HomeUncategorized11 ವರ್ಷದ ಬಾಲಕಿಯ ಮೇಲೆ ತಂದೆ, ಸಹೋದರ, ಅಜ್ಜ ಮತ್ತು ಚಿಕ್ಕಪ್ಪನಿಂದ ಅತ್ಯಾಚಾರ

11 ವರ್ಷದ ಬಾಲಕಿಯ ಮೇಲೆ ತಂದೆ, ಸಹೋದರ, ಅಜ್ಜ ಮತ್ತು ಚಿಕ್ಕಪ್ಪನಿಂದ ಅತ್ಯಾಚಾರ

ದುಷ್ಕರ್ಮಿಗಳು ಕಳೆದ ಐದು ವರ್ಷಗಳಿಂದ ಬಾಲಕಿಯ ಮೇಲೆ ದೌರ್ಜನ್ಯ ಎಸಗುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ

- Advertisement -
- Advertisement -

11 ವರ್ಷದ ಬಾಲಕಿಯೊಬ್ಬರ ಮೇಲೆ ಆಕೆಯ ಹದಿಹರೆಯದ ಸಹೋದರ ಮತ್ತು ತಂದೆ ಪ್ರತ್ಯೇಕ ಸಂದರ್ಭಗಳಲ್ಲಿ ಅತ್ಯಾಚಾರವೆಸಗಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಷ್ಟೇ ಅಲ್ಲದೆ ಬಾಲಕಿಯ ಅಜ್ಜ ಮತ್ತು ಸೋದರ ಸಂಬಂಧಿ ಕೂಡ ಅವರ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ದುಷ್ಕರ್ಮಿಗಳು ಅವರ ಮೇಲೆ ಕಳೆದ ಐದು ವರ್ಷಗಳಲ್ಲಿ ದೌರ್ಜನ್ಯ ಎಸಗುತ್ತಿದ್ದಾರೆ ಎಂದು ಪೊಲೀಸರು ಹೇಳಿದ್ದು, ಅತ್ಯಾಚಾರ ಮತ್ತು ಲೈಂಗಿಕ ಕಿರುಕುಳಕ್ಕಾಗಿ ಭಾರತೀಯ ದಂಡ ಸಂಹಿತೆಯ (ಐಪಿಸಿ) ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನೂ ಯಾರನ್ನೂ ಬಂಧಿಸಿಲ್ಲ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತಂದೆ ಮತ್ತು ಸಹೋದರನ ವಿರುದ್ದ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 ರ ಅಡಿಯಲ್ಲಿ ಅತ್ಯಾಚಾರದ ಪ್ರಕರಣವನ್ನು ದಾಖಲಿಸಲಾಗಿದ್ದು, ಬಾಲಕಿಯ ಅಜ್ಜ ಮತ್ತು ದೂರದ ಸೋದರ ಸಂಬಂಧಿಯ ವಿರುದ್ಧ ಸೆಕ್ಷನ್ 354 ಅಡಿಯಲ್ಲಿ ಆರೋಪ ಹೊರಿಸಲಾಗಿದೆ ಎಂದು ಪುಣೆ ಪೊಲೀಸರು ಪಿಟಿಐಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಹಿಜಾಬ್‌ ತೀರ್ಪು ನೀಡಿದ ನ್ಯಾಯಮೂರ್ತಿಗೆ ಕೊಲೆ ಬೆದರಿಕೆ ಆರೋಪ; ಪ್ರಕರಣ ದಾಖಲು

ಸಂತ್ರಸ್ತೆ ಮತ್ತು ಆಕೆಯ ಕುಟುಂಬ ಸದಸ್ಯರು ಬಿಹಾರದವರಾಗಿದ್ದು, ಪ್ರಸ್ತುತ ಪುಣೆಯಲ್ಲಿ ವಾಸಿಸುತ್ತಿದ್ದಾರೆ.

“ತನ್ನ ಶಾಲೆಯಲ್ಲಿ ‘ಗುಡ್ ಟಚ್ ಮತ್ತು ಬ್ಯಾಡ್ ಟಚ್’ ಬಗ್ಗೆ ತಿಳಿಸಿ ಕೊಡುತ್ತಿರುವಾಗ ಬಾಲಕಿಯು ಘಟನೆಯ ಬಗ್ಗೆ ಹೇಳಿದ್ದಾರೆ. ಕಳೆದ ಐದು ವರ್ಷಗಳಿಂದ ಅವರ ಮೇಲೆ ದೌರ್ಜನ್ಯ ನಡೆಯುತ್ತಿದೆ” ಎಂದು ಪೊಲೀಸ್ ಇನ್ಸ್‌ಪೆಕ್ಟರ್ (ಅಪರಾಧ) ಅಶ್ವಿನಿ ಸಾತ್ಪುತೆ ಹೇಳಿದ್ದಾರೆ.

2017ರಲ್ಲಿ ಬಿಹಾರದಲ್ಲಿ ಇರುವಾಗಲೇ ತಂದೆ ತನ್ನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಆರಂಭಿಸಿದ್ದ ಎಂದು ದೂರನ್ನು ಉಲ್ಲೇಖಿಸಿ ಪೊಲೀಸ್ ಇನ್ಸ್‌ಪೆಕ್ಟರ್ ತಿಳಿಸಿದ್ದಾರೆ.

“ಹುಡುಗಿಯ ಹಿರಿಯ ಸಹೋದರ ನವೆಂಬರ್ 2020 ರ ಸುಮಾರಿಗೆ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವನ್ನು ಪ್ರಾರಂಭಿಸಿದ್ದ. ಆಕೆಯ ಅಜ್ಜ ಮತ್ತು ದೂರದ ಸೋದರ ಸಂಬಂಧಿ ಬಾಲಕಿಯನ್ನು ಅನುಚಿತವಾಗಿ ಸ್ಪರ್ಶಿಸುತ್ತಿದ್ದರು” ಎಂದು ಪೊಲೀಸ್ ಇನ್ಸ್‌ಪೆಕ್ಟರ್ ಹೇಳಿದ್ದಾರೆ.

ಎಲ್ಲಾ ಘಟನೆಗಳು ಪ್ರತ್ಯೇಕವಾಗಿ ನಡೆದಿರುವುದರಿಂದ ಆರೋಪಿಗಳು ಪರಸ್ಪರರ ಕೃತ್ಯಗಳ ಬಗ್ಗೆ ತಿಳಿದಿಲ್ಲದೆ ಇರಬಹುದು. ಇದು ಸಾಮೂಹಿಕ ಅತ್ಯಾಚಾರದ ಪ್ರಕರಣವಲ್ಲ ಎಂದು ಇನ್ಸ್‌ಪೆಕ್ಟರ್ ಸಾತ್ಪುತೆ ಹೇಳಿದ್ದಾರೆ.

ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಸೆಕ್ಷನ್‌ಗಳನ್ನು ಸೇರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ದಲಿತ್‌ ಫೈಲ್ಸ್: ಮೀಸೆ ಬಿಟ್ಟಿದ್ದಕ್ಕೆ, ಚೆಂದವಾಗಿ ಕಾಣುತ್ತಿದ್ದಕ್ಕೆ ದಲಿತನ ಕೊಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...