾಷ್ಟ್ರೀಯ ಉದ್ಯಾನವನದಲ್ಲಿ ಸುಮಾರು 40 ವಯಸ್ಕ ಹುಲಿಗಳನ್ನು ಮಾತ್ರ ಸುರಕ್ಷಿತವಾಗಿ ಇರಿಸಬಹುದಾಗಿದೆ.

ಇದನ್ನೂ ಓದಿ: ಹಿಜಾಬ್ ಚಾಲೆಂಜ್ ವಿಡಿಯೋ : ಮುಸ್ಲಿಂ ಯುವಕನ ಮೇಲೆ ‘ಸೈಬರ್ ಭಯೋತ್ಪಾದನೆ’ ಪ್ರಕರಣ ದಾಖಲಿಸಿ ಜೈಲಿಗಟ್ಟಿದ ಪೊಲೀಸರು

ಹಿಜಾಬ್ ಚಾಲೆಂಜ್ ವಿಡಿಯೋ : ಮುಸ್ಲಿಂ ಯುವಕನ ಮೇಲೆ ‘ಸೈಬರ್ ಭಯೋತ್ಪಾದನೆ’ ಪ್ರಕರಣ ದಾಖಲಿಸಿ ಜೈಲಿಗಟ್ಟಿದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...