Homeಮುಖಪುಟಉತ್ತರ ಪ್ರದೇಶ | ಅತ್ಯಾಚಾರ ಸಂತ್ರಸ್ತೆಯನ್ನು ಗುಂಡಿಕ್ಕಿ ಕೊಂದ ಆರೋಪಿ

ಉತ್ತರ ಪ್ರದೇಶ | ಅತ್ಯಾಚಾರ ಸಂತ್ರಸ್ತೆಯನ್ನು ಗುಂಡಿಕ್ಕಿ ಕೊಂದ ಆರೋಪಿ

- Advertisement -
- Advertisement -

ಸುಮಾರು 17 ವರ್ಷದ ಅತ್ಯಾಚಾರ ಸಂತ್ರಸ್ತೆಯನ್ನು 22 ವರ್ಷದ ಆರೋಪಿ ಗುಂಡಿಕ್ಕಿ ಕೊಂದು ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯಲ್ಲಿ ನಡೆದಿದೆ. ಸದ್ಯ ತಲೆಮರೆಸಿಕೊಂಡಿರುವ ಆರೋಪಿಯ ಹುಡುಕಾಟ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

ಮಂಗಳವಾರ (ಮಾ.3) ಬೆಳಗಿನ ಜಾವ 1 ಗಂಟೆ ಸುಮಾರಿಗೆ ಆರೋಪಿ ಸಂತ್ರಸ್ತೆಯ ಮನೆಯ ಹಿಂಬಾಗಿಲಿನಿಂದ ಪ್ರವೇಶಿಸಿ ತನ್ನ ಸಹೋದರನ ಪಕ್ಕದಲ್ಲಿ ಮಲಗಿದ್ದ ಬಾಲಕಿಯ ಮೇಲೆ ಎರಡು ಬಾರಿ ಗುಂಡು ಹಾರಿಸಿದ್ದಾನೆ. ಬಾಲಕಿಯ ಸಹೋದರನ ಮೇಲೂ ಹಲ್ಲೆ ನಡೆಸಿ ಬೆದರಿಕೆ ಹಾಕಿದ್ದಾನೆ. ಹೊರಗಡೆ ಮಲಗಿದ್ದ ತಾಯಿ ಆರೋಪಿಯನ್ನು ತಡೆದಾಗ ಆಕೆಗೂ ತಾಯಿಗೂ ಗುಂಡು ಹಾರಿಸಿ ತಪ್ಪಿಸಿಕೊಂಡಿದ್ದಾನೆ ಎಂದು ವರದಿಯಾಗಿದೆ.

ಈ ಬಗ್ಗೆ ಬಸ್ತಿ ಹೆಚ್ಚುವರಿ ಪೊಲೀಸ್ ಸೂಪರಿಂಟೆಂಡೆಂಟ್ (ಎಎಸ್‌ಪಿ) ಶ್ಯಾಮಕಾಂತ್ ಪ್ರತಿಕ್ರಿಯೆ ನೀಡಿದ್ದು, “ಕುಟುಂಬವು ಆರೋಪಿಯನ್ನು ಗುರುತಿಸಿದೆ. ಆತನನ್ನು ಬಂಧಿಸಲು ತಂಡಗಳನ್ನು ರಚಿಸಲಾಗಿದೆ” ಎಂದು ಹೇಳಿದ್ದಾರೆ.

ಕಳೆದ ವರ್ಷ ಡಿಸೆಂಬರ್‌ನಲ್ಲಿ ಆರೋಪಿ ಬಾಲಕಿಗೆ ಮಾದಕ ದ್ರವ್ಯ ನೀಡಿ ಅತ್ಯಾಚಾರ ಎಸಗಿದ್ದ. ತನ್ನ ದುಷ್ಕತ್ಯದ ಫೋಟೋ, ವಿಡಿಯೋಗಳನ್ನು ತೆಗೆದಿಟ್ಟು, ಅದನ್ನು ಬಹಿರಂಗಪಡಿಸುವುದಾಗಿ ಬೆದರಿಕೆ ಹಾಕಿದ್ದ. ಅಲ್ಲದೆ, ಕಳೆದ ಡಿಸೆಂಬರ್ 16ರಂದು ವಿಡಿಯೋವೊಂದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡಿದ್ದ ಎಂದು ಎಎಸ್‌ಪಿ ಶ್ಯಾಮಕಾಂತ್ ತಿಳಿಸಿದ್ದಾರೆ.

ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದಾಗ ಸಂತ್ರಸ್ತೆಯ ಕುಟುಂಬಸ್ಥರು ದೂರು ದಾಖಲಿಸಿದ್ದರು. ಪೊಲೀಸರು ಡಿಸೆಂಬರ್ 17ರಂದು ಕಲ್ವಾರಿ ಪೊಲೀಸ್ ಠಾಣೆಯಲ್ಲಿ ಆರೋಪಿಯ ವಿರುದ್ಧ ಪೋಕ್ಸೋ ಕಾಯ್ದೆ ಮತ್ತು ಐಟಿ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಿದ್ದರು. ಅಂದಿನಿಂದ ಆರೋಪಿ ಪರಾರಿಯಾಗಿದ್ದ ಎಂದು ಹೇಳಿದ್ದಾರೆ.

ಬಾಲಕಿಯ ತಂದೆ ಪಂಜಾಬ್‌ನಲ್ಲಿ ಕೆಲಸ ಮಾಡುತ್ತಿದ್ದು, ಆಕೆ ತನ್ನ ತಾಯಿ ಮತ್ತು ಸಹೋದರನೊಂದಿಗೆ ಉತ್ತರ ಪ್ರದೇಶದಲ್ಲಿ ವಾಸಿಸುತ್ತಿದ್ದಳು. ಯುಪಿ ಬೋರ್ಡ್ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿದ್ದಳು ಎಂದು ಪೊಲೀಸರು ವಿವರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...