Homeಚಳವಳಿಹೋರಾಟಗಾರ ವರವರ ರಾವ್‌‌ಗೆ ಜಾಮೀನು ನಿರಾಕರಣೆ; ’ಹಾಸಿಗೆ ಹಿಡಿದಿದ್ದಾರೆ’ ಎಂದ ಕುಟುಂಬ!

ಹೋರಾಟಗಾರ ವರವರ ರಾವ್‌‌ಗೆ ಜಾಮೀನು ನಿರಾಕರಣೆ; ’ಹಾಸಿಗೆ ಹಿಡಿದಿದ್ದಾರೆ’ ಎಂದ ಕುಟುಂಬ!

ಕವಿಯ ಆರೋಗ್ಯವನ್ನು ವೈದ್ಯರ ಸಮಿತಿಯೊಂದು ವಿಡಿಯೋ ಕರೆ ಮೂಲಕ ಪರಿಶೀಲಿಸಲಿದೆ ಎಂದು ನ್ಯಾಯಾಲಯ ಹೇಳಿದೆ.

- Advertisement -
- Advertisement -

ಭೀಮಾ ಕೊರೆಗಾಂವ್ ಪ್ರಕರಣದಲ್ಲಿ ಎರಡು ವರ್ಷಗಳಿಂದ ಜೈಲಿನಲ್ಲಿರುವ ಕ್ರಾಂತಿಕಾರಿ ಕವಿ- ಸಾಮಾಜಿಕ ಹೋರಾಟಗಾರ ವರವರ ರಾವ್ ಅವರ ಆರೋಗ್ಯ ಹದಗೆಡುತ್ತಿದ್ದು ಆದ್ದರಿಂದ ಅವರನ್ನು ಬಿಡುಗಡೆ ಮಾಡಿ ಆಸ್ಪತ್ರಗೆ ಸೇರಿಸಬೇಕು ಎಂದು ಬಾಂಬೆ ಹೈಕೋರ್ಟ್‌ಗೆ ಅವರ ಕುಟುಂಬ ಮನವಿ ಮಾಡಿದ್ದ ಹಿನ್ನಲೆಯಲ್ಲಿ ನ್ಯಾಯಾಲಯವು, ಕವಿಯ ಆರೋಗ್ಯವನ್ನು ವೈದ್ಯರ ಸಮಿತಿಯೊಂದು ವಿಡಿಯೋ ಕರೆ ಮೂಲಕ ಪರಿಶೀಲಿಸಲಿದೆ ಎಂದು ಹೇಳಿದೆ.

ಸಾಮಾಜಿಕ ಕಾರ್ಯಕರ್ತೆ ವಕೀಲೆ ಇಂದಿರಾ ಜೈಸಿಂಗ್ ಹೈಕೋರ್ಟ್‌ನಲ್ಲಿ, ಅವರ ಆರೋಗ್ಯವು ಕ್ಷೀಣಿಸುತ್ತಿದೆ. ಅಷ್ಟೆ ಅಲ್ಲದೆ ಅವರಿಗೆ ಬುದ್ಧಿಮಾಂದ್ಯತೆ ಇದ್ದು, ಹಾಸಿಗೆ ಹಿಡಿದಿದ್ದಾರೆ. ಅವರು ನ್ಯಾಯದಿಂದ ಓಡಿ ಹೋಗಲಿದ್ದಾರೆಯೆ ಎಂದು ಪ್ರಶ್ನಿಸಿದರು.

ನ್ಯಾಯಾಲಯವು ಮುಂದಿನ ವಿಚಾರಣೆಯನ್ನು ಮಂಗಳವಾರಕ್ಕೆ ಮುಂದೂಡಿದ್ದು, ಖಾಸಗಿ ಆಸ್ಪತ್ರೆಯ ವೈದ್ಯರೊಂದಿಗೆ ವೀಡಿಯೊ ಕರೆಯನ್ನು ಶೀಘ್ರದಲ್ಲಿಯೇ ವ್ಯವಸ್ಥೆಗೊಳಿಸಬೇಕು ಎಂದು ಹೇಳಿದೆ.

ಇದನ್ನೂ ಓದಿ: ಭೀಮಾ ಕೋರೆಗಾಂವ್ ಪ್ರಕರಣ: ಸಾಕ್ಷ್ಯ ಸಂಗ್ರಹಿಸಲು ಹೆಣಗುತ್ತಿರುವ NIA!

80 ವರ್ಷದ ವರವರಾ ರಾವ್ ಅವರನ್ನು 2018 ರ ಜನವರಿಯಲ್ಲಿ ಬಂಧಿಸಿ, ಭಯೋತ್ಪಾದನಾ-ವಿರೋಧಿ ಕಾನೂನಾದ ಯುಎಪಿಎ ಯನ್ನು ದಾಖಲಿಸಲಾಗಿದೆ. ಅನಾರೋಗ್ಯ ಪೀಡಿತರಾದ ಅವರು ನಿರಂತರವಾಗಿ ಸೆರೆವಾಸ ಅನುಭವಿಸುವುದು ಸಂವಿಧಾನದ 21 ನೇ ಪರಿಚ್ಚೇದದ ಉಲ್ಲಂಘನೆಯಾಗಿದೆ ಮತ್ತು ಅದು ಅವರ ಬದುಕುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಹೇಳಿತ್ತು.

ಮುಂಬೈ ಬಳಿಯ ತಾಲೋಜ ಜೈಲಿನಲ್ಲಿರುವ ಪ್ರಕರಣದ ಸಹ-ಆರೋಪಿ ಸ್ಟಾನ್ ಸ್ವಾಮಿ ವಕೀಲರಿಗೆ ಕರೆ ಮಾಡಿ ವರವರ ರಾವ್ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದಾರೆ ಎಂದು ತಿಳಿಸಿದ್ದಾರೆಂದು ಇಂದಿರಾ ಜೈಸಿಂಗ್ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

“ವರವಾರ ರಾವ್ ಅವರನ್ನು ತಲೋಜಾ ಜೈಲಿನಿಂದ ನಾನಾವತಿ ಆಸ್ಪತ್ರೆಗೆ ಸ್ಥಳಾಂತರಿಸಲು ನಾನು ತುರ್ತು ಮಧ್ಯಂತರ ಪರಿಹಾರವನ್ನು ಕೋರುತ್ತೇನೆ. ಅವರ ಹಕ್ಕುಗಳ ಉಲ್ಲಂಘಿಸಲಾಗುತ್ತಿರುವುದರಿಂದ ಅವರನ್ನು ಬಿಡುಗಡೆ ಮಾಡಬೇಕು ಎಂಬುದೇ ನನ್ನ ಬಯಕೆಯಾಗಿದೆ” ಎಂದು ವಕೀಲೆ ನ್ಯಾಯಾಲಯಕ್ಕೆ ಹೇಳಿದ್ದಾರೆ.

ಇದನ್ನೂ ಓದಿ: ಭೀಮಾ ಕೋರೆಗಾಂವ್: 83 ವರ್ಷದ ಹಿರಿಯ ಹೋರಾಟಗಾರ ಸ್ಟ್ಯಾನ್ ಸ್ವಾಮಿ ಬಂಧಿಸಿದ NIA

ವರವಾರ ರಾವ್ ಅವರ ಅನಾರೋಗ್ಯಕ್ಕೆ ಚಿಕಿತ್ಸೆ ನೀಡಲು ತಲೋಜಾ ಜೈಲಿನಲ್ಲಿ ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಯ ಮೂಲಸೌಕರ್ಯಗಳಿಲ್ಲ ಮತ್ತು ಈ ಸಮಯದಲ್ಲಿ ಅವರು ತಮ್ಮ ಕುಟುಂಬದೊಂದಿಗೆ ಇರಬೇಕಾಗಿದೆ. ಈ ಸ್ಥಿತಿಯಲ್ಲಿ ಅವರು ವಿಚಾರಣೆಗೆ ನಿಲ್ಲಲು ಸಹ ಸಾಧ್ಯವಿಲ್ಲ. ಒಂದು ವೇಳೆ ಅವರು ಜೈಲಿನಲ್ಲಿ ಸತ್ತರೆ ಅದು ಕಸ್ಟೋಡಿಯಲ್ ಸಾವು ಆಗುತ್ತದೆ” ಎಂದು ಅವರು ನ್ಯಾಯಾಲಯಕ್ಕೆ ಹೇಳಿದರು.

ಟಿವಿ ಆಂಕರ್ ಅರ್ನಾಬ್ ಗೋಸ್ವಾಮಿ ಅವರನ್ನು 2018 ರ ಆತ್ಮಹತ್ಯೆ ಪ್ರಕರಣದಲ್ಲಿ ಬಂಧಿಸಿದ್ದರಿಂದ, ಈ ವಾರದಾದ್ಯಂತ ತಲೋಜಾ ಜೈಲು ಸುದ್ದಿಯಲ್ಲಿತ್ತು. ಅರ್ನಾಬ್‌ಗೆ ನಿನ್ನೆ ಸುಪ್ರೀಂ ಕೋರ್ಟ್ ಜಾಮೀನು ನೀಡಿ, ವೈಯಕ್ತಿಕ ಸ್ವಾತಂತ್ರ್ಯದ ತತ್ವವನ್ನು ಎತ್ತಿಹಿಡಿಯ ಬೇಕು ಎಂದು ಹೈಕೋರ್ಟ್‌ಗೆ ಸಂದೇಶ ಕಳುಹಿಸಿದೆ.

ವರವರ ರಾವ್ ಸೇರಿದಂತೆ ಭೀಮಾ ಕೊರೆಗಾಂವ್ ಪ್ರಕರಣದಲ್ಲಿ ಬಂಧಿಸಲ್ಪಟ್ಟ ಇತರ ಸಾಮಾಜಿಕ ಕಾರ್ಯಕರ್ತರಾದ ಸುಧಾ ಭರದ್ವಾಜ್ ಮತ್ತು ಸ್ಟಾನ್ ಸ್ವಾಮಿಯನ್ನೂ ಸಹ ಇದೇ ಮಾನದಂಡದಡಿ ಯಾಕೆ ಬಿಡುಗಡೆ ಮಾಡಬಾರದು ಎಂದು ಪ್ರಶ್ನಿಸಲಾಗುತ್ತಿದೆ.

ಇದನ್ನೂ ಓದಿ: ಭೀಮಾ ಕೋರೆಂಗಾವ್‌ ವಿಜಯೋತ್ಸವದಲ್ಲಿ ನೆರೆದ 5 ಲಕ್ಷಕ್ಕೂ ಹೆಚ್ಚು ಜನ: ಇಂಟರ್‌ನೆಟ್‌ ಸ್ಥಗಿತ

ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ತನಿಖೆ ನಡೆಸುತ್ತಿದ್ದು, ಡಿಸೆಂಬರ್ 31, 2017 ರಂದು ಪುಣೆಯ ಎಲ್ಗರ್ ಪರಿಷತ್ ಸಮಾವೇಶದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದರಿಂದ ಮರುದಿನ ಭೀಮಾ ಕೊರೆಗಾಂವ್ ಯುದ್ಧ ಸ್ಮಾರಕದ ಬಳಿ ಹಿಂಸಾಚಾರ ನಡೆಯಿತು ಎಂದು ಪೊಲೀಸರು ಆರೋಪಿಸಿದ್ದಾರೆ. ಈ ಹಿನ್ನಲೆಯಲ್ಲಿ, ವರವರ ರಾವ್ ಸೇರಿದಂತೆ ಹಲವಾರು ಸಾಮಾಜಿಕ ಕಾರ್ಯಕರ್ತರನ್ನು ಬಂಧಿಸಲಾಗಿದೆ.

ಇದೇ ಪ್ರಕರಣದಲ್ಲಿ ತೀರಾ ಇತ್ತೀಚೆಗೆ ಬಂಧಿಸಲ್ಪಟ್ಟ ಮತ್ತೊಬ್ಬ ಸಾಮಾಜಿಕ ಕಾರ್ಯಕರ್ತರಾದ ಫಾದರ್ ಸ್ಟಾನ್ ಸ್ವಾಮಿ, ತನಗೆ ಪಾರ್ಕಿನ್ಸನ್ ಕಾಯಿಲೆ ಇರುವುದರಿಂದ ಲೋಟಗಳನ್ನು ಹಿಡಿಯಲು ಕೈನಡುಗುತ್ತದೆ, ಆದ್ದರಿಂದ ಸ್ಟ್ರಾ ಬಳಸಿ ನೀರು ಕುಡಿಯಲು ಅನುಮತಿ ನೀಡಬೇಕು ಎಂದು ವಿನಂತಿಸಿಕೊಂಡಿದ್ದರು, ಆದರೆ ಎನ್ಐಎ ಇದಕ್ಕೆ ಪ್ರತಿಕ್ರಿಯಿಸಲು 20 ದಿನಗಳ ಕಾಲಾವಕಾಶ ಕೇಳಿತು.

ಇದನ್ನೂ ಓದಿ: ಪಾರ್ಕಿನ್ಸನ್ ಕಾಯಿಲೆ: ನೀರು ಕುಡಿಯಲು ಸಾಧ್ಯವಾಗದ ಪರಿಸ್ಥಿತಿಯಲ್ಲಿ ಬಂಧಿತ ಹೋರಾಟಗಾರ ಸ್ಟಾನ್ ಸ್ವಾಮಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಯಚೂರು ದಲಿತ ದೌರ್ಜನ್ಯ: ಪ್ರಕರಣಗಳನ್ನು CIDಗೆ ಒಪ್ಪಿಸುವಂತೆ ಆಗ್ರಹಿಸಿ ಗೃಹ ಸಚಿವರನ್ನು ಭೇಟಿಯಾದ ನಿಯೋಗ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ದಲಿತರ ಮೇಲೆ ಸಾಲು ಸಾಲು ದೌರ್ಜನ್ಯ, ಕೊಲೆ ಹಾಗೂ ಅತ್ಯಾಚಾರದಂತಹ ಭೀಕರ ಕೃತ್ಯಗಳು ಹೆಚ್ಚಾಗುತ್ತಿರುವುದನ್ನು ತೀವ್ರವಾಗಿ ಖಂಡಿಸಿ, ದಲಿತ ಹಕ್ಕುಗಳ ಹೋರಾಟಗಾರರ ಹಾಗೂ ಪ್ರಮುಖ ಮುಖಂಡರ ನಿಯೋಗವು ಗೃಹ...

ಶಾರ್ಜೀಲ್ ಇಮಾಮ್‌ಗೆ 7 ದಿನಗಳ ಮಧ್ಯಂತರ ಜಾಮೀನು ಮಂಜೂರು

ವಿದ್ಯಾರ್ಥಿ ಹೋರಾಟಗಾರ ಶಾರ್ಜೀಲ್ ಇಮಾಮ್‌ಗೆ ಅವರ ಸೋದರಸಂಬಂಧಿಯ ಮದುವೆಯಲ್ಲಿ ಪಾಲ್ಗೊಳ್ಳಲು ದೆಹಲಿ ನ್ಯಾಯಾಲಯವು ಏಳು ದಿನಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಈ ಜಾಮೀನು ಅಕ್ಟೋಬರ್ 4 ರಿಂದ ಅಕ್ಟೋಬರ್ 10 ರವರೆಗೆ ಇರಲಿದೆ...

ಎಬಿವಿಪಿ ಒತ್ತಡಕ್ಕೆ ಮುಸ್ಲಿಂ ಪ್ರಾಧ್ಯಾಪಕಿ ರಾಜೀನಾಮೆ; ಕಾಲೇಜು ಆವರಣ ‘ಶುದ್ಧೀಕರಣ’ ಮಾಡಿದ ಬಲಪಂಥೀಯ ಗುಂಪು

ಕೋಲ್ಕತ್ತಾದ ಸುರೇಂದ್ರನಾಥ ಕಾಲೇಜಿನ ಮುಸ್ಲಿಂ ಪ್ರಾಧ್ಯಾಪಕಿ ಮೊಹಮ್ಮದಿ ತರನ್ನುಮ್ ಅವರನ್ನು ಹಾಜರಾತಿ ವಿಚಾರಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್ 11ರಂದು ರಾಜೀನಾಮೆ ನೀಡುವಂತೆ ಒತ್ತಾಯಿಸಲಾಗಿದೆ. ಇದಾದ ಬಳಿಕ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಸದಸ್ಯರು...

SIR ಪರಿಶೋಧ ಹಾಗೂ ಪ್ರತಿರೋಧ ಪ್ರವಾಸಕ್ಕೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನಲ್ಲಿ ಚಾಲನೆ: ಸಿಪಿಐ(ಎಂ) ಬೆಂಬಲ

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ 'SIR ವಿರೋಧಿ ಕರ್ನಾಟಕ', ನಾಗರಿಕ ಮತಕಾವಲು ಸಮಿತಿ, ಜಾತ್ಯತೀತ ಪಕ್ಷಗಳು ಹಾಗೂ ವಿವಿಧ ನಾಗರಿಕ ಸಂಘಟನೆಗಳ...

ಪಶ್ಚಿಮ ಬಂಗಾಳ: ಸರ್ಕಾರದ ಜೊತೆ ಇರಬೇಕಾದರೆ ಎಲೆಕ್ಷನ್ ‘ಟೆಸ್ಟ್’ನಲ್ಲಿ ಗೆಲ್ಲಿ, ಮುಸ್ಲಿಮರಿಗೆ ಸುವೇಂದು ಅಧಿಕಾರಿ ಎಚ್ಚರಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರು ನಂದಿಗ್ರಾಮ ಮತ್ತು ರೆಜಿನಗರ ಕ್ಷೇತ್ರಗಳ ಮುಂಬರುವ ಉಪಚುನಾವಣೆಯನ್ನು ಅಲ್ಪಸಂಖ್ಯಾತರಿಗೆ ಒಂದು ‘ಪರೀಕ್ಷೆ’ ಎಂದು ಕರೆದಿರುವುದು ರಾಜಕೀಯ ವಲಯದಲ್ಲಿ ತೀವ್ರ ವಿವಾದ ಹಾಗೂ ಕಳವಳಕ್ಕೆ ಕಾರಣವಾಗಿದೆ....

ಮಹಿಳೆಯರ ಮೇಲಿನ ದಾಳಿಗಳು ಮತ್ತಷ್ಟು ಹಿಂಸಾತ್ಮಕವಾಗುತ್ತಿವೆ: ಪ್ರಿಯಾಂಕಾ ಗಾಂಧಿ

ದೆಹಲಿ ಮತ್ತು ಬಿಹಾರದಲ್ಲಿ ಮಹಿಳೆಯರ ಮೇಲೆ ಇತ್ತೀಚೆಗೆ ನಡೆದ ಲೈಂಗಿಕ ದೌರ್ಜನ್ಯಗಳ ಬಗ್ಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಕಳವಳ ವ್ಯಕ್ತಪಡಿಸಿದ್ದು, ಇಂತಹ ದಾಳಿಗಳು ಹೆಚ್ಚಾಗುತ್ತಿರುವುದು ಮಾತ್ರವಲ್ಲದೆ ಇನ್ನಷ್ಟು ಹಿಂಸಾತ್ಮಕವಾಗುತ್ತಿವೆ...

ಜಮುಯಿ ಅಪ್ರಾಪ್ತರ ಮೇಲಿನ ದೌರ್ಜನ್ಯ ಪ್ರಕರಣ: ಎನ್‌ಕೌಂಟರ್ ಬಳಿಕ ಪ್ರಮುಖ ಆರೋಪಿ ನಂದನ್ ಯಾದವ್ ಬಂಧನ; 7 ಮಂದಿಯಲ್ಲಿ 5 ಮಂದಿ ವಶಕ್ಕೆ

ಪಾಟ್ನಾ: ಬಿಹಾರದ ಜಮುಯಿ ಜಿಲ್ಲೆಯಲ್ಲಿ ಕೋಚಿಂಗ್‌ ತರಗತಿಯಿಂದ ಮನೆಗೆ ಮರಳುತ್ತಿದ್ದ ಅಪ್ರಾಪ್ತ ಬಾಲಕಿ ಮತ್ತು ಬಾಲಕನನ್ನು ತಡೆದು ಹಲ್ಲೆ ಮಾಡಿ, ಕಿರುಕುಳ ನೀಡಿದ ಪ್ರಕರಣದಲ್ಲಿ ಪೊಲೀಸರು ಪ್ರಮುಖ ಆರೋಪಿಗಳ ಪತ್ತೆಗಾಗಿ ಕಾರ್ಯಾಚರಣೆ ತೀವ್ರಗೊಳಿಸಿದ್ದಾರೆ....

ಬಿಹಾರ|ಸಭ್ಯ ರೀತಿಯಲ್ಲಿ ಅನೈತಿಕ ಪೊಲೀಸ್‌ಗಿರಿ ಮಾಡಿ: ಬಿಜೆಪಿ ಸಚಿವೆ ಶ್ರೇಯಸಿ ಸಿಂಗ್

ಬಿಹಾರದ ಜಮುಯಿ ಜಿಲ್ಲೆಯಲ್ಲಿ ಯುವಕ ಮತ್ತು ಯುವತಿಗೆ ಗುಂಪೊಂದು ಸಾರ್ವಜನಿಕವಾಗಿ ಕಿರುಕುಳ ನೀಡಿದ ಘಟನೆಯನ್ನು ಖಂಡಿಸುವ ಭರದಲ್ಲಿ, ‘ಅನೈತಿಕ ಪೊಲೀಸ್‌ಗಿರಿಯನ್ನು ಹೆಚ್ಚು ಸಭ್ಯ ಮತ್ತು ಘನತೆಯುತ ರೀತಿಯಲ್ಲಿ ಮಾಡಬಹುದು’ ಎಂದು ಬಿಹಾರದ ಬಿಜೆಪಿ...

ಭೋಪಾಲ್: ಮಕ್ಕಳ ಸಾವಿನ ಬಗ್ಗೆ ವರದಿ ಮಾಡುತ್ತಿದ್ದಾಗ ಪೊಲೀಸರು ಹೋಟೆಲ್‌ಗಳಿಂದ ಹೊರಹಾಕಿದರು ಎಂದು ಖ್ಯಾತ ಯೂಟ್ಯೂಬರ್ ಕಾವ್ಯ ಕರ್ನಾಟಕ್ ಆರೋಪ

ಭೋಪಾಲ್: ಮಧ್ಯಪ್ರದೇಶದ ಬಾಲಾಘಾಟ್ ಜಿಲ್ಲೆಯಲ್ಲಿ ಮಕ್ಕಳ ಸಾವಿನ ಕುರಿತು ವರದಿ ಮಾಡಲು ತೆರಳಿದ್ದ ತಮ್ಮ ತಂಡವನ್ನು ಎರಡು ಹೋಟೆಲ್‌ಗಳಿಂದ ಹೊರಹೋಗುವಂತೆ ಒತ್ತಾಯಿಸಲಾಯಿತು. ಪೊಲೀಸರು ಹೋಟೆಲ್‌ಗಳ ದಾಖಲೆಗಳನ್ನು ಪರಿಶೀಲಿಸುತ್ತಿದ್ದು, ದೆಹಲಿಯಿಂದ ಬಂದ ಪತ್ರಕರ್ತರನ್ನು ಅಲ್ಲಿಂದ...

DELHI SIR |’ನೋಟಿಸ್‌ಗಳನ್ನು ಯಾಂತ್ರಿಕವಾಗಿ ನೀಡಿದಂತಿದೆ, ಲಾಜಿಕಲ್ ಡಿಸ್ಕ್ರಿಪೆನ್ಸಿ ಬಗ್ಗೆ ಸ್ಪಷ್ಟನೆ ಅಗತ್ಯ : ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್‌

ದೆಹಲಿಯ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಮಯದಲ್ಲಿ ಮತದಾರರಿಗೆ ನೀಡಲಾದ ನೋಟಿಸ್‌ಗಳು 'ಬಹುತೇಕ ಯಾಂತ್ರಿಕವಾಗಿ' ಜಾರಿಯಾದಂತೆ ಕಂಡುಬರುತ್ತಿವೆ ಮತ್ತು 'ತಾರ್ಕಿಕ ವ್ಯತ್ಯಾಸ'ವನ್ನು ಗುರುತಿಸಲು ಬಳಸಲಾದ ಆಧಾರದ ಬಗ್ಗೆ ಸ್ಪಷ್ಟೀಕರಣದ ಅಗತ್ಯವಿದೆ...