Homeಮುಖಪುಟಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸನ್ಯಾಸಿ ವಿರುದ್ಧ ಅತ್ಯಾಚಾರ ಆರೋಪ

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸನ್ಯಾಸಿ ವಿರುದ್ಧ ಅತ್ಯಾಚಾರ ಆರೋಪ

- Advertisement -
- Advertisement -

ಪಶ್ಚಿಮ ಬಂಗಾಳದ ಮಹಿಳೆಯೊಬ್ಬರು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸನ್ಯಾಸಿ ಕಾರ್ತಿಕ್ ಮಹಾರಾಜ್ ವಿರುದ್ದ ಅತ್ಯಾಚಾರ ಆರೋಪ ಮಾಡಿದ್ದಾರೆ. ಬಿಜೆಪಿಗೆ ಆಪ್ತರಾಗಿರುವ ಕಾರ್ತಿಕ್ ಮಹಾರಾಜ್ ಆರೋಪಗಳನ್ನು ನಿರಾಕರಿಸಿದ್ದಾರೆ.

ಭಾರತ್ ಸೇವಾಶ್ರಮ ಸಂಘದ ಸನ್ಯಾಸಿ ಕಾರ್ತಿಕ್ ಮಹಾರಾಜ್ ಅವರು ಮುರ್ಷಿದಾಬಾದ್‌ನಲ್ಲಿರುವ ಆಶ್ರಮಕ್ಕೆ ತನ್ನನ್ನು ಕರೆದೊಯ್ದು, ಅದರ ಆವರಣದಲ್ಲಿರುವ ಶಾಲೆಯಲ್ಲಿ ಬೋಧನಾ ಕೆಲಸ ಕೊಡಿಸುವುದಾಗಿ ಭರವಸೆ ನೀಡಿದ್ದರು ಮತ್ತು ಆಶ್ರಮದಲ್ಲಿ ವಸತಿಯನ್ನೂ ನೀಡಿದ್ದರು.

ಆದರೆ, ಒಂದು ದಿನ ರಾತ್ರಿ ಸನ್ಯಾಸಿ ತನ್ನ ಕೋಣೆಗೆ ನುಗ್ಗಿ ಅತ್ಯಾಚಾರ ಎಸಗಿದ್ದಾರೆ. 2013ರ ಜನವರಿಯಿಂದ ಜೂನ್ ನಡುವೆ ಆರು ತಿಂಗಳ ಅವಧಿಯಲ್ಲಿ ಸನ್ಯಾಸಿ ಕಾರ್ತಿಕ್ ಕನಿಷ್ಠ 12 ಬಾರಿ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ.

ಭಯ ಮತ್ತು ಅಸಹಾಯಕತೆಯಿಂದ ಇಷ್ಟು ಸಮಯ ದೌರ್ಜನ್ಯದ ಬಗ್ಗೆ ನಾನು ಮೌನವಾಗಿದ್ದೆ. ಪೊಲೀಸರಿಗೆ ದೂರು ನೀಡಿದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಸನ್ಯಾಸಿ ಬೆದರಿಕೆ ಹಾಕಿದ್ದರು ಮಹಿಳೆ ತಿಳಿಸಿದ್ದಾರೆ.

ಸನ್ಯಾಸಿ ಕಾರ್ತಿಕ್ ಮಹಾರಾಜ್ ವಿರುದ್ಧ ಸಂಬಂಧಿತ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗಿದೆ ಮತ್ತು ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿದ್ದಾಗಿ indiatoday.in ವರದಿ ಮಾಡಿದೆ.

ಆರೋಪ ನಿರಾಕರಿಸಿದ ಕಾರ್ತಿಕ್ ಮಹಾರಾಜ್

ಈ ವರ್ಷ ದೇಶದ ನಾಲ್ಕನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಶ್ರೀಗೆ ಭಾಜನರಾದ ಸನ್ಯಾಸಿ ಕಾರ್ತಿಕ್ ಮಹಾರಾಜ್, ನಾನು ಯಾವುದೇ ತಪ್ಪು ಮಾಡಿಲ್ಲ ಎಂದು ಹೇಳಿದ್ದಾರೆ. ಆದರೆ, ಮಹಿಳೆ ಉಲ್ಲೇಖಿಸಿದ ಆಶ್ರಮದಲ್ಲಿ ವಸತಿ ಸೌಲಭ್ಯವಿದೆ ಎಂಬುವುದನ್ನು ಅವರು ಒಪ್ಪಿಕೊಂಡಿದ್ದಾರೆ.

“ನಾನು ಸನ್ಯಾಸಿ. ಸನ್ಯಾಸಿಯ ಜೀವನದಲ್ಲಿ ಇಂತಹ ಆರೋಪಗಳು ಸಾಮಾನ್ಯವಾದುದಲ್ಲ. ನಮ್ಮ ಕಾನೂನು ತಂಡವು ಈ ಸಂಬಂಧ ನ್ಯಾಯಾಲಯದಲ್ಲಿ ಪ್ರತಿಕ್ರಿಯಿಸುತ್ತದೆ” ಎಂದು ಕಾರ್ತಿಕ್ ಮಹಾರಾಜ್ ಹೇಳಿದ್ದಾರೆ.

ಆರೋಪಿ ಸನ್ಯಾಸಿಗೆ ಬಿಜೆಪಿ ಜೊತೆಗೆ ನಿಕಟ ಸಂಬಂಧ ಇರುವುದರಿಂದ ಈ ಪ್ರಕರಣವು ಗಮನ ಸೆಳೆದಿದೆ. ಸನ್ಯಾಸಿ ಕಾರ್ತಿಕ್ ಮಹಾರಾಜ್ ಚುನಾವಣೆಯಲ್ಲಿ ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ. ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿರುದ್ಧ ಕೆಲಸ ಮಾಡುತ್ತಿದ್ದಾರೆ ಎಂದು ಖುದ್ದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಈ ಹಿಂದೆ ಆರೋಪಿಸಿದ್ದರು.

ತಮ್ಮ ಆಶ್ರಮದ ಪ್ರತಿಷ್ಠೆಗೆ ಕಳಂಕ ತಂದಿದ್ದಕ್ಕಾಗಿ ಬ್ಯಾನರ್ಜಿ ಅವರಿಂದ ಬೇಷರತ್ತಾದ ಕ್ಷಮೆಯಾಚನೆಯನ್ನು ಕೋರಿ ಮಹಾರಾಜ್ 2024 ರಲ್ಲಿ ಲೀಗಲ್ ನೋಟಿಸ್ ಕಳುಹಿಸಿದ್ದರು.

ಕಾಲೇಜಿನ ಹಳೆಯ ವಿದ್ಯಾರ್ಥಿ ಮತ್ತು ಇಬ್ಬರು ಹಿರಿಯ ವಿದ್ಯಾರ್ಥಿಗಳು ತನ್ನ ಮೇಲೆ ಕಾಲೇಜು ಕ್ಯಾಂಪಸ್‌ನಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಕೋಲ್ಕತ್ತಾ ಕಾಲೇಜು ವಿದ್ಯಾರ್ಥಿನಿಯೊಬ್ಬರು ಆರೋಪಿಸಿದ್ದಾರೆ. ಈ ಸಂಬಂಧ ಆಡಳಿತಾರೂಢ ಟಿಎಂಸಿ ಸರ್ಕಾರದ ವಿರುದ್ದ ಜನರಿಂದ ಆಕ್ರೋಶ ಭುಗಿಲೆದ್ದಿದೆ. ಈ ನಡುವೆ ಸನ್ಯಾಸಿ ವಿರುದ್ದ ಅತ್ಯಾಚಾರ ಆರೋಪ ಕೇಳಿ ಬಂದಿದೆ.

ಸೌಜನ್ಯ : indiatoday.in

‘ಕೇಸರಿ ಧ್ವಜ ಹಿಡಿದಿರುವ ಭಾರತ ಮಾತೆ ‘ಧಾರ್ಮಿಕ ಚಿತ್ರ’: ಕೇರಳ ರಾಜ್ಯಪಾಲರ ವಿರುದ್ಧ ಗುಡುಗಿದ ಸಚಿವ ಶಿವನ್‌ಕುಟ್ಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ನಿಧನ

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ (82 ವರ್ಷ) ಅವರು ಬುಧವಾರ (ಜನವರಿ 7, 2026) ತಡರಾತ್ರಿ ಪುಣೆಯಲ್ಲಿರುವ ತಮ್ಮ ಮನೆಯಲ್ಲಿ ಅಲ್ಪಕಾಲದ ಅನಾರೋಗ್ಯದ ನಂತರ ನಿಧನರಾದರು. ಈ ಕುರಿತು ಗಾಡ್ಗೀಳ್ ಅವರ...

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...

ಬಾಂಗ್ಲಾದೇಶ: ಗುಂಪು ದಾಳಿಯಿಂದ ತಪ್ಪಿಸಿಕೊಳ್ಳಲು ಕಾಲುವೆಗೆ ಹಾರಿದ ಹಿಂದೂ ವ್ಯಕ್ತಿ ಸಾವು

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ ಸುದ್ದಿಗಳು ನಿರಂತರವಾಗಿ ವರದಿಯಾಗುತ್ತಿರುವ ನಡುವೆಯೇ, ನೌಗಾಂವ್ ಜಿಲ್ಲೆಯ ಮೊಹದೇವ್‌ಪುರ ಉಪಜಿಲ್ಲಾದಲ್ಲಿ ದರೋಡೆ ಆರೋಪ ಹೊರಿಸಿದ ಗುಂಪಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ 25 ವರ್ಷದ ಹಿಂದೂ ವ್ಯಕ್ತಿ ಕಾಲುವೆಗೆ ಹಾರಿ...

ಹೋರಾಟಗಾರ್ತಿ ಕಾಮ್ರೇಡ್ ಪದ್ಮಕ್ಕ ಶ್ರದ್ಧಾಂಜಲಿ ಸಭೆ

ಬೆಂಗಳೂರಿನ ಆಶೀರ್ವಾದ್ ಸೆಂಟರ್ ನಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿತ್ತು. ಪದ್ಮಾರವರ ಕುಟುಂಬ, ಸಹ ಹೋರಾಟಗಾರು, ಚಿಂತಕರು, ಸಾಹಿತಿಗಳು ಪಾಲ್ಗೊಂಡಿದ್ದರು. ಸಭೆಯಲ್ಲಿ ಪದ್ಮಾರವರ ಜೊತೆಗಿನ ಒಡನಾಟವನ್ನು ನೆನೆಯಲಾಯಿತು. ಡಿಸೆಂಬರ್ 25 ರಂದು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ...

‘ನಾಯಿಗಳ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲ’: ರಸ್ತೆಗಳು, ನಾಯಿಗಳಿಂದ ಮುಕ್ತವಾಗಿರಬೇಕು: ಸುಪ್ರೀಂ ಕೋರ್ಟ್

ನವದೆಹಲಿ: ನಾಯಿ ಕಚ್ಚುವ ಮನಸ್ಥಿತಿಯಲ್ಲಿರುವಾಗ ಅದರ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲವಾದ್ದರಿಂದ, ರಸ್ತೆಗಳು ಅಥವಾ ಬೀದಿಗಳು ನಾಯಿಗಳಿಂದ ಮುಕ್ತವಾಗುವಂತೆ ನೋಡಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.  ಬೀದಿ ನಾಯಿಗಳಿಗೆ ಸಂಬಂಧಿಸಿದ ಸ್ವಯಂಪ್ರೇರಿತ ಪ್ರಕರಣವನ್ನು...

‘ಮಜಾ ನಾ ಕರಾಯಾ ತೋ..ಪೈಸೆ ವಾಪಸ್’: ಭಾರತಕ್ಕೆ ನೇರ ಬೆದರಿಕೆ ಹಾಕಿದ ಪಾಕಿಸ್ತಾನ ಸೇನಾಧಿಕಾರಿ ಅಹ್ಮದ್ ಷರೀಫ್ ಚೌಧರಿ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ISPR) ನ ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ, ಕಾಬೂಲ್ ಜೊತೆಗಿನ ಇಸ್ಲಾಮಾಬಾದ್‌ನ ನಡೆಯುತ್ತಿರುವ ಸಂಘರ್ಷದೊಂದಿಗೆ ಭಾರತವನ್ನು ಜೋಡಿಸುವ ಮೂಲಕ ಮತ್ತೊಮ್ಮೆ ವಿವಾದವನ್ನು ಹುಟ್ಟುಹಾಕಿದ್ದಾರೆ.  ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ...

‘ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದ ನೆಹರು, ಮೊಘಲ್ ಆಕ್ರಮಣಕಾರರನ್ನು ವೈಭವೀಕರಿಸುತ್ತಿದ್ದರು’: ಬಿಜೆಪಿ ಆರೋಪ

ನವದೆಹಲಿ: ಸೋಮನಾಥ ದೇವಾಲಯವನ್ನು ಹಿಂದೆ ಘಜ್ನಿ ಮಹಮ್ಮದ್ ಮತ್ತು ಅಲಾವುದ್ದೀನ್ ಖಿಲ್ಜಿ ಲೂಟಿ ಮಾಡಿದ್ದರು ಆದರೆ ಸ್ವತಂತ್ರ ಭಾರತದಲ್ಲಿ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಭಗವಾನ್ ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದರು ಎಂದು...

ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿರುವುದಾಗಿ ಆರೋಪ: ಆಕೆ ತನ್ನನ್ನು ತಾನು ವಿವಸ್ತ್ರಗೊಳಿಸಿಕೊಂಡಿದ್ದಾಳೆ ಎಂದ ಪೊಲೀಸ್ ಕಮಿಷನರ್

ಹುಬ್ಬಳ್ಳಿ: ಪೊಲೀಸ್ ವ್ಯಾನ್ ಒಳಗೆ ಪೂರ್ಣ ಬಟ್ಟೆಯಿಲ್ಲದೆ ಮಹಿಳೆಯೊಬ್ಬರ ವಿಡಿಯೋ ವೈರಲ್ ಆದ ನಂತರ, ಬಿಜೆಪಿ ನಾಯಕರು ಪೊಲೀಸರು ಅವಳನ್ನು ಬಂಧಿಸುವಾಗ ಆಕೆಯ ಬಟ್ಟೆಗಳನ್ನು ಬಿಚ್ಚಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಜನವರಿ 5...