Homeದಲಿತ್ ಫೈಲ್ಸ್14 ವರ್ಷದ ದಲಿತ ಬಾಲಕಿಯ ಅತ್ಯಾಚಾರ, ಕೊಲೆ ಪ್ರಕರಣ : 16 ವರ್ಷದ ಬಾಲಕನನ್ನು ವಶಕ್ಕೆ...

14 ವರ್ಷದ ದಲಿತ ಬಾಲಕಿಯ ಅತ್ಯಾಚಾರ, ಕೊಲೆ ಪ್ರಕರಣ : 16 ವರ್ಷದ ಬಾಲಕನನ್ನು ವಶಕ್ಕೆ ಪಡೆದ ಪೊಲೀಸರು

- Advertisement -
- Advertisement -

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ 14 ವರ್ಷದ ದಲಿತ ಬಾಲಕಿಯ ಭೀಕರ ಅತ್ಯಾಚಾರ, ಕೊಲೆ ನಡೆದಿದ್ದು, ಈ ಸಂಬಂಧ 16 ವರ್ಷದ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಗುರುವಾರ (ಜ.15) ಬೆಳಿಗ್ಗೆ ಶಾಲೆಗೆ ಹೋದ ಬಾಲಕಿಯ ಶವ, ಆಕೆಯ ಮನೆಯಿಂದ ಸುಮಾರು 17 ಕಿಲೋ ಮೀಟರ್ ದೂರದ ವಾಣಿಯಂಬಲಂ ಎಂಬಲ್ಲಿ ರೈಲ್ವೆ ಹಳಿಯ ಬಳಿ ಪೊದೆಗಳ ನಡುವೆ ಪತ್ತೆಯಾಗಿದೆ.

ಬಾಲಕಿ ಶಾಲೆಯಿಂದ ಮನೆಗೆ ಮರಳದ ಹಿನ್ನೆಲೆ, ಆಕೆಯ ತಾಯಿ ಕರೆ ಮಾಡಿದ್ದರು. ಗುರುವಾರ ಸಂಜೆ 5 ಗಂಟೆಯ ಸುಮಾರಿಗೆ ಕರೆ ಸ್ವೀಕರಿಸಿದ ಬಾಲಕಿ, ಮನೆಗೆ ಬರುತ್ತಿದ್ದೇನೆ ಎಂದು ತಾಯಿಗೆ ತಿಳಿಸಿದ್ದಾಳೆ. ಬಳಿಕ ಆಕೆಯ ಮೊಬೈಲ್ ಸ್ವಿಚ್‌ ಆಫ್‌ ಆಗಿದೆ. ರಾತ್ರಿಯಾದರೂ ಆಕೆ ಮನೆ ತಲುಪದ ಹಿನ್ನೆಲೆ, ಮನೆಯವರು ಕರುವಕುಂಡ್ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ರಾತ್ರಿಯಿಡೀ ಬಾಲಕಿಯ ಕುಟುಂಬಸ್ಥರು ಮತ್ತು ಸ್ಥಳೀಯರ ಜೊತೆಗೂಡಿ ಆಕೆಗಾಗಿ ಹುಡುಕಾಟ ನಡೆಸಿದ್ದರು. ಬಳಿಕ ಕುಟುಂಬಸ್ಥರ ಮಾಹಿತಿಯಂತೆ ಬಾಲಕಿಯ ಗೆಳೆಯ ಅಥವಾ ಆಕೆಯದ್ದೇ ಶಾಲೆಯಲ್ಲಿ ಕಲಿಯುವ ಪರಿಚಯಸ್ಥ ಹುಡುಗನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಕೊಲೆ ನಡೆದಿರುವ ವಿಚಾರ ಬಯಲಾಗಿದೆ.

ಹುಡುಗ ನೀಡಿದ ಮಾಹಿತಿಯಂತೆ ವಾಣಿಯಂಬಲಂ ಬಳಿ ರೈಲ್ವೆ ಹಳಿಗಳ ಸಮೀಪ ಪೊದೆಯಲ್ಲಿ ಬಾಲಕಿಯ ಶವವನ್ನು ಶುಕ್ರವಾರ ಪೊಲೀಸರು ಪತ್ತೆ ಹಚ್ಚಿದ್ದಾರೆ. ಶಾಲಾ ಸಮವಸ್ತ್ರ ಧರಿಸಿದ ರೀತಿಯಲ್ಲಿ ಬಾಲಕಿಯ ಶವ ಪತ್ತೆಯಾಗಿದೆ. ಆಕೆಯ ಕೈ-ಕಾಲುಗಳನ್ನು ಬಟ್ಟೆಯಿಂದ ಕಟ್ಟಲಾಗಿತ್ತು. ಚಪ್ಪಲಿ ಮತ್ತು ಬ್ಯಾಗ್‌ ಮೃತದೇಹದ ಸಮೀಪದಲ್ಲೇ ಇತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಆಮಿಷವೊಡ್ಡಿ ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು, ಬಳಿಕ ಆಕೆಯ ಕೈ-ಕಾಲುಗಳನ್ನು ಕಟ್ಟಿ ಅತ್ಯಾಚಾರವೆಸಗಿ, ನಂತರ ಉಸಿರುಗಟ್ಟಿಸಿ ಕೊಲೆ ಮಾಡಿರುವುದನ್ನು ಬಾಲಕ ಒಪ್ಪಿಕೊಂಡಿದ್ದಾನೆ. ಆತನೇ ಘಟನಾ ಸ್ಥಳವನ್ನು ತೋರಿಸಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಆರೋಪಿ ಬಾಲಕ ಈ ಹಿಂದೆ ಎರಡು ಬಾರಿ ಬಾಲಕಿಗೆ ಕಿರುಕುಳ ನೀಡಿದ್ದ. ಈ ಸಂಬಂಧ ಒಮ್ಮೆ ಬಾಲಕಿಯ ಪೋಷಕರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಆತನನ್ನು ಕರೆದು ಎಚ್ಚರಿಕೆ ನೀಡಿ ಕಳಿಸಿದ್ದರು. ಇನ್ನು ಮುಂದೆ ತಪ್ಪು ಮಾಡುವುದಿಲ್ಲ ಎಂದಿದ್ದ ಬಾಲಕ, ಈಗ ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾನೆ ಎಂದು ವರದಿಗಳು ಹೇಳಿವೆ.

ಬಾಲಕಿಯ ತಂದೆ ಕರುವಕುಂಡ್ ಸಮೀಪ ವರ್ಕ್‌ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದರೆ, ತಾಯಿ ಸ್ಥಳೀಯ ಆಯಿಲ್‌ ಮಿಲ್‌ನಲ್ಲಿ ದುಡಿಯುತ್ತಿದ್ದರು. ದಂಪತಿಗೆ ಇಬ್ಬರು ಹೆಣ್ಣು ಮಕ್ಕಳು. ಅವರಲ್ಲಿ ದೊಡ್ಡವಳು ಕೊಲೆಯಾದ ಬಾಲಕಿ.

ಶಾಲೆಯಲ್ಲಿ ಪಠ್ಯ ಮತ್ತು ಪಠ್ಯೇತರ ಚಟುವಟಿಕೆ, ವಿಶೇಷವಾಗಿ ಸ್ಟೂಡೆಂಟ್‌ ಪೊಲೀಸ್ ಕ್ಯಾಡೆಟ್‌ (ಎಸ್‌ಪಿಸಿ) ಸೇರಿದಂತೆ ವಿವಿಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ಆಕೆ, ಪ್ರತಿಭಾವಂತಳಾಗಿದ್ದಳು. ಬಾಲಕ ಕೂಡ ಅದೇ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಆತ ಈ ಹಿಂದೆ ಯಾವುದೇ ಅಪರಾಧ ಚಟುವಟಿಕೆಗಳಲ್ಲಿ ಪಾಲ್ಗೊಂಡ ಬಗ್ಗೆ ವರದಿಗಳಿಲ್ಲ.

ಬಾಲಕಿ ದಲಿತ ಸಮುದಾಯದವಳು ಎಂದು ಮಲಯಾಳಂನ ಪ್ರಮುಖ ಸುದ್ದಿ ಸಂಸ್ಥೆ onmanorama.com ವರದಿ ಮಾಡಿದೆ. ಮತ್ತೊಂದು ಪ್ರಮುಖ ಸುದ್ದಿ ಸಂಸ್ಥೆ keralakaumudi.com ಬಾಲಕ ಮಾದಕ ವ್ಯಸನಿಯಾಗಿದ್ದ ಎಂದು ಉಲ್ಲೇಖಿಸಿದೆ. ಈ ಕುರಿತು ಹೆಚ್ಚಿನ ಮತ್ತು ಖಚಿತ ಮಾಹಿತಿ ತಿಳಿದು ಬರಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಮತಾ ಬ್ಯಾನರ್ಜಿ ವಿರುದ್ಧ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಸುವೇಂದು ಅಧಿಕಾರಿ

ಪಶ್ಚಿಮ ಬಂಗಾಳದ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಶುಕ್ರವಾರ (ಜ.16) ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ 100 ಕೋಟಿ ರೂ.ಗಳ ಪರಿಹಾರ ಕೋರಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಮಮತಾ...

ಕೋಮುವಾದ ಕಾರಣಕ್ಕೆ ಬಾಲಿವುಡ್‌ನಲ್ಲಿ ಅವಕಾಶ ಕಡಿಮೆ; ರೆಹಮಾನ್ ಹೇಳಿಕೆ ತಳ್ಳಿಹಾಕಿದ ಜಾವೇದ್ ಅಖ್ತರ್

ಯಶಸ್ವೀ ಸಂಗೀತಗಾರನಾಗಿ ಹಲವು ಕೊಡುಗೆ ನೀಡಿದ್ದರೂ ಕೆಲವರಿಗೆ ಹೊರಗಿನವನು ಎಂಬ ಭಾವನೆ ಹೋಗಿಲ್ಲ. ಕಳೆದ ಎಂಟು ವರ್ಷಗಳಲ್ಲಿ ಬಾಲಿವುಡ್‌ನ ಕದ ಮುಚ್ಚಿದೆ ಎಂಬ ಬಗ್ಗೆ ಎ.ಆರ್. ರೆಹಮಾನ್ ಹೇಳಿಕೆಯನ್ನು ಹಿರಿಯ ಗೀತೆ ರಚನೆಕಾರ...

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮುಸ್ಲಿಮರನ್ನು ಎರಡನೇ ದರ್ಜೆಯ ನಾಗರಿಕರಂತೆ ನಡೆಸಿಕೊಳ್ಳುತ್ತದೆ: ಪಿಣರಾಯಿ ವಿಜಯನ್

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಬಿಜೆಪಿ ಆಡಳಿತದ ಕೇಂದ್ರ ಸರ್ಕಾರದ ವಿರುದ್ಧ ತಮ್ಮ ವಾಗ್ದಾಳಿ ನಡೆಸಿದ್ದಾರೆ. ಪೌರತ್ವ ಕಾಯ್ದೆ ಮತ್ತು ಹೊಸ ವಕ್ಫ್ ಕಾಯ್ದೆಯಂತಹ ಅದರ ವಿವಿಧ ಕಾನೂನುಗಳು ಮತ್ತು ನೀತಿಗಳು...

ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆ: 114 ಸ್ಥಾನಗಳೊಂದಿಗೆ ಪ್ರಮುಖ ಪಕ್ಷವಾಗಿ ಹೊರಹೊಮ್ಮಿದ ಎಐಎಂಐಎಂ

ಮಹಾರಾಷ್ಟ್ರ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಅಖಿಲ ಭಾರತ ಮಜ್ಲಿಸ್ ಇ ಇತ್ತೆಹಾದುಲ್ ಮುಸ್ಲಿಮೀನ್ ಪಕ್ಷವು (ಎಐಎಂಐಎಂ) 114 ಸ್ಥಾನಗಳನ್ನು ಗೆದ್ದು, 2017 ರ ಸ್ಥಳೀಯ ಸಂಸ್ಥೆ ಚುನಾವಣೆಗಳಿಗಿಂತ ತನ್ನ ಸಂಖ್ಯೆಯನ್ನು ತೀವ್ರವಾಗಿ ಹೆಚ್ಚಿಸಿಕೊಂಡಿದೆ....

ವಲಸೆ ಕಾರ್ಮಿಕರ ಶೆಡ್‌ಗಳಿಗೆ ತೆರಳಿ ಅನೈತಿಕ ಪೊಲೀಸ್‌ಗಿರಿ : ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ಬಂಧನ

ವಲಸೆ ಕಾರ್ಮಿಕರ ಶೆಡ್‌ಗಳಿಗೆ ತೆರಳಿ ಅವರ ಗೌಪ್ಯ ದಾಖಲೆಗಳನ್ನು ಪಡೆದು ಪೌರತ್ವ ಪರಿಶೀಲಿಸುವ ಮೂಲಕ ಅನೈತಿಕ ಪೊಲೀಸ್‌ಗಿರಿ ಮಾಡುತ್ತಿದ್ದ ಕೊಲೆ ಆರೋಪಿ ಪುನೀತ್ ಕೆರೆಹಳ್ಳಿಯನ್ನು ಬನ್ನೇರುಘಟ್ಟ ಪೊಲೀಸರು ಶುಕ್ರವಾರ (ಜ.16) ತಡರಾತ್ರಿ ಬಂಧಿಸಿದ್ದಾರೆ...

ಬಳ್ಳಾರಿ| ಬಂಡಿಹಟ್ಟಿ-ದಾನಪ್ಪ ಬೀದಿ ಬಡರೈತರ ಮೇಲೆ ದೌರ್ಜನ್ಯ; ಪ್ರತಾಪರೆಡ್ಡಿ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

ಬಳ್ಳಾರಿ ಜಿಲ್ಲೆಯ ಬಂಡಿಹಟ್ಟಿ-ದಾನಪ್ಪ ಬೀದಿಯ ಬಡರೈತರ ಮೇಲೆ ದೌರ್ಜನ್ಯ ಎಸಗುತ್ತಿರುವ ಎನ್‌.ಪ್ರತಾಪ ರೆಡ್ಡಿ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು 'ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ' ಮುಖಂಡರು ಆಗ್ರಹಿಸಿದರು....

ರೋಹಿತ್ ವೇಮುಲಾ 10ನೇ ಶಹಾದತ್ ದಿನ: ಜ.17ರಂದು ಹೈದರಾಬಾದ್ ವಿವಿಯಲ್ಲಿ ರೋಹಿತ್ ಕಾಯ್ದೆಯ ‘ಜನತಾ ಕರಡು’ ಅನಾವರಣ

ಹೈದರಾಬಾದ್ ಕೇಂದ್ರ ವಿಶ್ವವಿದ್ಯಾಲಯದಲ್ಲಿ ದಲಿತ ಸಂಶೋಧನಾ ವಿದ್ವಾಂಸ ಮತ್ತು ಅಂಬೇಡ್ಕರ್ ವಿದ್ಯಾರ್ಥಿ ಸಂಘದ (ASA) ನಾಯಕ ರೋಹಿತ್ ವೇಮುಲ ಅವರ ಮರಣದ ಹತ್ತು ವರ್ಷಗಳ ನಂತರ, ವಿದ್ಯಾರ್ಥಿ ಗುಂಪುಗಳು ಮತ್ತು ಸಾಮಾಜಿಕ ನ್ಯಾಯ...

ಮಹಾರಾಷ್ಟ್ರವು ಪ್ರಧಾನಿ ಮೋದಿಯನ್ನು ಹೆಚ್ಚು ಅವಲಂಬಿಸಿದೆ: ಸಿಎಂ ಫಡ್ನವೀಸ್

ನಗರ ಪಾಲಿಕೆ ಚುನಾವಣೆಯಲ್ಲಿ ಮಹಾಯುತಿ ಭರ್ಜರಿ ಜಯ ಸಾಧಿಸಿದ ನಂತರ ಮಹಾರಾಷ್ಟ್ರದ ಜನರಿಗೆ ಧನ್ಯವಾದ ಅರ್ಪಿಸಿದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ವಿಜಯವನ್ನು ಭಾರತೀಯ ಜನತಾ ಪಕ್ಷದ (ಬಿಜೆಪಿ) ಕಾರ್ಯಕರ್ತರಿಗೆ ಅರ್ಪಿಸಿದರು. ರಾಜ್ಯವು ಪ್ರಧಾನಿ...

ಮೆಹುಲ್ ಚೋಕ್ಸಿ ಪುತ್ರ ಕೂಡ ಹಣ ವರ್ಗಾವಣೆಯಲ್ಲಿ ಭಾಗಿಯಾಗಿದ್ದಾರೆ: ಜಾರಿ ನಿರ್ದೇಶನಾಲಯ

ಪರಾರಿಯಾಗಿರುವ ಉದ್ಯಮಿ ಮೆಹುಲ್ ಚೋಕ್ಸಿ ವಿರುದ್ಧದ ಹಣ ವರ್ಗಾವಣೆ ಪ್ರಕರಣದಲ್ಲಿ, ಅವರ ಮಗ ರೋಹನ್ ಚೋಕ್ಸಿ ಕೂಡ ಈ ಅಪರಾಧದಲ್ಲಿ ಸಕ್ರಿಯವಾಗಿ ಭಾಗಿಯಾಗಿದ್ದಾರೆ ಎಂದು ಜಾರಿ ನಿರ್ದೇಶನಾಲಯ (ಇಡಿ) ಮೊದಲ ಬಾರಿಗೆ ಹೇಳಿಕೊಂಡಿದೆ....

‘ವೋಟ್ ಚೋರಿ ಒಂದು ರಾಷ್ಟ್ರವಿರೋಧಿ ಕೃತ್ಯ..’; ಬಿಎಂಸಿ ಫಲಿತಾಂಶದ ಬಗ್ಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ

ಮಹಾರಾಷ್ಟ್ರ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಚುನಾವಣೆಯಲ್ಲಿ ಎಣಿಕೆ ವೇಗ ಪಡೆಯುತ್ತಿದ್ದಂತೆ, ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಚುನಾವಣಾ ಆಯೋಗವನ್ನು ಗುರಿಯಾಗಿಸಿಕೊಂಡು ತಮ್ಮ ಮೊದಲ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ....