Homeಮುಖಪುಟಪರಾರಿಗೆ ಯತ್ನಿಸಿದ ಅತ್ಯಾಚಾರ ಆರೋಪಿಗಳು; ಗುಂಡಿನ ದಾಳಿ ನಡೆಸಿ ಬಂಧಿಸಿದ ಪೊಲೀಸರು

ಪರಾರಿಗೆ ಯತ್ನಿಸಿದ ಅತ್ಯಾಚಾರ ಆರೋಪಿಗಳು; ಗುಂಡಿನ ದಾಳಿ ನಡೆಸಿ ಬಂಧಿಸಿದ ಪೊಲೀಸರು

- Advertisement -
- Advertisement -

ಪಶ್ಚಿಮ ಯುಪಿಯ ಮೀರತ್‌ನಲ್ಲಿ 10 ನೇ ತರಗತಿ ವಿದ್ಯಾರ್ಥಿನಿಯೊಬ್ಬರ ಸಾಮೂಹಿಕ ಅತ್ಯಾಚಾರ ಆರೋಪ ಹೊತ್ತಿರುವ ನಾಲ್ವರು ಆರೋಪಿಗಳಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದು, ಅವರನ್ನು ನ್ಯಾಯಾಲಯಕ್ಕೆ ಕರೆದೊಯ್ಯುವಾಗ ಬಂಧನದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದರಿಂದ ಪೊಲೀಸರು ಗುಂಡು ಹಾರಿಸಿದ್ದಾರೆ.

ಲಖನ್‌ ಮತ್ತು ವಿಕಾಸ್ ಎಂಬ ಇಬ್ಬರು ಆರೋಪಿಗಳನ್ನು ಇಂದು ಬಂಧಿಸಲಾಗಿದ್ದು, ಅವರನ್ನು ನ್ಯಾಯಾಲಯಕ್ಕೆ ಕರೆದೊಯ್ಯಲಾಗುತ್ತಿತ್ತು. ಆದರೆ ಅವರನ್ನು ಕರೆದೊಯ್ಯುತ್ತಿದ್ದ ಪೊಲೀಸರೊಬ್ಬರಿಂದ ಪಿಸ್ತೂಲ್ ಕಿತ್ತು ಪರಾರಿಯಾಗಲು ಯತ್ನಿಸಿದಾಗ ಪೊಲೀಸರು ಲಖನ್‌ಗೆ ಗುಂಡು ಹಾರಿಸಿದ್ದಾರೆ.

ಪೊಲೀಸರ ಬಂದೂಕು ಕಿತ್ತ ಲಖನ್ ಮೊದಲಿಗೆ ಪೊಲೀಸರ ವಿರದ್ದ ಗುಂಡು ಹಾರಿಸಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ. ಆ ನಂತರ ಪೊಲೀಸರು ಅವರ ಕಾಲಿಗೆ ಗುಂಡು ಹಾರಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿ ಅಭ್ಯರ್ಥಿ ಕಾರಲ್ಲಿ ಇವಿಎಂ: ಅಸ್ಸಾಂ ಕಾಂಗ್ರೆಸ್‌ನಿಂದ ಪ್ರತಿಭಟನೆ

“ಇಂದು ಇಬ್ಬರೂ ಆರೋಪಿಗಳನ್ನು ನ್ಯಾಯಾಲಯಕ್ಕೆ ಕರೆದೊಯ್ಯಲಾಗುತ್ತಿತ್ತು. ದಾರಿಯಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್‌ನ ಬಂದೂಕನ್ನು ಕಿತ್ತು ತಪ್ಪಿಸಿಕೊಂಡಾಗ, ಅವರನ್ನು ಹಿಡಿಯಲು ಒಂದು ಕೂಂಬಿಂಗ್ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು… ಆರೋಪಿಗಳು ಪೊಲೀಸರ ಮೇಲೆ ಗುಂಡು ಹಾರಿಸಿದರು. ಅದಕ್ಕಾಗಿ ನಾವು ಅವರ ವಿರುದ್ದ ಗುಂಡು ಹಾರಿಸಿದ್ದೇವೆ. ಈ ಗುಂಡು ಲಖನ್‌‌ ಕಾಲಿಗೆ ಹಾರಿಸಲಾಗಿದೆ” ಎಂದು ಪೊಲೀಸ್ ವರಿಷ್ಠಾಧಿಕಾರಿ (ಗ್ರಾಮೀಣ) ಕೇಶವ್ ಕುಮಾರ್ ಹೇಳಿದ್ದಾರೆ.

ನಂತರ ಇಬ್ಬರೂ ಆರೋಪಿಗಳನ್ನು ಮತ್ತೆ ಸೆರೆಹಿಡಿಯಲಾಗಿದ್ದು, ಲಖನ್‌ನನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

ಗುರುವಾರದಂದು ನಾಲ್ವರು ದುಷ್ಕರ್ಮಿಗಳು ಬಾಲಕಿಯನ್ನು ಸಾಮೂಹಿಕ ಅತ್ಯಾಚಾರ ಮಾಡಿದ್ದರು. ಪೊಲೀಸರು ಇಬ್ಬರನ್ನು ಬಂಧಿಸಿದ್ದು, ಇನ್ನಿಬ್ಬರ ಬಂಧನ ಇನ್ನೂ ಆಗಿಲ್ಲ. ಅತ್ಯಾಚಾರಕ್ಕೊಳಗಾದ ಬಾಲಕಿ ಡೆತ್ ನೋಟ್‍ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಸರ್ಧಾನ ಕೊಟ್ಟಾಳಿ ಪ್ರದೇಶದ ಹಳ್ಳಿಯಲ್ಲಿ ವಾಸಿಸುತ್ತಿರುವ ಬಾಲಕಿಯು ತನ್ನ ಮೇಲೆ ಅತ್ಯಾಚಾರವಾದ ಬಳಿಕ ಗುರುವಾರ ಸಂಜೆ ಮನೆಗೆ ಮರಳಿದ್ದರು. ಮನೆಗೆ ವಾಪಸಾದ ಬಳಿಕ ಘಟನೆಯ ಬಗ್ಗೆ ಹೆತ್ತವರಿಗೆ ವಿವರಿಸಿ, ಸ್ವಲ್ಪ ಹೊತ್ತಿನ ಬಳಿಕ ಕೆಲವು ವಿಷಕಾರಿ ಪದಾರ್ಥಗಳನ್ನು ಸೇವಿಸಿದ್ದರು. ನಂತರ ಬಾಲಕಿಯನ್ನು ಮೋದಿಪುರಂನ ಎಸ್ ಎಸ್ ಡಿ ಗ್ಲೋಬಲ್ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದರೂ, ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಒಡಿಶಾ ಹೆದ್ದಾರಿ ಯೋಜನೆಯ ಟೆಂಡರ್‌ ಅದಾನಿಗೆ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

NDTV ರಾಜೀನಾಮೆ ಬೆನ್ನಲ್ಲೆ ಯೂಟ್ಯೂಬ್ ಚಾನೆಲ್ ತೆರೆದ ರವೀಶ್ ಕುಮಾರ್: ಈಗಾಗಲೇ 10 ಲಕ್ಷದಷ್ಟು...

0
NDTV ಇಂಡಿಯಾದ ಹಿರಿಯ ಕಾರ್ಯನಿರ್ವಾಹಕ ಸಂಪಾದಕ ರವೀಶ್ ಕುಮಾರ್ ರಾಜೀನಾಮೆ ಪ್ರಕಟಿಸಿದ ಬೆನ್ನಲ್ಲೆ 'ರವೀಶ್ ಕುಮಾರ್ ಅಫಿಶಿಯಲ್' ಹೆಸರಿನ ಯೂಟ್ಯೂಬ್ ಚಾನೆಲ್‌ ಅನ್ನು ಆರಂಭಿಸಿದ್ದಾರೆ. ತಮ್ಮ ಮೊದಲ ವಿಡಿಯೋದಲ್ಲಿ "ಪ್ರಜಾಪ್ರಭುತ್ವಕ್ಕೆ ಗಂಭೀರ ಬೆದರಿಕೆಯಿರುವ...