Homeಕರ್ನಾಟಕಮಂಗಳೂರು| 8 ವರ್ಷದ ಬಾಲಕಿಯ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣ : ಮೂವರು ಅಪರಾಧಿಗಳಿಗೆ ಮರಣದಂಡನೆ

ಮಂಗಳೂರು| 8 ವರ್ಷದ ಬಾಲಕಿಯ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣ : ಮೂವರು ಅಪರಾಧಿಗಳಿಗೆ ಮರಣದಂಡನೆ

- Advertisement -
- Advertisement -

ಎಂಟು ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ, ಕೊಲೆ ಮಾಡಿದ ಪ್ರಕರಣದ ಮೂವರು ಅಪರಾಧಿಗಳಿಗೆ ಮಂಗಳೂರಿನ ಪೋಕ್ಸೋ ವಿಶೇಷ ನ್ಯಾಯಾಲಯ ಮರಣದಂಡನೆ ಹಾಗೂ 1.20 ಲಕ್ಷ ರೂಪಾಯಿ ದಂಡ ವಿಧಿಸಿದೆ.

ಮಧ್ಯ ಪ್ರದೇಶದ ಪನ್ನಾ ಜಿಲ್ಲೆಯ ಜಯ್‌ ಸಿಂಗ್ (21), ಮುಕೇಶ್ ಸಿಂಗ್ (20) ಮತ್ತು ಜಾರ್ಖಂಡ್‌ನ ರಾಂಚಿಯ ಮನೀಷ್ ತಿರ್ಕಿ (33) ಶಿಕ್ಷೆಗೊಳಗಾದವರು.

ಪ್ರಕರಣದ ವಿವರ : ಮಂಗಳೂರು ನಗರದ ಹೊರವಲಯ ಉಳಾಯಿಬೆಟ್ಟು ಬಳಿಯ ತಿರುವೈಲು ಗ್ರಾಮದ ಪರಾರಿಯಲ್ಲಿರುವ ರಾಜ್‌ ಟೈಲ್ಸ್‌ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಜಾರ್ಖಂಡ್ ಮೂಲದ ಕುಟುಂಬದ ಎಂಟು ವರ್ಷದ ಹೆಣ್ಣು ಮಗಳು 2021ರ ನವೆಂಬರ್ 20ರಂದು ಸಂಜೆ ಕಾಣೆಯಾಗಿದ್ದಳು. ಈ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಬಾಲಕಿಯ ಪೋಷಕರು ಮತ್ತು ಊರಿನವರು ಬಾಲಕಿಗಾಗಿ ಹುಡುಕಾಟ ನಡೆಸಿದಾಗ, ನಾಪತ್ತೆಯಾದ ದಿನವೇ ರಾತ್ರಿ ಫ್ಯಾಕ್ಟರಿಯ ಹಿಂಭಾಗದ ಚರಂಡಿಯಲ್ಲಿ ಬಾಲಕಿಯ ಮೃತದೇಹ ಪತ್ತೆಯಾಗಿತ್ತು. ಬಾಲಕಿಯನ್ನು ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದವರೇ ಅತ್ಯಾಚಾರಗೈದು ಕೊಲೆ ಮಾಡಿದ್ದ ಅನುಮಾನ ವ್ಯಕ್ತವಾದ ಹಿನ್ನೆಲೆ, ಪೊಲೀಸರು ತನಿಖೆ ತೀವ್ರಗೊಳಿಸಿದ್ದರು. ಈ ಸಂದರ್ಭದಲ್ಲೇ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಜಯ್‌ ಸಿಂಗ್, ಮುಕೇಶ್ ಸಿಂಗ್, ಮನೀಷ್ ತಿರ್ಕೆ ಮತ್ತು ಮುನೀಮ್ ಸಿಂಗ್ ನಾಪತ್ತೆಯಾಗಿದ್ದರು.

ಹಾಗಾಗಿ, ಇವರೇ ಕೃತ್ಯವೆಸಗಿರುವುದು ಪೊಲೀಸರಿಗೆ ಖಚಿತವಾಗಿತ್ತು. ಪೊಲೀಸರು ಕಾರ್ಯಾಚರಣೆ ನಡೆಸಿ ನಾಲ್ವರನ್ನೂ ಬಂಧಿಸಿದ್ದರು. ವಿಚಾರಣೆ ವೇಳೆ ಈಗ ಶಿಕ್ಷೆಗೊಳಗಾದ ಮೂವರು ಬಾಲಕಿಯನ್ನು ಅತ್ಯಾಚಾರವೆಸಗಿ ಕೊಲೆ ಮಾಡಿದ್ದರೆ, ನಾಲ್ಕನೇ ಆರೋಪಿ ಮುನೀಮ್ ಸಿಂಗ್ ಅವರಿಗೆ ಸಹಕಾರ ನೀಡಿರುವುದು ಬಯಲಾಗಿತ್ತು.

ಫ್ಯಾಕ್ಟರಿಗೆ ರಜೆ ಇದ್ದ ದಿನ (2021 ನವೆಂಬರ್ 21) ಅಲ್ಲಿಯೇ ಆಟವಾಡಿಕೊಂಡಿದ್ದ ಬಾಲಕಿಯನ್ನು ಸಿಹಿ ತಿನಿಸು ನೀಡಿ, ಸಿಸಿಟಿವಿ ಕ್ಯಾಮರಾ ಇಲ್ಲದ ಜಾಗಕ್ಕೆ ಕರೆದುಕೊಂಡು ಹೋಗಿದ್ದ ಅಪರಾಧಿಗಳು, ಅಲ್ಲಿ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದರು. ಈ ವೇಳೆ ಬಾಲಕಿ ನೋವಿನಿಂದ ಕೂಗಿಕೊಂಡಿದ್ದಕ್ಕೆ ಜಯ್ ಸಿಂಗ್ ಆಕೆಯ ಕತ್ತು ಹಿಸುಕಿ ಕೊಲೆ ಮಾಡಿದ್ದ.

ಪ್ರಕರಣದ ತನಿಖೆ ನಡೆಸಿದ್ದ ಮಂಗಳೂರು ಗ್ರಾಮಾಂತರ ಠಾಣೆಯ ಆಗಿನ ಇನ್‌ಸ್ಪೆಕ್ಟರ್ ಜಾನ್ಸನ್ ಡಿಸೋಜ, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಒಟ್ಟು 30 ಸಾಕ್ಷಿದಾರರ ವಿಚಾರಣೆ, 74 ದಾಖಲೆಗಳನ್ನು ಪರಿಶೀಲನೆ ನಡೆಸಿದ ಪೋಕ್ಸೋ ನ್ಯಾಯಾಲಯದ ನ್ಯಾಯಾಧೀಶ ಮಾನು ಕೆ.ಎಸ್ ಅವರು, ಗುರುವಾರ (ನವೆಂಬರ್ 7, 2024) ಮೂವರು ಅಪರಾಧಿಗಳಿಗೆ ಮರಣದಂಡನೆ ಮತ್ತು ದಂಡ ವಿಧಿಸಿ ಆದೇಶಿಸಿದ್ದಾರೆ.

ನಾಲ್ಕನೇ ಆರೋಪಿ ಮುನೀಮ್ ಸಿಂಗ್ ಪ್ರಕರಣದ ವಿಚಾರಣೆ ವೇಳೆ, ಜಾಮೀನಿನಲ್ಲಿ ಹೊರಬಂದು ತಲೆಮರೆಸಿಕೊಂಡಿದ್ದಾನೆ. ಹಾಗಾಗಿ, ಆತನಿಗೆ ಇನ್ನೂ ಶಿಕ್ಷೆ ವಿಧಿಸಿಲ್ಲ.

ಅಪರಾಧಿಗಳಿಂದ ಸಂಗ್ರಹಿಸಿದ ದಂಡದ ಮೊತ್ತ 1.20 ಲಕ್ಷ ರೂ. ಮೃತ ಬಾಲಕಿಯ ಪೋಷಕರಿಗೆ ಪಾವತಿಸುವಂತೆ ಹಾಗೂ ಸಂತ್ರಸ್ತರ ಪರಿಹಾರ ಯೋಜನೆಯಡಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಬಾಲಕಿಯ ಪೋಷಕರಿಗೆ 3.80 ಲಕ್ಷ ರೂ. ಹೆಚ್ಚುವರಿಯಾಗಿ ನೀಡುವಂತೆ ನ್ಯಾಯಾಲಯ ಆದೇಶದಲ್ಲಿ ತಿಳಿಸಿದೆ.

ಮಂಗಳೂರಿನ ಪೋಕ್ಸೋ ನ್ಯಾಯಾಲಯ ಮರಣದಂಡನೆ ಶಿಕ್ಷೆ ವಿಧಿಸಿದ ಪ್ರಥಮ ಪ್ರಕರಣ ಇದಾಗಿದೆ ಎಂದು ವರದಿಗಳು ಹೇಳಿವೆ.

ಇದನ್ನೂ ಓದಿ : ಡಿಕೆ ಶಿವಕುಮಾರ್ ಅಕ್ರಮ ಆಸ್ತಿ ಗಳಿಕೆ ಪ್ರಕರಣ; ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...