Homeಕರ್ನಾಟಕರನ್ಯಾ ರಾವ್, ತರುಣ್ ರಾಜು ಭಾರತಕ್ಕೆ 31 ಕೆಜಿಗೂ ಅಧಿಕ ಚಿನ್ನ ಕಳ್ಳಸಾಗಣೆ ಮಾಡಿದ್ದಾರೆ: ಕೋರ್ಟ್‌ಗೆ...

ರನ್ಯಾ ರಾವ್, ತರುಣ್ ರಾಜು ಭಾರತಕ್ಕೆ 31 ಕೆಜಿಗೂ ಅಧಿಕ ಚಿನ್ನ ಕಳ್ಳಸಾಗಣೆ ಮಾಡಿದ್ದಾರೆ: ಕೋರ್ಟ್‌ಗೆ ಡಿಆರ್‌ಐ ಮಾಹಿತಿ

- Advertisement -
- Advertisement -

ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ಚಿತ್ರ ನಟರಾದ ರನ್ಯಾ ರಾವ್ ಮತ್ತು ತರುಣ್ ಕೊಂಡೂರು ರಾಜು 31 ಕೆಜಿಗೂ ಹೆಚ್ಚು ಚಿನ್ನವನ್ನು ಭಾರತಕ್ಕೆ ಕಳ್ಳಸಾಗಣೆ ಮಾಡಿದ್ದಾರೆ ಎಂದು ಕಂದಾಯ ಗುಪ್ತಚರ ನಿರ್ದೇಶನಾಲಯ (DRI) ಕೋರ್ಟ್‌ಗೆ ಹೇಳಿಕೊಂಡಿದೆ.

ಚಿನ್ನದ ಕಳ್ಳಸಾಗಣೆ ಪ್ರಕರಣದ ಎರಡನೇ ಆರೋಪಿ ರಾಜು (36)ಗೆ ಸೆಷನ್ಸ್ ನ್ಯಾಯಾಲಯ ಜಾಮೀನು ನೀಡುವುದನ್ನು ಡಿಆರ್‌ಐ ಆಕ್ಷೇಪಿಸಿ ತನ್ನ ತನಿಖೆಯ ಹೊಸ ಮಾಹಿತಿಗಳನ್ನು ಬಹಿರಂಗಪಡಿಸಿದೆ. ಏಪ್ರಿಲ್ 7 ರಂದು ಸಿಸಿಎಚ್ -64 ಎಲ್‌ಎಕ್ಸ್‌ಐಐ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಧೀಶ ಐ ಪಿ ನಾಯಕ್ ಅವರು ರಾಜು ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದಾರೆ.

33 ವರ್ಷದ ರನ್ಯಾ ಅವರನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 14.2 ಕೆಜಿ ತೂಕದ 12.56 ಕೋಟಿ ರೂ. ಮೌಲ್ಯದ ಚಿನ್ನದೊಂದಿಗೆ ಬಂಧಿಸಲಾಗಿತ್ತು. ಆರು ದಿನಗಳ ನಂತರ, ಮಾರ್ಚ್ 9 ರಂದು ಡಿಆರ್‌ಐ ರಾಜು ಅವರನ್ನು ಬಂಧಿಸಿತ್ತು.

ರನ್ಯಾ ಮತ್ತು ರಾಜು ಇಬ್ಬರೂ ಚಿನ್ನದ ಕಳ್ಳಸಾಗಣೆಯಲ್ಲಿ ಮತ್ತು ಖರೀದಿಗೆ ಅಗತ್ಯವಾದ ಹಣವನ್ನು ರವಾನಿಸಲು ಹವಾಲಾ ವಹಿವಾಟಿನಲ್ಲಿ ಭಾಗಿಯಾಗಿದ್ದಾರೆ ಎಂಬ ಮಾಹಿತಿಯನ್ನು ಆಧರಿಸಿ ಡಿಆರ್‌ಐ ಆಕ್ಷೇಪಣೆಗಳನ್ನು ಸಲ್ಲಿಸಿತ್ತು. ಈ ಇಬ್ಬರು 31 ಕೆಜಿಗಿಂತ ಹೆಚ್ಚು ಚಿನ್ನವನ್ನು ಕಳ್ಳಸಾಗಣೆ ಮಾಡಿದ್ದು ಇದು “ಜಾಮೀನು ರಹಿತ ಅಪರಾಧ” ಎಂದು ಡಿಆರ್‌ಐ ನ್ಯಾಯಾಲಯಕ್ಕೆ ತಿಳಿಸಿದೆ.

ರಾಜು ಅಮೇರಿಕಾದ ನಾಗರಿಕರಾಗಿದ್ದು, ಅದನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಮತ್ತು ಪರಾರಿಯಾಗುವ ಸಾಧ್ಯತೆ ಇದೆ ಎಂದು ಡಿಆರ್‌ಐ ವಾದಿಸಿದೆ. ಅವರು ಈ ಹಿಂದೆ ದೇಶದಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದರು ಎಂದು ಡಿಆರ್‌ಐ ಹೇಳಿದ್ದು, ಅವರ ಕೃತ್ಯಗಳ ಬಗ್ಗೆ ಅವರಿಗೆ ಅರಿವಿತ್ತು ಎಂದು ಹೇಳಿದೆ.

“ಅರ್ಜಿದಾರರು (ರಾಜು) ಮತ್ತು ಆರೋಪಿ 1 (ರನ್ಯಾ ರಾವ್) ಇಬ್ಬರೂ ಸ್ವಯಂಪ್ರೇರಿತ ಹೇಳಿಕೆಗಳನ್ನು ನೀಡಿ, ಆರೋಪಿ 3 (ಸಾಹಿಲ್ ಸಕಾರಿಯಾ ಜೈನ್) ಸಹಾಯದಿಂದ ಸರಕು/ಚಿನ್ನದ ಕಳ್ಳಸಾಗಣೆ ಮತ್ತು ಭಾರತದಲ್ಲಿ ಆಭರಣಗಳ ರೂಪದಲ್ಲಿ ಮಾರಾಟ ಮಾಡಿರುವುದನ್ನು ಬಹಿರಂಗಪಡಿಸಿದ್ದಾರೆ. ಇದಲ್ಲದೆ, ಅವರು ಹವಾಲಾ ವ್ಯವಹಾರದಲ್ಲಿಯೂ ಭಾಗಿಯಾಗಿದ್ದಾರೆ ಎಂದು ಬಹಿರಂಗಪಡಿಸಲಾಗಿದೆ” ಎಂದು ಡಿಆರ್‌ಐ ಹೇಳಿಕೊಂಡಿದೆ.

ರಾಜು ಅವರು ಅಮೆರಿಕಾ ಪ್ರಜೆಯಾಗಿದ್ದು, ಅವರ ವಿಧವೆ ತಾಯಿ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದಾರೆ ಎಂದು ರಾಜು ಅವರ ವಕೀಲರು ವಾದಿಸಿದ್ದಾರೆ. ರಾಜು ಅವರ ತಾಯಿಗೆ ಬೆಂಗಳೂರಿನಲ್ಲಿ “ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಗಳನ್ನು” ಹೊಂದಿದ್ದಾರೆ, ಆದ್ದರಿಂದ ಅವರು ತಲೆಮರೆಸಿಕೊಳ್ಳುವುದಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

“ಅರ್ಜಿದಾರ ರಾಜು ಅವರಿಂದ ಏನನ್ನೂ ವಶಪಡಿಸಿಕೊಳ್ಳಲಾಗಿಲ್ಲ ಮತ್ತು ಅವರ ವಿರುದ್ಧ ಯಾವುದೇ ದೋಷಾರೋಪಣೆಯ ವಸ್ತುಗಳು ಕಂಡುಬಂದಿಲ್ಲ” ಎಂದು ರಾಜು ಪರ ವಕೀಲರು ಪ್ರತಿಪಾದಿಸಿದರು. ರಾಜು ದುಬೈ ಮತ್ತು ಇತರ ದೇಶಗಳಲ್ಲಿ ಚಿನ್ನದ ವ್ಯವಹಾರವನ್ನು ಹೊಂದಿದ್ದರು, ಆದ್ದರಿಂದ ಕಸ್ಟಮ್ಸ್ ಕಾಯ್ದೆ, 1962 ಅವರಿಗೆ ಅನ್ವಯಿಸಲಿಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ.

“ಅರ್ಜಿದಾರ (ರಾಜು) ದುಬೈನಲ್ಲಿ ಆರೋಪಿ 1 (ರನ್ಯಾ) ಗೆ ಚಿನ್ನವನ್ನು ಮಾರಾಟ ಮಾಡಿದ್ದಾರೆ. ಆದರೆ ಆರೋಪಿ ರನ್ಯಾ ಅದನ್ನು ಭಾರತಕ್ಕೆ ಕಳ್ಳಸಾಗಣೆ ಮಾಡುತ್ತಿದ್ದಾರೆ ಅವರಿಗೆ ತಿಳಿದಿಲ್ಲ” ಎಂದು ಅವರ ವಕೀಲರು ಪ್ರತಿಪಾದಿಸಿದ್ದಾರೆ. ನ್ಯಾಯಾಲಯವು ಎರಡೂ ಕಡೆಯ ವಾದಗಳನ್ನು ಆಲಿಸಿ ಅವರ ಅರ್ಜಿಯನ್ನು ವಜಾ ಮಾಡಿದೆ.

“ಅರ್ಜಿದಾರ (ರಾಜು) ಮತ್ತು ಆರೋಪಿ 1 (ರನ್ಯಾ) ಇಬ್ಬರ ಸ್ವಯಂಪ್ರೇರಿತ ಹೇಳಿಕೆಯ ಪ್ರಕಾರ, ಅವರು 20-25 ಬಾರಿ ದುಬೈಗೆ ಪ್ರಯಾಣಿಸಿದ್ದಾರೆ ಮತ್ತು ಅದೇ ದಿನ ಭಾರತಕ್ಕೆ ಮರಳಿದ್ದಾರೆ. ಇದು ಅವರ ಕಾರ್ಯವೈಖರಿಯನ್ನು ಬಹಿರಂಗಪಡಿಸಿದೆ” ಎಂದು ನ್ಯಾಯಾಧೀಶರು ಹೇಳಿದ್ದಾರೆ.

“ಇಡೀ ಸಂಗತಿಯನ್ನು ಪರಿಗಣಿಸಿದಾಗ, ಈ ಪ್ರಕರಣದಲ್ಲಿ ಸಮುದಾಯದ ಹಿತಾಸಕ್ತಿ ಇದೆ ಎಂದು ತಿಳಿದುಬಂದಿದೆ. ಅರ್ಜಿದಾರರಿಗೆ ಜಾಮೀನು ನೀಡಿದರೆ ಪಲಾಯನ ಮಾಡುವ ಅಪಾಯವಿರುತ್ತದೆ ಮತ್ತು ಅದು ಸಮಾಜಕ್ಕೆ ತಪ್ಪು ಸಂಕೇತವನ್ನು ನೀಡುತ್ತದೆ. ಈ ಎಲ್ಲಾ ಅಂಶಗಳನ್ನು ಪರಿಗಣಿಸಿ ಅರ್ಜಿದಾರರು ಜಾಮೀನು ಮಂಜೂರಾತಿಗೆ ಅರ್ಹರಲ್ಲ ಎಂದು ನಾನು ಅಭಿಪ್ರಾಯಪಡುತ್ತೇನೆ” ಎಂದು ನ್ಯಾಯಾಧೀಶರು ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಅಂಬೇಡ್ಕರ್ ಪ್ರಶಸ್ತಿ | ಮಾವಳ್ಳಿ ಶಂಕರ್, ಲಕ್ಷ್ಮೀಪತಿ, ಇಂದೂಧರ ಹೊನ್ನಾಪುರ ಸೇರಿ 15 ಮಂದಿ ಆಯ್ಕೆ

ಅಂಬೇಡ್ಕರ್ ಪ್ರಶಸ್ತಿ | ಮಾವಳ್ಳಿ ಶಂಕರ್, ಲಕ್ಷ್ಮೀಪತಿ, ಇಂದೂಧರ ಹೊನ್ನಾಪುರ ಸೇರಿ 15 ಮಂದಿ ಆಯ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...