Homeಕರ್ನಾಟಕರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ | ಶಿಷ್ಟಾಚಾರ ದುರ್ಬಳಕೆ, ಐಪಿಎಸ್ ರಾಮಚಂದ್ರ ರಾವ್ ಪಾತ್ರದ...

ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ | ಶಿಷ್ಟಾಚಾರ ದುರ್ಬಳಕೆ, ಐಪಿಎಸ್ ರಾಮಚಂದ್ರ ರಾವ್ ಪಾತ್ರದ ಬಗ್ಗೆ ತನಿಖೆಗೆ ಆದೇಶ

- Advertisement -
- Advertisement -

ನಟಿ ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಶಿಷ್ಟಾಚಾರದ ದುರ್ಬಳಕೆ ಮತ್ತು ಇದರಲ್ಲಿ ರನ್ಯಾ ಅವರ ಮಲ ತಂದೆ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಕೆ.ರಾಮಚಂದ್ರ ರಾವ್ ಅವರ ಪಾತ್ರದ ಬಗ್ಗೆ ತನಿಖೆಗೆ ರಾಜ್ಯ ಸರ್ಕಾರ ಮಂಗಳವಾರ (ಮಾ.11) ಆದೇಶಿಸಿದೆ.

ರಾಜ್ಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ಅವರಿಗೆ ತನಿಖೆಯ ಜವಾಬ್ದಾರಿ ನೀಡಲಾಗಿದ್ದು, ತಕ್ಷಣ ತನಿಖೆ ಆರಂಭಿಸಿ ಒಂದು ವಾರದೊಳಗೆ ವರದಿ ಸಲ್ಲಿಸುವಂತೆ ಸೂಚಿಸಿದೆ.

ರನ್ಯಾ ಅವರು ಚಿನ್ನ ಸಾಗಣೆ ಮಾಡುವಲ್ಲಿ ಪೊಲೀಸ್ ಅಧಿಕಾರಿಗಳ ಕರ್ತವ್ಯ ಲೋಪದ ಬಗ್ಗೆಯೂ ತನಿಖೆ ನಡೆಸುವಂತೆ ಸರ್ಕಾರ ಪ್ರತ್ಯೇಕವಾಗಿ ಅಪರಾಧ ತನಿಖಾ ಇಲಾಖೆಗೆ (ಸಿಐಡಿ) ಆದೇಶಿಸಿದೆ.

ದುಬೈನಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಡಿಜಿಪಿ ರಾವ್ ಅವರ ಮಲಮಗಳು ರನ್ಯಾ (33) ಅವರನ್ನು ಮಾರ್ಚ್ 3ರಂದು ಬಂಧಿಸಲಾಗಿತ್ತು. ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಪ್ರಕಾರ, ರನ್ಯಾ ಅವರ ಬಳಿ 12.56 ಕೋಟಿ ರೂಪಾಯಿ ಮೌಲ್ಯದ 14.2 ಕೆಜಿ ವಿದೇಶಿ ಮೂಲದ ಚಿನ್ನದ ಗಟ್ಟಿಗಳು ಪತ್ತೆಯಾಗಿವೆ.

ವಿದೇಶದಿಂದ ಆಗಮಿಸುವಾಗ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಿಂದ ಬೆಂಗಾವಲು ಪಡೆಯಲು ರನ್ಯಾ ತನ್ನ ತಂದೆಯ ಹೆಸರನ್ನು ಬಳಸಿಕೊಂಡಿದ್ದನ್ನು ಡಿಆರ್‌ಐ ಕಂಡುಹಿಡಿದಿದೆ. ಹಾಗಾಗಿ, ತಂದೆಯ ಪ್ರಭಾವ ಬಳಸಿಕೊಂಡೇ ಆಕೆ ವಿಮಾನ ನಿಲ್ದಾಣದ ತಪಾಸಣೆಯಿಂದ ತಪ್ಪಿಸಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

ಮೈಕ್ರೋ ಫೈನಾನ್ಸ್, ಗ್ರೇಟರ್ ಬೆಂಗಳೂರು ಮಸೂದೆಗಳು ವಿಧಾನಸಭೆಯಲ್ಲಿ ಅಂಗೀಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...