Homeಕರ್ನಾಟಕಮಳವಳ್ಳಿ ಬಾಲಕಿಯ ಅತ್ಯಾಚಾರ ಮತ್ತು ಕೊಲೆ: ಸಂತಾಪ ಸೂಚಿಸಿದ ಸಿದ್ದರಾಮಯ್ಯ, ಎಚ್‌ಡಿಕೆ

ಮಳವಳ್ಳಿ ಬಾಲಕಿಯ ಅತ್ಯಾಚಾರ ಮತ್ತು ಕೊಲೆ: ಸಂತಾಪ ಸೂಚಿಸಿದ ಸಿದ್ದರಾಮಯ್ಯ, ಎಚ್‌ಡಿಕೆ

- Advertisement -
- Advertisement -

ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಟ್ಯೂಷನ್‌ಗೆಂದು ತೆರಳಿದ್ದ 6ನೇ ತರಗತಿ ವಿದ್ಯಾರ್ಥಿನಿಯನ್ನು ಶಿಕ್ಷಕ ಕಾಂತರಾಜು ಅತ್ಯಾಚಾರಗೈದು, ಕೊಲೆ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯನವರು ಕಳವಳ ವ್ಯಕ್ತಪಡಿಸಿದ್ದರೆ.

ಆರೋಪಿ ಕಾಂತರಾಜು ಮಳವಳ್ಳಿ ತಾಲ್ಲೂಕಿನ ನೆಲಮಾಕನಹಳ್ಳಿ ಗ್ರಾಮದವನಾಗಿದ್ದು, ಕಳೆದ 15 ವರ್ಷಗಳಿಂದ ಮೈಸೂರಿನಲ್ಲಿ ನೆಲೆಸಿದ್ದ. ಬಾಲಕಿಗೆ ಚಾಕೊಲೇಟ್ ನೀಡುವುದಾಗಿ ಪುಸಲಾಯಿಸಿ ಕರೆದೊಯ್ದು, ಅತ್ಯಾಚಾರ ನಡೆಸಿ ಕೊಲೆ ಮಾಡಿದ್ದಾಗಿ ತಿಳಿದು ಬಂದಿದೆ.

ಘಟನೆಗೆ ಸಂಬಂಧಿಸಿದಂತೆ ಸಂತ್ರಸ್ತ ಕುಟುಂಬದೊಂದಿಗೆ ಮಾತನಾಡಿ ಸಾಂತ್ವಾನ ಹೇಳಿದ್ದೇನೆ ಎಂದಿರುವ ಸಿದ್ದರಾಮಯ್ಯ ಆರೋಪಿಗೆ ಗರಿಷ್ಟ ಶಿಕ್ಷೆಯಾಗಬೇಕೆಂದು ಒತ್ತಾಯಿಸಿದ್ದಾರೆ.

“ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಪುಟ್ಟ ಬಾಲಕಿ ದಿವ್ಯಾಳನ್ನು ಅತ್ಯಾಚಾರಗೈದು ಕೊಲೆ ಮಾಡಿರುವುದು ಅತ್ಯಂತ ಹೇಯ ಕೃತ್ಯ. ಇಂಥಾ ಸ್ಥಿತಿ ಮತ್ತಾವ ಕಂದಮ್ಮನಿಗೂ ಬಾರದಿರಲಿ. ದಿವ್ಯಾಳ ಕುಟುಂಬದ ಜೊತೆ ಮಾತನಾಡಿ, ಸಾಂತ್ವನ ಹೇಳುವ ಪ್ರಯತ್ನ ಮಾಡಿದ್ದೇನೆ. ಪೊಲೀಸರು ಯಾವುದೇ ಒತ್ತಡಕ್ಕೆ ಈಡಾಗದೆ, ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಸಿ ಆರೋಪಿಗೆ ಗರಿಷ್ಠ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು” ಎಂದು ಟ್ವೀಟ್ ಮಾಡಿದ್ದಾರೆ.

ಆ ಪಾತಕಿಗೆ ಕ್ಷಮೆ ಇರಬಾರದು- ಎಚ್.ಡಿ ಕುಮಾರಸ್ವಾಮಿ

ಮಳವಳ್ಳಿಯಲ್ಲಿ ಟ್ಯೂಶನ್ ಗೆ ಬಂದ 10 ವರ್ಷದ ಶಾಲಾ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಾಗರೀಕ ಸಮಾಜ ತಲೆ ತಗ್ಗಿಸುವಂತಹ ಹೇಯ ಘಟನೆ. ಇಂಥ ಪಾತಕ ಕೃತ್ಯವನ್ನು ನಾನು ಖಂಡಿಸುತ್ತೇನೆ. ತಪ್ಪು ಮಾಡಿದ ಅಪರಾಧಿಗೆ ಕಠಿಣ ಶಿಕ್ಷೆ ಆಗಲೇಬೇಕು ಹಾಗೂ ಆ ಪಾತಕಿಗೆ ಕ್ಷಮೆ ಎನ್ನುವುದೇ ಇರಬಾರದು. ಭವಿಷ್ಯದಲ್ಲಿ ಇಂಥ ನೀಚ ಘಟನೆಗಳು ಮರುಕಳಿಸದಂತೆ ಪೊಲೀಸರು ಕಟ್ಟೆಚ್ಚರ ವಹಿಸಬೇಕು ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಹೆತ್ತ ಮಗುವನ್ನು ಕಳೆದುಕೊಂಡು ಶೋಕದಲ್ಲಿರುವ ಆ ಬಾಲಕಿಯ ಪೋಷಕರ ದುಃಖದಲ್ಲಿ ನಾನೂ ಭಾಗಿ. ನೂರುಕಾಲ ಬಾಳಿ ಬದುಕಬೇಕಿದ್ದ ಮಗುವಿನ ದುರ್ಮರಣ ನನಗೆ ಅತೀವ ನೋವುಂಟು ಮಾಡಿದೆ. ಆ ಬಾಲಕಿಯ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ದುಃಖವನ್ನು ಭರಿಸುವ ಶಕ್ತಿಯನ್ನು ಆ ತಂದೆ ತಾಯಿಗೆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ಈ ಪ್ರಕರಣದಲ್ಲಿ ಸಂತ್ರಸ್ತೆ ಅಪ್ರಾಪ್ತಳಾದ ಕಾರಣಕ್ಕೆ ಆರೋಪಿಯ ಮೇಲೆ ಪೋಕ್ಸೋ ಪ್ರಕರಣ ದಾಖಲಿಸಿ, ಬಂಧಿಸಲಾಗಿದೆ. ಇಂದು ಮಂಡ್ಯದ ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುತ್ತದೆ ಎನ್ನಲಾಗಿದೆ.

ಇದನ್ನೂ ಓದಿ: ಮಂಡ್ಯ: ಟ್ಯೂಷನ್‌ಗೆ ಬಂದಿದ್ದ ಬಾಲಕಿಯನ್ನು ಅತ್ಯಾಚಾರ ಎಸಗಿ ಕೊಲೆ ಮಾಡಿದ ಶಿಕ್ಷಕ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ

0
ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ" ಎಂಬ ಬಿಜೆಪಿಗರ ಆರೋಪಕ್ಕೆ...